ಅಪಘಾತ

ಅಸುನೀಗಿದ ಅಂಬಾರಿ ಹೊತ್ತಿದ್ದ ‘ಅರ್ಜುನ’!

ಸಕಲೇಶಪುರ: ಈ ಬಾರಿ ನಾಡಹಬ್ಬ ದಸರಾದಲ್ಲಿ ಅಂಬಾರಿ ಹೊತ್ತಿದ್ದ ಸಾಕಾನೆ ಅರ್ಜುನ ಅಸುನೀಗಿದೆ. ಸಕಲೇಶಪುರದಲ್ಲಿ ನಡೆದ ಕಾಡಾನೆ ಸೆರೆ ವೇಳೆ ಘಟನೆ ಸಂಭವಿಸಿದೆ. ಕಾಡಾನೆಗೆ ಅರಿವಳಿಕೆ ಚುಚ್ಚುಮದ್ದು ನೀಡುವ ವೇಳೆ, ಕಾಡಾನೆ ದಾಳಿ ನಡೆಸಿದೆ ಎನ್ನಲಾಗಿದೆ. ಈ ಸಂದರ್ಭ ಗಂಭೀರ ಗಾಯಗೊಂಡ ಅರ್ಜುನ ಅಸುನೀಗಿದೆ ಎಂದು ಹೇಳಲಾಗಿದೆ. ಸಕಲೇಶಪುರದ ಯಸಲೂರಿನಲ್ಲಿ ಘಟನೆ ನಡೆದಿದೆ. ದಾಳಿ ಸಂದರ್ಭ ಮಾವುತರು ಓಡಿ ಹೋಗಿದ್ದಾರೆ. ಈ ಸಂದರ್ಭ ಹಲವರ ಪ್ರಾಣ ಉಳಿಸಲು, ಅರ್ಜುನ ತನ್ನ ಪ್ರಾಣ ಪಣವಾಗಿ ಇಟ್ಟಿದ್ದ. ಇದರಿಂದ ಅರ್ಜುನ […]

ಅಸುನೀಗಿದ ಅಂಬಾರಿ ಹೊತ್ತಿದ್ದ ‘ಅರ್ಜುನ’! Read More »

ಕಾರು – ಬಸ್ ಭೀಕರ ಅಪಘಾತ!

ಪುತ್ತೂರು: ಕಬಕ ಸಮೀಪದ ಕೂವೆತ್ತಿಲ ಎಂಬಲ್ಲಿ ಬಸ್ ಹಾಗೂ ಇಂಡಿಕಾ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದವರು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಶನಿವಾರ ಮಧ್ಯಾಹ್ನ ಘಟನೆ ನಡೆದಿದ್ದು, ಕಾರಿನ ಡೋರ್ ಮುರಿದು ಗಾಯಾಳುಗಳನ್ನು ರಕ್ಷಿಸಲಾಯಿತು. ಬಳಿಕ ಆಸ್ಪತ್ರೆಗೆ ಸಾಗಿಸಲಾಯಿತು. ಇಂಡಿಕಾ ಕಾರು ಹಾಗೂ ಕೆ.ಎಸ್.ಆರ್.ಟಿ.ಸಿ. ಬಸ್ ನಡುವೆ ಢಿಕ್ಕಿ ಸಂಭವಿಸಿದ್ದು, ಕಾರಿನಲ್ಲಿದ್ದವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ.

ಕಾರು – ಬಸ್ ಭೀಕರ ಅಪಘಾತ! Read More »

ನೀರಿನಲ್ಲಿ ಮುಳುಗಿ ಮೃತ್ಯು !

