ಅಪಘಾತ

ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾದ ಗೂಡ್ಸ್ ವಾಹನ | ದ್ವಿಚಕ್ರ ವಾಹನ ಸವಾರನಿಗೆ ಗಾಯ

ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿ ಐವತ್ತೊಕ್ಲು ಬಳಿ ದ್ವಿಚಕ್ರ ವಾಹನಕ್ಕೆ ಗೂಡ್ಸ್ ವಾಹನ  ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಗಾಯಗೊಂಡ ಘಟನೆ ನಡೆದಿದ. ದ್ವಿಚಕ್ರ ವಾಹನ ಸವಾರ ಆಸ್ತಿಕ್ ಗಾಯಗೊಂಡವರು. ಐವತ್ತೊಕ್ಲು ಗ್ರಾಮದ ನೆಲ್ಲಿಕಟ್ಟೆ ತಿರುವು ರಸ್ತೆ ಬಳಿ ಪಂಜ ಕಡೆಯಿಂದ ಬರುತ್ತಿದ್ದ ಗೂಡ್ಸ್ ವಾಹನ ಸುಬ್ರಹ್ಮಣ್ಯ ಕಡೆಯಿಂದ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿದೆ. ಪರಿಣಾಮ ದ್ವಿಚಕ್ರ ವಾಹನ ಸವಾರ ಆಸ್ತಿಕ್ ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ. ಗಾಯಗೊಂಡ ಆಸ್ತಿಕ್ ರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು […]

ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾದ ಗೂಡ್ಸ್ ವಾಹನ | ದ್ವಿಚಕ್ರ ವಾಹನ ಸವಾರನಿಗೆ ಗಾಯ Read More »

ಎರಡು ಬೈಕ್-ಕಾರ್ ಡಿಕ್ಕಿ | ಓರ್ವ ಗಾಯಗೊಂಡು ಆಸ್ಪತ್ರೆಗೆ ದಾಖಲು

ಪುತ್ತೂರು: ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಮುಕ್ರಂಪಾಡಿ ಬಳಿ ಎರಡು ಬೈಕ್‍ ಹಾಗೂ ಕಾರು ಡಿಕ್ಕಿ ಹೊಡೆದುಕೊಂಡ ಪರಿಣಾಮ ಓರ್ವ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಂಪ್ಯ ಅಕ್ಷಯ ಕಾಲೇಜಿನ ವಿದ್ಯಾರ್ಥಿ ಮೆಲ್ವಿನ್ ಪುರುಷರಕಟ್ಟೆ ಎಂಬವರು ಪಲ್ಸರ್ ಬೈಕ್ ನಲ್ಲಿ ಪುತ್ತೂರು ಕಡೆಗೆ ಹೋಗುತ್ತಿದ್ದಾಗ ಮುಕ್ರಂಪಾಡಿ ತಿರುವಿನಲ್ಲಿ ಓವರ್ ಟೇಕ್ ಮಾಡುವ ಭರದಲ್ಲಿ ಕಾರಿನ ಹಿಂಬದಿ ಟಯರ್‍ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಹಾಗೂ ಕಾರಿನ ಟಯರ್‍ ಗಳು ಒಡೆದು ಹೋಗಿವೆ. ಅಲ್ಲರ್ ಬೈಕ್‍ ನ ಹಿಂದುಗಡೆ ಬರುತ್ತಿದ್ದ

ಎರಡು ಬೈಕ್-ಕಾರ್ ಡಿಕ್ಕಿ | ಓರ್ವ ಗಾಯಗೊಂಡು ಆಸ್ಪತ್ರೆಗೆ ದಾಖಲು Read More »

ಕಾರ್ಮಿಕರಿಗೆ ಕಾರು ಡಿಕ್ಕಿ : ಒರ್ವ ಮೃತ್ಯು, ಮೂವರು ಗಂಭೀರ ಗಾಯ

ಸುಳ್ಯ : ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಕಾರು ಡಿಕ್ಕಿ ಹೊಡೆದ ಕಾರಣ ಒಬ್ಬ ಮೃತಪಟ್ಟು 3 ಮಂದಿ ಗಂಭೀರ ಗಾಯಗೊಂಡ ಘಟನೆ ಸುಳ್ಯ ತಾಲೂಕಿನ ಅಡ್ಕಾರಿನಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ. ಗಂಭೀರ ಗಾಯಗೊಂಡ ಇಬ್ಬರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ. ಒಬ್ಬರು ಸುಳ್ಯ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಡ್ಕಾರಿನ ಹೊಟೇಲ್ ಒಂದರ ಮುಂಭಾಗದಲ್ಲಿ ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಹುಣಸೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರೊಂದು ಡಿಕ್ಕಿ ಹೊಡೆದು ಘಟನೆ ಸಂಭವಿಸಿದೆ. ಒಬ್ಬರು ಮೃತಪಟ್ಟು 3

