ಅಪಘಾತ

ಆಟೋ ರಿಕ್ಷಾ ಪಲ್ಟಿ : ಚಾಲಕ ಸ್ಥಳದಲ್ಲೇ ಮೃತ್ಯು

ವಿಟ್ಲ: ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮದ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ವಿಟ್ಲದ ಮಾಣಿಲ ತಿರುವೊಂದರಲ್ಲಿ ನಡೆದಿದೆ. ಸುಬ್ರಹ್ಮಣ್ಯ ಪಂಜ ನಿವಾಸಿ ಸುದರ್ಶನ್ (35) ಮೃತಪಟ್ಟ ಚಾಲಕ. ಸುದರ್ಶನ್ ಹಾಗೂ ಇನ್ನೋರ್ವ ನಿನ್ನೆ ರಾತ್ರಿ ಮಾಣಿಲ ಬಾವಲಿಮೂಲೆಗೆ ಬರುತ್ತಿದ್ದ ವೇಳೆ ಆಟೋ ರಿಕ್ಷಾ ಪಲ್ಟಿಯಾಗಿದೆ. ಪರಿಣಾಮ ಗಂಘೀರ ಗಾಯಗೊಂಡ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೋರ್ವ ವ್ಯಕ್ತಿ ಅಲ್ಪಸ್ವಲ್ಪ ಗಾಯಗಳಾಗಿವೆ. ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆಟೋ ರಿಕ್ಷಾ ಪಲ್ಟಿ : ಚಾಲಕ ಸ್ಥಳದಲ್ಲೇ ಮೃತ್ಯು Read More »

ಕೊಳಚೆ ಗುಂಡಿಗೆ ಬೀಳುವುದನ್ನು ತಪ್ಪಿಸಲು ಹೋದ ಮಹಿಳೆ ವಿದ್ಯುತ್ ಕಂಬ ಹಿಡಿದು ವಿದ್ಯುತ್ ಶಾಕ್‍ಗೆ ಬಲಿ

ಹೊಸದಿಲ್ಲಿ: ಪುತ್ತೂರು: ಕೊಳಚೆ ಗುಂಡಿಗೆ ಬೀಳುವುದನ್ನು ತಪ್ಪಿಸಲು ವಿದ್ಯುತ್ ಕಂಬವನ್ನು ಹಿಡಿದ ಮಹಿಳೆಯೊಬ್ಬರು ವಿದ್ಯುತ್ ಆಘಾತದಿಂದ ಮೃತಪಟ್ಟ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ಪೂರ್ವ ದೆಹಲಿಯ ಪ್ರೀತ್ ವಿಹಾರ್ ನಿವಾಸಿ ಸಾಕ್ಷಿ ಅಹುಜಾ ಮೃತಪಟ್ಟವರು. ಇಬ್ಬರು ಮಹಿಳೆಯರು ಹಾಗೂ ಮೂವರು ಮಕ್ಕಳೊಂದಿಗೆ ಬೆಳಿಗ್ಗೆ 5.30 ರ ಸುಮಾರಿ ರೈಲು ನಿಲ್ದಾಣಕ್ಕೆ ಬಂದಿದ್ದರು. ಈ ವೇಳೆ ಸಾಕ್ಷಿ ಅಹುಜಾ ಕೊಳಚೆ ಗುಂಡಿಗೆ ಬೀಳುವುದನ್ನು ತಪ್ಪಿಸಲು ವಿದ್ಯುತ್ ಕಂಬವನ್ನು ಹಿಡಿದಿದ್ದಾರೆ. ಈ ಸಂದರ್ಭ ಭಾರೀ ಪ್ರಮಾಣದ ವಿದ್ಯುತ್‍ ಪ್ರವಹಿಸಿ