ಸುಳ್ಯ: ಸ್ನಾನಕ್ಕೆ ಇಳಿದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಆರಂಬೂರು ಬಳಿಯ ಪಯಸ್ವಿನಿ ನದಿಯಲ್ಲಿ ಇಂದು ನಡೆದಿದೆ. ಮಡಿಕೇರಿ ಮದೆನಾಡು ಮೂಲದ ವೆಂಕಟರಮಣ ಮೃತಪಟ್ಟವರು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಪೊಲೀಸರು ಆಗಮಿಸಿ ಮೃತದೇಹ ಹುಡುಕಾಟದಲ್ಲಿ ತೊಡಗಿದ್ದಾರೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

ನೀರಿನಲ್ಲಿ ಮುಳುಗಿ ಮೃತ್ಯು ! Read More »

ರಸ್ತೆಗಡ್ಡವಾಗಿ ಉರುಳಿಬಿದ್ದ ಕೋಳಿ ಸಾಗಾಟದ ಲಾರಿ!!

ಕೋಳಿ ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಉರುಳಿಬಿದ್ದ ಘಟನೆ ವಿಟ್ಲ-ಸಾಲೆತ್ತೂರು ರಸ್ತೆಯ ರಾಧಾಕಟ್ಟೆ ಎಂಬಲ್ಲಿ ಶುಕ್ರವಾರ ನಡೆದಿದೆ. ವಿಟ್ಲ ಕಡೆಯಿಂದ ಸಾಲೆತ್ತೂರಿನತ್ತ ತೆರಳುತ್ತಿದ್ದ ಕೋಳಿ ಸಾಗಾಟದ ಈ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಅಡ್ಡವಾಗಿ ಉರುಳಿಬಿದ್ದಿದೆ. ಘಟನೆಯಲ್ಲಿ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ರಸ್ತೆಗೆ ಉರುಳಿ ಬಿದ್ದಿದ್ದ ಕೋಳಿಗಳಿದ್ದ ಬಾಕ್ಸ್ ಗಳನ್ನು ಬಳಿಕ ಬೇರೆ ವಾಹನದಲ್ಲಿ ತುಂಬಿಸಿ ಕೊಂಡೊಯ್ಯಲಾಯಿತು.

ರಸ್ತೆಗಡ್ಡವಾಗಿ ಉರುಳಿಬಿದ್ದ ಕೋಳಿ ಸಾಗಾಟದ ಲಾರಿ!! Read More »

ಸಿಡಿಲು ಬಡಿದು ಸಹೋದರರಿಬ್ಬರು ಮೃತ್ಯು

ಭತ್ತ ಕಾಯಲು ಗದ್ದೆಗೆ ತೆರಳಿದ್ದ ಸಹೋದರರಿಬ್ಬರು ಸಿಡಿಲು ಬಡಿದು ಮೃತಪಟ್ಟ ಘಟನೆ ಶಿವಮೊಗ್ಗದ ಭದ್ರಾವತಿಯ ಹುಣಸೆಕಟ್ಟೆ ಜಂಕ್ಷನ್‌ನಲ್ಲಿ ನಡೆದಿದೆ. ಬೀರು (32) ಹಾಗೂ ಸುರೇಶ್ (30) ಸಿಡಿಲು ಬಡಿತದಿಂದ ಮೃತಪಟ್ಟವರು ಎನ್ನಲಾಗಿದೆ. ಇಬ್ಬರೂ ಮಂಗಳವಾರ ರಾತ್ರಿ ಕಟಾವಾಗಿದ್ದ ಭತ್ತದ ಗದ್ದೆಗೆ ಭತ್ತ ಕಾಯಲು ತೆರಳಿದ್ದರು. ಈ ವೇಳೆ ಸಿಡಿಲು ಬಡಿದು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮೃತರ ಶವವನ್ನು ಭದ್ರಾವತಿಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಆಸ್ಪತ್ರೆಯ ಮುಂಭಾಗ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಭದ್ರಾವತಿ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ

ಸಿಡಿಲು ಬಡಿದು ಸಹೋದರರಿಬ್ಬರು ಮೃತ್ಯು Read More »

