ಅಪಘಾತ

ಮಹಾಕುಂಭಮೇಳಕ್ಕೆ ಹೋಗಿದ್ದ ಬೀದರ್‌ನ 6 ಮಂದಿ ಭೀಕರ ಅಪಘಾತಕ್ಕೆ ಬಲಿ

ಲಾರಿಗೆ ಹಿಂದಿನಿಂದ ಕ್ರೂಸರ್‌ ವಾಹನ ಡಿಕ್ಕಿ ಹೊಡೆದು ಅಪಘಾತ ಲಖನೌ: ಮಹಾಕುಂಭಮೇಳಕ್ಕೆ ಹೋಗಿದ್ದ ಬೀದರ್‌ನ ಒಂದೇ ಕುಟುಂಬದ 6 ಜನ ಭೀಕರ ಅಪಘತದಲ್ಲಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಕಾಶಿ ಬಳಿ ನಡೆದಿದೆ. ಲಾರಿ ಮತ್ತು ಕ್ರೂಸರ್‌ ನಡುವೆ ಇಂದು ಬೆಳಗ್ಗೆ ಮಿರಾಜಾಪುರ ಜಿಲ್ಲೆಯ ರೂಪಾಪುರ ಬಳಿ ಅಪಘಾತ ಸಂಭವಿಸಿದೆ. 6 ಮಂದಿ ಸಾವನ್ನಪ್ಪಿದ್ದು ಉಳಿದವರ ಸ್ಥಿತಿ ಚಿಂತಾಜನಕವಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.ಬೀದರ್ ನಗರದ ಲಾಡಗೇರಿ ಬಡಾವಣೆಯ ನಿವಾಸಿಗಳಾದ ಸುನೀತಾ(35) ಸಂತೋಷ್‌ […]

ಮಹಾಕುಂಭಮೇಳಕ್ಕೆ ಹೋಗಿದ್ದ ಬೀದರ್‌ನ 6 ಮಂದಿ ಭೀಕರ ಅಪಘಾತಕ್ಕೆ ಬಲಿ Read More »

ಮಲ್ಪೆ : ಮೀನುಗಾರಿಕೆ ದೋಣಿ ಬೆಂಕಿಗಾಹುತಿ

ಉಡುಪಿ: ಮಲ್ಪೆಯ ಬಾಪುತೋಟ ಬಳಿಯ ಮೀನುಗಾರಿಕಾ ಬಂದರಿನ ಸೇತುವೆ ಪಕ್ಕದ ದಕ್ಕೆಯಲ್ಲಿ ನಿಲ್ಲಿಸಲಾಗಿದ್ದ ಮೀನುಗಾರಿಕಾ ಬೋಟಿಗೆ ತಡರಾತ್ರಿ ಬೆಂಕಿ ಹತ್ತಿಕೊಂಡು ಸಂಪೂರ್ಣ ಸುಟ್ಟು ಹೋಗಿದೆ. ಮಲ್ಪೆಯ ಜನಾರ್ದನ ಟಿ. ಕಾಂಚನ್ ಎಂಬವರಿಗೆ ಸೇರಿದ ‘ರವಿಪ್ರಕಾಶ್’ ಎಂಬ ಸಣ್ಣಟ್ರಾಲ್ (ಫಿಶಿಂಗ್) ಬೋಟಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳೀಯ ದೋಣಿಯವರು ಗಮನಿಸಿ ಸಕಾಲದಲ್ಲಿ ಮಾಹಿತಿ ನೀಡಿದ್ದರಿಂದ ದೊಡ್ಡ ದುರಂತವೊಂದು ತಪ್ಪಿದಂತಾಗಿದೆ. ಆ ಬೋಟಿನ ಮೀನುಗಾರರು ಮೀನುಗಾರಿಕೆ ಮುಗಿಸಿಬಂದು ಬೋಟನ್ನು ಬಾಪುತೋಟದ ಬಳಿಯ ದಕ್ಕೆಯಲ್ಲಿ ನಿಲ್ಲಿಸಿದ್ದರು. ಸ್ಥಳೀಯರು ಮತ್ತು ಅಗ್ನಿಶಾಮಕ ದಳದವರು ಸಕಾಲದಲ್ಲಿ

