ಅಪಘಾತ

ಪಲ್ಟಿಯಾಗಿ ನಜ್ಜುಗುಜ್ಜಾದ ಕಾರು: ಚಾಲಕನಿಗೆ ಗಾಯ

ಪುತ್ತೂರು: ಬಡಕ್ಕೋಡಿ ಮಸೀದಿ ಸಮೀಪದ ಪುತ್ತೂರು – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಕಾರಿನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ ಚಾಲಕ ಗಾಯಗೊಂಡ ಘಟನೆ ನಡೆದಿದೆ. ಗಾಯಾಳು ಚಾಲಕನನ್ನು ‌ಸವಣೂರಿನ ಯತೀಶ್‌ ಕೆಡೆಂಜಿ ಎಂದು ಗುರುತಿಸಲಾಗಿದೆ. ಅವರ ತಲೆಗೆ ಗಾಯವಾಗಿದ್ದು ಚಿಕಿತ್ಸೆ ಪಡೆದುಕೊಂಡಿದ್ದಾರೆ. ಹಾಗೆಯೇ ಅವರು ಚಲಾಯಿಸುತ್ತಿದ್ದ ರಿಟ್ಜ್ ಕಾರು ನಜ್ಜುಗುಜ್ಜಾಗಿದ್ದು, ದೊಡ್ಡ ಪ್ರಮಾಣದಲ್ಲಿ ನಷ್ಟ ಸಂಭವಿಸಿದೆ. ಯತೀಶ್‌ ಅವರು ಪುತ್ತೂರು ಕಡೆಗೆ ತೆರಳುತ್ತಿದ್ದರು. ಈ ವೇಳೆ ಎದುರಿನಿಂದ ಬಂದ ಕಾರಿನ ಚಾಲಕ ಅಡ್ಡ ಬಂದ ಮಗುವನ್ನು […]

ಪಲ್ಟಿಯಾಗಿ ನಜ್ಜುಗುಜ್ಜಾದ ಕಾರು: ಚಾಲಕನಿಗೆ ಗಾಯ Read More »

ದಕ್ಷ ಐಎಎಸ್‌ ಅಧಿಕಾರಿಯ ಪ್ರಾಣಕ್ಕೆ ಎರವಾದ ಶ್ವಾನ

ಭೀಕರ ಅಪಘಾತದಲ್ಲಿ ಮೂವರು ಸಾವು ಬೆಂಗಳೂರು: ಕಲಬುರಗಿಯ ಜೇವರ್ಗಿ ಸಮೀಪ ನಿನ್ನೆ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ಸಹಿತ ಮೂವರು ಸಾವನ್ನಪ್ಪಿದ್ದಾರೆ. ಮಾರ್ಗ ಮಧ್ಯೆ ಶ್ವಾನ ಅಡ್ಡಬಂದ ಹಿನ್ನೆಲೆ ಅದನ್ನು ತಪ್ಪಿಸಲು ಹೋಗಿ ಜೇವರ್ಗಿ ಬೈಪಾಸ್‌ನಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಹಾಂತೇಶ್ ಬೀಳಗಿ ಅವರ ಸೋದರರಾದ ಶಂಕರ ಬೀಳಗಿ

ದಕ್ಷ ಐಎಎಸ್‌ ಅಧಿಕಾರಿಯ ಪ್ರಾಣಕ್ಕೆ ಎರವಾದ ಶ್ವಾನ Read More »

ಸೇಬು ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಅಪಾರ ಪ್ರಮಾಣದಲ್ಲಿ ನಷ್ಟ

ಕಾರ್ಕಳ: ಕುದುರೆಮುಖ – ಮಾಳ ರಸ್ತೆಯಲ್ಲಿ ಕಾಶ್ಮೀರದಿಂದ ‌ಮಂಗಳೂರಿಗೆ ಸೇಬು ಹಣ್ಣುಗಳನ್ನು ರವಾನೆ ಮಾಡುತ್ತಿದ್ದ ಲಾರಿಯೊಂದು ಟೈರ್ ಸ್ಪೋಟಗೊಂಡ ಪರಿಣಾಮ ಹೊತ್ತಿ ಉರಿದ ಘಟನೆ ನಡೆದಿದೆ. ಚಾಲಕ ಮತ್ತು ಸಹಾಯಕ ಅಪಾಯದಿಂದ ಪಾರಾಗಿದ್ದಾರೆ‌. ಶನಿವಾರ ಮುಂಜಾನೆ ಈ ದುರಂತ ನಡೆದಿದೆ. ಘಾಟಿಯಲ್ಲಿ ‌ಲಾರಿ ಇಳಿಯುತ್ತಿದ್ದ‌ ಸಂದರ್ಭದಲ್ಲಿ ಟಯರ್ ಸ್ಫೋಟಗೊಂಡು ಬೆಂಕಿ ಹತ್ತಿಕೊಂಡಿದೆ. ಘಟನೆಯಲ್ಲಿ ಲಕ್ಷಾಂತರ ರೂ. ಗಳ ಸೇಬು ಹಣ್ಣುಗಳು ಬೆಂಕಿಗಾಹುತಿಯಾಗಿದ್ದು, ಭಾರೀ ಪ್ರಮಾಣದಲ್ಲಿ ನಷ್ಟ ಸಂಭವಿಸಿದೆ ಎಂದು ತಿಳಿದು ಬಂದಿದೆ. ತಕ್ಷಣವೇ ಅಗ್ನಿಶಾಮಕ ದಳ ಸ್ಥಳಕ್ಕೆ