ಕೊಳಚೆ ಗುಂಡಿಗೆ ಬೀಳುವುದನ್ನು ತಪ್ಪಿಸಲು ಹೋದ ಮಹಿಳೆ ವಿದ್ಯುತ್ ಕಂಬ ಹಿಡಿದು ವಿದ್ಯುತ್ ಶಾಕ್‍ಗೆ ಬಲಿ Read More »

ತಲೆ ಮೇಲೆ ತೆಂಗಿನಕಾಯಿ ಗೊನೆ ಬಿದ್ದು ಬಾಲಕ ಮೃತ್ಯು

ಹಾಸನ : ತಲೆ ಮೇಲೆ ತೆಂಗಿನಕಾಯಿ ಗೊನೆ ಬಿದ್ದು 16 ವರ್ಷದ ಬಾಲಕ ಮೃತಪಟ್ಟ ಘಟನರ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಶ್ರವಣಬೆಳಗೊಳ ಹೋಬಳಿಯ ಬಿ.ಚೋಳೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಶ್ರವಣಬೆಳಗೊಳದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಪ್ರಜ್ವಲ್ ಮೃತ ದುರ್ವೈವಿ. ಮಳೆಯಿಂದ ತೋಟದಲ್ಲಿ ಕಾಯಿ ಬಿದ್ದಿದ್ದರಿಂದ ಹೆಕ್ಕಲು ಹೋಗಿದ್ದ ಸಂದರ್ಭ ಏಕಾಏಕಿ ಪ್ರಜ್ವಲ್ ಮೇಲೆ ತೆಂಗಿನಕಾಯಿ ಗೊನೆ ಬಿದ್ದಿದೆ. ಆದರೆ ಅಸ್ವಸ್ಥಗೊಂಡಿದ್ದ ಪ್ರಜ್ವಲ್ ಸ್ಥಳದಲ್ಲೇ ಕುಸಿದು ಬಿದ್ದಿದ್ದಾನೆ. ಕೂಡಲೇ ಸ್ಥಳೀಯರು ಬಾಲಕನನ್ನು ಆಸ್ಪತ್ರೆಗೆ

ತಲೆ ಮೇಲೆ ತೆಂಗಿನಕಾಯಿ ಗೊನೆ ಬಿದ್ದು ಬಾಲಕ ಮೃತ್ಯು Read More »

ಹೆರಿಗೆ ವೇಳೆ ಬಾಣಂತಿ ಮೃತಪಟ್ಟ ಬೆನ್ನಲ್ಲೇ ಹಸುಗೂಸು ಮೃತ್ಯು

ಉಪ್ಪಿನಂಗಡಿ : ಹೆರಿಗೆ ವೇಳೆ ತೀವ್ರ ರಕ್ತಸಾವ್ರದಿಂದ ಬಾಣಂತಿ ಮೃತಪಟ್ಟ ಬೆನ್ನಲ್ಲೇ ಇದೀಗ ಹಸುಗೂಸು ಮೃತಪಟ್ಟ ಘಟನೆ ಮಂಗಳೂರು ಜಿಲ್ಲಾ ಆಸ್ಪತ್ರೆ ವೆನ್‌ಲಾಕ್‌ನಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಹಿರೇಬಂಡಾಡಿ ಗ್ರಾಮದ ಮುರ ಕಾಲೋನಿ ನಿವಾಸಿ, ಬಾಲಕೃಷ್ಣ ಗೌಡ ಎಂಬವರ ಪತ್ನಿ, ಹಿರೇಬಂಡಾಡಿ ಗ್ರಾಮದ ಆಶಾ ಕಾರ್ಯಕರ್ತೆ ಭವ್ಯ (28) ಜೂ. 20ರಂದು ರಾತ್ರಿ ಹೆರಿಗೆ ಸಂದರ್ಭ ರಕ್ತಸ್ರಾವದಿಂದ ಸಾವನ್ನಪ್ಪಿದ ಬೆನ್ನಿಗೆ ಅವರ ಹಸುಕೂಸು ಗುರುವಾರ ಮುಂಜಾನೆ ಮೃತಪಟ್ಟಿದೆ ಎಂದು ತಿಳಿದುಬಂದಿದೆ. ಭವ್ಯರವರು ತನ್ನ 3ನೇ ಹೆರಿಗೆಗಾಗಿ ಪುತ್ತೂರು

