ಅಪಘಾತ

ಬೈಕ್‍ ಗೆ ಟಿಪ್ಪರ್ ಡಿಕ್ಕಿ : ಬೈಕ್ ಸವಾರ ಸಚಿನ್ ಕುಮಾರ್ ಆಚಾರ್ಯ ಸ್ಥಳದಲ್ಲೇ ಮೃತ್ಯು

ಕೈಕಂಬ: ಬೈಕ್‍ಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು-ಮೂಡಬಿದ್ರೆ ರಾಷ್ಟ್ರೀಯ ಹೆದ್ದಾರಿ 169 ರ ಗಂಜಿಮಠ ಮುಚ್ಚಾರು ಕ್ರಾಸ್ ನಲ್ಲಿ ನಡೆದಿದೆ. ಗುರುಪುರ ಹೊಸಮನೆ ನಿವಾಸಿ, ಎಚ್‍ಡಿಎಫ್ ಸಿ ಉದ್ಯೋಗಿ ಸಚಿನ್ ಕುಮಾರ್ ಆಚಾರ್ಯ (33) ಮೃತಪಟ್ಟವರು. ಸಚಿನ್ ಸಂಜೆ ಕೆಲಸ ಮುಗಿಸಿ ಗುರುಪುರಕ್ಕೆ ಬೈಕ್‍ ನಲ್ಲಿ ಬರುತ್ತಿದ್ದ ಸಂದರ್ಭ ಬೈಕನ್ನು ಓವರ್ ಟೇಕ್ ಮಾಡುವ ಭರದಲ್ಲಿ ಟಿಪ್ಪರ್ ಡಿಕ್ಕಿ ಹೊಡೆದಿದೆ. ರಸ್ತೆಗೆ ಬಿದ್ದ ಸಚಿನ್ ನ ತಲೆಗೆ ಗಂಭೀರ […]

ಬೈಕ್‍ ಗೆ ಟಿಪ್ಪರ್ ಡಿಕ್ಕಿ : ಬೈಕ್ ಸವಾರ ಸಚಿನ್ ಕುಮಾರ್ ಆಚಾರ್ಯ ಸ್ಥಳದಲ್ಲೇ ಮೃತ್ಯು Read More »

ಬೆಂಗಳೂರು: ಹೊತ್ತಿ ಉರಿದ ಪಟಾಕಿ ಅಂಗಡಿಗಳು, 3 ಸಾವು

ಬೆಂಗಳೂರು: ಪಟಾಕಿ ಅನ್’ಲೋಡ್ ಮಾಡುತ್ತಿದ್ದ ವೇಳೆ ಪಟಾಕಿ ಅಂಗಡಿಗಳಿಗೆ ಬೆಂಕಿ ಹೊತ್ತಿಕೊಂಡು, 3 ಸಾವನ್ನಪ್ಪಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ವರದಿಯಾಗಿದೆ. ನವೀನ್ ಎಂಬುವವರಿಗೆ ಸೇರಿದ ಪಟಾಕಿ ಅಂಗಡಿಯಲ್ಲಿ ಈ ಅವಘಡ ಸಂಭವಿಸಿದೆ. ಲಾರಿಯಿಂದ ಪಟಾಕಿ ಅನ್ ಲೋಡ್ ಮಾಡುವಾಗ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಈ ಅವಘಡ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆ ಅಕ್ಕಪಕ್ಕದ ಅಂಗಡಿಗಳಿಗೂ ವ್ಯಾಪಿಸಿದ್ದು, 4-5 ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಅಂಗಡಿಯ ಎದುರು ನಿಲ್ಲಿಸಿದ್ದ 3 ಬೈಕ್’ಗಳು

ಬೆಂಗಳೂರು: ಹೊತ್ತಿ ಉರಿದ ಪಟಾಕಿ ಅಂಗಡಿಗಳು, 3 ಸಾವು Read More »

