ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ
ಸುಳ್ಯ: ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಲಾರಿ ಪಲ್ಟಿಯಾದ ಘಟನೆ ಕನಕಮಜಲು ಗ್ರಾಮದ ಆನೆಗುಂಡಿ ತಿರುವಿನಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಪಲ್ಟಿಯಾದ ಪರಿಣಾಮ ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿದೆ. ಮೈಸೂರಿನಿಂದ ಮಂಗಳೂರಿಗೆ ಟೊಮ್ಯಾಟೊ ಹೊತ್ತೊಯ್ಯತ್ತಿದ್ದ ಲಾರಿ ಆನೆಗುಂಡಿಯ ತಿರುವಿನಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಗಾಯಗೊಂಡ ಚಾಲಕನನ್ನು ಸ್ಥಳೀಯರು ಸೇರಿ ಸುಳ್ಯದ ಸರ್ಕಾರಿ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಿದ್ದಾರೆ ಎಂದು ತಿಳಿದುಬಂದಿದೆ. ಲಾರಿಯನ್ನು ಕ್ರೈನ್ ಮೂಲಕ ಮೇಲೆತ್ತಲಾಗಿದೆ.
ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ Read More »