ಹೆರಿಗೆ ವೇಳೆ ಬಾಣಂತಿ ಮೃತಪಟ್ಟ ಬೆನ್ನಲ್ಲೇ ಹಸುಗೂಸು ಮೃತ್ಯು Read More »

ಹೆರಿಗೆ ವೇಳೆ ತೀವ್ರ ರಕ್ತಸ್ರಾವದಿಂದ ಮಹಿಳೆ ಮೃತ್ಯು

ಉಪ್ಪಿನಂಗಡಿ : ಹೆರಿಗೆ ವೇಳೆ ತೀವ್ರ ರಕ್ತಸ್ರಾವದಿಂದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬುಧವಾರ ನಡೆದಿದೆ. ಪುತ್ತೂರು ತಾಲೂಕಿನ ಹಿರೇಬಂಡಾಡಿ ಗ್ರಾಮದ ಮುರ ಕಾಲೋನಿ ನಿವಾಸಿ, ಬಾಲಕೃಷ್ಣ ಗೌಡ ಎಂಬವರ ಪತ್ನಿ, ಹಿರೇಬಂಡಾಡಿ ಗ್ರಾಮದ ಆಶಾ ಕಾರ್ಯಕರ್ತೆ ಭವ್ಯ (28) ಮೃತಪಟ್ಟ ಮಹಿಳೆ. ಹಸುಗೂಸು ಗಂಡು ಮಗು ಆರೋಗ್ಯವಾಗಿರುವುದಾಗಿ ತಿಳಿದು ಬಂದಿದೆ. ಭವ್ಯ ಅವರಿಗೆ 3ನೇ ಹೆರಿಗೆಯಾಗಿದ್ದು, ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸೋಮವಾರ ಪುತ್ತೂರು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಮಂಗಳವಾರ ರಾತ್ರಿ ಅವರು ಗಂಡು

ಹೆರಿಗೆ ವೇಳೆ ತೀವ್ರ ರಕ್ತಸ್ರಾವದಿಂದ ಮಹಿಳೆ ಮೃತ್ಯು Read More »

ಕಲ್ಲರ್ಪೆಯಲ್ಲಿ ಕಾರು-ದ್ವಿಚಕ್ರ ವಾಹನ ಡಿಕ್ಕಿ | ದ್ವಿಚಕ್ರ ಸವಾರ ಮೃತ್ಯು

ಪುತ್ತೂರು: ಆರ್ಯಾಪು ಗ್ರಾಮದ ಕಲ್ಲರ್ಪೆಯಲ್ಲಿ ಕಾರು ಹಾಗೂ ದ್ವಿಚಕ್ರ ವಾಹನ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ಇಂದು ಮುಂಜಾನೆ ನಡೆದಿದೆ. ನೈತಾಡಿ ನಿವಾಸಿ ಇಸ್ಮಾಯಿಲ್ ಮೃತಪಟ್ಟವರು. ತಮ್ಮ ಜಮೀನಿಗೆ ಹೋಗುವ ಸಂದರ್ಭ ಅಪಘಾತ ಸಂಭವಿಸಿದ್ದು, ಗಂಭೀರ ಗಾಯಗೊಂಡ ಇಸ್ಮಾಯಿಲ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯುವ ವೇಲೆ ಮೃತಪಟ್ಟಿದ್ದಾರೆ. ಅಪಘಾತ ರಭಸಕ್ಕೆ ಸ್ಕೂಟರ್ ನಜ್ಜುಗುಜ್ಜಾಗಿದೆ. ಮಡಿಕೇರಿ ನೋಂದಾಯಿತ ಕಾರಿನ ಕುರಿತು ಮಾಹಿತಿ ಲಭ್ಯವಾಗಿಲ್ಲ. ಮೃತ ಇಸ್ಮಾಯಿಲ್ ಪತ್ನಿ, ಮೂರು ಹೆಣ್ಣು ಹಾಗೂ ಒಂದು ಗಂಡು