ಕಾರ್ಮಿಕರಿಗೆ ಕಾರು ಡಿಕ್ಕಿ : ಒರ್ವ ಮೃತ್ಯು, ಮೂವರು ಗಂಭೀರ ಗಾಯ Read More »

ಖಾಸಗಿ ಬಸ್ ನಿರ್ವಾಹಕ ಬಸ್ಸಿನಿಂದ ಬಿದ್ದು ಮೃತ್ಯು

ಮಂಗಳೂರು: ಖಾಸಗಿ ಬಸ್ಸಿನ ಫುಟ್ ಬೋರ್ಡ್‍ ನಲ್ಲಿ ನಿಂತಿದ್ದ ಬಸ್ ನಿರ್ವಾಹಕರೊಬ್ಬರು ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟ ಘಟನೆ ಮಂಗಳೂರಿನ ನಂತೂರು ವೃತ್ತದ ಬಳಿ ನಡೆದಿದೆ. ಮೃತಪಟ್ಟ ನಿರ್ವಾಹಕರನ್ನು ಹೀರಯ್ಯ (23) ಎಂದು ಗುರುತಿಸಲಾಗಿದೆ. ಕಾಟಿಪಳ್ಳದಿಂದ ನಂತೂರು ವೃತ್ತವಾಗಿ ಮಂಗಳಾದೇವಿಗೆ ತೆರಳುತ್ತಿದ್ದ ಖಾಸಗಿ ಬಸ್ಸಿನ ಮುಂಭಾಗದ ಫುಟ್ ಬೋರ್ಡ್‍ ನಲ್ಲಿ ನಿಂತಿದ್ದಾಗ ಆಯತಪ್ಪಿ ಕೆಳಗೆ ಬಿದ್ದಾಗ ಸಂಚಾರಿ ಪೊಲೀಸರು ಸಾರ್ವಜನಿಕರ ಸಹಕಾರದಿಂದ ಆಸ್ಪತ್ರೆಗೆ ದಾಖಲಿಸಿದರೂ ಆದಾಗಲೇ ಅವರು ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ.

ಖಾಸಗಿ ಬಸ್ ನಿರ್ವಾಹಕ ಬಸ್ಸಿನಿಂದ ಬಿದ್ದು ಮೃತ್ಯು Read More »

ರಿಕ್ಷಾ-ಕಾರು ಡಿಕ್ಕಿ : ರಿಕ್ಷಾ ಚಾಲಕನಿಗೆ ಗಂಭೀರ ಗಾಯ

ಬಂಟ್ವಾಳ: ರಿಕ್ಷಾ ಹಾಗೂ ಕಾರು ಡಿಕ್ಕಿ ಹೊಡೆದುಕೊಂಡು ರಿಕ್ಷಾ ಚಾಲಕ ಗಂಭೀರ ಗಾಯಗೊಂಡ ಘಟನೆ ಬಿ.ಸಿ.ರೋಡು ಸಮೀಪದ ಲಯನ್ಸ್ ಸೇವಾ ಮಂದಿರದ ಬಳಿ ನಡೆದಿದೆ. ರಿಕ್ಷಾ ಚಾಲಕ ಮಹಮ್ಮದ್ ಸಾದಿಕ್ ಗಂಭಿರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಅಮಿತಾ ಅವರಿಗೆ ಅಲ್ಪಸ್ವಲ್ಪ ಗಾಯಗಳಾಗಿವೆ. ಕಾರು ಚಾಲಕನ ವಿರುದ್ಧ ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಿಕ್ಷಾ-ಕಾರು ಡಿಕ್ಕಿ : ರಿಕ್ಷಾ ಚಾಲಕನಿಗೆ ಗಂಭೀರ ಗಾಯ Read More »

