ನಿಧನ

ನರಿಮೊಗರು ವಲಯ ಕಾಂಗ್ರೆಸ್  ಅಧ್ಯಕ್ಷ ಪ್ರಕಾಶ್ ನಿಧನ

ಪುತ್ತೂರು: ಮೊಬೈಲ್ ಮಳಿಗೆ ಹೊಂದಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಇಂದು ನಿಧನರಾದರು. ಪುರುಷರಕಟ್ಟೆ ನಿವಾಸಿ ಪ್ರಕಾಶ್ (45) ಮೃತಪಟ್ಟವರು. ಪ್ರಕಾಶ್ ಅವರು ನರಿಮೊಗರು ವಲಯ ಕಾಂಗ್ರೆಸ್ ಅಧ್ಯಕ್ಷರಾಗಿದ್ದು, ಯಂಗ್ ಬ್ರಿಗೆಡ್ ನಲ್ಲಿ ತೊಡಗಿಸಿಕೊಂಡಿದ್ದರು. ಕ್ರಿಕೆಟ್ ಆಟಗಾರರಾಗಿದ್ದ ಅವರು ಕೆಎಸ್‍ ಆರ್‍ ಟಿಸಿ ಬಸ್ ನಿಲ್ದಾಣದಲ್ಲಿ ಮೊಬೈಲ್ ಅಂಗಡಿ ನಡೆಸುತ್ತಿದ್ದರು. ಮೃತರು ಪತ್ನಿ, ಮಗಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ನರಿಮೊಗರು ವಲಯ ಕಾಂಗ್ರೆಸ್  ಅಧ್ಯಕ್ಷ ಪ್ರಕಾಶ್ ನಿಧನ Read More »

ಬ್ರಹ್ಮರಕೋಡಿ ತರವಾಡು ಮನೆಯ ಹಿರಿಯರಾದ ದೇವಪ್ಪ ಗೌಡ ನಿಧನ

ಪುತ್ತೂರು: ಬಲ್ನಾಡು ಗ್ರಾಮದ ಉಜ್ರುಪಾದೆ ಬ್ರಹ್ಮರಕೋಡಿ ತರವಾಡು ಕುಟುಂಬದ ಹಿರಿಯರಾದ ದೇವಪ್ಪ ಗೌಡ ಬ್ರಹ್ಮರಕೋಡಿ ನಿಧನರಾದರು. ಕೆಲವು ಸಮಯದಿಂದ ಅಸೌಖ್ಯದಿಂದ ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಜೂನ್ 6 ರಂದು ನಿಧನ ಹೊಂದಿದ್ದರು. ಮೃತರು ಪತ್ನಿ, ಮೂವರು ಮಕ್ಕಳು, ಕುಟುಂಬಸ್ಥರನ್ನು ಹಾಗೂ ಬಂಧುಗಳನ್ನು ಅಗಲಿದ್ದಾರೆ.

ಬ್ರಹ್ಮರಕೋಡಿ ತರವಾಡು ಮನೆಯ ಹಿರಿಯರಾದ ದೇವಪ್ಪ ಗೌಡ ನಿಧನ Read More »

ಬೊಳುವಾರು ನಿವಾಸಿ ಶಿಲ್ಪಾ ಆರ್. ಪ್ರಭು ನಿಧನ

ಪುತ್ತೂರು: ಬಾರ್ಬಿ ಸಾಫ್ಟ್ ಡ್ರಿಂಕ್ಸ್ ಮಾಲಕರಾಗಿರುವ ಬೊಳುವಾರು ನಿವಾಸಿ ರಾಧೇಶ್ ವಿಠಪ್ಪ ಪ್ರಭು ಪತ್ನಿ ಶಿಲ್ಪಾ ಆರ್. ಪ್ರಭು ನಿಧನರಾದರು. ಶಿಲ್ಪಾ ಅನಾರೋಗ್ಯದಿಂದ ಇದ್ದು, ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತಿ, ಪುತ್ರ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. ಶಿಲ್ಪಾ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಜೂ.7 ರಂದು ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಬೊಳುವಾರು ನಿವಾಸಿ ಶಿಲ್ಪಾ ಆರ್. ಪ್ರಭು ನಿಧನ Read More »