ಸೇಬು ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಅಪಾರ ಪ್ರಮಾಣದಲ್ಲಿ ನಷ್ಟ Read More »

ಅಪರಿಚಿತ ವಾಹನ ಢಿಕ್ಕಿ: ವ್ಯಕ್ತಿ ಸ್ಥಳದಲ್ಲೇ ಸಾವು

ಮಡಿಕೇರಿ: ಭಾನುವಾರ ರಾತ್ರಿ ಗೋಣಿಕೊಪ್ಪದಲ್ಲಿ ನಡೆದ ಭೀಕರ ಅಪಘಾತ ಒಂದರಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಕೈಕೇರಿ ಸಮೀಪ ಈ ದುರಂತ ನಡೆದಿದೆ. ವೇಗವಾಗಿ ಬಂದ ವಾಹನವೊಂದು ಪಾದಚಾರಿಯೋರ್ವರಿಗೆ ಢಿಕ್ಕಿ ಹೊಡೆದ ಪರಿಣಾಮ ಅವರ ತಲೆ ಮತ್ತು ಎದೆಯ ಭಾಗಕ್ಕೆ ತೀವ್ರ ಪ್ರಮಾಣದ ಗಾಯಗಳಾಗಿವೆ. ಸ್ಥಳದಲ್ಲೇ ಅವರು ಸಾವನ್ನಪ್ಪಿದ್ದಾರೆ. ಢಿಕ್ಕಿ ಹೊಡೆದ ವಾಹನ ಸ್ಥಳದಿಂದ ಪರಾರಿಯಾಗಿದೆ. ಗೋಣಿಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಅಪರಿಚಿತ ವಾಹನ ಢಿಕ್ಕಿ: ವ್ಯಕ್ತಿ ಸ್ಥಳದಲ್ಲೇ ಸಾವು Read More »

ವಂದೇ ಭಾರತ್‌ ರೈಲಿನಡಿಗೆ ಬಿದ್ದು ಇಬ್ಬರು ವಿದ್ಯಾರ್ಥಿಗಳು ಸಾವು

ಪಿಜಿಗೆ ಹೋಗಲು ಹಳಿ ದಾಟುವಾಗ ಡಿಕ್ಕಿಯಾದ ರೈಲು ಬೆಂಗಳೂರು: ಇಲ್ಲಿನ ಚಿಕ್ಕಬಾಣಾವರ ರೈಲು ನಿಲ್ದಾಣದಲ್ಲಿ ವಂದೇ ಭಾರತ್‌ ಹೈಸ್ಪೀಡ್‌ ರೈಲಿಗೆ ಸಿಲುಕಿ ಇಬ್ಬರು ನರ್ಸಿಂಗ್‌ ವಿದ್ಯಾರ್ಥಿಗಳು ಸಾವನ್ನಪ್ಪಿರುವ ದಾರುಣ ಘಟನೆ ಸಂಭವಿಸಿದೆ. ಮೇಲ್ನೋಟಕ್ಕೆ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ಕೇರಳ ಮೂಲದ ಸ್ಟೆರ್ಲಿನ್ ಎಲಿಜ ಶಾಜಿ (19) ಮತ್ತು ಜಸ್ಟಿನ್ ಜೋಸೆಫ್ (20) ಮೃತ ವಿದ್ಯಾರ್ಥಿಗಳು. ಸಪ್ತಗಿರಿ ಕೇಲೇಜಿನಲ್ಲಿ ಪ್ರಥಮ ವರ್ಷದ BSc ನರ್ಸಿಂಗ್‌ ವ್ಯಾಸಂಗ ಮಾಡ್ತಿದ್ದರು. ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಇರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆದರೆ

ವಂದೇ ಭಾರತ್‌ ರೈಲಿನಡಿಗೆ ಬಿದ್ದು ಇಬ್ಬರು ವಿದ್ಯಾರ್ಥಿಗಳು ಸಾವು Read More »

ಸಂಗೀತ ರಸಮಂಜರಿಯಲ್ಲಿ ನೂಕುನುಗ್ಗಲು : 30ಕ್ಕೂ ಹೆಚ್ಚು ಮಂದಿಗೆ ಗಾಯ

ಜನಪ್ರಿಯ ಗಾಯಕನ ಕಾರ್ಯಕ್ರಮಕ್ಕೆ ಮಿತಿಮೀರಿ ಬಂದ ಜನರಿಂದಾಗಿ ದುರ್ಘಟ ನೆ ಕಾಸರಗೋಡು: ನಗರ ಹೊರವಲಯದಲ್ಲಿ ನಡೆದ ರಸಮಂಜರಿ ಕಾರ್ಯಕ್ರಮದ ವೇಳೆ ನಿರೀಕ್ಷೆಗೂ ಮೀರಿ ಸೇರಿದ್ದ ಜನಸಂದಣಿಯಿಂದ ನೂಕುನುಗ್ಗಲು ಸಂಭವಿಸಿ, ಕನಿಷ್ಠ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ. ಗಾಯಗೊಂಡವರಲ್ಲಿ ಮಹಿಳೆಯರು, ಮಕ್ಕಳು ಸೇರಿದ್ದಾರೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಕಾಸರಗೋಡು ನಗರದ ಹಲವು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಕಾರ್ಯಕ್ರಮ ಆಯೋಜಿಸಿದ ಐವರ ವಿರುದ್ಧ ಪೊಲೀಸರು ಕೇಸ್‌ ದಾಖಲಿಸಿಕೊಂಡಿದ್ದಾರೆ. ಕಾಸರಗೋಡು ಫ್ಲೀ ಯುವಜನ

ಸಂಗೀತ ರಸಮಂಜರಿಯಲ್ಲಿ ನೂಕುನುಗ್ಗಲು : 30ಕ್ಕೂ ಹೆಚ್ಚು ಮಂದಿಗೆ ಗಾಯ Read More »

ರಸ್ತೆ ಅಪಘಾತ ಗಾಯಾಳು ಚಿಕಿತ್ಸೆ ಫಲಿಸದೆ ಸಾವು

ಸುಳ್ಯ : ಬೈಕ್ ಸ್ಕಿಡ್‌ ಆಗಿ ರಸ್ತೆಗೆ ಬಿದ್ದು ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲ ನೀಡದೆ ಮಂಗಳೂರಿನ ಆಸ್ಪತ್ರೆಯಲ್ಲಿ ಶುಕ್ರವಾರ ಮೃತಪಟ್ಟಿದ್ದಾರೆ. ಸುಳ್ಯದ ಹಳೆಗೇಟು ತಮಿಳು ಕಾಲನಿ ನಿವಾಸಿ ರಾಮಕೃಷ್ಣ (52) ಮೃತಪಟ್ಟವರು. ಅವರು ನ.19ರಂದು ರಾತ್ರಿ ಹಳೆಗೇಟಿನಿಂದ ತಮಿಳು ಕಾಲನಿಯ ಮನೆಗೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಸಂದರ್ಭ ಬೈಕ್‌ ಸ್ಕಿಡ್ ಆಗಿ ರಸ್ತೆಗೆ ಬಿದ್ದಿದ್ದರು. ಗಂಭೀರ ಗಾಯಗೊಂಡಿದ್ದ ಅವರನ್ನು ಸ್ಥಳೀಯರು ಕೂಡಲೇ ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ

ರಸ್ತೆ ಅಪಘಾತ ಗಾಯಾಳು ಚಿಕಿತ್ಸೆ ಫಲಿಸದೆ ಸಾವು Read More »

ದ್ವಿಚಕ್ರ ವಾಹನ ಕಳ್ಳತನ: ಇಬ್ಬರ ಬಂಧನ

ಬೆಳ್ತಂಗಡಿ: ಪಾನೂರು ಶ್ರೀ ಗುರು ನಾರಾಯಣ ವೃತ್ತದ ಬಳಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ವೇಣೂರಿನ ‌ಮಹಮ್ಮದ್ ಇರ್ಷಾದ್ ಮತ್ತು ಪಡಂಗಡಿಯ ಸಾದಿಕ್ ಖಾನ್ ಬಂಧಿತ‌ ಆರೋಪಿಗಳು. ಬೆಳ್ತಂಗಡಿ ಕುಕ್ಕೇಡಿಯ ಸಂಪತ್ ಕುಮಾರ್ ಎಂಬವರಿಗೆ ‌ಸೇರಿದ ವಾಹನ ಇದಾಗಿತ್ತು. ಆರೋಪಿಗಳಿಂದ ಪೊಲೀಸರು ಕದ್ದೊಯ್ದ ವಾಹನವನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ದ್ವಿಚಕ್ರ ವಾಹನ ಕಳ್ಳತನ: ಇಬ್ಬರ ಬಂಧನ Read More »

