ಅಪಘಾತ

ಅಂಬುಲೆನ್ಸ್‌ ಡಿಕ್ಕಿಯಾಗಿ ರಿಕ್ಷಾ ಚಾಲಕ ಸಾವು

ಮೂಡುಬಿದಿರೆ : ಇಲ್ಲಿಗೆ ಸಮೀಪದ ಬನ್ನಡ್ಕ ಎಂಬಲ್ಲಿ ಅಂಬುಲೆನ್ಸ್ ಮತ್ತು ಆಟೋರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆಟೋ ಚಾಲಕ ಜಾನ್ ಕೊರೆಯಾ ಎಂಬವರು ಸ್ಥಳದಲ್ಲೇ ಮೃತಪಟ್ಟ ದುಘ೯ಟನೆ ಭಾನುವಾರ ನಡೆದಿದೆ. ಬನ್ನಡ್ಕ ಮಠದಲ್ಲಿ ನಡೆಯುತ್ತಿದ್ದ ಸಮಾರಂಭವೊಂದಕ್ಕೆ ಪ್ರಯಾಣಿಕರನ್ನು ಬಿಟ್ಟು ಆಟೋರಿಕ್ಷಾವನ್ನು ಹಿಂದಕ್ಕೆ (ರಿವರ್ಸ್) ತೆಗೆಯುತ್ತಿದ್ದ ಸಂದರ್ಭದಲ್ಲಿ, ಮೂಡುಬಿದಿರೆ ಕಡೆಯಿಂದ ಕಾರ್ಕಳಕ್ಕೆ ಅತಿವೇಗವಾಗಿ ತೆರಳುತ್ತಿದ್ದ ಅಂಬುಲೆನ್ಸ್ ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಆಟೋ ರಿಕ್ಷಾದ ಮೇಲ್ಬಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಅಂಬುಲೆನ್ಸ್‌ನ ಮುಂಭಾಗ ಕೂಡ ಜಖಂಗೊಂಡಿದೆ ಎಂದು ತಿಳಿದುಬಂದಿದೆ.

ಅಂಬುಲೆನ್ಸ್‌ ಡಿಕ್ಕಿಯಾಗಿ ರಿಕ್ಷಾ ಚಾಲಕ ಸಾವು Read More »

ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ : 9 ಮಂದಿ ಸಾವು

ನವದೆಹಲಿ: ದೆಹಲಿಯ ವಿವೇಕ್ ವಿಹಾರ್ ಪ್ರದೇಶದ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಇಂದು ಮುಂಜಾನೆ ಸಂಭವಿಸಿದ ಬೆಂಕಿ ಅವಘಡದಲ್ಲಿ ಒಂಬತ್ತು ಜನರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಕಟ್ಟಡದ ಎರಡನೇ ಮಹಡಿಯಲ್ಲಿ ನಸುಕಿನ 4 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿತ್ತು. 14 ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದವು. ಸಿಬ್ಬಂದಿ ಸ್ಥಳಕ್ಕೆ ತಲುಪಿದಾಗ, ಬೆಂಕಿ ಕಟ್ಟಡದ ಮೂರನೇ ಮತ್ತು ನಾಲ್ಕನೇ ಮಹಡಿಗೆ ಹರಡಿತ್ತು. ವಿವೇಕ್ ವಿಹಾರ್ ಪೂರ್ವ ದೆಹಲಿಯ ಒಂದು ಪ್ರಮುಖ ಸ್ಥಳವಾಗಿದೆ.

ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ : 9 ಮಂದಿ ಸಾವು Read More »

