ಅಪಘಾತ

ಕಂಟೈನರ್-ಖಾಸಗಿ ಬಸ್ ಡಿಕ್ಕಿ | 20 ಮಂದಿಗೆ ಗಾಯ

ನೆಲ್ಯಾಡಿ: ಕಂಟೈನರ್ ಹಾಗೂ ಖಾಸಗಿ ಬಸ್ ಡಿಕ್ಕಿಯಾದ ಪರಿಣಾಮ ಹಲವರು ಗಂಭೀರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನೆಲ್ಯಾಡಿ ಸಮೀಪ ಇಂದು ನಡೆದಿದೆ. ವಿವಾಹ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಇನ್ನೊಂದು ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿ ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಹತ್ತಿರದ ಆಸ್ಫತ್ರೆಗೆ ದಾಖಲಿಸಲಾಗಿದೆ ವರನ ಮದುವೆ ದಿಬ್ಬಣದ ಖಾಸಗಿ ಬಸ್ಸು ಪಿರಿಯಾಪಟ್ಟಣದಿಂದ ಧರ್ಮಸ್ಥಳಕ್ಕೆ ತೆರಳುತಿತ್ತು ಎನ್ನಲಾಗಿದೆ. ಬಸ್ ನಲ್ಲಿ ಪ್ರಯಾಣಿಸುತ್ತಿದ್ದ 20 ಮಂದಿ ಗಾಯಗೊಂಡು ಅವರನ್ನು ನೆಲ್ಯಾಡಿ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. […]

ಕಂಟೈನರ್-ಖಾಸಗಿ ಬಸ್ ಡಿಕ್ಕಿ | 20 ಮಂದಿಗೆ ಗಾಯ Read More »

ಹರ್ಷ ಶೋ ರೂಂನ ಗೋದಾಮಿನಲ್ಲಿ ಬೆಂಕಿ | ಕೋಟ್ಯಾಂತರ ಮೌಲ್ಯದ ಸೊತ್ತುಗಳು ಬೆಂಕಿಗಾಹುತಿ

ಪುತ್ತೂರು: ದರ್ಬೇಯಲ್ಲಿ ಕಾರ್ಯಾಚರಿಸುತ್ತಿರುವ ಗೃಹೋಪಯೋಗಿ ಹಾಗೂ ಇಲೆಕ್ಟ್ರಾನಿಕ್ಸ್ ವಸ್ತುಗಳ ಮಳಿಗೆ  ಹರ್ಷ ಶೋ ರೂಂ, ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡು ಕೋಟ್ಯಾಂತರ ರೂ. ಮೌಲ್ಯದ ಸೊತ್ತುಗಳು ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ. ಇಂದು ಮುಂಜಾನೆ ಈ ಘಟನೆ ನಡೆದಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ. ಅವಘಡಕ್ಕೆ ಕಾರಣಗಳು ತಿಳಿದು ಬರಬೇಕಿದೆ.

ಹರ್ಷ ಶೋ ರೂಂನ ಗೋದಾಮಿನಲ್ಲಿ ಬೆಂಕಿ | ಕೋಟ್ಯಾಂತರ ಮೌಲ್ಯದ ಸೊತ್ತುಗಳು ಬೆಂಕಿಗಾಹುತಿ Read More »

ಅಕ್ರಮ ಗೋಸಾಗಾಟ ಕಾರು ಪಾದಚಾರಿಗೆ ಡಿಕ್ಕಿ | ಘಟನೆಗೆ ಸಂಬಂಧಿಸಿ ಇಬ್ಬರು ಪೊಲೀಸ್ ವಶಕ್ಕೆ

ಪುತ್ತೂರು: ಅಕ್ರಮ ಗೋ ಸಾಗಾಟದ ಕಾರು ಡಿಕ್ಕಿಯಾಗಿ ಪಾದಚಾರಿ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಕಡಬ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡಸಲಾಗುತ್ತಿದೆ ಎಂದು ತಿಳಿದು ಬಂದಿದೆ. ಶನಿವಾರ ತಡರಾತ್ರಿ ವಿಠಲ ರೈ ಎಂಬವರು ತನ್ನ ಕಾರನ್ನು ಮರ್ದಾಳ ಪೇಟೆಯಲ್ಲಿ ರಸ್ತೆ ಬದಿ ನಿಲ್ಲಿಸಿ ರಸ್ತೆ ದಾಟುತಿದ್ದ ಸಂದರ್ಭ ಸುಬ್ರಹ್ಮಣ್ಯ ಕಡೆಯಿಂದ ಅಕ್ರಮ ಗೋಸಾಗಾಟ ಮಾಡಿಕೊಂಡು ಬರುತ್ತಿದ್ದ ಮಾರುತಿ 800 ಕಾರು ಡಿಕ್ಕಿ ಹೊಡೆದು ಪರಾರಿಯಾಗಿತ್ತು. ತಕ್ಷಣ ಅವರನ್ನು ಕಡಬ ಸರಕಾರಿ ಆಸ್ಪತ್ರೆಗೆ ಕರೆತಂದಾಗ ಆದಾಗಲೇ ಮೃತಪಟ್ಟಿದ್ದರು.