ನಿಯಂತ್ರಣ ತಪ್ಪಿ ಬೈಕ್ ಸ್ಕಿಡ್ : ಸವಾರನಿಗೆ ಗಾಯ

ಬೆಳ್ತಂಗಡಿ: ನಿಯಂತ್ರಣ ಕಳೆದುಕೊಂಡ ಬೈಕ್ ಸ್ಕಿಡ್ ಆಗಿ ಸವಾರ ರಸ್ತೆಗೆ ಎಸೆಯಲ್ಪಟ್ಟ ಬಳಿಕ ಬೈಕ್ ಇನ್ನೋವಾ ಕಾರಿಗೆ ಡಿಕ್ಕಿ ಹೊಡೆದ ಘಟನೆ ಪಿಲ್ಯ ಸಮೀಪ ನಡೆದಿದೆ. ರಸ್ತೆಗೆ ಎಸೆಯಲ್ಪಟ್ಟ ಬೈಕ್ ಸವಾರ ಸ್ಥಳೀಯ ವಿಘ್ನೇಶ್(22)ಗಂಭೀರ ಗೊಂಡಿದ್ದಾರೆ. ಕ್ಷಣ ಅವರನ್ನು ಉಜಿರೆ  ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ವೇಣೂರು ಠಾಣೆಯಲ್ಲಿ ಇನ್ನೋವಾ ಕಾರಿನ ಲಾಯಿಲದ ಪ್ರಕಾಶ್ ಕಾಶಿಬೆಟ್ಟು ಬೈಕ್ ಸವಾರನ ವಿರುದ್ಧ ದೂರು ನೀಡಿದ್ದಾರೆ ಎಂದು

ನಿಯಂತ್ರಣ ತಪ್ಪಿ ಬೈಕ್ ಸ್ಕಿಡ್ : ಸವಾರನಿಗೆ ಗಾಯ Read More »

ಮಿನಿ ಲಾರಿ-ಬೈಕ್ ಡಿಕ್ಕಿ : ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು

ಕಾಸರಗೋಡು: ಮಿನಿ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮೊಗ್ರಾಲ್ ಪುತ್ತೂರಿನ ಇಬ್ಬರು ಯುವಕರು ಮೃತಪಟ್ಟ ಘಟನೆ ಇಂದು ಮುಂಜಾನೆ ಕಣ್ಣೂರು ತಾಲಾಪ್ ಬಳಿ ಸಂಭವಿಸಿದೆ. ಮೊಗ್ರಾಲ್ ಪುತ್ತೂರು ಕಂಬಾರ್ ಬೆದ್ರಡ್ಕ ನಿವಾಸಿ ಮುನಾಫ್ (24) ಹಾಗೂ ಸ್ನೇಹಿತ ಲತೀಫ್ (23) ಮೃತಪಟ್ಟ ದುರ್ದೈವಿಗಳು ಕಣ್ಣೂರಿನಿಂದ ಕಾಸರಗೋಡು ಕಡೆಗೆ ತೆರಳುತ್ತಿದ್ದ ಬೈಕ್, ಮಂಗಳೂರಿನಿಂದ ಕಣ್ಣೂರು ಕಡೆಗೆ ಹೋಗುತ್ತಿದ್ದ ಮಿನಿ ಲಾರಿ ಕಣ್ಣೂರು ಎ.ಕೆ.ಜಿ. ಆಸ್ಪತ್ರೆ ಎದುರು ಡಿಕ್ಕಿಯಾಗಿದೆ. ಅಪಘಾತದಿಂದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು

ಮಿನಿ ಲಾರಿ-ಬೈಕ್ ಡಿಕ್ಕಿ : ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು Read More »

ಖಾಸಗಿ ಆಂಬುಲೆನ್ಸ್ ವಾಹನ ಪಲ್ಟಿ | ಚಾಲಕ ಮೃತ್ಯು

ಬಿ.ಸಿ.ರೋಡ್ : ರೋಗಿಯೋರ್ವನ್ನು ತುರ್ತಾಗಿ ಮಂಗಳೂರಿಗೆ ಸಾಗಿಸುತ್ತಿದ್ದ ಖಾಸಗಿ ಅಂಬ್ಯುಲೆನ್ಸ್ ವಾಹನವೊಂದು‌ ಅಂಚಿಕಟ್ಟೆ ಎಂಬಲ್ಲಿ ಪಲ್ಟಿಯಾಗಿದ್ದು, ವಾಹನ ಚಾಲಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ,  ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ. ಗುರುವಾಯನಕೆರೆ ನಿವಾಸಿ ಶಬೀರ್ ಮೃತಪಟ್ಟ ಚಾಲಕ. ಬೆಳ್ತಂಗಡಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಸಾರ ಅಂಬ್ಯುಲೆನ್ಸ್ ವಾಹನ ವಗ್ಗ ಸಮೀಪದ ಕೊಪ್ಪಳ ಅಂಚಿಕಟ್ಟೆ ಎಂಬಲ್ಲಿ ಅಂಬ್ಯುಲೆನ್ಸ್ ವಾಹನ ರಸ್ತೆ ಮಧ್ಯ ಪಲ್ಟಿಯಾಗಿದ್ದು, ಚಾಲಕ ಶಬೀರ್ ಗಂಭೀರವಾಗಿ ಗಾಯಗೊಂಡಿದ್ದಾರೆ, ತಕ್ಷಣ ಆತನನ್ನು ಬೇರೆ