ಕ್ಷುಲ್ಲಕ ಜಗಳದ ‌ಕಾರಣಕ್ಕೆ ಆ್ಯಸಿಡ್ ಎರಚಿದ್ದ ಆರೋಪಿಗೆ ಶಿಕ್ಷೆ ಪ್ರಕಟಿಸಿದ ನ್ಯಾಯಾಲಯ

ಉಡುಪಿ: ಕಳೆದ ಎರಡು ನಾಲ್ಕು ವರ್ಷದ ಹಿಂದೆ ಕ್ಷುಲ್ಲಕ ಕಾರಣಕ್ಕಾಗಿ ನಡೆದ ಹಿಂಸಾತ್ಮಕ ಘಟನೆಯೊಂದಕ್ಕೆ ಸಂಬಂಧಿಸಿದ ಹಾಗೆ ಪ್ರಕರಣದ ಆರೋಪಿಗೆ ಹತ್ತು ವರ್ಷಗಳ ಕಠಿಣ ಜೈಲು ಶಿಕ್ಷೆಯ ಜೊತೆಗೆ ಮೂವತ್ತು ಸಾವಿರ ರೂ. ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ. ಕೇರಳದ ರತೀಶ್ ಕೆ.ಟಿ. (42) ಎಂಬಾತನೇ ಶಿಕ್ಷೆಗೆ ಗುರಿಯಾದ ಆರೋಪಿ. ರತೀಶ್ ಮತ್ತು ಸುಧೀರ್ ಎಂಬವರು 2022 ರಲ್ಲಿ ತಾರ ಗ್ರಾಮದ ಮಂಡಾಡಿಜಡ್ಡು ಎಂಬಲ್ಲಿ ಇರುವ ರಬ್ಬರ್ ತೋಟವೊಂದರಲ್ಲಿ ಕೆಲಸ ಮಾಡುವ ಸಂಜೀವ ಕುಮಾರ್ ಎಂಬಾತನ

ಕ್ಷುಲ್ಲಕ ಜಗಳದ ‌ಕಾರಣಕ್ಕೆ ಆ್ಯಸಿಡ್ ಎರಚಿದ್ದ ಆರೋಪಿಗೆ ಶಿಕ್ಷೆ ಪ್ರಕಟಿಸಿದ ನ್ಯಾಯಾಲಯ Read More »

ದೇವಸ್ಥಾನದ ಉತ್ಸವಕ್ಕೆ ಕರೆತಂದ ಆನೆಗೆ ಮದವೇರಿ ರಂಪಾಟ : ಮಾವುತ ಬಲಿ, ಸಹ ಮಾವುತ ಗಂಭೀರ

ಕೆರಳಿದ ಆನೆಯ ಅಟ್ಟಹಾಸಕ್ಕೆ ಸಿಲುಕಿ ಕಾರು, ದ್ವಿಚಕ್ರ ವಾಹನ ಧ್ವಂಸ ತಿರುವನಂತಪುರಂ: ಎರ್ನಾಕುಳಂ ಜಿಲ್ಲೆಯ ಅಂಗಾಮಾಲಿಯ ಕಿದಂಗೂರ್ ಮಹಾವಿಷ್ಣು ದೇವಸ್ಥಾನದ ಆವರಣದಲ್ಲಿ ಇಂದು ಮದವೇರಿದ ಆನೆಯೊಂದು ಅಟ್ಟಹಾಸಗೈದಾಗ ಆನೆಯ ತುಳಿತಕ್ಕೆ ಸಿಲುಕಿ ಲಾರಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮಾವುತನ ಸ್ಥಿತಿ ಗಂಭೀರವಾಗಿದೆ. ಅಕ್ಕಪಕ್ಕದ ದೇವಸ್ಥಾನಗಳ ಉತ್ಸವದಲ್ಲಿ ಪಾಲ್ಗೊಳ್ಳಲು ‘ಮಯ್ಯನಾಡ್ ಪಾರ್ಥಸಾರಥಿ’ ಹೆಸರಿನ ಆನೆಯನ್ನು ಕರೆತರಲಾಗಿತ್ತು. ಇಂದು ಬೆಳಗ್ಗೆ ಸುಮಾರು 9.30ರ ಸುಮಾರಿಗೆ ಆನೆಯನ್ನು ಸ್ನಾನ ಮಾಡಿಸಲು ಕಿದಂಗೂರ್ ದೇವಸ್ಥಾನಕ್ಕೆ ಕರೆತಂದಾಗ ಅದು ಇದ್ದಕ್ಕಿದ್ದಂತೆ ಮದವೇರಿ ಗಲಾಟೆ ಮಾಡಲು

