ಅಪಘಾತ

ಮನೆಯಲ್ಲಿದ್ದ ಕಾರು ಹಿಂದಕ್ಕೆ ಚಲಿಸಿ ವ್ಯಕ್ತಿಯೋರ್ವ ಮೃತ್ಯು

ಸುಳ್ಯ : ಅಂಗಳದಲ್ಲಿ ನಿಂತಿದ್ದ ಕಾರು ಹಿಂದಕ್ಕೆ ಚಲಿಸಿದಾಗ ವ್ಯಕ್ತಿಯೋರ್ವರು ಮೇಲೇ ಹರಿದುಹೋಗಿರುವ ಪರಿಣಾಮ ಮೃತಪಟ್ಟ ಘಟನೆ ಸುಳ್ಯದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ನಿವೃತ್ತ ರೇಂಜರ್ ಜೋಸೆಫ್ (74) ಎಂದು ಪತ್ತೆಹಚ್ಚಲಾಗಿದೆ. ಸುಳ್ಯ ಕರಿಕ್ಕಳದ ಮುಚ್ಚಿಲದಲ್ಲಿರುವ ತಮ್ಮ ಮನೆಯ ಅಂಗಳದಲ್ಲಿ ನಿಂತಿದ್ದಾಗ ಕಾರು ಹಿಮ್ಮುಖ ಚಲಿಸಿ ನಿವೃತ್ತ ಜೋಸೇಫ್ ಅವರಿಗೆ ಗುದ್ದಿದಾಗ ಕುಸಿದು ಬಿದ್ದರೆನ್ನಲಾಗಿದೆ. ಮನೆಯಲ್ಲಿ ಅವರ ಪತ್ನಿ ಮಾತ್ರ ಇದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಮೃತಪಟ್ಟರು ಎನ್ನಲಾಗಿದೆ. ಅರಣ್ಯ ಇಲಾಖೆಯಲ್ಲಿ […]

ಮನೆಯಲ್ಲಿದ್ದ ಕಾರು ಹಿಂದಕ್ಕೆ ಚಲಿಸಿ ವ್ಯಕ್ತಿಯೋರ್ವ ಮೃತ್ಯು Read More »

ರೈಲು ಡಿಕ್ಕಿ ಹೊಡೆದು ಮೃತ್ಯು

ಪುತ್ತೂರು: ರೈಲು ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಎಡಮಂಗಲ ಮರ್ದೂರಡ್ಕ ಎಂಬಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ವಿಶ್ವನಾಥ ಮೃತಪಟ್ಟವರು. ವಿಶ್ವನಾಥರು ರೈಲ್ವೆ ಟ್ರ್ಯಾಕ್ ಬಳಿ ಕುಳಿತು ಮೊಬೈಲ್ ನೋಡುತ್ತಿದ್ದಾಗ ರಾತ್ರಿ 10 ಗಂಟೆ ಸುಮಾರಿಗೆ ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ರೈಲು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

ರೈಲು ಡಿಕ್ಕಿ ಹೊಡೆದು ಮೃತ್ಯು Read More »

ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಸಿಲಿಂಡರ್ ಲಾರಿ ಪಲ್ಟಿ

ಸುಳ್ಯ: ತಾಲೂಕಿನ ಕುಂಬರ್ಚೋಡು ತಿರುವಿನಲ್ಲಿ ತಡ ರಾತ್ರಿ ಭಾರತ್ ಗ್ಯಾಸ್ ಸಿಲಿಂಡರ್ ಸರಬರಾಜು ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ. ಅಪಘಾತದಲ್ಲಿ ಲಾರಿ ಚಾಲಕನಿಗೆ ಗಾಯಗಳಾಗಿದ್ದು, ಸ್ಥಳೀಯರ ಸಹಾಯದಿಂದ ಅವರನ್ನು ಹತ್ತಿರದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದೂ ತಿಳಿದುಬಂದಿದೆ. ಅಪಘಾತದ ಕಾರಣವಾಗಿ ಸ್ಥಳದಲ್ಲಿ ಅಲ್ಪ ಸಮಯ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಲಾರಿಯಲ್ಲಿ ಇದ್ದ ಗ್ಯಾಸ್ ಸಿಲಿಂಡರ್‌ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿದೆ ಮತ್ತು ಅಲ್ಲಿ ಬದಿಯ ಕಂದಕಕ್ಕೂ ಉರುಳಿದೆ ಎನ್ನಲಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಸಿಲಿಂಡರ್ ಲಾರಿ ಪಲ್ಟಿ Read More »