ಖಾಸಗಿ ಆಂಬುಲೆನ್ಸ್ ವಾಹನ ಪಲ್ಟಿ | ಚಾಲಕ ಮೃತ್ಯು Read More »

ಬೈಕ್-ಓಮ್ನಿ ಡಿಕ್ಕಿ : ಬೈಕ್ ಸವಾರ ಮೃತ್ಯು

ಪುತ್ತೂರು: ನಗರದ ಹೊರವಲಯದ ಮುಕ್ರಂಪಾಡಿಯಲ್ಲಿ ಓಮ್ನಿ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟವರನ್ನು ಉಪ್ಪಳಿಗೆಯ ಅಜಲಡ್ಕ ನಿವಾಸಿ ನಾರಾಯಣ್ ಎಂದು ಗುರುತಿಸಲಾಗಿದೆ. ಮೂಲತಃ ಕೆಮ್ಮಾಯಿ ನಿವಾಸಿಯಾವಗಿರುವ ನಾರಾಯಣ್ ಉಪ್ಪಳಿಗೆಯಲ್ಲಿ ವಾಸವಾಗಿದ್ದು, ಅಡಕೆ ತೆಗೆಯುವುದು, ಅಡಕೆಗೆ ಔಷಧಿ ಸಿಂಪಡಣೆ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಬೈಕ್-ಓಮ್ನಿ ಡಿಕ್ಕಿ : ಬೈಕ್ ಸವಾರ ಮೃತ್ಯು Read More »

ಮಕ್ಕಳಿಗೆ ಗೂಡ್ಸ್‌ ವಾಹನ ಡಿಕ್ಕಿ : ಇಬ್ಬರು ಸಾವು

ಟ್ಯೂಷನ್‌ ಮುಗಿಸಿ ವಾಪಸಾಗುತ್ತಿದ್ದ ಮಕ್ಕಳಿಗೆ ಡಿಕ್ಕಿ ಹೊಡೆದ ವಾಹನ ಬೆಂಗಳೂರು: ಟ್ಯೂಷನ್ ಮುಗಿಸಿ ಮನೆಗೆ ವಾಪಸಾಗುತ್ತಿದ್ದ ಮಕ್ಕಳ ಮೇಲೆ ಗೂಡ್ಸ್ ವಾಹನ ಹರಿದು ಇಬ್ಬರು ಮಕ್ಕಳು ಸಾವನ್ನಪ್ಪಿದ ದಾರುಣ ಘಟನೆ ನಿನ್ನೆ ರಾತ್ರಿ ರಾಮನಗರದಲ್ಲಿ ಸಂಭವಿಸಿದೆ. ರಾಮನಗರ ತಾಲ್ಲೂಕಿನ ಮಾಗಡಿ ರಸ್ತೆಯ ಗೊಲ್ಲರದೊಡ್ಡಿ ಗ್ರಾಮದಲ್ಲಿ ಬುಧವಾರ ರಾತ್ರಿ ಟ್ಯೂಷನ್ ಮುಗಿಸಿಕೊಂಡು ಮನೆಗೆ ವಾಪಸ್ಸಾಗುತ್ತಿದ್ದ ಐವರು ಮಕ್ಕಳ ಮೇಲೆ ಟಾಟಾ ಏಸ್ ಗೂಡ್ಸ್‌ ವಾಹನ ಹರಿದ ಪರಿಣಾಮ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. 7 ಮಂದಿಗೆ ಗಂಭೀರ ಗಾಯಗಳಾಗಿವೆ. 12

ಮಕ್ಕಳಿಗೆ ಗೂಡ್ಸ್‌ ವಾಹನ ಡಿಕ್ಕಿ : ಇಬ್ಬರು ಸಾವು Read More »

error: Content is protected !!
Scroll to Top