ದೇವಸ್ಥಾನದ ಉತ್ಸವಕ್ಕೆ ಕರೆತಂದ ಆನೆಗೆ ಮದವೇರಿ ರಂಪಾಟ : ಮಾವುತ ಬಲಿ, ಸಹ ಮಾವುತ ಗಂಭೀರ Read More »

ಪ್ರಿವೆಡ್ಡಿಂಗ್‌ ಶೂಟ್‌ಗೆ ಹೋಗುವಾಗ ಅಪಘಾತ : ವರ ಸಾವು

ಹಾಸನ: ಕೆಲವೇ ದಿನಗಳಲ್ಲಿ ಹಸೆಮಣೆಏರಬೇಕಿದ್ದ ವರನೊಬ್ಬ ಪ್ರಿವೆಡ್ಡಿಂಗ್ ಶೂಟ್‌ಗೆ ವಧುವನ್ನು ಕರೆತರಲು ಹೋಗುತ್ತಿದ್ದಾಗ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಸಕಲೇಶಪುರ ತಾಲೂಕಿನ ಮೂಗಲಿ ಗ್ರಾಮದದಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಅಪಘಾತದಲ್ಲಿ ಮೃತಪಟ್ಟ ದುರ್ದೈವಿ ಯುವಕನನ್ನು ಮನು ಎಲ್‌.ಎನ್. (29) ಎಂದು ಗುರುತಿಸಲಾಗಿದೆ.ಮೇ 10ರಂದು ಆಲೂರು ತಾಲೂಕು ತೊಗರನಹಳ್ಳಿ ಗ್ರಾಮದ ಕಾಂಚನ ಜೊತೆ ಮನು ಅವರ ಮದುವೆ ನಿಶ್ಚಯವಾಗಿತ್ತು. ಇಂದು ಬೆಳಗ್ಗೆ ಮನು ಪ್ರಿವೆಡ್ಡಿಂಗ್ ಶೂಟಿಂಗ್‌ಗಾಗಿ ವಧುವನ್ನು ಕರೆತರಲು ಕಾರಿನಲ್ಲಿ ಹೊರಟಿದ್ದರು. ಕಾರು ಸಕಲೇಶಪುರದ

ಪ್ರಿವೆಡ್ಡಿಂಗ್‌ ಶೂಟ್‌ಗೆ ಹೋಗುವಾಗ ಅಪಘಾತ : ವರ ಸಾವು Read More »

ಬೌರಿಂಗ್‌ ಆಸ್ಪತ್ರೆ ಗೋಡೆ ಕುಸಿತ : ಪ್ರವಾಸಕ್ಕೆ ಬಂದವರ ದುರಂತ ಅಂತ್ಯ

ಮಳೆಯಿಂದ ರಕ್ಷಣೆ ಪಡೆಯಲು ಆಶ್ರಯಿಸಿದ ಗೋಡೆಯೇ ಮೃತ್ಯುವಾಯಿತು ಬೆಂಗಳೂರು: ಬುಧವಾರ ಸಂಜೆ ಸುರಿದ ರಣಮಳೆಯಿಂದಾಗಿ ಬೆಂಗಳೂರಿನ ಶಿವಾಜಿನಗರದ ಬೌರಿಂಗ್ ಆಸ್ಪತ್ರೆ ಬಳಿ ಸಂಭವಿಸಿದ ಗೋಡೆ ಕುಸಿತದ ಘಟನೆಯಲ್ಲಿ ಇಬ್ಬರು ಮಕ್ಕಳು ಸೇರಿ 7 ಮಂದಿ ದುರ್ಮರಣಕ್ಕೀಡಾಗಿದ್ದು, ಈ ದುರಂತ ಆಡಳಿತ ವ್ಯವಸ್ಥೆಯ ವಿರುದ್ಧ ಜನ ಆಕ್ರೋಶಿತರಾಗುವಂತೆ ಮಾಡಿದೆ. ನಿನ್ನೆ ಸಂಜೆ ನಗರದಾದ್ಯಂತ ದಿಢೀರ್ ಆಲಿಕಲ್ಲು ಸಹಿತ ಭಾರಿ ಮಳೆ ಸುರಿದಿದ್ದು, ಮಳೆಯ ಆರ್ಭಟಕ್ಕೆ ಬೌರಿಂಗ್ ಆಸ್ಪತ್ರೆಯ ಹಳೆಯ ಕಾಂಪೌಂಡ್ ಗೋಡೆ ಕುಸಿದು ಬಿದ್ದಿದೆ. ಗೋಡೆಯ ಪಕ್ಕದಲ್ಲೇ ಆಶ್ರಯ

