ಅಪಘಾತ

ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿಯಾಗಿ ವಿದ್ಯಾರ್ಥಿ ಸಾವು

ಉಪ್ಪಿನಂಗಡಿ : ಬಜತ್ತೂರು ಗ್ರಾಮದ ನೀರಕಟ್ಟೆ ಬಳಿ ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಕಾರ್ತಿಕ್ (23) ಎಂಬ ಕಾಲೇಜು ವಿದ್ಯಾರ್ಥಿ ಸಾವನ್ನಪ್ಪಿ ಸಹ ಸವಾರೆ ಕಾಲೇಜು ವಿದ್ಯಾರ್ಥಿನಿ ನೇಹಾ ಎಂಬಾಕೆ ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ಸಂಭವಿಸಿದೆ. ಉಪ್ಪಿನಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳ ತಂಡ ದ್ವಿಚಕ್ರ ವಾಹನಗಳಲ್ಲಿ ಪರಿಚಿತರ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂತಿರುಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ದ್ವಿಚಕ್ರ ವಾಹನ […]

ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿಯಾಗಿ ವಿದ್ಯಾರ್ಥಿ ಸಾವು Read More »

ಬೆಂಗಳೂರಿನ ರಣಮಳೆಗೆ ಬಲಿಯಾದವರ ಸಂಖ್ಯೆ 10ಕ್ಕೇರಿಕೆ

ಅನೇಕ ಅನಾಹುತಗಳನ್ನು ಸೃಷ್ಟಿಸಿದ ಅಕಾಲಿಕ ಮಳೆ, ಜನ ಹೈರಾಣ ಬೆಂಗಳೂರು: ಬೆಂಗಳೂರಿನಲ್ಲಿ ನಿನ್ನೆ ಸಂಜೆ ಸುರಿದ ರಣಮಳೆ ಅನೇಕ ಅನಾಹುತಗಳನ್ನು ಸೃಷ್ಟಿಸಿದೆ. ಜೊತೆಗೆ ಆಡಳಿತದ ವೈಫಲ್ಯಗಳನ್ನು ಕೂಡ ಬಯಲು ಮಾಡಿದೆ. ಮಳೆ ಉಂಟು ಮಾಡಿದ ಅವಾಂತರಗಳಿಗೆ ನಗರದಲ್ಲಿ ಒಟ್ಟು ಮಂದಿ ಬಲಿಯಾಗಿದ್ದಾರೆ. ಬೌರಿಂಗ್‌ ಆಸ್ಪತ್ರೆಯ ಗೋಡೆ ಕುಸಿದು ಸಂಭವಿಸಿದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 8ಕ್ಕೇರಿದೆ. ಇನ್ನಿಬ್ಬರು ಪ್ರತ್ಯೇಕ ದುರ್ಘಟನೆಗಳಲ್ಲಿ ಸಾವನ್ನಪ್ಪಿದ್ದಾರೆ. ಜೆ.ಪಿ. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇದಕ್ಕೂ

ಬೆಂಗಳೂರಿನ ರಣಮಳೆಗೆ ಬಲಿಯಾದವರ ಸಂಖ್ಯೆ 10ಕ್ಕೇರಿಕೆ Read More »