ಲಘು ವಿಮಾನ ಪತನ: ಇಬ್ಬರು ಭಾರತೀಯರು ಸೇರಿ ಮೂರು ಸಾವು

ಒಟ್ಟಾವಾ: ಕೆನಡಾದ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದಲ್ಲಿ ಸಂಭವಿಸಿದ ಸಣ್ಣ ವಿಮಾನ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಇವರಲ್ಲಿ ಇಬ್ಬರು ಭಾರತೀಯರು ಸೇರಿದ್ದಾರೆ ಎಂದು ವರದಿಯಾಗಿದೆ. ಅವಳಿ ಎಂಜಿನ್‌ನ ಲಘು ಪೈಪರ್ ಪಿಎ-34 ಸೆನೆಕಾ ವಿಮಾನವು ಮರಗಳು ಮತ್ತು ಪೊದೆಗಳಿಗೆ ಅಪ್ಪಳಿಸಿತು ಎಂದು ರಾಯಿಟರ್ಸ್ ವರದಿಯಾಗಿದೆ. ವ್ಯಾಂಕೋವರ್‌’ನಿಂದ ಪೂರ್ವಕ್ಕೆ 100 ಕಿಲೋ ಮೀಟರ್ ದೂರದಲ್ಲಿರುವ ಚಿಲ್ಲಿವಾಕ್‌’ನ ಸ್ಥಳೀಯ ವಿಮಾನ ನಿಲ್ದಾಣದ ಬಳಿ ಈ ಘಟನೆ ಸಂಭವಿಸಿದೆ. ವರದಿಗಳ ಆಧಾರದ ಮೇಲೆ, ಕೆನಡಾದ ಸಾರಿಗೆ ಸುರಕ್ಷತಾ ಮಂಡಳಿಯು ಘಟನೆಯ ತನಿಖೆಗೆ ತನಿಖಾಧಿಕಾರಿಗಳನ್ನು

ಲಘು ವಿಮಾನ ಪತನ: ಇಬ್ಬರು ಭಾರತೀಯರು ಸೇರಿ ಮೂರು ಸಾವು Read More »

ಪುತ್ತೂರು: ಹೋಟೆಲಿಗೆ ಆವರಿಸಿದ ಗ್ಯಾಸ್ ಸಿಲಿಂಡರ್ ಬೆಂಕಿ!!

ಪುತ್ತೂರು: ಇಲ್ಲಿನ ಪಡೀಲ್ ಬಳಿಯ ಹೊಟೇಲೊಂದರಲ್ಲಿ ಶನಿವಾರ ಬೆಳಿಗ್ಗೆ ಅಗ್ನಿ ಅವಘಡ ಸಂಭವಿಸಿದ ಘಟನೆ ನಡೆದಿದೆ. ಗ್ಯಾಸ್ ಸಿಲಿಂಡರಿಗೆ ಬೆಂಕಿ ತಗುಲಿ, ಹೋಟೆಲಿಗೆ ಬೆಂಕಿ ಆವರಿಸಿಕೊಂಡಿತು. ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ಜನರು ಜಮಾಯಿಸಿದ್ದು, ಸ್ಥಳೀಯರು ಬೆಂಕಿ ನಂದಿಸಿದರು. ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಕಾರ್ಯಾಚರಣೆ ನಡೆಸಿದ್ದಾರೆ. ನಗರ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿದ್ದಾರೆ.

ಪುತ್ತೂರು: ಹೋಟೆಲಿಗೆ ಆವರಿಸಿದ ಗ್ಯಾಸ್ ಸಿಲಿಂಡರ್ ಬೆಂಕಿ!! Read More »

ಕಾರು ಢಿಕ್ಕಿಯಾಗಿ ಬೈಕ್ ಸವಾರ ಶ್ರೀನಿವಾಸ ಉಡುಪ ದುರ್ಮರಣ

ಬಂಟ್ವಾಳ: ಬೈಕ್ ಗೆ ಕಾರು ಢಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕಾಮಾಜೆ ಕ್ರಾಸ್ ಬಳಿ ಇಂದು ನಡೆದಿದೆ. ವಾಮದಪದವು ಸಮೀಪದ ಪಾಂಗಲ್ಪಾಡಿ ನಿವಾಸಿ ಶ್ರೀನಿವಾಸ ಉಡುಪ (58) ಮೃತಪಟ್ಟ ವ್ಯಕ್ತಿ. ವಾಮದಪದವನಿಂದ ಬಿಸಿರೋಡಿಗೆ ಬರುತ್ತಿದ್ದ ವೇಳೆ ಹಿಂಬದಿಯಿಂದ ಬರುತ್ತಿದ್ದ ಕಾರು ಢಿಕ್ಕಿಯಾಗಿದೆ. ಶ್ರೀನಿವಾಸ ಅವರು ಬಂಟ್ವಾಳ ದಿಂದ ಬರುತ್ತಿದ್ದು, ಕಾಮಾಜೆ ಕ್ರಾಸ್ ಬಳಿ ತಿರುಗಿಸಿದ ವೇಳೆ ಹಿಂಬದಿಯಿಂದ ಕಾರು ಢಿಕ್ಕಿಯಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಶ್ರೀನಿವಾಸ ಉಡುಪರನ್ನು ತುಂಬೆ ಖಾಸಗಿ