 ಪೊಲೀಸ್‌  ಠಾಣೆ ಹೆಡ್ ಕಾನ್ ಸ್ಟೇಬಲ್ ನಾರಾಯಣ ಕಳಿಗೆ ಅವರಿಗೆ  ಠಾಣೆ ವತಿಯಿಂದ ಅಂತಿಮ ನಮನ

ಸುಬ್ರಹ್ಮಣ್ಯ : ಭಾನುವಾರ ನಿಧನರಾದ ಪೊಲೀಸ್‌  ಠಾಣೆ ಹೆಡ್ ಕಾನ್ ಸ್ಟೇಬಲ್ ನಾರಾಯಣ ಕಳಿಗೆ ಅವರಿಗೆ  ಠಾಣೆ ವತಿಯಿಂದ ಸೋಮವಾರ ಅಂತಿಮ ನಮನ ಸಲ್ಲಿಸಲಾಯಿತು. ಕಾನ್ ಸ್ಟೇಬಲ್ ನಾರಾಯಣ ಕಳಿಗೆ ಅವರು ಭಾನುವಾರ ಅಸೌಖ್ಯದಿಂದ ನಿಧನರಾಗಿದ್ದರು  ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಎಸ್.ಪಿ ರಿಷ್ಯಂತ್, ಸುಬ್ರಹ್ಮಣ್ಯ ಠಾಣಾ ಎಸ್.ಐ ಕಾರ್ತಿಕ್ ಹಾಗೂ ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

 ಪೊಲೀಸ್‌  ಠಾಣೆ ಹೆಡ್ ಕಾನ್ ಸ್ಟೇಬಲ್ ನಾರಾಯಣ ಕಳಿಗೆ ಅವರಿಗೆ  ಠಾಣೆ ವತಿಯಿಂದ ಅಂತಿಮ ನಮನ Read More »

ಮಡಿಕೇರಿ ಉಪತಹಶೀಲ್ದಾರ್ ಸುನಿಲ್ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಉಪ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸಿ ಪದೋನ್ನತಿ ಹೊಂದಿ ಮಡಿಕೇರಿಗೆ ತೆರಳಿದ್ದ ಸುನಿಲ್ (42) ಹೃದಯಾಘಾತದಿಂದ ಭಾನುವಾರ ನಿಧನರಾದರು. ಕಂದಾಯ ಇಲಾಖೆಯಲ್ಲಿ ಗ್ರಾಮ ಕರಣಿಕರಾಗಿ ಸೇವೆ ಸಲ್ಲಿಸಿ, ಉಪ ತಹಶೀಲ್ದಾರ್ ಆಗಿ ಪದೋನ್ನತಿ ಹೊಂದಿದ್ದ ಸುನಿಲ್ ಅವರು ಉಪ ತಹಸಿಲ್ದಾರ್ ಆಗಿ ಮಡಿಕೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಬೆಳ್ತಂಗಡಿ ಆಡಳಿತ ಕಂದಾಯ ಇಲಾಖೆಯಲ್ಲಿ ಗ್ರಾಮ ಕಾರಣಿಕರಾಗಿ ಬಳಿಕ ಆಡಳಿತ ಸೌಧದಲ್ಲಿ ಭೂಮಿ ಶಾಖೆಯ ನಿರ್ವಹಖರಾಗಿ ಸೇವೆ ಸಲ್ಲಿಸಿದ್ದರು.

ಮಡಿಕೇರಿ ಉಪತಹಶೀಲ್ದಾರ್ ಸುನಿಲ್ ಹೃದಯಾಘಾತದಿಂದ ನಿಧನ Read More »