ಬೈಕ್ ಮತ್ತು ಆಕ್ಟಿವಾ ನಡುವೆ ಅಪಘಾತ

ಪುತ್ತೂರು: ಬೈಕ್ ಮತ್ತು ಆಕ್ಟಿವಾ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಸಂಟ್ಯಾರ್ ನಲ್ಲಿ ನಡೆದಿದೆ. ಡಿಕ್ಕಿಯ ರಭಸಕ್ಕೆ ವಾಹನಗಳು ನುಜ್ಜು ಗುಜ್ಜಾಗಿದೆ. ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಬೈಕ್ ಮತ್ತು ಆಕ್ಟಿವಾ ನಡುವೆ ಅಪಘಾತ Read More »

ರಿಕ್ಷಾ – ಕಾರು ನಡುವೆ ಡಿಕ್ಕಿ | ರಿಕ್ಷಾ ಚಾಲಕ ಗಂಭೀರ ಗಾಯ

ಮಾಣಿ: ಕಾರೊಂದು ರಿಕ್ಷಾಗೆ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಪಲ್ಟಿಯಾಗಿ ಆಟೋ ಚಾಲಕ ಗಂಭೀರ ಗಾಯಗೊಂಡ ಘಟನೆ ಸೂರಿಕುಮೇರು ಜಂಕ್ಷನ್‍ ಬಳಿ ನಡೆದಿದೆ. ರಿಕ್ಷಾ ಚಾಲಕ ಗಂಭೀರ ಗಾಯಗೊಂಡಿದ್ದು ಕೂಡಲೇ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಪರಿಣಾಮ ಆಟೋ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿಯಬೇಕಿದೆ.

ರಿಕ್ಷಾ – ಕಾರು ನಡುವೆ ಡಿಕ್ಕಿ | ರಿಕ್ಷಾ ಚಾಲಕ ಗಂಭೀರ ಗಾಯ Read More »

ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನ ಅನುಭವ !

ಮಡಿಕೇರಿ: ಕೊಡಗು ಜಿಲ್ಲೆಯ ಹಲವೆಡೆ ಬುಧವಾರ ಬೆಳಗ್ಗೆ ಭೂಕಂಪನದ ಅನುಭವವಾಗಿದೆ.  ಮಡಿಕೇರಿ ತಾಲೂಕಿನ ಮದೆನಾಡು, 2ನೇ ಮೊಣ್ಣಂಗೇರಿ ವ್ಯಾಪ್ತಿಯಲ್ಲಿ ಭೂಕಂಪನ ಅನುಭವವಾಗಿದೆ. ಬೆಳಗ್ಗೆ, 10.50 ರ ಸುಮಾರಿಗೆ ತೀರಾ ಸಣ್ಣ ಪ್ರಮಾಣದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ. ಈ ಕುರಿತು ಭೂ ವಿಜ್ಞಾನಿಗಳಿಗೆ ಮಾಹಿತಿ ನೀಡಲು ಗ್ರಾಮ ಪಂಚಾಯತ್ ಅಧಿಕಾರಿಗಳು. ಮುಂದಾಗಿದ್ದಾರೆ. ವಿಜ್ಞಾನಿಗಳ ಶೋಧನೆಯ ಆಧಾರದಲ್ಲಿ ಭುಕಂಪನ ಆಗಿದೆಯೇ, ಎಷ್ಟರಮಟ್ಟಿಗೆ ಆಗಿದೆ ಎಂಬ ಮಾಹತಿ ತಿಳಿಯಬೇಕಿದೆ.

ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನ ಅನುಭವ ! Read More »

ಬಸ್‍-ದ್ವಿಚಕ್ರ ವಾಹನ ಅಪಘಾತ : ದ್ವಿಚಕ್ರ ವಾಹನ ಸವಾರ ಮೃತ್ಯು

ಕಡಬ: ಸ್ಕೂಟಿ ಹಾಗೂ ಸರಕಾರಿ ಬಸ್‍ ನಡುವೆ ನಡೆದ ಅಪಘಾತದಲ್ಲಿ ಸ್ಕೂಟಿ ಸವಾರ ಮೃತಪಟ್ಟ ಘಟನೆ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೈಕಂಬ ಬಳಿ ಸೋಮವಾರ ನಡೆದಿದೆ. ಬಿಳಿನೆಲೆ ಗ್ರಾಮದ ಚೇರು ನಿವಾಸಿ ದಿ.ವಿಶ್ವನಾಥ ಎಂಬವರ ಪುತ್ರ ವಿನ್ಯಾಸ್ (24) ಮೃತಪಟ್ಟ ಸ್ಕೂಟಿ ಸವಾರ. ಸುಬ್ರಹ್ಮಣ್ಯದಿಂದ ಕಡಬ ಕಡೆಗೆ ತೆರಳುತ್ತಿದ್ದ ಬಸ್ ಹಾಗೂ ಕೈಕಂಬ ಕಡೆಗೆ ತೆರಳುತ್ತಿದ್ದ ಸ್ಕೂಟರ್ ನಡುವೆ ಬಿಳಿನೆಲೆ ಗ್ರಾಮದ ಕೈಕಂಬ ಕೋಟೆಹೊಳೆ ಬಳಿ ಅಪಘಾತ ಸಂಭವಿಸಿದೆ. ಗಂಭೀರ ಗಾಯಗೊಂಡಿದ್ದ ವಿನ್ಯಾಸ್ ಆಸ್ಪತ್ರೆಗೆ ಸಾಗಿಸುವ ದಾರಿ

ಬಸ್‍-ದ್ವಿಚಕ್ರ ವಾಹನ ಅಪಘಾತ : ದ್ವಿಚಕ್ರ ವಾಹನ ಸವಾರ ಮೃತ್ಯು Read More »

ಸ್ಕೂಟರ್ ಗೆ ಕಾರು ಡಿಕ್ಕಿ | ಶಿಕ್ಷಕಿಯ ದುರ್ಮರಣ

ಮೂಡಬಿದ್ರೆ : ಕಾರೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಚಾಲಕಿ  ಶಿಕ್ಷಕಿ ಸಾವನಪ್ಪಿದ ಘಟನೆ ಮೂಡುಬಿದ್ರಿ ರಾಜ್ಯ ಹೆದ್ದಾರಿಯ ಶಿರ್ತಾಡಿ ಸೇತುವೆ ಬಳಿ ಘಟನೆ ನಡೆದಿದೆ.   ಮೃತರನ್ನು ಮೂಡುಬಿದ್ರಿ ನಾಗರಕಟ್ಟೆಯ ನಿವಾಸಿಯಾಗಿದ್ದು, ಶಿರ್ತಾಡಿ ಹೋಲಿ ಏಂಜಲ್ಸ್ ಖಾಸಗಿ ಶಾಲೆಯ ಶಿಕ್ಷಕಿಯಾಗಿದ್ದ ಸುಜಯ  ಭಂಡಾರಿ (35) ಎನ್ನಲಾಗಿದೆ. ಶುಕ್ರವಾರ ಸಂಜೆ ವೇಳೆಗೆ ತನ್ನ ಕರ್ತವ್ಯ ಮುಗಿಸಿ ಮೂಡಬಿದ್ರೆ ನಾಗರಕಟ್ಟೆಯಲ್ಲಿರುವ ಮನೆಗೆ ಆಕ್ಟಿವದಲ್ಲಿ ಹೋಗುತ್ತಿದ್ದರು. ಶಿರ್ತಾಡಿ ಸೇತುವೆ ಬಳಿ ಎದುರುಗಡೆಯಿಂದ ಅತೀ ವೇಗವಾಗಿ ಬಂದ ಕಾರು

