ಅಪಘಾತ

ಭಾರೀ ಮಳೆ : ಆಲದ ಮರ ಬೈಕ್ ಮೇಲೆ ಬಿದ್ದು ಸವಾರ ಮೃತ್ಯು

ಉಡುಪಿ: ಧಾರಾಕಾರ ಮಳೆಗೆ ಮತ್ತೊಂದು ಬಲಿಯಾಗಿರುವ ದುರ್ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೆಳ್ಮಣ್ ಪರಿಸರದಲ್ಲಿ ನಡೆದಿದೆ. ಬೃಹತ್ ಆಲದ ಮರ ಬಿದ್ದು ಬೈಕ್ ಸವಾರ ಮೃತಪಟ್ಟಿದ್ದಾನೆ. ಗಾಳಿ ಮಳೆ‌ ಹಿನ್ನಲೆ ಬೃಹತ್ ಆಲದ ಮರ ಧರೆಗುರುಳಿದೆ. ಈ ವೇಳೆ ಅದೇ ಪರಿಸರದಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನ ಮೇಲೆ‌ ಆಲದ ಮರ ಬಿದ್ದಿದೆ. ಪರಿಣಾಮ ಬೈಕ್ ಸವಾರ ಪ್ರವೀಣ್ ಆಚಾರ್ಯ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ನಲ್ಲಿ ತೆರಳುತ್ತಿದ್ದ ಪ್ರವೀಣ್ ಮೇಲೆ‌ ಏಕಾಏಕಿ ಮರ ಬಿದ್ದಿದೆ. ಮರ ಬಿದ್ದ ದೃಶ್ಯ […]

ಭಾರೀ ಮಳೆ : ಆಲದ ಮರ ಬೈಕ್ ಮೇಲೆ ಬಿದ್ದು ಸವಾರ ಮೃತ್ಯು Read More »

ಮನೆ ಮೇಲೆ ಜರಿದು ಬಿದ್ದ ಗುಡ್ಡ : ಮಹಿಳೆ ಮೃತ್ಯು , ಓರ್ವ ಮಹಿಳೆಯ ರಕ್ಷಣೆ

ಬಂಟ್ವಾಳ: ಇಂದು ಮಂಜಾನೆ ನಡೆದ ಘಟನೆಯೊಂದರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನಂದಾವರ ಎಂಬಲ್ಲಿ ಗುಡ್ಡ ಕುಸಿದು ಮನೆಯೊಂದರ ಮೇಲೆ ಬಿದ್ದ ಪರಿಣಾಮ ಇಬ್ಬರು ಸಿಲುಕಿಕೊಂಡಿ, ಓರ್ವ ಮಹಿಳೆಯ ರಕ್ಷಣೆ ಮಾಡಿದರೂ ಗಂಭೀರ ಸ್ಥಿತಿಯಲ್ಲಿದ್ದ ಮಹಿಳೆ ಮೃತಪಟ್ಟಿದ್ದಾರೆ. ಝರೀನಾ (49) ಮೃತಪಟ್ಟವರು.  ಸಫಾ ಅವರನ್ನು ರಕ್ಷಿಸಲಾಗಿದೆ. ಸ್ಥಳಕ್ಕೆ ಎನ್.ಡಿ.ಆರ್.ಎಫ್, ಅಗ್ನಿಶಾಮಕ ಸಿಬಂದಿ ಸ್ಥಳೀಯರೊಂದಿಗೆ ಸುರಿಯುವ ಮಳೆಯಲ್ಲೂ ರಕ್ಷಣಾ ಕಾರ್ಯ ನಡೆಸುತ್ತಿದ್ದಾರೆ. ಬೆಳಗ್ಗೆ 6 ಗಂಟೆಗೆ ಈ ಘಟನೆ ನಡೆದಿದೆ. ಸ್ಥಳದಲ್ಲಿ ಅಗ್ನಶಾಮಕ ಸಿಬ್ಬಂದಿ, ಪೊಲೀಸ್ ಸಿಬ್ಬಂದಿಗಳು

ಮನೆ ಮೇಲೆ ಜರಿದು ಬಿದ್ದ ಗುಡ್ಡ : ಮಹಿಳೆ ಮೃತ್ಯು , ಓರ್ವ ಮಹಿಳೆಯ ರಕ್ಷಣೆ Read More »