ಕಲ್ಲರ್ಪೆಯಲ್ಲಿ ಕಾರು-ದ್ವಿಚಕ್ರ ವಾಹನ ಡಿಕ್ಕಿ | ದ್ವಿಚಕ್ರ ಸವಾರ ಮೃತ್ಯು Read More »

ಎರಡು ಬಸ್‍ ಗಳು ಮುಖಾಮುಖಿ ಡಿಕ್ಕಿ : ಏಳು ಸಾವು, 40 ಮಂದಿಗೆ ಗಾಯ

ತಮಿಳುನಾಡು : ತಮಿಳುನಾಡಿನ ಕಡಲೂರು ಜಿಲ್ಲೆಯ ಮೇಲ್ಪಟ್ಟಂಪಕ್ಕಂನಲ್ಲಿ ಸೋಮವಾರ ಬೆಳಗ್ಗೆ ಎರಡು ಬಸ್‌ಗಳು ಮುಖಾಮುಖಿ ಡಿಕ್ಕಿಯಾಗಿ ಏಳು ಮಂದಿ ಸಾವನ್ನಪ್ಪಿದ್ದು, 40 ಮಂದಿ ಗಾಯಗೊಂಡಿದ್ದಾರೆ. ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಕಂದಾಯ ಅಧಿಕಾರಿಗಳು ಕೂಡ ಸ್ಥಳಕ್ಕೆ ದೌಡಾಯಿಸಿದ್ದಾರೆ. ಬಸ್‌ಗಳ ಡಿಕ್ಕಿಯ ಹಿಂದಿನ ನಿಖರವಾದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ ಮತ್ತು ಅಪಘಾತದಲ್ಲಿ ಭಾಗಿಯಾದವರ ಜೊತೆ ಮಾತನಾಡಿದ ನಂತರವಷ್ಟೇ ತಿಳಿಯಲಿದೆ ಎಂದು ಕಡಲೂರು ಪೊಲೀಸ್

ಎರಡು ಬಸ್‍ ಗಳು ಮುಖಾಮುಖಿ ಡಿಕ್ಕಿ : ಏಳು ಸಾವು, 40 ಮಂದಿಗೆ ಗಾಯ Read More »

ಚಾಲಕನ ನಿಯಂತ್ರಣ ತಪ್ಪಿ ಕಿರು ಸೇತುವೆಗೆ ಬಿದ್ದ ಕಾರು | ಆರು ಮಂದಿಗೆ ಗಾಯ

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಾರೊಂದು ಕಿರು ಸೇತುವೆಯಿಂದ ಕೆಳಗೆ ಬಿದ್ದು ಕಾರಿನಲ್ಲಿದ್ದ ಆರು ಮಂದಿ ಗಾಯಗೊಂಡ ಘಟನೆ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನೆಲ್ಯಾಡಿ ಸಮೀಪ ಶನಿವಾರ ನಡೆದಿದೆ. ಗಾಯಗೊಂಡವರನ್ನು ಬೆಂಗಳೂರು ಆರ್ ಟಿ ನಗರ ನಿವಾಸಿಗಳೆಂದು ಗುರುತಿಸಲಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಕಾರಿನಲ್ಲಿದ್ದ ಎರಡು ವರ್ಷದ ಮಗುವೊಂದು ಅದೃಷ್ಟವಶಾತ್ ಯಾವುದೇ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದೆ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