ಮಲ್ಪೆ : ಮೀನುಗಾರಿಕೆ ದೋಣಿ ಬೆಂಕಿಗಾಹುತಿ Read More »

ಸೌರವ್‌ ಗಂಗೂಲಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

ಕೂದಲೆಳೆ ಅಂತರದಲ್ಲಿ ಪಾರಾದ ಕ್ರಿಕೆಟಿಗ ಕೋಲ್ಕತ್ತಾ : ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ, ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರ ಕಾರು ಗುರುವಾರ ರಾತ್ರಿ ಪಶ್ಚಿಮ ಬಂಗಾಳದ ದುರ್ಗಾಪುರ ಎಕ್ಸ್‌ಪ್ರೆಸ್‌ವೇಯ ದಂತನ್‌ಪುರ ಎಂಬಲ್ಲಿ ಅಪಘಾತಕ್ಕೀಡಾಗಿದೆ. ಬುರ್ದ್ವಾನ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವರು ಪ್ರಯಾಣಿಸುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಸೌರವ್ ಗಂಗೂಲಿ ಅವರ ಕಾರು ದುರ್ಗಾಪುರ ಎಕ್ಸ್‌ಪ್ರೆಸ್‌ವೇ ಮೂಲಕ ಹಾದುಹೋಗುವಾಗ ಸಿಂಗೂರ್ ಬಳಿ ವೇಗವಾಗಿ ಬಂದ ಲಾರಿ ಅವರ ಕಾರಿಗೆ ಡಿಕ್ಕಿ ಹೊಡೆದಿದೆ.ಲಾರಿ ಡಿಕ್ಕಿಯಾಗುತ್ತಿದ್ದಂತೆಯೇ ಸೌರವ್ ಗಂಗೂಲಿ

ಸೌರವ್‌ ಗಂಗೂಲಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ Read More »

ಲಾರಿ – ರಿಕ್ಷಾ ನಡುವೆ ಅಪಘಾತ  | ಮೂವರು ಮಹಿಳೆಯರಿಗೆ ಗಂಭೀರ ಗಾಯ

ಪುತ್ತೂರು: ಆಟೋ ರಿಕ್ಷಾಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಪಲ್ಟಿಯಾಗದ ಘಟನೆ ಸರ್ವೆ ಗ್ರಾಮದ ಸೊರಕೆ ಕರ್ಮಿನಡ್ಕ ಎಂಬಲ್ಲಿ ನಡೆದಿದ್ದು, ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಮಹಿಳೆಯರು ಗಾಯಗೊಂಡಿದ್ದಾರೆ. ಗಾಯಗೊಂಡ ಮಹಿಳೆಯರನ್ನು ಸರೋಜಿನಿ, ವೇದಾವತಿ ಹಾಗೂ ಮಾಲತಿ ಎನ್ನಲಾಗಿದೆ. ಸರ್ವೆ ಕಡೆಗೆ ಹೋಗುತ್ತಿದ್ದ ಲಾರಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಆಟೋ ರಿಕ್ಷಾಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಿಕ್ಷಾ ಪಲ್ಟಿಯಾಗಿದೆ. ಅವಿನಾಶ್ ಎಂಬವರ ರಿಕ್ಷಾದಲ್ಲಿ ಮೂವರು ಮಹಿಳೆಯರು ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಪುತ್ತೂರು

ಲಾರಿ – ರಿಕ್ಷಾ ನಡುವೆ ಅಪಘಾತ  | ಮೂವರು ಮಹಿಳೆಯರಿಗೆ ಗಂಭೀರ ಗಾಯ Read More »

