ನಿಧನ

ಅಪರಿಚಿತ ವಾಹನ ಢಿಕ್ಕಿ ಹೊಡೆದು ಹಿರಿಯ ಮ್ಯಾರಥಾನ್ ಓಟಗಾರ ಫೌಜಾ ಸಿಂಗ್ ನಿಧನ

ಜಲಂಧರ್: ಹಿರಿಯ ಮ್ಯಾರಥಾನ್ ಓಟಗಾರ ಫೌಜಾ ಸಿಂಗ್ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿದ್ದಾರೆ. ಜಲಂಧರ್‌ನ ತಮ್ಮ ಮನೆಯ ಸಮೀಪ ಸೋಮವಾರ ಸಂಜೆ ವಾಕಿಂಗ್ ಮಾಡುತ್ತಿದ್ದ ವೇಳೆ ಅಪರಿಚಿತ ಕಾರೊಂದು ಫೌಜಾ ಸಿಂಗ್ ಅವರಿಗೆ ಢಿಕ್ಕಿ ಹೊಡೆದಿದೆ. ಈ ಅಪಘಾತದಿಂತ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವುದಾಗಿದೆ. ಸಿಂಗ್ ಅವರು 2000 ನೇ ಇಸವಿಯಲ್ಲಿ ಮ್ಯಾರಥಾನ್ ಪಯಣವನ್ನು ಆರಂಭಿಸಿದ್ದರು. ಅಂತಿಮವಾಗಿ ಎಂಟು ರೇಸ್‌ಗಳಲ್ಲಿ ಅವರು ಭಾಗವಹಿಸಿದ್ದರು. ಟೊರೆಂಟೋ ಮ್ಯಾರಥಾನ್‌ನಲ್ಲಿ 2011 ರಲ್ಲಿ ಭಾಗವಹಿಸಿದ […]

ಅಪರಿಚಿತ ವಾಹನ ಢಿಕ್ಕಿ ಹೊಡೆದು ಹಿರಿಯ ಮ್ಯಾರಥಾನ್ ಓಟಗಾರ ಫೌಜಾ ಸಿಂಗ್ ನಿಧನ Read More »

ಬನ್ನೂರು ನಿವಾಸಿ ಸೀತಾರಾಮ ಶೆಟ್ಟಿ ನಿಧನ

ಪುತ್ತೂರು: ಬನ್ನೂರು ನಿವಾಸಿ ಸೀತಾರಾಮ ಶೆಟ್ಟಿ (65) ಅವರು ಮಂಗಳವಾರ ಮಧ್ಯಾಹ್ನ ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಅಪ್ಪಟ ಕನ್ನಡ ಪ್ರೇಮಿಯಾಗಿದ್ದ ಇವರು, ಪ್ರತಿವರ್ಷ ಕನ್ನಡ ರಾಜ್ಯೋತ್ಸವದಂದು ಕನ್ನಡ ಧ್ವಜ ವಿತರಿಸುತ್ತಿದ್ದರು. ಕನ್ನಡದ ಎಲ್ಲಾ ಕಾರ್ಯಕ್ರಮಗಳಲ್ಲೂ ಭಾಗವಹಿಸುತ್ತಿದ್ದರು. ಯಕ್ಷಗಾನ ಪ್ರೇಮಿಯೂ ಆಗಿದ್ದರು. ದಿ. ಚಿದಾನಂದ ಕಾಮತ್ ಕಾಸರಗೋಡು ಅವರ ಸಾಂಸ್ಕೃತಿಕ ಕಲಾಕೇಂದ್ರದ ಎಲ್ಲಾ ಕನ್ನಡ ಕಾರ್ಯಕ್ರಮಗಳಲ್ಲಿ ಸಕ್ರೀಯರಾಗಿದ್ದರು. ಮೃತರರು ಇಬ್ಬರು ಪುತ್ರರು, ಓರ್ವ ಪುತ್ರಿ, ಸೊಸೆಯಂದಿರು, ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಬನ್ನೂರು ನಿವಾಸಿ ಸೀತಾರಾಮ ಶೆಟ್ಟಿ ನಿಧನ Read More »