ಕಾರು ಢಿಕ್ಕಿಯಾಗಿ ಬೈಕ್ ಸವಾರ ಶ್ರೀನಿವಾಸ ಉಡುಪ ದುರ್ಮರಣ Read More »

ವಿಟ್ಲದಲ್ಲಿ ಪಲ್ಟಿಯಾದ ಮಾರ್ಬಲ್ ತುಂಬಿದ್ದ ಲಾರಿ: ಕಾರ್ಮಿಕರ ಕೈ-ಕಾಲು ಛಿದ್ರ ಛಿದ್ರ!!

ವಿಟ್ಲ: ಅನ್ ಲೋಡ್ ಮಾಡುತ್ತಿದ್ದ ಸಂದರ್ಭ ಮಾರ್ಬಲ್ ತುಂಬಿದ್ದ ಲಾರಿ ಪಲ್ಟಿಯಾಗಿ ನಾಲ್ವರು ಕಾರ್ಮಿಕರು ಗಂಭೀರ ಗಾಯಗೊಂಡ ಘಟನೆ ಕನ್ಯಾನ ಸಮೀಪದ ಒಡಿಯೂರಿನಲ್ಲಿ ನಡೆದಿದೆ. ಉತ್ತರ ಭಾರತ ಮೂಲದ ನಾಲ್ವರು ಕಾರ್ಮಿಕರು ಗಂಭೀರ ಗಾಯಗೊಂಡಿದ್ದು, ಅವರು ನಾಲ್ಕು ಆ್ಯಂಬುಲೆನ್ಸ್’ಗಳ ಸಹಾಯದಿಂದ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾರ್ಬಲ್ ತುಂಬಿದ್ದ ಲಾರಿಯನ್ನು ಅನ್’ಲೋಡ್ ಮಾಡಲೆಂದು ರಿವರ್ಸ್ ತೆಗೆಯುತ್ತಿದ್ದಾಗ ಅವಘಡ ಸಂಭವಿಸಿದೆ. ಲಾರಿಯಲ್ಲಿದ್ದ ಕಾರ್ಮಿಕರ ಕೈ – ಕಾಲು ಛಿದ್ರ ಛಿದ್ರವಾಗಿದೆ ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ

ವಿಟ್ಲದಲ್ಲಿ ಪಲ್ಟಿಯಾದ ಮಾರ್ಬಲ್ ತುಂಬಿದ್ದ ಲಾರಿ: ಕಾರ್ಮಿಕರ ಕೈ-ಕಾಲು ಛಿದ್ರ ಛಿದ್ರ!! Read More »

ಸೇತುವೆಯಿಂದ ವಿದ್ಯುತ್ ತಂತಿ ಮೇಲೆ ಬಿದ್ದ ಬಸ್ | 21 ಮಂದಿ ಪ್ರವಾಸಿಗರ ದಾರುಣ ಸಾವು

ವೆನಿಸ್: ಕ್ಯಾಂಪ್‌ಗ್ರೌಂಡ್‌ಗೆ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬಸ್ಸೊಂದು ಉತ್ತರ ಇಟಲಿಯ ವೆನಿಸ್ ಬಳಿಯ ಮೇಲ್ಸೇತುವೆಯಿಂದ ಉರುಳಿಬಿದ್ದು ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ 21 ಪ್ರವಾಸಿಗರು ಮೃತಪಟ್ಟಿದ್ದಾರೆ. ಸೇತುವೆ ಮೇಲಿಂದ 30 ಅಡಿ ಆಳಕ್ಕೆ ಬೀಳುವ ವೇಳೆ ವಿದ್ಯುತ್ ತಂತಿಗಳ ಮೇಲೆ ಬಿದ್ದ ಬಸ್ಸಿಗೆ ಬೆಂಕಿ ಹತ್ತಿಕೊಂಡು ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬಸ್ ಅವಘಡಕ್ಕೆ ಸಂಬಂಧಿಸಿ ”ವೆನಿಸ್‌ನ ಮೇಯರ್ ಲುಯಿಗಿ ಬ್ರುಗ್ನಾರೊ ಟ್ವಿಟರ್ ಎಕ್ಸ್‌ನಲ್ಲಿ ಇದೊಂದು ಭೀಕರ ಅವಘಡ. ನಂಬಲು ಸಾಧ್ಯವಾಗುತ್ತಿಲ್ಲ ಎಂದು ಪೋಸ್ಟ್ ಮಾಡಿದ್ದಾರೆ.