ಅಕ್ರಮ ಗೋಸಾಗಾಟ ಕಾರು ಪಾದಚಾರಿಗೆ ಡಿಕ್ಕಿ | ಘಟನೆಗೆ ಸಂಬಂಧಿಸಿ ಇಬ್ಬರು ಪೊಲೀಸ್ ವಶಕ್ಕೆ Read More »

ಅಕ್ರಮ ದನ ಸಾಗಾಟದ ಕಾರು ಪಾದಚಾರಿಗೆ ಡಿಕ್ಕಿ | ಸ್ಥಳದಲ್ಲೇ ಪಾದಚಾರಿ ಮೃತ್ಯು | ಹಿಂದೂ ಸಂಘಟನೆಗಳಿಂದ ಆರೋಪಿಗಳನ್ನು ಬಂಧಿಸುವಂತೆ ತಡರಾತ್ರಿ ಹೆದ್ದಾರಿ ತಡೆದು ಪ್ರತಿಭಟನೆ

ಕಡಬ: ಅಕ್ರಮ ದನ ಸಾಗಾಟದ ಕಾರೊಂದು ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಮೃತಪಟ್ಟ ಘಟನೆಯನ್ನು ಖಂಡಿಸಿ ಆರೋಪಿಗಳ ಬಂಧನಕ್ಕೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಹೆದ್ದಾರಿ ತಡೆ ನಡೆಸಿ ಪ್ರತಿಭಟನೆ ನಡೆಸಿದ ಘಟನೆ ಶನಿವಾರ ತಡರಾತ್ರಿ ನಡೆದಿದೆ. ಕಡಬದ ಮರ್ದಾಳದ ನೆಕ್ಕಿತ್ತಡ್ಕ ಸಮೀಪ ಅಚ್ಚಿಲ ಪಟ್ಟೆ ನಿವಾಸಿ ವಿಠಲ ರೈ ಅವರು ರಾತ್ರಿ ವೇಳೆ ತನ್ನ ಕಾರನ್ನು ನಿಲ್ಲಿಸಿ  ರಸ್ತೆ ದಾಟುತ್ತಿದ್ದ ಸಂದರ್ಭ ಸುಬ್ರಹ್ಮಣ್ಯ ಕಡೆಯಿಂದ ಬಂದ ಅಕ್ರಮ ದನ ಸಾಗಾಟದ ಮಾರುತಿ 800 ಡಿಕ್ಕಿ ಹೊಡೆದು

ಅಕ್ರಮ ದನ ಸಾಗಾಟದ ಕಾರು ಪಾದಚಾರಿಗೆ ಡಿಕ್ಕಿ | ಸ್ಥಳದಲ್ಲೇ ಪಾದಚಾರಿ ಮೃತ್ಯು | ಹಿಂದೂ ಸಂಘಟನೆಗಳಿಂದ ಆರೋಪಿಗಳನ್ನು ಬಂಧಿಸುವಂತೆ ತಡರಾತ್ರಿ ಹೆದ್ದಾರಿ ತಡೆದು ಪ್ರತಿಭಟನೆ Read More »

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ | ಓರ್ವ ಮೃತ್ಯು, ಇಬ್ಬರಿಗೆ ಗಾಯ

ಬೆಳ್ತಂಗಡಿ: ಕಾರು ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿಯಾದ ಪರಿಣಾಮ ಕಾರು ಪಲ್ಟಿಯಾಗಿ ಓರ್ವರು ಮೃತಪಟ್ಟು,, ಇಬ್ಬರು ಗಾಯಗೊಂಡ  ಘಟನೆ ಗುರುವಾಯನಕೆರೆ ಶಕ್ತಿನಗರದ ಬಳಿ ನಡೆದಿದೆ. ಲಾಯಿಲ ಮೋರ್ನಿಂಗ್ ಸ್ಟಾರ್ ನಿವಾಸಿ ವಿವಿ ಮ್ಯಾಥ್ಯೂ ಅವರ ಪುತ್ರ ಕಾರು ಚಾಲಕ ಪ್ರೈಸ್ ಮ್ಯಾಥ್ಯೂ (32) ಮೃತಪಟ್ಟವರು. ಇಬ್ಬರು ಗಾಯಗೊಂಡಿದ್ದಾರೆ. ಬೆಳ್ತಂಗಡಿ ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ | ಓರ್ವ ಮೃತ್ಯು, ಇಬ್ಬರಿಗೆ ಗಾಯ Read More »