ಬೌರಿಂಗ್‌ ಆಸ್ಪತ್ರೆ ಗೋಡೆ ಕುಸಿತ : ಪ್ರವಾಸಕ್ಕೆ ಬಂದವರ ದುರಂತ ಅಂತ್ಯ Read More »

ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿಯಾಗಿ ವಿದ್ಯಾರ್ಥಿ ಸಾವು

ಉಪ್ಪಿನಂಗಡಿ : ಬಜತ್ತೂರು ಗ್ರಾಮದ ನೀರಕಟ್ಟೆ ಬಳಿ ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಕಾರ್ತಿಕ್ (23) ಎಂಬ ಕಾಲೇಜು ವಿದ್ಯಾರ್ಥಿ ಸಾವನ್ನಪ್ಪಿ ಸಹ ಸವಾರೆ ಕಾಲೇಜು ವಿದ್ಯಾರ್ಥಿನಿ ನೇಹಾ ಎಂಬಾಕೆ ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ಸಂಭವಿಸಿದೆ. ಉಪ್ಪಿನಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳ ತಂಡ ದ್ವಿಚಕ್ರ ವಾಹನಗಳಲ್ಲಿ ಪರಿಚಿತರ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂತಿರುಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ದ್ವಿಚಕ್ರ ವಾಹನ

ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿಯಾಗಿ ವಿದ್ಯಾರ್ಥಿ ಸಾವು Read More »

ಬೆಂಗಳೂರಿನ ರಣಮಳೆಗೆ ಬಲಿಯಾದವರ ಸಂಖ್ಯೆ 10ಕ್ಕೇರಿಕೆ

ಅನೇಕ ಅನಾಹುತಗಳನ್ನು ಸೃಷ್ಟಿಸಿದ ಅಕಾಲಿಕ ಮಳೆ, ಜನ ಹೈರಾಣ ಬೆಂಗಳೂರು: ಬೆಂಗಳೂರಿನಲ್ಲಿ ನಿನ್ನೆ ಸಂಜೆ ಸುರಿದ ರಣಮಳೆ ಅನೇಕ ಅನಾಹುತಗಳನ್ನು ಸೃಷ್ಟಿಸಿದೆ. ಜೊತೆಗೆ ಆಡಳಿತದ ವೈಫಲ್ಯಗಳನ್ನು ಕೂಡ ಬಯಲು ಮಾಡಿದೆ. ಮಳೆ ಉಂಟು ಮಾಡಿದ ಅವಾಂತರಗಳಿಗೆ ನಗರದಲ್ಲಿ ಒಟ್ಟು ಮಂದಿ ಬಲಿಯಾಗಿದ್ದಾರೆ. ಬೌರಿಂಗ್‌ ಆಸ್ಪತ್ರೆಯ ಗೋಡೆ ಕುಸಿದು ಸಂಭವಿಸಿದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 8ಕ್ಕೇರಿದೆ. ಇನ್ನಿಬ್ಬರು ಪ್ರತ್ಯೇಕ ದುರ್ಘಟನೆಗಳಲ್ಲಿ ಸಾವನ್ನಪ್ಪಿದ್ದಾರೆ. ಜೆ.ಪಿ. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇದಕ್ಕೂ

ಬೆಂಗಳೂರಿನ ರಣಮಳೆಗೆ ಬಲಿಯಾದವರ ಸಂಖ್ಯೆ 10ಕ್ಕೇರಿಕೆ Read More »

