ಸಿಡಿಲು ಬಡಿದು ಓರ್ವ ಮೃತ್ಯು, ಇಬ್ಬರು ಗಂಭೀರ
ಕಡಬ: ಶೆಡ್ ಗೆ ಸಿಡಿಲು ಬಡಿದು ಓರ್ವ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಕಡಬ ತಾಲೂಕಿನ ಇಚ್ಲಂಪಾಡಿಯಲ್ಲಿ ಇಂದು ಸಂಜೆ ನಡೆದಿದೆ. ಉತ್ತರಪ್ರದೇಶ ಚೈನ್ ಪುರ್ ಮೂಲದ ಶ್ರೀಕಿಸುನ್ ಮೃತಪಟ್ಟವರು. ಗಂಭೀರ ಗಾಯಗೊಂಡವರನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ. ನದಿ ಬದಿಯ ಶೆಡ್ ನಲ್ಲಿದ್ದ ವೇಳೆ ಘಟನೆ ಸಂಭವಿಸಿದ್ದು, ಮರಳು ತೆಗೆಯುವ ಉತ್ತರ ಪ್ರದೇಶದ ಕಾರ್ಮಿಕರು ಎನ್ನಲಾಗಿದೆ. ಗಾಯಗೊಂಡವರು ಕುರಿತು ಮಾಹಿತಿ ತಿಳಿದು ಬಂದಿಲ್ಲ.
ಸಿಡಿಲು ಬಡಿದು ಓರ್ವ ಮೃತ್ಯು, ಇಬ್ಬರು ಗಂಭೀರ Read More »