ಸೈಕಲ್ ಗೆ ಬೈಕ್ ಡಿಕ್ಕಿ

ಬೆಳ್ತಂಗಡಿ:  ಸೈಕಲ್ ಚಲಾಯಿಸಿಕೊಂಡು ಹೋಗುತ್ತಿದ್ದ ಹುಡುಗನಿಗೆ ಬೈಕ್ ಡಿಕ್ಕಿ ಹೊಡೆದು ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದಲ್ಲಿ ಸಂಭವಿಸಿದೆ. ಅಬ್ದುಲ್ ಸಮದ್ ಗಾಯಗೊಂಡ ಬಾಲಕ. ಕೆ ಎಚ್ ಅಶ್ರಫ್ ಎಂಬವರು ಚಲಾಯಿಸಿಕೊಂಡು ಹೋಗುತ್ತಿದ್ದ ಬೈಕ್ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದ್ದು, ಗಾಯಾಳು ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೈಕಲ್ ಗೆ ಬೈಕ್ ಡಿಕ್ಕಿ Read More »

ಅಪಾರ್ಟ್ಮೆಂಟ್ ನಲ್ಲಿ ಬೆಂಕಿ: ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತ್ಯು!!

ಮಂಗಳೂರು: ಇಲ್ಲಿನ ಅತ್ತಾವರದ ಅಪಾರ್ಟ್‌ ಮೆಂಟೊಂದರಲ್ಲಿ ಮಂಗಳವಾರ ಬೆಳಗ್ಗೆ ನಡೆದ ಆಕಸ್ಮಿಕ ಬೆಂಕಿ ಅನಾಹುತದಲ್ಲಿ ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ‌ಮಾಹಿ ತಿ ನೀಡಿದ್ದಾರೆ. ಮೃತ ಮಹಿಳೆಯನ್ನು ಶಾಹಿನಾ ನುಸ್ಬಾ (58) ಎಂದು ಗುರುತಿಸಲಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮುಂಜಾನೆ 4 ಗಂಟೆಯ ಹೊತ್ತಿಗೆ ಬೆಂಕಿ ಕಾಣಿಸಿಕೊಂಡಿದ್ದು, ಐವರು ಮಕ್ಕಳ ಸಹಿತ ಎಂಟು ಮಂದಿ ಅಪಾಯದಿಂದ ಪಾರಾಗಿದ್ದಾರೆ. ಅನಾರೋಗ್ಯದಿಂದಾಗಿ ಬೆಡ್ ರೂಮ್ ನಲ್ಲೇ ಇದ್ದ ಮಹಿಳೆ, ದಟ್ಟ ಹೊಗೆಯಿಂದಾಗಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ತಿಳಿದು

ಅಪಾರ್ಟ್ಮೆಂಟ್ ನಲ್ಲಿ ಬೆಂಕಿ: ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತ್ಯು!! Read More »

ಅತ್ತಾವರ ಫ್ಲ್ಯಾಟ್’ನಲ್ಲಿ ಬೆಂಕಿ: ಮಹಿಳೆ ಗಂಭೀರ!

ಮಂಗಳೂರು: ನಗರದ ಅತ್ತಾವರದಲ್ಲಿ ವಸತಿ ಸಮುಚ್ಚಯದ 12ನೇ ಮಹಡಿಯಲ್ಲಿ ಮಂಗಳವಾರ ಮುಂಜಾನೆ ಬೆಂಕಿ ಅವಘಡ ಸಂಭವಿಸಿದ್ದು, ಮಹಿಳೆಯೋರ್ವರು ಗಂಭೀರ ಗಾಯಗೊಂಡಿದ್ದಾರೆ. ಒಂದು ಫ್ಲ್ಯಾಟ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದರಲ್ಲಿ ಒಂಭತ್ತು ಮಂದಿ ಇದ್ದರೆಂದು ತಿಳಿದು ಬಂದಿದೆ. ಗಂಭೀರ ಸ್ಥಿತಿಯಲ್ಲಿರುವ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಪಾಂಡೇಶ್ವರ ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸಿದೆ.