ಹಿರಿಯ ನಟಿ, ‘ಅಭಿನಯ ಸರಸ್ವತಿ’ ಖ್ಯಾತಿಯ ಬಿ.ಸರೋಜಾದೇವಿ ನಿಧನ

ಬೆಂಗಳೂರು: ಹಿರಿಯ ನಟಿ ಬಿ. ಸರೋಜಾದೇವಿ ಅವರು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾದರು.  ವಯೋಸಹಜ ಕಾಯಿಲೆಯಿಂದ ಕೊನೆಯುಸಿರೆಳೆದರು ಎಂದು ತಿಳಿದುಬಂದಿದೆ.  ಅವರ ನಿಧನಕ್ಕೆ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ. ಸರೋಜಾ ದೇವಿ ಅವರು ಕನ್ನಡ ಚಿತ್ರರಂಗದ ಪ್ರಮುಖ ನಟಿಯರಲ್ಲಿ ಒಬ್ಬರಾಗಿದ್ದರು ಮತ್ತು ʼಅಭಿನಯ ಸರಸ್ವತಿʼ ಎಂಬ ಹೆಸರಿನಿಂದ ಖ್ಯಾತರಾಗಿದ್ದರು. ಅವರು 6 ದಶಕಗಳಿಗೂ ಹೆಚ್ಚು ಕಾಲ ಕನ್ನಡ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ್ದರು. 

ಹಿರಿಯ ನಟಿ, ‘ಅಭಿನಯ ಸರಸ್ವತಿ’ ಖ್ಯಾತಿಯ ಬಿ.ಸರೋಜಾದೇವಿ ನಿಧನ Read More »

ಆರ್.ಎಸ್‍.ಎಸ್‍ ಹಿರಿಯ ಕಾರ್ಯಕರ್ತ ಧನಂಜಯ ವಾಗ್ಲೆ ನಿಧನ

ಪುತ್ತೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ, ಪುತ್ತೂರು ಬೆದ್ರಾಳ ನಿವಾಸಿ ಧನಂಜಯ ವಾಗ್ಲೆ (75) ಅವರು ಸ್ವಗೃಹದಲ್ಲಿ ಭಾನುವಾರ ನಿಧನರಾದರು. ಮೂಲತಃ ಸುಳ್ಯದ ಕೋಡಿಯಾಲಬೈಲಿನ ಸ್ವಯಂಸೇವಕರಾಗಿದ್ದರು. ಸುಳ್ಯ ತಾಲೂಕಿನಲ್ಲಿ ಜನಸಂಘ ಹಾಗು ಬಿಜೆಪಿಯನ್ನು ಕಟ್ಟಿ ಬೆಳೆಸುವುದರಲ್ಲಿ ಪ್ರಮುಖ ಪಾತ್ರ ವಹಿಸಿದ್ದರು, ಸುಮಾರು 20 ವರ್ಷಗಳ ಕಾಲ ಬಿಜೆಪಿಯ ಪೂರ್ಣಾವಧಿ ಕಾರ್ಯಕರ್ತರಂತೆ ಕಾರ್ಯ ನಿರ್ವಹಿಸಿದ್ದರು. ತುರ್ತು ಪರಿಸ್ಥಿತಿ, ಅಯೋಧ್ಯೆಯ ರಾಮ ಜನ್ಮಭೂಮಿ ಹೋರಾಟದಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ಮೃತರು ಇಬ್ಬರು ಪುತ್ರರನ್ನು ಅಗಲಿದ್ದಾರೆ. ವಾಗ್ಲೆಯವರ ನಿಧನಕ್ಕೆ ರಾಷ್ಟ್ರೀಯ ಸ್ವಯಂಸೇವಕ

ಆರ್.ಎಸ್‍.ಎಸ್‍ ಹಿರಿಯ ಕಾರ್ಯಕರ್ತ ಧನಂಜಯ ವಾಗ್ಲೆ ನಿಧನ Read More »

