ಅಪಘಾತ

ಮನೆ ಅಂಗಳಕ್ಕೆ ನುಗ್ಗಿದ ಆಂಬುಲೆನ್ಸ್

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿದ ಆಂಬ್ಯುಲೆನ್ಸ್ ಮನೆಯ ಅಂಗಳಕ್ಕೆ ನುಗ್ಗಿದ ಘಟನೆ ನೆಕ್ಕಿಲಾಡಿಯಲ್ಲಿ ನಡೆದಿದೆ. ಪುತ್ತೂರಿನಿಂದ ನೆಕ್ಕಿಲಾಡಿ ಕಡೆಗೆ ಬರುತ್ತಿದ್ದ ಅಂಬ್ಯುಲೆನ್ಸ್ , ವನಸುಮ ನರ್ಸರಿ ರಸ್ತೆಯಲ್ಲಿರುವ  ಮನೆಯೊಂದರ ವರಾಂಡಕ್ಕೆ ನುಗ್ಗಿದೆ. ಘಟನೆಯಿಂದ ಮನೆಯ ಅವರಣ ಗೋಡೆಗೆ ಹಾನಿಯಾಗಿದ್ದು, ಆ್ಯಂಬುಲೆನ್ಸ್ ಮನೆಯ ಗೋಡೆಗೆ ಢಿಕ್ಕಿಯಾಗುವುದು ಸ್ವಲ್ಪದರಲ್ಲೇ ತಪ್ಪಿದೆ. ಈ ಸಂದರ್ಭ ರಸ್ತೆ ಬದಿ ಶಾಲಾ ಮಕ್ಕಳು ನಿಂತಿದ್ದು,  ಅಪಾಯದಿಂದ ಪಾರಾಗಿದ್ದಾರೆ.

ಮನೆ ಅಂಗಳಕ್ಕೆ ನುಗ್ಗಿದ ಆಂಬುಲೆನ್ಸ್ Read More »

ನಿವೃತ್ತ ಬ್ಯಾಂಕ್ ಉದ್ಯೋಗಿ ಸೋಮಪ್ಪ ಗೌಡ ಬಡಾವು ನಿಧನ

ಪುತ್ತೂರು: ನಿವೃತ್ತ ಬ್ಯಾಂಕ್ ಉದ್ಯೋಗಿ ಸೋಮಪ್ಪ ಗೌಡ ಬಡಾವು (75.ವ.) ಇವರು ಡಿ.07 ರಂದು ಬೆಳಗ್ಗೆ ಹೃದಯಾಘತದಿಂದ ನಿಧನರಾಗಿದ್ದಾರೆ. ಬ್ಯಾಂಕ್ ಉದ್ಯೋಗಿ ಸೋಮಪ್ಪ ಗೌಡ ಬಡಾವು ಅವರು ಬ್ಯಾಂಕ್ ಆಫ್ ಬರೋಡಾ, ಹಿಂದೆ ಇದ್ದ ವಿಜಯ ಬ್ಯಾಂಕಿನ ಪುತ್ತೂರು ಶಾಖೆಯಲ್ಲಿ ಉದ್ಯೋಗದಲ್ಲಿದ್ದು ಇತ್ತೀಚೆಗೆ ನಿವೃತ್ತರಾಗಿದ್ದರು. ನಿನ್ನೆ ಸಂಜೆ ಇವರು ಆರೋಗ್ಯದಿಂದ ಇದ್ದು ಮನೆಯಲ್ಲಿ ಕೆಲಸ ಮಾಡುತ್ತಿದ್ದರು, ಇಂದು ಬೆಳಗ್ಗೆ ಸೋಮಪ್ಪ ಗೌಡ ಇವರ ಆರೋಗ್ಯದಲ್ಲಿ ವ್ಯತ್ಯಯವಾಗಿದ್ದು, ಪುತ್ತೂರಿನ ಆದರ್ಶ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಹೃದಯಾಘತವಾಗಿ

ನಿವೃತ್ತ ಬ್ಯಾಂಕ್ ಉದ್ಯೋಗಿ ಸೋಮಪ್ಪ ಗೌಡ ಬಡಾವು ನಿಧನ Read More »

