ನಿಧನ

ಬಾವಿಗೆ ಬಿದ್ದು ಮಹಿಳೆ ಸಾವು

ಪುತ್ತೂರು: ಉರ್ಲಾಂಡಿ ನಿವಾಸಿ ಅವಿವಾಹಿತೆಯೋರ್ವರು ಆ.15ರಂದು ಮಧ್ಯಾಹ್ನ ಮನೆಯಂಗಳದ ಬಾವಿಗೆ ಬಿದ್ದು ಮೃತಪ್ಪಟಿರುವ ಘಟನೆ ನಡೆದಿದೆ. ಉರ್ಲಾಂಡಿ ನಿವಾಸಿ ಶೇಖರ್ ಅವರ ಸಹೋದರಿ ಆರ್.ಗೀತಾ (59) ಮೃತರು. ಗೀತಾ ಅವರು ಹಲವು ವರ್ಷಗಳಿಂದ ಮಾನಸಿಕ ಅಸ್ವಸ್ಥೆಯಾಗಿದ್ದು, ಔಷಧಿ ಪಡೆಯುತ್ತಿದ್ದರು. ಸಹೋದರ ಶೇಖರ್ ಅವರ ಮನೆಯಲ್ಲಿ ವಾಸ್ತವ್ವ ಹೊಂದಿದ್ದು, ಆ.15ರಂದು ಮಧ್ಯಾಹ್ನ ಊಟ ಮಾಡಿದ್ದರು. ಬಳಿಕ ಅವರು ಮನೆಯಂಗಳದ ಬಾವಿಗೆ ಬಿದ್ದಿರುವ ಘಟನೆ ಬೆಳಕಿಗೆ ಬಂದಿದೆ. ಮೃತರು ಸಹೋದರರಾದ ಸೆಲೂನ್ನ ಮಾಲಕ ಶೇಖರ್, ತಂಕರ್, ಸುರೇಶ್, ಸಹೋದರಿಯರಾದ ಆರ್. […]

ಬಾವಿಗೆ ಬಿದ್ದು ಮಹಿಳೆ ಸಾವು Read More »

ಬಾವಿಗೆ ಹಾರಿ ಪ್ರಸಿದ್ಧ ಹಾಸ್ಯ ಕಲಾವಿದ ಗೋಪಾಲಕೃಷ್ಣ ಜೋಶಿಯವರ ಪುತ್ರ ಆತ್ಮಹತ್ಯೆ

ವಿಟ್ಲ: ಯಕ್ಷಗಾನ ಲೋಕದಲ್ಲಿ ರಸಿಕ ‘ರತ್ನ ಬಿರುದು’ ಪಡೆದ ಹಾಸ್ಯ ಕಲಾವಿದ ಗೋಪಾಲಕೃಷ್ಣ ಜೋಶಿಯವರ ಪುತ್ರ ರವಿ ಜೋಶಿ (68) ಬುಧವಾರ ಅತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಟ್ಲದ ಅಡ್ಡದ ಬೀದಿಯಲ್ಲಿ ನಡೆದಿದೆ.ಇವರು ಕರ್ನಾಟಕ ಬ್ಯಾಂಕ್‌ ನ ನಿವೃತ್ತ ಉದ್ಯೋಗಿಯಾಗಿದ್ದರು. ಮನೆ ಮುಂದಿರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿದ ಜೋಶಿ ಆವರ ಶವವನ್ನು ಸ್ಥಳೀಯರು ಪತ್ತೆ ಹಚ್ಚಿದ್ದಾರೆ. ಸ್ಥಿಳಕ್ಕೆ ವಿಟ್ಲ ಪೋಲಿಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಕಳೆದ ಮೂರು ವರ್ಷಗಳ ಹಿಂದೆ ಹಿರಿಯ ಪುತ್ರಿಯ ಅಕಾಲಿಕ ಮರಣದಿಂದ ಮನೋವೈಕಲ್ಯಕ್ಕೊಳಗಾಗಿ

ಬಾವಿಗೆ ಹಾರಿ ಪ್ರಸಿದ್ಧ ಹಾಸ್ಯ ಕಲಾವಿದ ಗೋಪಾಲಕೃಷ್ಣ ಜೋಶಿಯವರ ಪುತ್ರ ಆತ್ಮಹತ್ಯೆ Read More »