ಹಿರಿಯ ನಟ ಕೋಟ ಶ್ರೀನಿವಾಸ್‌ ರಾವ್‌ ನಿಧನ

ಕನ್ನಡ ಸೇರಿ ವಿವಿಧ ಭಾಷೆಗಳ 750ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದ ನಟ ಹೈದರಾಬಾದ್‌: ತೆಲುಗಿನ ಖ್ಯಾತ ನಟ ಕೋಟ ಶ್ರೀನಿವಾಸ ರಾವ್ (83) ಭಾನುವಾರ ಬೆಳಗಿನ ಜಾವ ನಿಧನರಾದರು. ಕಳೆದ ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಹೈದರಾಬಾದ್​ನಲ್ಲಿ ಇರುವ ತಮ್ಮ ನಿವಾಸದಲ್ಲಿ ಕೊನೆಯುಸಿರು ಎಳೆದರು. ವೃದ್ಧಾಪ್ಯದಿಂದಾಗಿ ನಡೆಯಲು ಸಾಧ್ಯವಾಗದಿದ್ದರೂ ಎರಡು ವರ್ಷಗಳ ಹಿಂದಿನವರೆಗೂ ಸಿನಿಮಾಗಳಲ್ಲಿ ನಟಿಸುವುದನ್ನು ಮುಂದುವರಿಸಿದ್ದರು. ಅವರ ಕೊನೆಯ ಚಿತ್ರ 2023ರಲ್ಲಿ ಬಿಡುಗಡೆಯಾದ ‘ಸುವರ್ಣ ಸುಂದರಿ’. ಕೋಟ ಶ್ರೀನಿವಾಸ ರಾವ್ ಅವರು 750ಕ್ಕೂ

ಹಿರಿಯ ನಟ ಕೋಟ ಶ್ರೀನಿವಾಸ್‌ ರಾವ್‌ ನಿಧನ Read More »

ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಇಬ್ಬರು ಸಾವು; ಇನ್ನೂ ಹಲವರಿರುವ ಶಂಕೆ

ನವದೆಹಲಿ: ನವದೆಹಲಿ ಸೀಲಾಮ್ ಪುರದಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು  ಬಿದ್ದಿದ್ದರಿಂದ ಇಬ್ಬರು ಮೃತಪಟ್ಟಿದ್ದು ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಜುಲೈ 12ರಂದು ಬೆಳಗ್ಗೆ 7 ಗಂಟೆ ಸುಮಾರಿಗೆ ದೆಹಲಿಯ ವೆಲ್ಕಮ್ ಪ್ರದೇಶದಲ್ಲಿರುವ ಜನತಾ ಮಜೂರ್ ಕಾಲೊನಿಯಲ್ಲಿ ಘಟನೆ ಸಂಭವಿಸಿದ್ದು ಇದುವರೆಗೆ 14 ತಿಂಗಳ ಮಗು ಸೇರಿ 8ಜನರನ್ನು ರಕ್ಷಿಸಲಾಗಿದೆ. 6ಕ್ಕೂ ಹೆಚ್ಚು ಮಂದಿ ಅವಶೇಷಗಳಡಿಯಲ್ಲಿ ಸಿಲುಕಿರುವ ಶಂಕೆಯಿದೆ. 7 ಅಗ್ನಿಶಾಮಕ ದಳದ ಸಿಬ್ಬಂದಿಗಳು, ಎಸ್‌ ಡಿ ಆರ್‌ ಎಫ್‌, ಎನ್‌ ಡಿ ಆರ್‌ ಎಫ್‌ ತಂಡ ಅವಶೇಷಗಳ

ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಇಬ್ಬರು ಸಾವು; ಇನ್ನೂ ಹಲವರಿರುವ ಶಂಕೆ Read More »

