ಅತಿವೇಗದ ಚಾಲನೆ: ಡಿವೈಡರ್ಗೆ ಬೈಕ್ ಡಿಕ್ಕಿಯಾಗಿ ಸವಾರರಿಬ್ಬರ ದುರ್ಮರಣ
ಬೆಂಗಳೂರು: ಅತಿ ವೇಗದಿಂದ ಚಲಾಯಿಸುತ್ತಿದ್ದ ಬೈಕ್ ಸವಾರಿ ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಾಗಡಿ ತಾಲೂಕಿನ ರಸ್ತೆ ಪಾಳ್ಯದ ಗಾಂಧಿ ಫಾರಂ ಬಳಿ ನಡೆದಿದೆ. ಬೆಂಗಳೂರಿನಿಂದ ಹಾಸನದ ಕಡೆಗೆ ಬೈಕ್ನಲ್ಲಿ ಯುವಕರಿಬ್ಬರು ಬರುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಮೃತದೇಹಗಳ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದ್ದು ಶವಗಳನ್ನು ನೆಲಮಂಗಲದ ಸರ್ಕಾರಿ ಆಸ್ಪತ್ರೆಯಲ್ಲಿರಿಸಲಾಗಿದೆ. ಕುದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅತಿವೇಗದ ಚಾಲನೆ: ಡಿವೈಡರ್ಗೆ ಬೈಕ್ ಡಿಕ್ಕಿಯಾಗಿ ಸವಾರರಿಬ್ಬರ ದುರ್ಮರಣ Read More »