ದ್ವಿಚಕ್ರ ವಾಹನ ಡಿಕ್ಕಿ : ವ್ಯಕ್ತಿ  ಮೃತ್ಯು

ಬೆಳ್ತಂಗಡಿ: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಮೃತ ಪಟ್ಟ ಘಟನೆ ಬೆಳ್ತಂಗಡಿ ಸಂತೆಕಟ್ಟೆ ಬಳಿ ಗುರುವಾರ ರಾತ್ರಿ ನಡೆದಿದೆ. ಬೆಳ್ತಂಗಡಿ ತೋಟಗಾರಿಕೆ ಇಲಾಖೆ ಸಮೀಪದ ನಿವಾಸಿ, ವಿಜಯ ಬ್ಯಾಂಕ್ ನಿವೃತ್ತ ಉದ್ಯೋಗಿ ಹೇರಾಜೆ ಶೇಖರ‌ ಬಂಗೇರ (66) ಮೃತಪಟ್ಟವರು. ಸ್ಥಳೀಯ ಹೋಟೆಲ್ ಒಂದರಿಂದ ಪಾರ್ಸೆಲ್ ಪಡೆದು ರಸ್ತೆ ದಾಟುತ್ತಿದ್ದ ಸಂದರ್ಭ ದ್ವಿಚಕ್ರ ವಾಹನ ಬಡಿದು ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವಾಗ ದಾರಿಯಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ದ್ವಿಚಕ್ರ ಸವಾರರು ಕೂಡಾ  ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ

ದ್ವಿಚಕ್ರ ವಾಹನ ಡಿಕ್ಕಿ : ವ್ಯಕ್ತಿ  ಮೃತ್ಯು Read More »

ಮನೆಗೆ ತಗುಲಿದ‌ ಬೆಂಕಿ : ಸೊತ್ತುಗಳಿಗೆ ಹಾನಿ

ಪುತ್ತೂರು: ಮರೀಲ್ ನ ಪುತ್ತೂರು ಕ್ಲಬ್ ಗೆ ಹೋಗುವಲ್ಲಿ ರಸ್ತೆ ಬದಿಯ ಮನೆಯೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿದ ಘಟನೆ ಮಾ.27 ರಂದು ನಡೆದಿದೆ. ಮರೀಲ್ ದಿ ವಿಶ್ವನಾಥ ಶೆಣೈ ಅವರ ಮನೆಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿತ್ತು. ಮಾಹಿತಿ ತಿಳಿದ ಅಗ್ನಿಶಾಮಕದಳ ಸ್ಥಳಕ್ಕೆ ತೆರಳಿ ಬೆಂಕಿಯನ್ನು ಶಮನಗೊಳಿಸಿದ್ದಾರೆ. ಬೆಂಕಿಯ ಜ್ವಾಲೆಗೆ ಮನೆಯೊಳಗಿದ್ದ ಸೊತ್ತುಗಳಿಗೆ ಹಾನಿಯಾಗಿದೆ.

ಮನೆಗೆ ತಗುಲಿದ‌ ಬೆಂಕಿ : ಸೊತ್ತುಗಳಿಗೆ ಹಾನಿ Read More »

ದ್ವಿಚಕ್ರ ವಾಹನಕ್ಕೆ ಜೀಪು ಡಿಕ್ಕಿ : ಇಬ್ಬರು ಮೃತ್ಯು

ಸುರತ್ಕಲ್: ದ್ವಿಚಕ್ರ ವಾಹನಕ್ಕೆ ಜೀಪು ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ಸವಾರರಿಬ್ಬರು ಮೃತಪಟ್ಟ ಘಟನೆ ರಾಷ್ಟ್ರೀಯ ಸುರತ್ಕಲ್ ಹೆದ್ದಾರಿ 66 ರಲ್ಲಿ ನಡೆದಿದೆ. ಸುರತ್ಕಲ್ ಕಾನ ನಿವಾಸಿ ನಿಯಾಝ್‍ (47) ಹಾಗೂ ಕುಳಾಯಿ ವಿದ್ಯಾನಗರ ನಿವಾಸಿ ನೋನಯ್ಯ ಮೃತಪಟ್ಟ ದ್ವಿಚಕ್ರ ವಾಹನ ಸವಾರರು. ಇಬ್ಬರೂ ಬೀಡಿ ಕಂಟ್ರಾಕ್ಟ್ ರ್ ಕೆಲಸ ಮಾಡುತ್ತಿದ್ದು, ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದಾಗ ಜೀಪ್‍ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ದ್ವಿಚಕ್ರ ವಾಹನಕ್ಕೆ ಜೀಪು ಡಿಕ್ಕಿ : ಇಬ್ಬರು ಮೃತ್ಯು Read More »

ನದಿ ನೀರಿನಲ್ಲಿ ಮುಳುಗಿ ಮೃತ್ಯು !