ಅತ್ತಾವರ ಫ್ಲ್ಯಾಟ್’ನಲ್ಲಿ ಬೆಂಕಿ: ಮಹಿಳೆ ಗಂಭೀರ! Read More »

ನೆರಿಯದಲ್ಲಿ ಕಾಡಾನೆ ದಾಳಿ !

ನೆರಿಯ: ನೆರಿಯ ಪೋಸ್ಟ್ ಆಫೀಸ್ ಬಳಿ ಕಾಡಾನೆ ಕಾರೊಂದರ ಮೇಲೆರಗಿದ ಘಟನೆ ನಡೆದಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಆರು ಜನರು ಪ್ರಯಾಣಿಸುತ್ತಿದ್ದ ಆಲ್ಟೋ ಕಾರಿನ ಮೇಲೆ ಆನೆ ದಾಳಿ ನಡೆಸಿದೆ ಎನ್ನಲಾಗಿದ್ದು, ಪುತ್ತೂರು ಮೂಲದ ಅಬ್ದುಲ್ ರೆಹಮಾನ್ (40) ಹಾಗೂ ನಾಸಿಯಾ (30) ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಕಾರು ಸಂಪೂರ್ಣ ಜಖಂಗೊಂಡಿದ್ದು, ಸ್ಥಳೀಯರು ಆತಂಕದಲ್ಲಿದ್ದಾರೆ.

ನೆರಿಯದಲ್ಲಿ ಕಾಡಾನೆ ದಾಳಿ ! Read More »

ಹಳಿ ದಾಟುತ್ತಿದ್ದ ಆನೆಗಳಿಗೆ ಗೂಡ್ಸ್ ರೈಲು ಡಿಕ್ಕಿ: ಮರಿ ಸೇರಿ 3 ಆನೆಗಳ ಸಾವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಕ್ಸಾ ಹುಲಿ ಸಂರಕ್ಷಿತ ಅರಣ್ಯದಲ್ಲಿ ಗೂಡ್ಸ್ ರೈಲು ಡಿಕ್ಕಿ ಹೊಡೆದ ಪರಿಣಾಮ 3 ಆನೆಗಳು ಸಾವನ್ನಪ್ಪಿವೆ. ರಾಜಭಟ್ಖಾವಾ ಮತ್ತು ಕಲ್ಚಿನಿ ರೈಲು ನಿಲ್ದಾಣಗಳ ನಡುವಿನ ಶಿಖಾರಿ ಗೇಟ್ ಬಳಿ ಬೆಳಗ್ಗೆ 7 ಗಂಟೆಯ ಸುಮಾರಿಗೆ ಈ ಘಟನೆ ನಡೆದಿದೆ. ಒಂದು ಮರಿ ಮತ್ತು ಎರಡು ವಯಸ್ಕ ಆನೆಗಳು ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು ಸಾವನ್ನಪ್ಪಿವೆ. ಅಲಿಪುರ್ದೌರ್ ಜಿಲ್ಲೆಯ ಹುಲಿ ಸಂರಕ್ಷಿತ ಪ್ರದೇಶದ ಪಶ್ಚಿಮ ರಾಜಭಟ್ಖಾವಾ ಶ್ರೇಣಿಯಲ್ಲಿ ಸಂಭವಿಸಿದ ಈ ಘಟನೆಯು ಭಾರತದಲ್ಲಿ ರೈಲು

ಹಳಿ ದಾಟುತ್ತಿದ್ದ ಆನೆಗಳಿಗೆ ಗೂಡ್ಸ್ ರೈಲು ಡಿಕ್ಕಿ: ಮರಿ ಸೇರಿ 3 ಆನೆಗಳ ಸಾವು Read More »

error: Content is protected !!
Scroll to Top