ಟಿ.ಬಿ.ಖಾಯಿಲೆಯಿಂದ ಮನನೊಂದು ವ್ಯಕ್ತಿ ಆತ್ಮಹತ್ಯೆ

ಕೊಕ್ಕಡ: ಟಿ.ಬಿ.ಖಾಯಿಲೆಯಿಂದ ಮನನೊಂದು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜು.6ರಂದು ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ಎಂಬಲ್ಲಿ ನಡೆದಿದೆ.ಕಾಪಿನಬಾಗಿಲಿನ ಅಂಬೋಡಿ(45) ಎಂಬವರು ಟಿ.ಬಿ.ಖಾಯಿಲೆಯಿಂದ ಬಳಲುತ್ತಿದ್ದು ಕಳೆದ ಎರಡು ವಾರದ ಹಿಂದೆ ಪುತ್ತೂರಿನ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಜು.4ರಂದು ಆಸ್ಪತ್ರೆಯಿಂದ ಮನೆಗೆ ಬಂದು ವಿಶ್ರಾಂತಿಯಲ್ಲಿದ್ದರು. ಆದರೆ ಜು.6ರಂದು ಖಾಯಿಲೆ ಉಲ್ಬಣಗೊಂಡಾಗ ರಾತ್ರಿ 11:30ಕ್ಕೆ ಮನೆಯ ಮುಂಬಾಗಿನ ಚಿಲಕ ಹಾಕಿ ಅಂಗಳದಲ್ಲಿರುವ ಬಾವಿಗೆ ಹಾರಿದ್ದಾರೆ. ಶಬ್ದ ಕೇಳಿ ಎಚ್ಚರಗೊಂಡ ಅವರ ಪತ್ನಿವಿನಯ ಅವರು ಅಂಬೋಡಿಯವರ ತಮ್ಮನ ಮಗ ಅವಿನಾಶ್ ಗೆ

ಟಿ.ಬಿ.ಖಾಯಿಲೆಯಿಂದ ಮನನೊಂದು ವ್ಯಕ್ತಿ ಆತ್ಮಹತ್ಯೆ Read More »

ಗೋಪಾಲ್ ಖೇಮ್ಕಾ ಹತ್ಯೆ ಪ್ರಕರಣದ ಓರ್ವ ಆರೋಪಿ ಪೊಲೀಸರ ಗುಂಡೇಟಿಗೆ ಬಲಿ

ಆರೋಪಿ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿದ್ದಾಗ ನಡೆದ ಎನ್‌ಕೌಂಟರ್ ಪಾಟ್ನಾ: ಬಿಜೆಪಿ ನಾಯಕ, ಉದ್ಯಮಿ ಗೋಪಾಲ್ ಖೇಮ್ಕಾ ಹತ್ಯೆ ಪ್ರಕರಣದ ಓರ್ವ ಆರೋಪಿ ಎನ್‌ಕೌಂಟರ್‌ನಲ್ಲಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಗೋಪಾಲ್ ಹತ್ಯೆಗೆ ಸಂಬಂಧಿಸಿದ ಹಾಗೆ ಆರೋಪಿಗಳನ್ನು ಬಂಧಿಸಲು ಹೋಗಿದ್ದು, ಈ ಸಂದರ್ಭದಲ್ಲಿ ಆರೋಪಿಯೊಬ್ಬ ಪೊಲೀಸರ ಮೇಲೆಯೇ ದಾಳಿ ನಡೆಸಿ ತಪ್ಪಿಸಿಕೊಳ್ಳಲು ಪ್ರಯತ್ನ ಮಾಡಿದ್ದಾನೆ. ತಕ್ಷಣವೇ ಪೊಲೀಸರು ಪ್ರತಿದಾಳಿ ನಡೆಸಿದ್ದು, ಗುಂಡೇಟಿಗೆ ಗಂಭೀರವಾಗಿ ಗಾಯಗೊಂಡ ಆರೋಪಿ ಮೃತಪಟ್ಟಿದ್ದಾಗಿ ತಿಳಿದು ಬಂದಿದೆ. ಮೃತ ಆರೋಪಿಯನ್ನು ವಿಕಾಸ್ ಯಾನೆ ರಾಜ ಎಂದು ಗುರುತಿಸಲಾಗಿದೆ. ಈ ಹತ್ಯೆಯ

ಗೋಪಾಲ್ ಖೇಮ್ಕಾ ಹತ್ಯೆ ಪ್ರಕರಣದ ಓರ್ವ ಆರೋಪಿ ಪೊಲೀಸರ ಗುಂಡೇಟಿಗೆ ಬಲಿ Read More »