ಕಾರು ಅಪಘಾತ : ಪುತ್ತೂರಿನ ವಿದ್ಯಾರ್ಥಿನಿ ಹನಾ ಮೃತ್ಯು

ಪುತ್ತೂರು: ಕಾರಿನಲ್ಲಿ ಚಲಿಸುತ್ತಿದ್ದ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ ವಿದ್ಯಾರ್ಥಿನಿಯೋರ್ವಳು ಮೃತಪಟ್ಟಿ ಘಟನೆ ತುಂಬೆಯಲ್ಲಿ ನಡೆದಿದೆ. ಪುತ್ತೂರಿನ ಕೂರ್ನಡ್ಕ ನಿವಾಸಿ ಅಬ್ದುಲ್ ಮಜೀದ್, ಶಮೀಮಾ ದಂಪತಿ ಪುತ್ರಿ ಹನಾ (19) ಮೃತಪಟ್ಟ ವಿದ್ಯಾರ್ಥಿನಿ. ಈಕೆ ಮಂಗಳೂರು ಅಲೋಶಿಯಸ್ ನಲ್ಲಿ ಬಿಬಿಎಂ ವ್ಯಾಸಂಗ ಮಾಡುತ್ತಿದ್ದಾಳೆ. ಪುತ್ತೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.

ಕಾರು ಅಪಘಾತ : ಪುತ್ತೂರಿನ ವಿದ್ಯಾರ್ಥಿನಿ ಹನಾ ಮೃತ್ಯು Read More »

ಕೆರೆಗೆ ಬಿದ್ದು ವ್ಯಕ್ತಿ ಸಾವು

ಮೂಡಬಿದ್ರೆ : ಮೂಡುಬಿದಿರೆ: ನೆಲ್ಲಿಕಾರು ಎಂಬಲ್ಲಿ ಕೆರೆಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ನೆಲ್ಲಿಕಾರು ಗ್ರಾಮ ಪಂಚಾಯಿತಿ ಕಚೇರಿ ಬಳಿಯ ಮಾಂಟ್ರಾಡಿ ನಿವಾಸಿ ನಿರಂಜನ್ (42) ಮೃತಪಟ್ಡವರು. ಮೃತರು ವಿಕಲಚೇತನರಾಗಿದ್ದು, ಅವಿವಾಹಿತರಾಗಿದ್ದಾರೆ.

ಕೆರೆಗೆ ಬಿದ್ದು ವ್ಯಕ್ತಿ ಸಾವು Read More »

ಮುಳುಗು ಸೇತುವೆ ಪ್ರಸಿದ್ಧಿ ಪಡೆದ  ಚೆಲ್ಯಡ್ಕ ಸೇತುವೆ ಮುಳುಗಡೆ

ಪುತ್ತೂರು : ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಚೆಲ್ಯಡ್ಕ ಸೇತುವೆ ಮುಳುಗಡೆಗೊಂಡಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ. ಬೆಟ್ಟಂಪಾಡಿ ಗ್ರಾಪಂ ವ್ಯಾಪ್ತಿಯ ಈ ಚೆಲ್ಯಡ್ಕ ಸೇತುವೆ ಪ್ರತಿ ಮಳೆಗಾದಲ್ಲಿ ನಾಲ್ಕೈದು ಬಾರಿ ಮುಳುಗಡೆಯಾಗುತ್ತಿದೆ. ಈ ನಿಟ್ಟಿನಲ್ಲಿ ಮುಳುಗು ಸೇತುವೆ ಎಂದು ಪ್ರಸಿದ್ಧಿಯಾಗಿದೆ. ಈ ಸೇತುವೆಗೆ ಮುಕ್ತಿ ನೀಡುವ ನಿಟ್ಟಿನಲ್ಲಿ ಇದಕ್ಕೊಂದು ಕಾಯಕಲ್ಪ ಒದಗಿಸುವಂತೆ ಸ್ಥಳೀಯರು ಹಲವಾರು ಬಾರಿ ಜನಪ್ರನಿಧಿಗಳು, ಸಂಬಂಧ ಪಟ್ಟವರಿಗೆ ಮನವಿ ನೀಡಿದ್ದಾರೆ. ಆದರೂ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ.

ಮುಳುಗು ಸೇತುವೆ ಪ್ರಸಿದ್ಧಿ ಪಡೆದ  ಚೆಲ್ಯಡ್ಕ ಸೇತುವೆ ಮುಳುಗಡೆ Read More »