ಚಾಲಕನ ನಿಯಂತ್ರಣ ತಪ್ಪಿ ಕಿರು ಸೇತುವೆಗೆ ಬಿದ್ದ ಕಾರು | ಆರು ಮಂದಿಗೆ ಗಾಯ Read More »

ವಿಟ್ಲದಲ್ಲಿ ಬೈಕ್‍ಗಳೆರಡು ಮುಖಾಮುಖಿ ಡಿಕ್ಕಿ | ಸವಾರರಿಗೆ ಗಾಯ

ವಿಟ್ಲ: ಬೈಕ್ ಗಳೆರಡು ಡಿಕ್ಕಿ ಹೊಡೆದುಕೊಂಡು ಬೈಕ್‍ ಸವಾರರಿಬ್ಬರೂ ಗಾಯಗೊಂಡ ಘಟನೆ ವಿಟ್ಲ ಸಮೀಪ ನಡೆದಿದೆ. ಬೈಕ್‍ ಸವಾರರಾದ ಧ್ಯಾನ್ ಹಾಗೂ ರಮೇಶ್ ಗಾಯಗೊಂಡವರು. ಗಾಯಗೊಂಡವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.

ವಿಟ್ಲದಲ್ಲಿ ಬೈಕ್‍ಗಳೆರಡು ಮುಖಾಮುಖಿ ಡಿಕ್ಕಿ | ಸವಾರರಿಗೆ ಗಾಯ Read More »

ಚಿತ್ತೂರು ಜಿಲ್ಲೆಯಲ್ಲಿ ಆನೆಗಳ ಹಿಂಡಿಗೆ ಮಿನಿ ಲಾರಿ ಡಿಕ್ಕಿ | ಮೂರು ಆನೆಗಳು ಮೃತ್ಯು

ಚಿತ್ತೂರು: ತರಕಾರಿ ಹೇರಿಕೊಂಡು ಹೋಗುತ್ತಿದ್ದ ಮಿನಿ ಲಾರಿಯೊಂದು ರಸ್ತೆ ದಾಟುತ್ತಿದ್ದ ಆನೆ ಹಿಂಡಿಗೆ ಡಿಕ್ಕಿ ಹೊಡೆದ ಪರಿಣಾಮ ಮೂರು ಆನೆಗಳು ಸಾವನ್ನಪ್ಪಿದ ಘಟನೆ ಬುಧವಾರ ರಾತ್ರಿ ಚಿತ್ತೂರು ಜಿಲ್ಲೆಯಲ್ಲಿ ನಡೆದಿದೆ. ಒಂದು ದೊಡ್ಡ ಆನೆ ಹಾಗೂ ಎರಡು ಮರಿ ಆನೆಗಳು ಸಾವನ್ನಪ್ಪಿದೆ. ಪಲಮನೇರು ಬಳಿ ಆಹಾರಕ್ಕಾಗಿ ಆನೆಗಳು ಸುತ್ತಾಡುತ್ತಲಿತ್ತು. ಬುಧವಾರ ರಾತ್ರಿ ಬೂತಲಬಂಡ ತಿರುವಿನಲ್ಲಿ ಚೆನ್ನೈಗೆ ತರಕಾರಿ ಹೇರಿಕೊಂಡು ಹೋಗುತ್ತಿದ್ದ ಮಿನಿ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದಿಂದ ಲಾರಿಯ ಮುಂಭಾಗ ನಜ್ಜುಗುಜ್ಜಾಗಿದ್ದು, ಚಾಲಕ ಓಡಿ ಹೋಗಿದ್ದಾನೆ. ಅಪಘಾತ

ಚಿತ್ತೂರು ಜಿಲ್ಲೆಯಲ್ಲಿ ಆನೆಗಳ ಹಿಂಡಿಗೆ ಮಿನಿ ಲಾರಿ ಡಿಕ್ಕಿ | ಮೂರು ಆನೆಗಳು ಮೃತ್ಯು Read More »

error: Content is protected !!
Scroll to Top