ಸೇತುವೆಯಿಂದ ವಿದ್ಯುತ್ ತಂತಿ ಮೇಲೆ ಬಿದ್ದ ಬಸ್ | 21 ಮಂದಿ ಪ್ರವಾಸಿಗರ ದಾರುಣ ಸಾವು Read More »

ಮೇಘಸ್ಫೋಟಕ್ಕೆ ಕೊಚ್ಚಿ ಹೋದ ಸೇತುವೆ, 23 ಸೇನಾ ಸಿಬ್ಬಂದಿ ನಾಪತ್ತೆ!

ಗ್ಯಾಂಗ್ಟಾಕ್: ಸಿಕ್ಕಿಂ ಲಾಚೆನ್ ಕಣಿವೆಯ ತೀಸ್ತಾ ನದಿಯಲ್ಲಿ ತಡ ರಾತ್ರಿ ಹಠಾತ್ ಪ್ರವಾಹ ಉಂಟಾಗಿ 23 ಸೇನಾ ಸಿಬ್ಬಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಉತ್ತರ ಸಿಕ್ಕಿಂನ ಲ್ಹೋನಕ್ ಸರೋವರದಲ್ಲಿ ಹಠಾತ್ ಮೇಘಸ್ಫೋಟದಿಂದಾಗಿ ಪ್ರವಾಹ ಉಂಟಾಗಿದೆ. ಇದು ತೀಸ್ತಾದಲ್ಲಿ ನೀರಿನ ಮಟ್ಟದಲ್ಲಿ ಹಠಾತ್ ಹೆಚ್ಚಳಕ್ಕೆ ಕಾರಣವಾಯಿತು. ಚುಂಗ್‌ತಾಂಗ್ ಅಣೆಕಟ್ಟಿನಿಂದ ನೀರು ಬಿಡುಗಡೆ ಮಾಡಿರುವುದರಿಂದ ಪರಿಸ್ಥಿತಿ ಇನ್ನಷ್ಟು ಉಲ್ಬಣಗೊಳಿಸಿತು. ಇದರಿಂದಾಗಿ ನೀರಿನ ಮಟ್ಟವು ಹೆಚ್ಚಳಕ್ಕೆ ಕಾರಣವಾಯಿತು ಎಂದು ಅಧಿಕಾರಿಗಳು ಹೇಳಿದ್ದಾರೆ. ಸಿಂಗ್ಟಮ್ ಬಳಿಯ ಬರ್ದಂಗ್‌ನಲ್ಲಿ ನಿಲ್ಲಿಸಲಾಗಿದ್ದ ಸೇನಾ ವಾಹನಗಳು

ಮೇಘಸ್ಫೋಟಕ್ಕೆ ಕೊಚ್ಚಿ ಹೋದ ಸೇತುವೆ, 23 ಸೇನಾ ಸಿಬ್ಬಂದಿ ನಾಪತ್ತೆ! Read More »