ನಿಲ್ಲಿಸಿದ್ದ ಆಟೋರಿಕ್ಷಾಕ್ಕೆ ತೂಫಾನ್‌ ವಾಹನ ಡಿಕ್ಕಿಯಾಗಿ ಮಹಿಳೆ ಸಾವು

ಹೆದ್ದಾರಿ ಬದಿ ನೀರು ಕುಡಿಯಲೆಂದು ರಿಕ್ಷಾ ನಿಲ್ಲಿಸಿದಾಗ ಬಂದು ಅಪ್ಪಳಿಸಿದ ತೂಫಾನ್‌ ಉಪ್ಪಿನಂಗಡಿ: ಕೋಣಾಲು ಗ್ರಾಮದ ಕೋಲ್ಪೆ ಎಂಬಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಆಟೋರಿಕ್ಷಾಕ್ಕೆ ತೂಫಾನ್ ವಾಹನ ಢಿಕ್ಕಿ ಹೊಡೆದ ಪರಿಣಾಮ ಗಿರಿಜಾ (74) ಎಂಬವರು ಮೃತಪಟ್ಟಿದ್ದು, ಇತರ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳವಾರ ನಡೆದಿದೆ. ತೂಫಾನ್ ವಾಹನವನ್ನು ಅದರ ಚಾಲಕ ಉಪ್ಪಿನಂಗಡಿ ಕಡೆಯಿಂದ ಅಜಾಗರೂಕತೆ ಹಾಗೂ ನಿರ್ಲಕ್ಷ್ಯದಿಂದ ಚಲಾಯಿಸಿಕೊಂಡು ಬಂದು, ಹೆದ್ದಾರಿ ಬದಿಯಲ್ಲಿ ನಿಲ್ಲಿಸಿದ್ದ ಆಟೋರಿಕ್ಷಾಕ್ಕೆ ಹಿಂದಿನಿಂದ ಡಿಕ್ಕಿ ಹೊಡೆದಿದ್ದಾನೆ. ಅಪಘಾತಕ್ಕೀಡಾದ ರಿಕ್ಷಾದಲ್ಲಿ ಬಂಟ್ವಾಳ

ನಿಲ್ಲಿಸಿದ್ದ ಆಟೋರಿಕ್ಷಾಕ್ಕೆ ತೂಫಾನ್‌ ವಾಹನ ಡಿಕ್ಕಿಯಾಗಿ ಮಹಿಳೆ ಸಾವು Read More »

ಉಡುಪಿ ವಾಣಿಜ್ಯ ಮಳಿಗೆ ಬೆಂಕಿ ಅವಘಡದಲ್ಲಿ 2.5 ಕೋ. ರೂ. ಸೊತ್ತು ನಾಶ

ಸಿಟಿ ಬಸ್‌ಸ್ಟ್ಯಾಂಡ್‌ ಪಕ್ಕದಲ್ಲೇ ಹೊತ್ತಿ ಉರಿದ ಕಟ್ಟಡ ಉಡುಪಿ : ನಗರದ ಸಿಟಿ ಬಸ್ ನಿಲ್ದಾಣದ ಸಮೀಪವಿರುವ ವಾಣಿಜ್ಯ ಮಳಿಗೆಯೊಂದರಲ್ಲಿ ಭಾನುವಾರ ಸಂಜೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಸುಮಾರು 2.5 ಕೋಟಿ ರೂಪಾಯಿ ಮೌಲ್ಯದ ಆಸ್ತಿಪಾಸ್ತಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಮೂಲತಃ ರಾಜಸ್ಥಾನದವರಾದ ಉದ್ಯಮಿ ಭೀಮಾ ಎಂಬುವರಿಗೆ ಸೇರಿದ ಪ್ಲಾಸ್ಟಿಕ್ ವಸ್ತುಗಳ ಗೋದಾಮಿನಲ್ಲಿ ಭಾನುವಾರ ಸಂಜೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿದೆ ಎನ್ನಲಾಗಿದೆ. ಈ ಬೆಂಕಿ ಅವಘಡದಲ್ಲಿ ಅವರಿಗೆ ಸೇರಿದ ಪ್ಲಾಸ್ಟಿಕ್ ಮಳಿಗೆ

ಉಡುಪಿ ವಾಣಿಜ್ಯ ಮಳಿಗೆ ಬೆಂಕಿ ಅವಘಡದಲ್ಲಿ 2.5 ಕೋ. ರೂ. ಸೊತ್ತು ನಾಶ Read More »