ನಿಲ್ಲಿಸಿದ್ದ ಆಟೋರಿಕ್ಷಾಕ್ಕೆ ತೂಫಾನ್‌ ವಾಹನ ಡಿಕ್ಕಿಯಾಗಿ ಮಹಿಳೆ ಸಾವು

ಹೆದ್ದಾರಿ ಬದಿ ನೀರು ಕುಡಿಯಲೆಂದು ರಿಕ್ಷಾ ನಿಲ್ಲಿಸಿದಾಗ ಬಂದು ಅಪ್ಪಳಿಸಿದ ತೂಫಾನ್‌ ಉಪ್ಪಿನಂಗಡಿ: ಕೋಣಾಲು ಗ್ರಾಮದ ಕೋಲ್ಪೆ ಎಂಬಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಆಟೋರಿಕ್ಷಾಕ್ಕೆ ತೂಫಾನ್ ವಾಹನ ಢಿಕ್ಕಿ ಹೊಡೆದ ಪರಿಣಾಮ ಗಿರಿಜಾ (74) ಎಂಬವರು ಮೃತಪಟ್ಟಿದ್ದು, ಇತರ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳವಾರ ನಡೆದಿದೆ. ತೂಫಾನ್ ವಾಹನವನ್ನು ಅದರ ಚಾಲಕ ಉಪ್ಪಿನಂಗಡಿ ಕಡೆಯಿಂದ ಅಜಾಗರೂಕತೆ ಹಾಗೂ ನಿರ್ಲಕ್ಷ್ಯದಿಂದ ಚಲಾಯಿಸಿಕೊಂಡು ಬಂದು, ಹೆದ್ದಾರಿ ಬದಿಯಲ್ಲಿ ನಿಲ್ಲಿಸಿದ್ದ ಆಟೋರಿಕ್ಷಾಕ್ಕೆ ಹಿಂದಿನಿಂದ ಡಿಕ್ಕಿ ಹೊಡೆದಿದ್ದಾನೆ. ಅಪಘಾತಕ್ಕೀಡಾದ ರಿಕ್ಷಾದಲ್ಲಿ ಬಂಟ್ವಾಳ

ನಿಲ್ಲಿಸಿದ್ದ ಆಟೋರಿಕ್ಷಾಕ್ಕೆ ತೂಫಾನ್‌ ವಾಹನ ಡಿಕ್ಕಿಯಾಗಿ ಮಹಿಳೆ ಸಾವು Read More »

ಉಡುಪಿ ವಾಣಿಜ್ಯ ಮಳಿಗೆ ಬೆಂಕಿ ಅವಘಡದಲ್ಲಿ 2.5 ಕೋ. ರೂ. ಸೊತ್ತು ನಾಶ

ಸಿಟಿ ಬಸ್‌ಸ್ಟ್ಯಾಂಡ್‌ ಪಕ್ಕದಲ್ಲೇ ಹೊತ್ತಿ ಉರಿದ ಕಟ್ಟಡ ಉಡುಪಿ : ನಗರದ ಸಿಟಿ ಬಸ್ ನಿಲ್ದಾಣದ ಸಮೀಪವಿರುವ ವಾಣಿಜ್ಯ ಮಳಿಗೆಯೊಂದರಲ್ಲಿ ಭಾನುವಾರ ಸಂಜೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಸುಮಾರು 2.5 ಕೋಟಿ ರೂಪಾಯಿ ಮೌಲ್ಯದ ಆಸ್ತಿಪಾಸ್ತಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಮೂಲತಃ ರಾಜಸ್ಥಾನದವರಾದ ಉದ್ಯಮಿ ಭೀಮಾ ಎಂಬುವರಿಗೆ ಸೇರಿದ ಪ್ಲಾಸ್ಟಿಕ್ ವಸ್ತುಗಳ ಗೋದಾಮಿನಲ್ಲಿ ಭಾನುವಾರ ಸಂಜೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿದೆ ಎನ್ನಲಾಗಿದೆ. ಈ ಬೆಂಕಿ ಅವಘಡದಲ್ಲಿ ಅವರಿಗೆ ಸೇರಿದ ಪ್ಲಾಸ್ಟಿಕ್ ಮಳಿಗೆ

ಉಡುಪಿ ವಾಣಿಜ್ಯ ಮಳಿಗೆ ಬೆಂಕಿ ಅವಘಡದಲ್ಲಿ 2.5 ಕೋ. ರೂ. ಸೊತ್ತು ನಾಶ Read More »

error: Content is protected !!
Scroll to Top