ಸಮಾಜ ಸೇವಕ ವಿಶ್ವನಾಥ ಗೌಡ ನಿಧನ

ಪುತ್ತೂರು: ಸಮಾಜ ಸೇವಕ ವಿಶ್ವನಾಥ ಗೌಡ ಬಲತ್ತನೆ (45) ಅವರು ಇಂದು ನಿಧನರಾಗಿದ್ದಾರೆ. ಕುಂತೂರು ನಿವಾಸಿಯಾಗಿರುವ ವಿಶ್ವನಾಥ ಗೌಡರು ಕೃಷಿ ಕಾರ್ಯದಲ್ಲಿ ತೊಡಗಿದ್ದಾಗ ಮರಣ ಹೊಂದಿರುತ್ತಾರೆ. ಅವರು ಸಮಾಜ ಸೇವಕ, ಸಮಾಜದ ಜನತೆಯ ಒಡನಾಡಿ, ನೇರೋಳ್‍ ಪಲ್ಕೆ ಶ್ರೀ ರಾಜನ್ ದೈವಸ್ಥಾನದ ಆಡಳಿತ ಸಮಿತಿ ಸದಸ್ಯರಾಗಿ, ಕುಂತೂರು ಘಟಕ ಒಕ್ಕಲಿಗ ಗೌಡ ಸೇವಾ ಸಂಘದ ಸದಸ್ಯರಾಗಿ ಸೇವೆ ಸಲ್ಲಿಸುವುದರೊಂದಿಗೆ ಉತ್ತಮ ಕೃಷಿರಾಗಿದ್ದರು. ಮೃತರು ಪತ್ನಿ, ಎರಡು ಮಕ್ಕಳನ್ನು ಅಗಲಿದ್ದಾರೆ.

ಸಮಾಜ ಸೇವಕ ವಿಶ್ವನಾಥ ಗೌಡ ನಿಧನ Read More »

ದೀಕ್ಷಿತ್ ಮರಿಕೆ ನಿಧನ

ಪುತ್ತೂರು: ಆರ್ಯಾಪು ಗ್ರಾಮದ ಮರಿಕೆ ನಿವಾಸಿ ದಿ. ಗೋಪಾಲ ಗೌಡ ಅವರ ಪುತ್ರ, ಬಿಜೆಪಿ ಸಕ್ರೀಯ ಕಾರ್ಯಕರ್ತ, ಆರ್ಯಾಪು ಗ್ರಾಮ ಪಂಚಾಯಿತಿ ಪಂಪ್ ಆಪರೇಟರ್ ದೀಕ್ಷಿತ್ ಮರಿಕೆ (28) ಬುಧವಾರ ರಾತ್ರಿ ಅಸೌಖ್ಯದಿಂದ ನಿಧನರಾದರು. ಕೆಲ ದಿನಗಳಿಂದ ಅಸೌಖ್ಯದಿಂದ ಇದ್ದು, ಮಂಗಳೂರು ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ರಾತ್ರಿ ಕೊನೆಯುಸಿರೆಳೆದರು. ಮೃತರು ತಾಯಿ, ಸಹೋದರ, ಸಹೋದರಿಯನ್ನು ಅಗಲಿದ್ದಾರೆ. ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಪ್ರಮುಖರಾದ ಅರುಣ್

ದೀಕ್ಷಿತ್ ಮರಿಕೆ ನಿಧನ Read More »

ಸಿಡಿಲು ಬಡಿದು ಯುವಕ ಮೃತ್ಯು

ಉಡುಪಿ: ಸಿಡಿಲು ಬಡಿದು ಯುವಕನೋರ್ವ ಮೃತಪಟ್ಟ ಘಟನೆ ಶಿರ್ವ ಮಾಣಿಬೆಟ್ಟು ಬಳಿ ಗುರುವಾರ ರಾತ್ರಿ ನಡೆದಿದೆ. ಶಿರ್ವ ಎಂಎಸ್‌ಆರ್‌ಎಸ್ ಕಾಲೇಜಿನ ಎರಡನೇ ವರ್ಷದ ಬಿಸಿಎ ವಿದ್ಯಾರ್ಥಿ, ಶಿರ್ವ ಮಾಣಿಬೆಟ್ಟು ತೋಟದಮನೆ ನಿವಾಸಿ ರಮೇಶ್ ಪೂಜಾರಿಯವರ ಪುತ್ರ ರಕ್ಷಿತ್ ಪೂಜಾರಿ (20) ಮೃತಪಟ್ಟವರು. ಸ್ನಾನ ಮಾಡಲೆಂದು ಬಚ್ಚಲು ಮನೆ ಬಳಿ ನಿಂತಿದ್ದ ವೇಳೆ ಸಿಡಿಲು ಬಡಿದಿದೆ. ನೆಲದಲ್ಲಿ ಬಿದ್ದಿದ್ದ ಅವರನ್ನು ಮನೆ ಮಂದಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 10 ಗಂಟೆಯ ವೇಳೆಗೆ ಕೊನೆಯುಸಿರೆಳೆದಿದ್ದಾರೆ.