ಪ್ಲಾಸ್ಟಿಕ್‌ ಗೋದಾಮಿನಲ್ಲಿ ಭೀಕರ ಬೆಂಕಿ ಅವಘಡ : 50 ಯುವತಿಯರು ಅದೃಷ್ಟವಶಾತ್‌ ಪಾರು

ಮಹಡಿಯಿಂದ ಜಿಗಿದು ಪ್ರಾಣ ಉಳಿಸಿಕೊಂಡ ಪಿಜಿಯಲ್ಲಿದ್ದ ಯುವತಿಯರು ಬೆಂಗಳೂರು: ರಾಜಧಾನಿಯ ನಂದಿನಿ ಲೇಔಟ್‌ನಲ್ಲಿ ತಡರಾತ್ರಿ ಸಂಭವಿಸಿದ ಭೀಕರ ಅಗ್ನಿಅವಘಡದಲ್ಲಿ ಪ್ಲಾಸ್ಟಿಕ್ ಗೋಡೌನ್‌ವೊಂದು ಸಂಪೂರ್ಣ ಭಸ್ಮವಾಗಿದ್ದು, ಬೆಂಕಿಯ ಕೆನ್ನಾಲಿಗೆ ಪಕ್ಕದ ಲೇಡಿಸ್ ಪಿಜಿಗೂ ಹಬ್ಬಿದ ಪರಿಣಾಮ ಯುವತಿಯರು ಪ್ರಾಣಾಪಾಯದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ನಂದಿನಿ ಲೇಔಟ್ ವ್ಯಾಪ್ತಿಯ ಪ್ಲಾಸ್ಟಿಕ್ ಗೋಡೌನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪ್ಲಾಸ್ಟಿಕ್ ವಸ್ತುಗಳಿದ್ದ ಕಾರಣ ಬೆಂಕಿ ಕ್ಷಣಾರ್ಧದಲ್ಲಿ ಅಕ್ಕಪಕ್ಕದ ಮನೆಗಳಿಗೆ ವ್ಯಾಪಿಸಿದೆ. ಬೆಂಕಿಯ ತೀವ್ರತೆಗೆ ಮನೆಯ ಮುಂಭಾಗದ ಮರಗಳು ಹಾಗೂ ಕಬ್ಬಿಣದ ಗೇಟ್‌ಗಳು ಕೂಡ ಹೊತ್ತಿ

ಪ್ಲಾಸ್ಟಿಕ್‌ ಗೋದಾಮಿನಲ್ಲಿ ಭೀಕರ ಬೆಂಕಿ ಅವಘಡ : 50 ಯುವತಿಯರು ಅದೃಷ್ಟವಶಾತ್‌ ಪಾರು Read More »

ಕಡಬ: ಕುಮಾರಧಾರಾ ನದಿಯಲ್ಲಿ ಮುಳುಗಿ ಯುವಕ ಸಾವು

ಸ್ನಾನಕ್ಕಾಗಿ ನದಿಗಿಳಿದು ನಾಪತ್ತೆಯಾಗಿದ್ದ ಯುವಕ ಕಡಬ: ಕುಮಾರಧಾರಾ ನದಿಗೆ ಸ್ನಾನಕ್ಕೆ ಇಳಿದಿದ್ದ ಯುವಕನೋರ್ವ ನೀರಿನ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದ ಘಟನೆ ಸೋಮವಾರ ಸಂಜೆ ಸಂಭವಿಸಿದ್ದು, ಯುವಕ ಮೃತದೇಹ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಮೃತ ಯುವಕನನ್ನು ಮರ್ಧಾಳ ನಿವಾಸಿ ಮಂಜು ಎಂಬವರ ಪುತ್ರ ರಕ್ಷಿತ್ (26) ಎಂದು ಗುರುತಿಸಲಾಗಿದೆ. ರಕ್ಷಿತ್ ಸೋಮವಾರ ಸಂಜೆ ತನ್ನ ಸ್ನೇಹಿತರೊಂದಿಗೆ ಐತ್ತೂರು ಗ್ರಾಮದ ಅರಬ್ಬಿ ತೋಡು ಎಂಬಲ್ಲಿ ಸ್ನಾನಕ್ಕಾಗಿ ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಈಜಲು ತಿಳಿದಿದ್ದರೂ ನೀರಿನ ಸೆಳೆತಕ್ಕೆ ಸಿಲುಕಿದ

ಕಡಬ: ಕುಮಾರಧಾರಾ ನದಿಯಲ್ಲಿ ಮುಳುಗಿ ಯುವಕ ಸಾವು Read More »