ಉಪ್ಪಿನಂಗಡಿ: ಉಪ್ಪಿನಂಗಡಿ ಹಳೆಗೇಟು ಎಂಬಲ್ಲಿ ವ್ಯಕ್ತಿಯೊಬ್ಬರು ನದಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ಸವಣೂರು ಅಂಕತ್ತಡ್ಕ ನಿವಾಸ ಮಂಜುನಾಥ್‍ (35) ಮೃತಪಟ್ಟವರು. ಬಿಳಿಯೂರು ಅಣೆಕಟ್ಟಿನಿಂದಾಗಿ ಹಳೆಗೇಟು ಬಳಿ ನೇತ್ರಾವತಿ ನದಿಯಲ್ಲಿ ನೀರು ತುಂಬಿಕೊಂಡಿದ್ದು, ಆಳ ತಿಳಿಯದೇ ನೀರಿಗೆ ಇಳಿದಿದ್ದು ಮುಳುಗಿದರು. ಬೊಬ್ಬೆ ಹಾಕಿದಾಗ ಅಕ್ಕಪಕ್ಕದಲ್ಲಿದ್ದವರು ಓಡಿ ಬಂದು ಅವರನ್ನು ನೀರಿನಿಂದ ಮೇಲಕ್ಕೆತ್ತಿ ಪುತ್ತೂರು ಆಸ್ಪತ್ರೆಗೆ ದಾಖಲಿಸಿದರೂ ಅಷ್ಟರಲ್ಲಿ ಅವರು ಮೃತಪಟ್ಟಿದ್ದರು ಎನ್ನಲಾಗಿದೆ.

ನದಿ ನೀರಿನಲ್ಲಿ ಮುಳುಗಿ ಮೃತ್ಯು ! Read More »

ರಸ್ತೆ ಬದಿ ನಿಲ್ಲಿಸಲಾಗಿದ್ದ ಎರಡು ದ್ವಿಚಕ್ರ ವಾಹನದ ಮೇಲೆ ಹರಿದ ಲಾರಿ | ದ್ವಿಚಕ್ರ ವಾಹನ ಸಂಪೂರ್ಣ ನಜ್ಜುಗುಜ್ಜು

ಬಂಟ್ವಾಳ: ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಎರಡು ದ್ವಿಚಕ್ರವಾಹನಗಳ ಮೇಲೆ ಘನಗಾತ್ರದ  ಲಾರಿಯೊಂದು ಹರಿದು ಬೈಕಗಳು ಅಪ್ಪಚ್ಚಿಯಾದ ಘಟನೆ ಬೆಂಜನಪದವು ಸಮೀಪದ ಕೊಡ್ಮಾನ್ ಕೋಡಿ ಎಂಬಲ್ಲಿ ನಡೆದಿದೆ. ಬೆಂಜನಪದವು ಗುಡ್ಡವೊಂದಕ್ಕೆ ಬಂದಿದ್ದ ಕಾರೊಂದು ಚಾಲಕನ ಎಡವಟ್ಟಿನಿಂದ ಗುಂಡಿಗೆ ಬಿದ್ದಿತ್ತು. ಗುಂಡಿಗೆ ಬಿದ್ದ ಕಾರನ್ನು ಎತ್ತಿ ಮೇಲೆಕ್ಕೆ ತರುವ ಉದ್ದೇಶದಿಂದ ಕಾರು ಮಾಲಕನಿಗೆ ಸಹಾಯ ಮಾಡುವ ಹಿನ್ನೆಲೆಯಲ್ಲಿ ಎರಡು ಬೈಕ್ ಗಳಲ್ಲಿ ಬಂದ ಯುವಕರು ಬೈಕನ್ನು ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದರು. ಕಾರುನ್ನು ಎತ್ತಲು ಹೋದ ವೇಳೆ ಬೆಂಜನಪದವು ಕಡೆಯಿಂದ ಮಾರಿಪಳ್ಳ

ರಸ್ತೆ ಬದಿ ನಿಲ್ಲಿಸಲಾಗಿದ್ದ ಎರಡು ದ್ವಿಚಕ್ರ ವಾಹನದ ಮೇಲೆ ಹರಿದ ಲಾರಿ | ದ್ವಿಚಕ್ರ ವಾಹನ ಸಂಪೂರ್ಣ ನಜ್ಜುಗುಜ್ಜು Read More »

error: Content is protected !!
Scroll to Top