ಸ್ಕೂಟರ್ ಗೆ ಕಾರು ಡಿಕ್ಕಿ | ಶಿಕ್ಷಕಿಯ ದುರ್ಮರಣ Read More »

ಎರಡು ಬೈಕ್ ಗಳ ನಡುವೆ ಡಿಕ್ಕಿ | ನಾಲ್ವರ ದುರ್ಮರಣ

ಕಲಬುರಗಿ : ಎರಡು ಬೈಕ್‌ಗಳು ಪರಸ್ಪರ ಮುಖಾಮುಖಿಯಾಗಿ ಡಿಕ್ಕಿ ಹೊಡೆದು  ನಾಲ್ವರು ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಆಬಾಳ ಗ್ರಾಮದ ಬಳಿ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಮೃತಪಟ್ಟ ಯುವಕರನ್ನು ಸಿದ್ದು, ಸುರೇಶ್ ರೆಡ್ಡಿ, ಮಲ್ಲು ಪೂಜಾರಿ ಮತ್ತು ಪ್ರಕಾಶ್ ಪೂಜಾರಿ ಎನ್ನಲಾಗಿದೆ. ಸೇಡಂನಿಂದ ಆಬಾಳ್ ಕಡೆ ಹೊರಟಿದ್ದ ಒಂದು ಬೈಕ್​​ಗೆ ಎದುರಿಗೆ ಬಂದ ಮತ್ತೊಂದು ಬೈಕ್​​ ಡಿಕ್ಕಿ ಹೊಡೆದಿವೆ. ಘಟನಾ ಸ್ಥಳಕ್ಕೆ ಧಾವಿಸಿದ ಸೇಡಂ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಎರಡು ಬೈಕ್ ಗಳ ನಡುವೆ ಡಿಕ್ಕಿ | ನಾಲ್ವರ ದುರ್ಮರಣ Read More »

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಏರಿದ ಕಾರು ಪಲ್ಟಿ

ಮಂಗಳೂರು : ವೇಗವಾಗಿ ಚಲಿಸುತ್ತಿದ್ದ ಬಲೆನೊ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‍ ಮೇಲೆ ಏರಿ ಪಲ್ಟಿಯಾದ ಘಟನೆ ಮಂಗಳೂರು ಬೆಂದೂರ್ ವೆಲ್ ನ ಬಲ್ಮಠ ಬಳಿ ತಡ ರಾತ್ರಿ ಸಂಭವಿಸಿದೆ. ರಾತ್ರಿ ವೇಳೆ ಖಾಲಿ ಇರುವ ರಸ್ತೆಯಲ್ಲಿ ಅಪಘಾತವಾಗಿದ್ದರಿಂದ,  ಕಾರು ಡಿವೈಡರ್ ಮೇಲೆ ಏರಿ ವಿರುದ್ಧ ದಿಕ್ಕಿನ ರಸ್ತೆಗೆ ಬಿದ್ದರೂ  ಸಂಭವಿಸಬಹುದಾದ ದೊಡ್ಡ ಅನಾಹುತ ತಪ್ಪಿದೆ ಎನ್ನಲಾಗಿದೆ. ಕಾರಿನಲ್ಲಿದ್ದವರ  ಮಾಹಿತಿ  ತಿಳಿಯಬೇಕಿದೆ.

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಏರಿದ ಕಾರು ಪಲ್ಟಿ Read More »

error: Content is protected !!
Scroll to Top