ಬೈಕ್ – ಕಾರುಗಳ ನಡುವೆ ಅಪಘಾತ

ಪುತ್ತೂರು: ಮುಕ್ರಂಪಾಡಿಯ ಕೆಎಸ್‌ಆರ್‌ಟಿಸಿ ಡಿಪೋ ಹತ್ತಿರ ಸರಣಿ ಅಪಘಾತ ಎ. 26 ರಂದು ನಡೆದಿದ್ದು, ಘಟನೆಯಲ್ಲಿ ಬೈಕ್ ಸವಾರರು ಗಾಯಗೊಂಡಿದ್ದಾಗಿ ತಿಳಿದು ಬಂದಿದೆ. ಬೈಕ್ ಪುತ್ತೂರಿನಿಂದ ‌ಸುಳ್ಯದತ್ತ ತೆರಳುತ್ತಿತ್ತು. ಕಾರುಗಳು ಸುಳ್ಯದಿಂದ ಪುತ್ತೂರಿನ ಕಡೆಗೆ ಸಾಗುತ್ತಿತ್ತು. ಮುಕ್ರಂಪಾಡಿ ಸಮೀಪ ಬೈಕ್ ಮತ್ತು ಕಾರುಗಳ ನಡುವೆ ಮುಖಾಮುಖಿ ಸರಣಿ ಅಪಘಾತ ನಡೆದಿರುವುದಾಗಿದೆ. ಅಪಘಾತದಲ್ಲಿ ಕಾರುಗಳಿಗೂ ತೀವ್ರ ಹಾನಿಯಾಗಿದೆ ಎಂದು ವರದಿಯಾಗಿದೆ. ಬೈಕ್ ಸವಾರರ ಕಾಲಿಗೆ ಗಾಯವಾಗಿದ್ದು, ಅವರನ್ನು ಸಮೀಪದ ಮೆಡ್‌ಲ್ಯಾಂಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಬೈಕ್ – ಕಾರುಗಳ ನಡುವೆ ಅಪಘಾತ Read More »

ಚಾರ್ಮಾಡಿ ಘಾಟಿಯಲ್ಲಿ ಬಸ್‌ ಪಲ್ಟಿ : 25 ಮಂದಿಗೆ ಗಾಯ, ಐವರು ಗಂಭೀರ

ಧರ್ಮಸ್ಥಳದಲ್ಲಿ ಮದುವೆ ಮುಗಿಸಿ ಹಿಂದಿರುಗುತ್ತಿದ್ದಾಗ ಸಂಭವಿಸಿದ ಅಪಘಾತ ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಚಾರ್ಮಾಡಿ ಘಾಟಿಯ ಅಪಾಯಕಾರಿ ತಿರುವಿನಲ್ಲಿ ಭಾನುವಾರ ಸಂಜೆ ಖಾಸಗಿ ಬಸ್ಸು ನಿಯಂತ್ರಣ ತಪ್ಪಿ ಪಲ್ಟಿಯಾಗಿ 25ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ ಪೈಕಿ ಐವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಚಕಿತ್ಸೆಗೆ ಮಂಗಳೂರಿನ ಆಸ್ಪತರೆಗೆ ದಾಖಲಿಸಲಾಗಿದೆ. ಧರ್ಮಸ್ಥಳದಲ್ಲಿ ಮದುವೆ ಮುಗಿಸಿಕೊಂಡು ಮೂಡಿಗೆರೆಯತ್ತ ಸಾಗುತ್ತಿದ್ದ ಬಸ್ ಅಪಘಾತಕ್ಕೀಡಾಗಿದೆ. ಧರ್ಮಸ್ಥಳದಲ್ಲಿ ನಡೆದ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ, ಅಲ್ಲಿಂದ ಪ್ರಯಾಣಿಕರನ್ನು ಹೊತ್ತು ಮೂಡಿಗೆರೆಯತ್ತ ಖಾಸಗಿ ಬಸ್ಸು ಹೊರಟಿತ್ತು.