ಕಾರು ಅಪಘಾತ | ಮೂವರಿಗೆ ಗಾಯ

ಪುತ್ತೂರು: ಎರಡು ಕಾರುಗಳು ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಘಟನೆ ಪುತ್ತೂರಿನ ಪೋಳ್ಯ ಸಮೀಪದ ಪುಳಿತ್ತಡಿಯಲ್ಲಿ  ನಡೆದಿದ್ದು, ಕಾರಿನಲ್ಲಿದ್ದ ಮೂವರಿಗೆ ಗಾಯಗಳಾಗಿವೆ. ಬಿ.ಸಿ.ರೋಡ್ ಸಾಗರ್ ಆಡಿಟೋರಿಯಂ ನಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ ರೆಮ್ಮಾಯಿ ಸಮೀಪದ ನಿವಾಸಿಗಳಿದ್ದ ಕಾರು ಹಾಗೂ ಮಂಗಳೂರಿನಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಕಾರಿನ ಮಧ್ಯೆ ಈ ಅಪಘಾತ ಸಂಭವಿಸಿದೆ. ಮದುವೆಗೆ ತೆರಳುತ್ತಿದ್ದ ಕಾರಿನ ಮುಂಭಾಗದಲ್ಲಿ ಹೂವಿನ ಬೊಕ್ಕೆಯಿಂದ ಅಲಂಕಾರ ಮಾಡಿದ್ದು, ಗಾಳಿಗೆ ಹೂವಿನ ಬೊಕ್ಕೆ ಚಾಲಕನ ಸೈಡಿನ ಗಾಜಿಗೆ ಬಡಿದ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ

ಕಾರು ಅಪಘಾತ | ಮೂವರಿಗೆ ಗಾಯ Read More »

ಕಕ್ಕಿಂಜೆ ಶಾಲಾ ಮಕ್ಕಳ ಮೇಲೆ ಹೆಜ್ಜೇನು ದಾಳಿ

ಬೆಳ್ತಂಗಡಿ :  ಕಕ್ಕಿಂಜೆ ಹಿ.ಪ್ರಾ ಶಾಲೆಯಲ್ಲಿ ಮಕ್ಕಳ ಮೇಲೆ ಹಜ್ಜೆನು ದಾಳಿ ನಡೆಸಿದ ಘಟನೆ ಮಂಗಳವಾರ ಬೆಳಗ್ಗೆ ಸಂಭವಿಸಿದ್ದು  ಸುಮಾರು 10ಮಕ್ಕಳು  ಹೆಜ್ಜೇನುದಾಳಿಯಿಂದ  ಅಸ್ವಸ್ಥರಾಗಿದ್ದು  ,ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ,  ಮಕ್ಕಳು ಶಾಲೆಯಲ್ಲಿ ಇದ್ದ ವೇಳೆ ಏಕಾಏಕಿ ಹೆಜ್ಜೇನು ದಾಳಿ ನಡೆಸಿದೆ. ಮಕ್ಕಳು ಚಲ್ಲಾಪಿಲ್ಲಿಯಾಗಿ ಓಡಿದ್ದು ಹಲವರಿಗೆ ಹೆಜ್ಜೇನು ಕಚ್ಚಿದೆ. ಮಕ್ಕಳ ಅಳು ಕೇಳಿ ಸ್ಥಳೀಯರು ಶಾಲೆಗೆ ಧಾವಿಸಿದ್ದು ಮಕ್ಕಳನ್ನು ರಕ್ಷಿಸುವ ಪ್ರಯತ್ನ ನಡೆಸಿದ್ದಾರೆ. ಹಲವು ಮಕ್ಕಳಿಗೆ ಈ ವೇಳೆ ಹಜ್ಜೇನು ಕಚ್ಷಿದ್ದು ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಕಕ್ಕಿಂಜೆ ಶಾಲಾ ಮಕ್ಕಳ ಮೇಲೆ ಹೆಜ್ಜೇನು ದಾಳಿ Read More »