ದುಬೈ ಏರ್‌ಶೋನಲ್ಲಿ ತೇಜಸ್‌ ಪತನ : 37 ವರ್ಷದ ಪೈಲಟ್‌ ದುರ್ಮರಣ

ಭಾರತಕ್ಕೆ ಆಘಾತ ನೀಡಿದ ಯುದ್ಧ ವಿಮಾನ ಪತನ; ತನಿಖೆಗೆ ಆದೇಶ ನವದೆಹಲಿ: ದುಬೈ ವೈಮಾನಿಕ ಪ್ರದರ್ಶನದ ವೇಳೆ ಎಚ್‌ಎಎಲ್‌ ನಿರ್ಮಿತ ತೇಜಸ್‌ ಯುದ್ಧ ವಿಮಾನ (ಎಲ್‌ಸಿಎ ಎಂಕೆ -1) ಪತನಗೊಂಡು, ಭಾರತೀಯ ವಾಯುಪಡೆಯ ಪೈಲಟ್‌ ವಿಂಗ್‌ ಕಮಾಂಡರ್‌ ನಮಾಂಶ್‌ ಸ್ಯಾಲ್ ಮೃತಪಟ್ಟಿದ್ದಾರೆಂದು ದೃಢಪಡಿಸಲಾಗಿದೆ. ಕಾರ್ಯಕ್ರಮದ ಕೊನೆಯ ದಿನದಂದು 37 ವರ್ಷದ ಪೈಲಟ್‌ ಕೆಳಮಟ್ಟದ ಏರೋಬ್ಯಾಟಿಕ್ ಕೌಶಲ ನಿರ್ವಹಿಸುತ್ತಿದ್ದಾಗ ಫೈಟರ್ ಜೆಟ್ ಪತನಗೊಂಡಿದೆ. ದುರದೃಷ್ಟಕರ ಘಟನೆಯಲ್ಲಿ ವಿಂಗ್‌ ಕಮಾಂಡರ್‌ ಸಾವಿಗೀಡಾಗಿದರು. ವಿಂಗ್ ಕಮಾಂಡರ್ ನಮಾಂಶ್ ಸ್ಯಾಲ್ ಹಿಮಾಚಲ ಪ್ರದೇಶದ

ದುಬೈ ಏರ್‌ಶೋನಲ್ಲಿ ತೇಜಸ್‌ ಪತನ : 37 ವರ್ಷದ ಪೈಲಟ್‌ ದುರ್ಮರಣ Read More »

ಸುಳ್ಯ : ಕಾರು ಮೋರಿಗೆ ಗುದ್ದಿ ಮೂವರಿಗೆ ಗಾಯ

ಸುಳ್ಯ : ಕಾರು ರಸ್ತೆ ಬದಿಯ ಮೋರಿಗೆ ಗುದ್ದಿದ ಪರಿಣಾಮ ಮೂವರು ಗಾಯಗೊಂಡ ಘಟನೆ ಶುಕ್ರವಾರ ಕನಕಮಜಲು ಸಮೀಪ ಕನ್ನಡ್ಕ ಎಂಬಲ್ಲಿ ನಡೆದಿದೆ. ಕಾರು ಚಾಲಕ ಮಂಡೆಕೋಲಿನ ಖಲೀಲ್ ಸಹಿತ ಮೂವರು ಗಾಯಗೊಂಡಿದ್ದಾರೆ. ಪುತ್ತೂರು ಕಡೆಯಿಂದ ಸುಳ್ಯಕ್ಕೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮೋರಿಗೆ ಗುದ್ದಿದೆ. ಗಾಯಾಳುಗಳನ್ನು ಕೂಡಲೇ ಆಟೊ ರಿಕ್ಷಾದಲ್ಲಿ ಸುಳ್ಯದ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಯಿತು.

ಸುಳ್ಯ : ಕಾರು ಮೋರಿಗೆ ಗುದ್ದಿ ಮೂವರಿಗೆ ಗಾಯ Read More »

error: Content is protected !!
Scroll to Top