ಕೊಂಬೆಟ್ಟು ಪ್ರೌಡ ಶಾಲೆ ಕಟ್ಟಡ ಪಕ್ಕ ಮತ್ತೆ ಮಣ್ಣು ಕುಸಿತ | ಅಧಿಕಾರಿಗಳಿಂದ ಪರಿಶೀಲನೆ

ಪುತ್ತೂರು: ಭಾರೀ ಮಳೆಯ ಪರಿಣಾಮ ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನ ದಕ್ಷಿಣ ಪಾರ್ಶ್ವದಲ್ಲಿರುವ ತಾಲೂಕು ಕ್ರೀಡಾಂಗಣದ ಬಳಿಯ ಮಣ್ಣಿನ ದಿಣ್ಣೆ ಕುಸಿತ ಉಂಟಾಗಿದೆ. ಇದರಿಂದಾಗಿ ದಿಣ್ಣೆಯ ಮೇಲಿರುವ ಕಾಲೇಜಿನ ಪ್ರೌಢ ಶಾಲಾ ವಿಭಾಗದ ವಿದ್ಯಾರ್ಥಿಗಳ ನೂತನ ಶೌಚಾಲಯ ಕಟ್ಟಡಕ್ಕೆ ಅಪಾಯ ಎದುರಾಗಿದೆ. ತಾಲೂಕು ಕ್ರೀಡಾಂಗಣದ ಮೈದಾನದ ಕಾಮಗಾರಿ ವೇಳೆ ಅವೈಜ್ಞಾನಿಕವಾಗಿ ಮಣ್ಣು ಅಗೆದ ಪರಿಣಾಮವಾಗಿ ಈ ಭಾಗದಲ್ಲಿ ಪದೇ ಪದೇ ಮಣ್ಣು ಕುಸಿತ ಆಗುತ್ತಿದೆ. ಮಣ್ಣು ಕುಸಿತದಿಂದಾಗಿ ಈಗಾಗಲೇ ಶಾಲೆಯ ಬೆಳ್ಳಿಹಬ್ಬದ ಸಂದರ್ಭದಲ್ಲಿ ನಿರ್ಮಾಣಗೊಂಡ ಕಟ್ಟಡ

ಕೊಂಬೆಟ್ಟು ಪ್ರೌಡ ಶಾಲೆ ಕಟ್ಟಡ ಪಕ್ಕ ಮತ್ತೆ ಮಣ್ಣು ಕುಸಿತ | ಅಧಿಕಾರಿಗಳಿಂದ ಪರಿಶೀಲನೆ Read More »

ಚಾಲಕನ ನಿಯಂತ್ರಣ ತಪ್ಪಿದ ಕಾರು | ಡಿವೈಡರ್ ಮೇಲೆ ಹತ್ತಿ ವಿದ್ಯುತ್ ಕಂಬಕ್ಕೆ ಡಿಕ್ಕಿ,

ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್ ಏರಿ ಬಳಿಕ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಬುಧವಾರ ತುಂಬೆಯಲ್ಲಿ ನಡೆದಿದೆ. ಬೆಳ್ತಂಗಡಿ ನಿವಾಸಿ ನವಾಜ್ ಎಂಬವರು ಕಾರಿನಲ್ಲಿ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ವೇಳೆ ತುಂಬೆಯಲ್ಲಿ ಈ ಘಟನೆ ನಡೆದಿದ್ದು ಕಾರು ಡಿವೈಡರ್ ಮೇಲೆ ಹತ್ತಿದ್ದಲ್ಲದೆ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಒಂದು ಭಾಗ ನಜ್ಜುಗುಜ್ಜಾಗಿದೆ. ಆದರೆ ಚಾಲಕ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸರು ಭೇಟಿ ನೀಡಿ

ಚಾಲಕನ ನಿಯಂತ್ರಣ ತಪ್ಪಿದ ಕಾರು | ಡಿವೈಡರ್ ಮೇಲೆ ಹತ್ತಿ ವಿದ್ಯುತ್ ಕಂಬಕ್ಕೆ ಡಿಕ್ಕಿ, Read More »

ಭಾರೀ ಗಾಳಿ ಮಳೆಗೆ ಮುರಿದು ಬಿದ್ದ ಬೃಹತ್ ಗಾತ್ರದ ಜಾಹೀರಾತು ಫಲಕ |ಜಖಂಗೊಂಡ ಹತ್ತಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಪರಿಣಾಮ ಭಾರಿ ಗಾಳಿ-ಮಳೆಗೆ ಬೃಹದಾದ ಜಾಹಿರಾತು ಫಲಕ ಬಿದ್ದು ಹತ್ತಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಜಖಂ ಆಗಿರುವ ಘಟನೆ ಮಂಗಳೂರು ಬಿಕರ್ನಕಟ್ಟೆಯಲ್ಲಿ ನಡೆದಿದೆ. ಕಮರ್ಷಿಯಲ್ ಬಿಲ್ಡಿಂಗ್ ಮೇಲೆ ಜಾಹಿರಾತು ಫಲಕ ಹಾಕಲಾಗಿತ್ತು. ಜೋರಾಗಿ ಬೀಸಿದ ಗಾಳಿಗೆ ಫಲಕ ಕಟ್ಟಡದ ಕೆಳಭಾಗಕ್ಕೆ ಬಿದ್ದಿದೆ. ಕಬ್ಬಿಣದ ಸರಳು ಹೊಂದಿರುವ ಫಲಕ ಕೆಳಗೆ ಹಾದು ಹೋದ ವಿದ್ಯುತ್ ತಂತಿ ಮೇಲೆ ಬಿದ್ದಿದ್ದು, ಭಾರ ತಾಳಲಾಗದೆ ವಿದ್ಯುತ್ ಕಂಬ ಮುರಿದು ಬಿದ್ದಿದೆ. ವಿದ್ಯುತ್ ಕಂಬದ