ಮಂಗಳೂರು: ಹೃದಯಾಘಾತದಿಂದ ಇಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

ಮಂಗಳೂರು : ಹೃದಯಾಘಾತದಿಂದ ಇಂಜಿನಿಯರಿಂಗ್ ವಿದ್ಯಾರ್ಥಿ ಕುಸಿದು ಬಿದ್ದು ಮೃತಪಟ್ಟ ಘಟನೆ ಸುರತ್ಕಲ್‌ನ ಕೃಷ್ಣಾಪುರ ಹಿಲ್‌ಸೈಡ್ ಬಳಿ ಸಂಭವಿಸಿದೆ.ಮೃತರನ್ನು ಹಿಲ್‌ಸೈಡ್ ನಿವಾಸಿ ಅಸ್ಗರ್ ಅಲಿ ಅವರ ಪುತ್ರ ಅಫ್ತಾಬ್ (18) ಎಂದು ಗುರುತಿಸಲಾಗಿದೆ. ಅವರು ಸುರತ್ಕಲ್‌ನಲ್ಲಿ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಡಿಪ್ಲೊಮಾ ವ್ಯಾಸಂಗ ಮಾಡುತ್ತಿದ್ದರು. ಸೋಮವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಅಫ್ತಾಬ್ ಮನೆಯಲ್ಲಿ ಸ್ನಾನಕ್ಕೆ ಹೋಗುತ್ತಿದ್ದಾಗ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ. ಅಸ್ಗರ್ ಅಲಿ ಅವರ ನಾಲ್ಕು ಮಕ್ಕಳಲ್ಲಿ ಅಫ್ತಾಬ್ ಏಕೈಕ ಪುತ್ರ. ಅವರ ಮೂವರು ಸಹೋದರಿಯರಿಗೆ

ಮಂಗಳೂರು: ಹೃದಯಾಘಾತದಿಂದ ಇಂಜಿನಿಯರಿಂಗ್‌ ವಿದ್ಯಾರ್ಥಿ ಸಾವು Read More »

ವಿದ್ಯುತ್‌ ಅವಘಡಕ್ಕೆ ವ್ಯಕ್ತಿ ಸಾವು

 ಬೆಳ್ತಂಗಡಿ : ವಿದ್ಯುತ್‌ ತಂತಿ ಸ್ಪರ್ಶಿಸಿ  ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ವೇಣೂರು ಸಮೀಪ ನಡೆದಿದೆ.      ವೇಣೂರು ಬಜಿರೆ ಗ್ರಾಮದ ಪೆರ್ಮನು ಬೆಳ್ಳಿಬೆಟ್ಟು ನಿವಾಸಿ ವೀರಪ್ಪ (74) ಮೃತಪಟ್ಟ ವ್ಯಕ್ತಿಯಾಗಿದ್ದಾರೆ.    ವಿದ್ಯುತ್‌ ಪರಿವರ್ತಕದ ಬಳಿ ತೋಟದಲ್ಲಿ ಎಲ್.ಟಿ ಲೈನ್‌ ಮೇಲೆ ತೆಂಗಿನ ಗರಿ ಬಿದ್ದು, ತಂತಿಯು ತುಂಡಾಗಿ ನೀರಿನ ಹಳ್ಳಕ್ಕೆ ಬಿದ್ದು ತಂತಿಯಲ್ಲಿ ವಿದ್ಯುತ್‌ ಸರಬರಾಜಾಗುವ ಪ್ಯೂಸ಼್ ಹೋಗಿರುವುದು ಕಂಡುಬಂದಿದೆ.  ಕಾಲು ದಾರಿಯಲ್ಲಿ ನಡೆದು ಹೋಗುತ್ತಿದ್ದ ವೀರಪ್ಪ  ಹಳ್ಳದ ನೀರಿನಲ್ಲಿ ತೇಲಿ ಹೋಗುತ್ತಿದ್ದ ತೆಂಗಿನಕಾಯಿ, ಅಡಕೆಯನ್ನು ಹೆಕ್ಕಲು

ವಿದ್ಯುತ್‌ ಅವಘಡಕ್ಕೆ ವ್ಯಕ್ತಿ ಸಾವು Read More »

error: Content is protected !!
Scroll to Top