ಕೆ ಎಸ್‍ ಆರ್ ಟಿಸಿ ಬಸ್ ಪ್ರಯಾಣದ ವೇಳೆ ಚಾಲಕನಿಗೆ ಎದೆನೋವು | ಚಾಲಕನನ್ನು ಆಸ್ಪತ್ರೆಗೆ ದಾಖಲಿಸಿದ ಬಸ್ ನಿರ್ವಾಹಕ

ಉಪ್ಪಿನಂಗಡಿ: ಕೆಎಸ್ಸಾರ್ಟಿಸಿ ಬಸ್ ಪ್ರಯಾಣದ ವೇಳೆ ಚಾಲಕನಿಗೆ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣವೇ  ನಿರ್ವಾಹಕ ವಿಷ್ಣು ಎಂಬವರು ಬಸ್ ಅನ್ನು ಉಪ್ಪಿನಂಗಡಿಗೆ ಚಲಾಯಿಸಿಕೊಂಡು ಬಂದು ಚಾಲಕನನ್ನು ಆಸ್ಪತ್ರೆಗೆ ದಾಖಲಿಸಿದ ಘಟನೆ ಡಿ.6ರಂದು ತಿಳಿದು ಬಂದಿದೆ. ಮಂಗಳೂರು ಡಿಪೋಗೆ ಸೇರಿದ ಕೆಎಸ್ಸಾರ್ಟಿಸಿ ಬಸ್ ಸುಬ್ರಹ್ಮಣ್ಯದಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ವೇಳೆ ಬಸ್ ಕಡಬ ತಾಲೂಕಿನ ಆತೂರಿಗೆ ಬರುತ್ತಿದ್ದಂತೆಯೇ ಬಸ್ಸಿನ ಚಾಲಕ ಗಣಪತಿಯವರ ಚಾಲನೆಯ ವೇಗವನ್ನು ನಿಧಾನ ಮಾಡತೊಡಗಿದರು. ಇದನ್ನು ಕಂಡು ಸಂಶಯಗೊಂಡ ಬಸ್ ನಿರ್ವಾಹಕ, ಚಾಲಕನ ಹತ್ತಿರ ಬಂದು ಮಾತನಾಡಲು ಪ್ರಯತ್ನಿಸಿದಾಗ

ಕೆ ಎಸ್‍ ಆರ್ ಟಿಸಿ ಬಸ್ ಪ್ರಯಾಣದ ವೇಳೆ ಚಾಲಕನಿಗೆ ಎದೆನೋವು | ಚಾಲಕನನ್ನು ಆಸ್ಪತ್ರೆಗೆ ದಾಖಲಿಸಿದ ಬಸ್ ನಿರ್ವಾಹಕ Read More »

ವಿಟ್ಲದ ಉದ್ಯಮಿ ಆತ್ಮಹತ್ಯೆ

ವಿಟ್ಲ : ವಿಟ್ಲದ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ವಿಟ್ಲದ ಓಂ ಸಾಯಿ ಇಂಡಸ್ಟ್ರೀಸ್ ನ ಮಾಲಕ ಬದನಾಜೆ ನಿಡ್ಯ ನಿವಾಸಿ ದಾಮೋದರ್ ಪೂಜಾರಿ (60) ಆತ್ಮಹತ್ಯೆ ಮಾಡಿಕೊಂಡವರು. ಆತ್ಮಹತ್ಯೆಗೆ ಕಾರಣಗಳು ತಿಳಿದು ಬಂದಿಲ್ಲ. ಮೃತರು ಇಬ್ಬರು ಮಕ್ಕಳು, ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ.

ವಿಟ್ಲದ ಉದ್ಯಮಿ ಆತ್ಮಹತ್ಯೆ Read More »

ಸಿಡಿಲಾಘಾತಕ್ಕೆ ಒಳಗಾದ ಪಿಡಿಒ ಆರೋಗ್ಯ ವಿಚಾರಿಸಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು

ಪುತ್ತೂರು: ಗುರುವಾರ ಸಂಜೆ ಕಂಪ್ಯೂಟರ್ ಆಫ್‍ ಮಾಡುವ ಸಂದರ್ಭ ಸಿಡಿಲು ಬಡಿದು ಆಸ್ಪತ್ರೆಗೆ ದಾಖಲಾಗಿದ್ದ ಬನ್ನೂರು ಗ್ರಾಮ ಪಂಚಾಯಿತಿ ಪಿಡಿಒ ಚಿತ್ರಾವತಿ ಅವರ ಆರೋಗ್ಯ ವಿಚಾರಿಸಲು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಮಹಾವೀರ ಆಸ್ಪತ್ರೆಗೆ ಶುಕ್ರವಾರ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸರಕಾರಿ ಕೆಲಸವನ್ನು ತನ್ನ ಕೆಲಸ ಎಂದು ತಿಳಿದು ಸಂಜೆ ಹೊತ್ತು ಕೆಲಸ ಮಾಡುವ ಸಂದರ್ಭ ಪಿಡಿಒ ಚಿತ್ರಾವತಿ ಅವರು ಸಿಡಿಲಾಘಾತಕ್ಕೆ ಒಳಗಾಗಿದ್ದಾರೆ. ತಕ್ಷಣ ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲದ

ಸಿಡಿಲಾಘಾತಕ್ಕೆ ಒಳಗಾದ ಪಿಡಿಒ ಆರೋಗ್ಯ ವಿಚಾರಿಸಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು Read More »

ಸಾಮೆತಡ್ಕ ತೋಡಿನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಪುತ್ತೂರು:  ರೋಟರಿಪುರ ಸಾಮೆತ್ತಡ್ಕ ನಡುವೆ ಇರುವ ತೋಡಿನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ತೋಡಿನ ಸಮೀಪ ಸ್ಥಳೀಯ ವ್ಯಕ್ತಿ ನಡೆದುಕೊಂಡು ಹೋಗುತ್ತಿದ್ದ ವೇಳೆ ವ್ಯಕ್ತಿಯ ಮೃತದೇಹ ಕಾಣಿಸಿದ್ದು ಕೂಡಲೇ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಪುತ್ತೂರು ನಗರ ಪೊಲೀಸರು ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಸಾಮೆತಡ್ಕ ತೋಡಿನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ Read More »

ಸಿಡಿಲು ಬಡಿದು ಬನ್ನೂರು ಗ್ರಾಪಂ ಪಿಡಿಒ ಚಿತ್ರಾವತಿ ಆಸ್ಪತ್ರೆಗೆ ದಾಖಲು

ಪುತ್ತೂರು: ಕಂಪ್ಯೂಟರ್ ಸ್ವಿಚ್ ಆಫ್ ಮಾಡಲು ಹೋದ ವೇಳೆ ಸಿಡಿಲು ಬಡಿದ ಪರಿಣಾಮ ಬನ್ನೂರು ಗ್ರಾಪಂ ಪಿಡಿಒ ಕುಸಿದು ಬಿದ್ದ ಘಟನೆ ಬನ್ನೂರು ಗ್ರಾಮ ಪಂಚಾಯತ್ ಕಚೇರಿಯಲ್ಲಿ ಇಂದು ನಡೆದಿದೆ ಬನ್ನೂರು ಗ್ರಾಮ ಪಂಚಾಯತ್ ಪಿಡಿಓ ಚಿತ್ರಾವತಿ ಯವರು ಕಂಪ್ಯೂಟರ್ ಸ್ವಿಚ್ ಆಫ್ ಮಾಡುವ ಸಂದರ್ಭ ಸಿಡಿಲು ಬಡಿದು ಅಲ್ಲಿಯೇ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಸ್ಥಳದಲ್ಲಿದ್ದ ಸದಸ್ಯರು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಪ್ರಾಣಾಪಾಯದಿಂದ ಪಾರಾಗಿದ್ದು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು

ಸಿಡಿಲು ಬಡಿದು ಬನ್ನೂರು ಗ್ರಾಪಂ ಪಿಡಿಒ ಚಿತ್ರಾವತಿ ಆಸ್ಪತ್ರೆಗೆ ದಾಖಲು Read More »

ಕಟ್ಟಡವೊಂದರಲ್ಲಿ ವ್ಯಕ್ತಿಯ ಮೃತ ದೇಹ ಪತ್ತೆ

ಉಪ್ಪಿನಂಗಡಿ: ಓರ್ವ ವ್ಯಕ್ತಿಯ ಮೃತದೇಹ ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಪತ್ತೆಯಾಗಿದೆ. ಕಟ್ಟಡಕ್ಕೆ ನೀರು ಬಿಡಲು ಬಂದ ವೇಳೆ ಮೃತದೇಹ ಇರುವ  ಶಂಕೆ ತಿಳಿದಿದೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಧಾವಿಸಿ, ತನಿಕೆ ನಡೆಸುತ್ತಿದ್ದಾರೆ.