ಭಾರೀ ಗಾಳಿ ಮಳೆಗೆ ಮುರಿದು ಬಿದ್ದ ಬೃಹತ್ ಗಾತ್ರದ ಜಾಹೀರಾತು ಫಲಕ |ಜಖಂಗೊಂಡ ಹತ್ತಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು Read More »

ಗೋಳಿತ್ತಡಿಯಲ್ಲಿ ಬೃಹತ್ ಮರ ರಸ್ತೆಗೆ | ವಾಹನ ಸಂಚಾರದಲ್ಲಿ ತೊಡಕು

ರಾಮಕುಂಜ : ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ರಾಮಕುಂಜ ಗ್ರಾಮದ ಗೋಳಿತ್ತಡಿಯಲ್ಲಿ ಬೃಹತ್ ಮರವೊಂದು ರಸ್ತೆಗೆ ಅಡ್ಡಬಿದ್ದ ಪರಿಣಾಮ ಸುಮಾರು ಒಂದು ತಾಸಿಗೂ ಹೆಚ್ಚು ಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾದ ಘಟನೆ ಸೋಮವಾರ ಸಂಜೆ ನಡೆದಿದೆ. ಭಾರೀ ಮಳೆದ ಸುರಿದ ಪರಿಣಾಮ ಹೆದ್ದಾರಿ ಬದಿಯಲ್ಲಿದ್ದ ಬೃಹತ್ ಮರವೊಂದು ಮುರಿದು ಹೆದ್ದಾರಿಗೆ ಅಡ್ಡವಾಗಿ ಬಿದ್ದು, ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಬಳಿಕ ಸ್ಥಳೀಯರು ಮರ ತೆರವುಗೊಳಿಸಿ, ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಗೋಳಿತ್ತಡಿಯಲ್ಲಿ ಬೃಹತ್ ಮರ ರಸ್ತೆಗೆ | ವಾಹನ ಸಂಚಾರದಲ್ಲಿ ತೊಡಕು Read More »

ದಾಸ್ತಾನು ಕೊಠಡಿಗೆ ಬೆಂಕಿ | ಅಪಾರ ನಷ್ಟ

ವಿಟ್ಲ: ಕನ್ಯಾನ ಗ್ರಾಮದಲ್ಲಿ ದಾಸ್ತಾನು ಕೊಠಡಿಗೆ ಬೆಂಕಿ ತಗುಲಿ ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ. ಕನ್ಯಾನ ಗ್ರಾಮದ ಪೇಪರ್ ವಿತರಕ ಗಂಗಾಧರ ಎಂಬವರ ಮನೆಯ ದಾಸ್ತಾನು ಕೊಠಡಿಗೆ ತಡ ರಾತ್ರಿ ಬೆಂಕಿ ಬಿದ್ದಿದ್ದು, ಕೊಠಡಿಯಲ್ಲಿದ್ದ ಕಟ್ಟಿಗೆ, ತೆಂಗಿನಕಾಯಿ, ಹಲಗೆಗಳು ಸೇರಿದಂತೆ ಮತ್ತಿತರ ವಸ್ತುಗಳು ಸುಟ್ಟು ಕರಕಲಾಗಿದೆ. ಬೆಂಕಿನ ಕೆನ್ನಾಲಗೆಗೆ ಕೊಟ್ಟಿಗೆಯ ಛಾವಣಿ ಕುಸಿದುಬಿದ್ದಿದ್ದು, ಸಮೀಪದ ಮನೆಗಳಿದ್ದರೂ ಯಾವುದೇ ಹೆಚ್ಚಿನ ಅಪಾಯ ಸಂಭವಿಸಿಲ್ಲ. ಬಂಟ್ವಾಳ ಅಗ್ನಿಶಾಮಕ ದಳ ಹಾಗೂ ಸ್ಥಳೀಯರು ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ ಎಂದು ತಿಳಿದು ಬಂದಿದೆ.

ದಾಸ್ತಾನು ಕೊಠಡಿಗೆ ಬೆಂಕಿ | ಅಪಾರ ನಷ್ಟ Read More »

error: Content is protected !!
Scroll to Top