ಲ್ಯಾಂಡಿಂಗ್‌ ಆಗುವಾಗ ತಲೆಕೆಳಗಾದ ವಿಮಾನ : ಬಾವಲಿಯಂತೆ ನೇತಾಡಿದ ಪ್ರಯಾಣಿಕರು

ಟೊರೊಂಟೊ : ಕೆನಡದ ಟೊರೊಂಟೊದ ಪಿಯರ್ಸನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೋಮವಾರ ಡೆಲ್ಟಾ ಏರ್​ಲೈನ್ಸ್ ವಿಮಾನ ತಲೆಕೆಳಗಾಗಿದ್ದು, ಈ ಅಪಘಾತದಲ್ಲಿ 17 ಮಂದಿ ಗಾಯಗೊಂಡಿದ್ದಾರೆ. ವಿಮಾನವು ಮಿನ್ನಿಯಾಪೋಲಿಸ್‌ನಿಂದ ಟೊರೊಂಟೊಗೆ ಹಾರುತ್ತಿದ್ದಾಗ ಲ್ಯಾಂಡಿಂಗ್ ಸಮಯದಲ್ಲಿ ರನ್‌ವೇಯಲ್ಲಿ ಮಗುಚಿ ಬಿದ್ದಿದೆ. ಸ್ಥಳದಲ್ಲಿದ್ದ ವೈದ್ಯಕೀಯ ಸಿಬ್ಬಂದಿ ಅಪಘಾತದಲ್ಲಿ ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಮತ್ತು ಇತರರು ಸಣ್ಣಪುಟ್ಟ ಗಾಯಗಳಿಂದ ಬಳಲುತ್ತಿದ್ದಾರೆ ಎಂದು ತಿಳಿಸಿದ್ದಾರೆ. ವಿಮಾನದಲ್ಲಿ 80 ಮಂದಿ ಪ್ರಯಾಣಿಕರಿದ್ದರು. ಪ್ರಯಾಣಿಕರು ತಲೆಕೆಳಗಾದ ವಿಮಾನದಿಂದ ತೆವಳಿಕೊಂಡು ಹೊರಬರುತ್ತಿರುವ ದೃಶ್ಯ ಸೋಷಿಲ್‌ ಮೀಡಿಯಾದಲ್ಲಿ ಭಾರಿ

ಲ್ಯಾಂಡಿಂಗ್‌ ಆಗುವಾಗ ತಲೆಕೆಳಗಾದ ವಿಮಾನ : ಬಾವಲಿಯಂತೆ ನೇತಾಡಿದ ಪ್ರಯಾಣಿಕರು Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಕಾಮಗಾರಿ | ತೆಂಗಿನಮರ  ಬಿದ್ದು ದೇವಸ್ಥಾನದ ಕಾರ್ಮಿಕನಿಗೆ ಗಂಭೀರ ಗಾಯ

ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಕಾಮಗಾರಿ ವೇಳೆ ತೆಂಗಿನಮರ ಬಿದ್ದರಿಂದ ಕಾರ್ಮಿಕರೊಬ್ಬರಿಗೆ ಗಂಭೀರ  ಗಾಯ ಉಂಟಾಗಿದೆ. ದೇವಸ್ಥಾನದ ನಿತ್ಯ ಕಾರ್ಮಿಕನಾಗಿದ್ದರು ಎಂದು ತಿಳಿದುಬಂದಿದೆ. ದೇವಳದ ಪುಷ್ಕರಣಿ ಸಮೀಪ ಅವಘಡ ನಡೆದಿದ್ದು, ರವಿ (35) ಗಂಭೀರ ಗಾಯಗೊಂಡಿದ್ದಾರೆ. ಸದ್ಯ ಅವರನ್ನು ತಕ್ಷಣ ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಕರೆತರಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾಹಿತಿ ತಿಳಿದುಬಂದಿದೆ.