ಸಿಡಿಲು ಬಡಿದು ಯುವಕ ಮೃತ್ಯು Read More »

ವಿದ್ಯುತ್ ತಗುಲಿ ವ್ಯಕ್ತಿ ಮೃತ್ಯು

ಬಂಟ್ವಾಳ: ವಿದ್ಯುತ್‌ ಪರಿವರ್ತಕದ ಬಳಿ ನಿಂತುಕೊಂಡಿದ್ದ ವ್ಯಕ್ತಿಯೋರ್ವನಿಗೆ ಸಿಡಿಲು ಬಡಿದು ವಿದ್ಯುತ್ ಶಾಕ್ ಹೊಡೆದು ಮೃತಪಟ್ಟ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್‌ ಠಾಣಾ ವ್ಯಾಪ್ತಿಯ ಇರಾದಲ್ಲಿ ಗುರುವಾರ ನಡೆದಿದೆ. ಇರಾ ಗ್ರಾಮದ ಮುರ್ಕಾಜೆ ನಿವಾಸಿ ಸತೀಶ್‌ ಚೌಟ (43) ಮೃತಪಟ್ಟ ವ್ಯಕ್ತಿ. ಸತೀಶ್ ಅವರು ಬಾಕ್ರಬೈಲಿನಲ್ಲಿ ಮರದ ಮಿಲ್ ನಲ್ಲಿ ಕೆಲಸಗಾರನಾಗಿದ್ದು, ಗುರುವಾರ ರಸ್ತೆಯ ಬದಿಯಲ್ಲಿ ಟ್ರಾನ್ಸ್ ಫಾರ್ಮರ್ ಪಕ್ಕದಲ್ಲಿ ನಿಂತುಕೊಂಡಿರುವ ಸಮಯದಲ್ಲಿ ಆಕಸ್ಮಿಕವಾಗಿ ಸಿಡಿಲು ಬಡಿದು, ಒಮ್ಮೆಲೇ ವಿದ್ಯುತ್‌ ಪ್ರವೇಶಿಸಿ ಮೃತಪಟ್ಟ ಬಗ್ಗೆ ಬ೦ಟ್ವಾಳ ಗ್ರಾಮಾಂತರ

ವಿದ್ಯುತ್ ತಗುಲಿ ವ್ಯಕ್ತಿ ಮೃತ್ಯು Read More »

ನಿವೃತ್ತ ಶಿಕ್ಷಕ ಚಂದ್ರಶೇಖರ ಕುಂಜತ್ತಾಯ ನಿಧನ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ನಿವಾಸಿ, ನಿವೃತ್ತ ಶಿಕ್ಷಕ ಚಂದ್ರಶೇಖರ ಕುಂಜತ್ತಾಯ ಅಲ್ಪ ಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಸಂತ ಫಿಲೋಮಿನಾ ಕಾಲೇಜಿನಲ್ಲಿ ಗಣಿತ ಶಿಕ್ಷಕರಾಗಿ ಹಲವಾರು ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಬಳಿಕ ತನ್ನ ಮನೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಮನೆ ಪಾಠ ಹೇಳಿಕೊಡುತ್ತಿದ್ದರು. ಮೃತರು ಪತ್ನಿ, ಪುತ್ರ, ನಾಲ್ವರು ಪುತ್ರಿಯರು, ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.

ನಿವೃತ್ತ ಶಿಕ್ಷಕ ಚಂದ್ರಶೇಖರ ಕುಂಜತ್ತಾಯ ನಿಧನ Read More »

error: Content is protected !!
Scroll to Top