ಚಾರ್ಮಾಡಿ ಘಾಟಿಯಲ್ಲಿ ಬಸ್‌ ಪಲ್ಟಿ : 25 ಮಂದಿಗೆ ಗಾಯ, ಐವರು ಗಂಭೀರ Read More »

ಬೈಕ್‌ ಪಲ್ಟಿಯಾಗಿ ಗಾಯಗೊಂಡಿದ್ದ ಯುವಕ ಸಾವು

ಪುತ್ತೂರು : ಬೈಕ್ ಪಲ್ಟಿಯಾಗಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಹಿರೇಬಂಡಾಡಿ ನಿವಾಸಿ ಲಿಖಿತ್ ರೈ ಎಂಬ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ಮುಂಜಾನೆ ಸಾವನ್ನಪ್ಪಿದ್ದಾರೆ. ಏಪ್ರಿಲ್ 22ರ ಸಂಜೆ ಕೊಯಿಲ-ಹಿರೇಬಂಡಾಡಿ ರಸ್ತೆಯ ಶಾಖಾಪುರ ಎಂಬಲ್ಲಿ ಲಿಖಿತ್ ಚಲಾಯಿಸುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಗುಂಡಿಗೆ ಬಿದ್ದಿತ್ತು. ಈ ವೇಳೆ ಅವರ ತಲೆಗೆ ಗಂಭೀರ ಗಾಯವಾಗಿತ್ತು. ಕೂಡಲೇ ಅವರನ್ನು ಸಾರ್ವಜನಿಕರು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದರು. ಕಳೆದ ಕೆಲವು ದಿನಗಳಿಂದ ಕೋಮಾ ಸ್ಥಿತಿಯಲ್ಲಿದ್ದ ಲಿಖಿತ್‌ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ಬೈಕ್‌ ಪಲ್ಟಿಯಾಗಿ ಗಾಯಗೊಂಡಿದ್ದ ಯುವಕ ಸಾವು Read More »

ಅತಿ ವೇಗದಿಂದ ಬಂದ ಕಾರು ಢಿಕ್ಕಿ: ವ್ಯಕ್ತಿ ಸಾವು

ಹುಬ್ಬಳ್ಳಿ: ರಸ್ತೆ ಪಕ್ಕದಲ್ಲಿ ಕೆಟ್ಟು ನಿಂತ ಜೆಸಿಬಿಯನ್ನು ರಿಪೇರಿ ಮಾಡುತ್ತಿದ್ದ ವ್ಯಕ್ತಿಗೆ ಎದುರಿನಿಂದ ವೇಗವಾಗಿ ಬಂದ ಕಾರೊಂದು ಗುದ್ದಿದ್ದು, ವ್ಯಕ್ತಿಯ ರುಂಡ ದೇಹದಿಂದ ಬೇರ್ಪಟ್ಟು ಕಾರಿನ ಎಂಜಿನ್ ಒಳಗೆ ಸಿಲುಕಿದ ಘಟನೆ ಕುಂದಗೋಳದ ಶೇರವಾಡದ ಬಳಿ ನಡೆದಿದೆ. ಸದಾನಂದ ಕಾಟೇಗಾರ(32) ಮೃತ ದುರ್ದೈವಿ. ಇವರು ಶೇರವಾಡ ಗ್ರಾಮದವರು ಎಂದು ತಿಳಿದು ಬಂದಿದೆ. ಹಾಳಾಗಿ ನಿಂತಿದ್ದ ಬುಲ್ಡೋಸರ್ ಅನ್ನು ಸರಿಪಡಿಸಲು ಸದಾನಂದ ಅವರು ಕಾರ್ಯ ನಿರ್ವಹಿಸುವ ಸಂದರ್ಭದಲ್ಲಿ ವೇಗವಾಗಿ ಬಂದ ಕಾರು ಢಿಕ್ಕಿ ಹೊಡೆದಿರುವುದಾಗಿದೆ. ಪರಿಣಾಮ ಅವರ ರುಂಡ

ಅತಿ ವೇಗದಿಂದ ಬಂದ ಕಾರು ಢಿಕ್ಕಿ: ವ್ಯಕ್ತಿ ಸಾವು Read More »

error: Content is protected !!
Scroll to Top