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಕಾಮಗಾರಿ | ತೆಂಗಿನಮರ  ಬಿದ್ದು ದೇವಸ್ಥಾನದ ಕಾರ್ಮಿಕನಿಗೆ ಗಂಭೀರ ಗಾಯ Read More »

ಮಂಗಳೂರು-ಬೆಂಗಳೂರು ರಸ್ತೆಯಲ್ಲಿ ಸರಣಿ ಅಪಘಾತ : 7 ಕಾರುಗಳು ಜಖಂ

ಹಾಸನ: ಬೆಂಗಳೂರು–ಮಂಗಳೂರು ಹೈವೇಯ ಚೋಲಗೆರೆ ಟೋಲ್ ಬಳಿ ಭಾನುವಾರ ರಾತ್ರಿ ಸರಣಿ ಅಪಘಾತ ಸಂಭವಿಸಿ 7 ಕಾರುಗಳು ಜಖಂಗೊಂಡಿವೆ. ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಈ ಅಪಘಾತ ಸಂಭವಿಸಿದೆ.‌ ಹೊಸದಾಗಿ ಆರಂಭಗೊಂಡ ಚೋಲಗೆರೆ ಟೋಲ್‌ ಬಳಿ ಸಾಲುಗಟ್ಟಿ ವಾಹನಗಳು ನಿಂತಿದ್ದವು. ಈ ವೇಳೆ ಅತಿ ವೇಗವಾಗಿ ಬಂದ ಕಾರೊಂದು ಮತ್ತೊಂದು ಕಾರಿಗೆ ಡಿಕ್ಕಿಯಾಗಿದೆ. ಪರಿಣಾಮ ಮುಂದಿದ್ದ 7 ಕಾರುಗಳು ಜಖಂಗೊಂಡಿವೆ. ವೀಕೆಂಡ್ ಹಿನ್ನಲೆಯಲ್ಲಿ ಹೈವೆಯಲ್ಲಿ ವಾಹನಗಳ ಸಂಚಾರ ಹೆಚ್ಚಿದ್ದು, ಸರಣಿ ಅಪಘಾತದಿಂದ ಕೆಲಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಪೊಲೀಸರು

ಮಂಗಳೂರು-ಬೆಂಗಳೂರು ರಸ್ತೆಯಲ್ಲಿ ಸರಣಿ ಅಪಘಾತ : 7 ಕಾರುಗಳು ಜಖಂ Read More »

ನವದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ : 18 ಪ್ರಯಾಣಿಕರು ಸಾವು

ಮಹಾಕುಂಭಮೇಳಕ್ಕೆ ಹೋಗುವ ವಿಶೇಷ ರೈಲು ಹತ್ತಲು ನೂಕುನುಗ್ಗಲು ಉಂಟಾದಾಗ ಸಂಭವಿಸಿದ ದುರಂತ ಹೊಸದಿಲ್ಲಿ: ನವದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ ಸಂಭವಿಸಿ 18 ಜನ ಪ್ರಯಾಣಿಕರು ಮೃತಪಟ್ಟಿದ್ದಾರೆ ಎಂದು ಭಾರತೀಯ ರೈಲ್ವೆ ಇಲಾಖೆ ತಿಳಿಸಿದೆ. ರಾತ್ರಿ 10 ಗಂಟೆ ಸುಮಾರಿಗೆ ಕಾಲ್ತುಳಿತ ಸಂಭವಿಸಿ 11 ಜನರಿಗೆ ಗಾಯಗಳಾಗಿದ್ದು, ಅವರನ್ನು ಎಲ್ಎನ್​ಜೆಪಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರ್​ಪಿಎಫ್ ಸಿಬ್ಬಂದಿ ತಕ್ಷಣ ಧಾವಿಸಿ ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಮೃತರಲ್ಲಿ ಐವರು ಮಕ್ಕಳು, 9 ಮಹಿಳೆಯರು ಸೇರಿದ್ದಾರೆ.ನವದೆಹಲಿ ನಿಲ್ದಾಣದಿಂದ ಪ್ರಯಾಗ್​ರಾಜ್​ ಮಹಾಕುಂಭಮೇಳಕ್ಕೆ ರೈಲ್ವೆ ಇಲಾಖೆ

ನವದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ : 18 ಪ್ರಯಾಣಿಕರು ಸಾವು Read More »

error: Content is protected !!
Scroll to Top