ಖಾಸಗಿ ವಿಮಾನ ಪತನ: ಭಾರತೀಯ ಗಣಿ ಉದ್ಯಮಿ, ಪುತ್ರ ಸೇರಿ 6 ಮಂದಿ ಮೃತ್ಯು

ಹರಾರೆ: ಖಾಸಗಿ ವಿಮಾನ ಪತನಗೊಂಡು ಭಾರತೀಯ ಗಣಿ ಉದ್ಯಮಿ, ಪುತ್ರ ಸೇರಿ 6 ಮಂದಿ ದಾರುಣವಾಗಿ ಮೃತಪಟ್ಟಿರುವ ಘಟನೆ ನೈಋತ್ಯ ಜಿಂಬಾಬ್ವೆಯಲ್ಲಿ ನಡೆದಿರುವುದು ವರದಿಯಾಗಿದೆ. ಚಿನ್ನ, ಕಲ್ಲಿದ್ದಲು ಮತ್ತು ತಾಮ್ರವನ್ನು ಸಂಸ್ಕರಿಸುವ ರಿಯೋಜಿಮ್ ಗಣಿ ಕಂಪನಿಯ ಮಾಲೀಕ ಹರ್ಪಾಲ್ ರಾಂಧವಾ, ಅವರ ಮಗ ಮತ್ತು ಇತರ ನಾಲ್ವರು ವಿಮಾನ ಅಪಘಾತದಲ್ಲಿ ಮೃತಪಟ್ಟಿರುವುದಾಗಿ ʼಪಿಟಿಐʼ ವರದಿ ಮಾಡಿದೆ. ರಿಯೊಜಿಮ್ ಒಡೆತನದ ಸೆಸ್ನಾ 206 ವಿಮಾನವು ಶುಕ್ರವಾರ (ಸೆ. 29ರಂದು) ಹರಾರೆಯಿಂದ ಜಿಂಬಾಬ್ಬೆಯ ಮುರೊವಾ ವಜ್ರದ ಗಣಿ ಕಡೆಗೆ ತೆರಳುತ್ತಿದ್ದಾಗ

ಖಾಸಗಿ ವಿಮಾನ ಪತನ: ಭಾರತೀಯ ಗಣಿ ಉದ್ಯಮಿ, ಪುತ್ರ ಸೇರಿ 6 ಮಂದಿ ಮೃತ್ಯು Read More »

ಹಿಟ್ ಆಂಡ್ ರನ್ : ಸ್ಕೂಟರ್ ಗೆ ಡಿಕ್ಕಿ ಹೊಡೆದು ಎಸ್ಕೇಪ್ ಆದ ಕಾರು | ಒಳಮೊಗ್ರು ಗ್ರಾಪಂ ಸದಸ್ಯರಿಬ್ಬರು ‌ಆಸ್ಪತ್ರೆಗೆ ದಾಖಲು

ಪುತ್ತೂರು: ಆಕ್ಟಿವಾ ಸ್ಕೂಟರಿಗೆ 800 ಕಾರು ಡಿಕ್ಕಿಯಾಗಿದ್ದು,ಡಿಕ್ಕಿ ಹೊಡೆದ ಕಾರು ಎಸ್ಕೇಪ್ ಆಗಿದ್ದು ಸ್ಕೂಟರ್‌ನಲ್ಲಿ ತೆಳುತ್ತಿದ್ದ ಗ್ರಾಪಂ ಸದಸ್ಯರಿಬ್ಬರಿಗೆ ಗಾಯಗಳಾಗಿವೆ. ಒಳಮೊಗ್ರು ಗ್ರಾಪಂ ಸದಸ್ಯರಾದ ಶೀನಪ್ಪ ನಾಯ್ಕ ಹಾಗೂ ಚಿತ್ರ ರವರು ಆಕ್ಟಿವಾ ಸ್ಕೂಟರಿನಲ್ಲಿ ತೆರಳುವಾಗ ಕುಂಬ್ರ ಸಮೀಪ ಕಾರು ಡಿಕ್ಕಿ ಹೊಡೆದಿದೆ. ಅಪಘಾತಕ್ಕೆ ಸ್ಕೂಟರ್ ಪಲ್ಟಿಯಾಗಿದೆ. ಕಾರು ಚಾಲಕ ಕಾರನ್ನು‌ ನಿಲ್ಲಿಸದೆ ಎಸ್ಕೇಪ್ ಆಗಿದ್ದಾನೆ. ಗಾಯಾಳುಗಳಿಬ್ಬರು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಹಿಟ್ ಆಂಡ್ ರನ್ : ಸ್ಕೂಟರ್ ಗೆ ಡಿಕ್ಕಿ ಹೊಡೆದು ಎಸ್ಕೇಪ್ ಆದ ಕಾರು | ಒಳಮೊಗ್ರು ಗ್ರಾಪಂ ಸದಸ್ಯರಿಬ್ಬರು ‌ಆಸ್ಪತ್ರೆಗೆ ದಾಖಲು Read More »

error: Content is protected !!
Scroll to Top