ಕಟ್ಟಡವೊಂದರಲ್ಲಿ ವ್ಯಕ್ತಿಯ ಮೃತ ದೇಹ ಪತ್ತೆ Read More »

ನಿವೃತ್ತ ಯೋಧ ಕೂಸಪ್ಪ ಶೆಟ್ಟಿ ನಿಧನ

ವಿಟ್ಲ : ವಿಟ್ಲದ ಮಂಗಲಪದವು ನಿವಾಸಿ ನಿವೃತ್ತ ಸೈನಿಕ ಕೂಸಪ್ಪ ಶೆಟ್ಟಿ(81) ವಯೋ ಸಹಜವಾಗಿ  ಸ್ವಗೃಹದಲ್ಲಿ ನಿಧನರಾಗಿದ್ದಾರೆ.   ಇವರು ಪುತ್ತೂರು ಮಾಜಿ ಸೈನಿಕ ಸಂಘದ ಅತ್ಯಂತ ಹಿರಿಯ ಸದಸ್ಯರಾಗಿದ್ದು, ಭಾರತೀಯ ಭೂಸೇನೆಯಲ್ಲಿ 20 ವರ್ಷಗಳ ಸೇವೆ ಗೈದಿದ್ದ ಇವರು 1962 ಮತ್ತು 1971 ರ ಯುದ್ಧದಲ್ಲಿ ಭಾಗವಹಿಸಿದ್ದಾರೆ. ಪುತ್ತೂರು ಮಾಜಿ ಸೈನಿಕ ಸಂಘದ ಅಧ್ಯಕ್ಷ ಎಂ. ಕೆ. ನಾರಾಯಣ ಭಟ್, ಉಪಾಧ್ಯಕ್ಷ ದಾಸಪ್ಪ ಪೂಜಾರಿ, ಕಾರ್ಯದರ್ಶಿ ನಾಗಪ್ಪ ಗೌಡ ಮತ್ತು ಅನೇಕ ಮಾಜಿ ಸೈನಿಕರು ಮೃತರ

ನಿವೃತ್ತ ಯೋಧ ಕೂಸಪ್ಪ ಶೆಟ್ಟಿ ನಿಧನ Read More »

ಆರ್‌ಎಸ್ಎಸ್ ಪ್ರಚಾರಕ ಪ್ರಸಾದ್ ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆ

ಬೆಳ್ತಂಗಡಿ, ಡಿ.2: ಸೋಮವಾರ ಸಂಜೆ ನೇತ್ರಾವತಿ ನದಿಗೆ ಇಳಿದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಬೆಳಾಲು ಗ್ರಾಮದ ಕೂಡಿಗೆ ಎಂಬಲ್ಲಿ ನಡೆದಿದೆ. ಬೆಳಾಲು ಗ್ರಾಮದ ಸುರುಳಿ ಕುಂಡಡ್ಕ ನಿವಾಸಿ ಪ್ರಸಾದ್ (38) ಎಂಬವರು ಯಾವುದೋ ಕಾರಣಕ್ಕೆ ನದಿಗೆ ಇಳಿದಿದ್ದರು ಬಳಿಕ ಮುಳುಗಿ ನಾಪತ್ತೆಯಾಗಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಶೌರ್ಯ ವಿಪತ್ತು ನಿರ್ವಹಣೆ ತಂಡದ ಸದಸ್ಯರು ಭೇಟಿ ನೀಡಿದ್ದು, ಮುಳುಗು ತಜ್ಞ ಈಶ್ವರ್ ಮಲ್ಪೆಗೂ ಮಾಹಿತಿ ನೀಡಲಾಗಿತ್ತು. ಆದರೆ ಮುಳುಗು ತಜ್ಞ ಬೆಳ್ತಂಗಡಿಯ ಸಂಜಯ

ಆರ್‌ಎಸ್ಎಸ್ ಪ್ರಚಾರಕ ಪ್ರಸಾದ್ ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆ Read More »

error: Content is protected !!
Scroll to Top