ಹಿಮ್ಮುಖವಾಗಿ ಚಲಿಸಿದ ಜೀಪು : ಹಿಂದೆ ನಿಂತಿದ್ದ ವ್ಯಕ್ತಿಗೆ ಜೀಪು ಡಿಕ್ಕಿ ಹೊಡೆದು ಮೃತ್ಯು

ಕಡಬ : ತಾಲೂಕಿನ ಬಿಳಿನೆಲೆ ಗ್ರಾಮದ ಕಚ್ಚಾ ಮಣ್ಣಿನ ರಸ್ತೆಯಲ್ಲಿ ಸಂಭವಿಸಿದ ದುರಂತದಲ್ಲಿ ಧರ್ಮಪಾಲ (68) ಎಂಬ ಹಿರಿಯ ವ್ಯಕ್ತಿ ಸಾವನ್ನಪ್ಪಿದ್ದಾರೆ. ಪೊಲೀಸ್ ಮಾಹಿತಿಯ ಪ್ರಕಾರ, ಮೃತರ ಮಗ ಏರು ರಸ್ತೆಯಲ್ಲಿ ಜೀಪು ಚಲಾಯಿಸುತ್ತಿದ್ದ ವೇಳೆ, ವಾಹನ ಮೇಲಕ್ಕೆ ಏರದ ಕಾರಣ ಧರ್ಮಪಾಲರು ಕೆಳಗೆ ಇಳಿದು ಹಿಂಬದಿ ನಿಂತಿದ್ದರು. ಈ ವೇಳೆ ಜೀಪು ಏಕಾಏಕಿ ಹಿಮ್ಮುಖವಾಗಿ ಚಲಿಸಿ ನಿಯಂತ್ರಣ ತಪ್ಪಿ ಅವರ ಮೇಲೆ ಮಗುಚಿ ಬಿದ್ದಿದೆ. ಗಂಭೀರ ಗಾಯಗೊಂಡ ಅವರನ್ನು ಸ್ಥಳೀಯರ ನೆರವಿನಿಂದ ಕಡಬ ಸರ್ಕಾರಿ ಆಸ್ಪತ್ರೆಗೆ

ಹಿಮ್ಮುಖವಾಗಿ ಚಲಿಸಿದ ಜೀಪು : ಹಿಂದೆ ನಿಂತಿದ್ದ ವ್ಯಕ್ತಿಗೆ ಜೀಪು ಡಿಕ್ಕಿ ಹೊಡೆದು ಮೃತ್ಯು Read More »

ತೋಡಿನಲ್ಲಿ ಮಹಿಳೆಯ ಶವ ಪತ್ತೆ

ಪುತ್ತೂರು : ತಾಲೂಕಿನ ಕೆದಿಲ ಸಮೀಪ ಕಾಂತಕೋಡಿ ಎಂಬಲ್ಲಿ ತೋಡಿನಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಮೃತ ಮಹಿಳೆಯನ್ನು ಕಾಂತಕೋಡಿ ನಿವಾಸಿ ರಾಮಣ್ಣ ಗೌಡ ಅವರ ಪತ್ನಿ ಮಮತಾ(35) ಎಂದು ಗರುತಿಸಲಾಗಿದೆ. ಸ್ಥಳಕ್ಕೆ ಪುತ್ತೂರು ನಗರ ಠಾಣಾ ಪೋಲಿಸರು ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ. ಸ್ಥಳೀಯರು ಕೊಲೆಯಾಗಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದು, ಪೋಲಿಸರ ತನಿಖೆಯ ಬಳಿಕವಷ್ಟೇ ನಿಖರ ಮಾಹಿತಿ ತಿಳಿಯಬೇಕಾಗಿದೆ.

ತೋಡಿನಲ್ಲಿ ಮಹಿಳೆಯ ಶವ ಪತ್ತೆ Read More »

ಕಾಡಾನೆ ದಾಳಿಗೆ ವೃದ್ಧ ಬಲಿ

ಮಡಿಕೇರಿ: ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾದ ಘಟನೆ ಬುಧವಾರ ತಡರಾತ್ರಿ ಮಡಿಕೇರಿ ತಾಲೂಕಿನ ಚೆಂಬು ಗ್ರಾಮದ ದಬ್ಬಡ್ಕ ಎಂಬಲ್ಲಿ ನಡೆದಿದೆ. ದಬ್ಬಡ್ಕ ಕೊಪ್ಪದ ಶಿವಪ್ಪ (72) ಆನೆ ತುಳಿತಕ್ಕೆ ಒಳಗಾಗಿ ಸಾವನ್ನಪ್ಪಿದ ವ್ಯಕ್ತಿ. ಶಿವಪ್ಪ ಅವರು ಬುಧವಾರ ರಾತ್ರಿ ಸುಮಾರು 10.30 ರ ಸಮಯ ಮನೆ ಬಳಿಯ ತೋಟದಲ್ಲಿ ನಾಯಿ ಬೊಗಳುತ್ತಿರುವುದನ್ನು ನೋಡಲು ತೋಟದ ಕಡೆಗೆ ಹೋದ ಸಂದರ್ಭ ಆನೆ ತುಳಿದಿದೆ. ತಕ್ಷಣ ಅವರನ್ನು ಮನೆಯವರು ಸಂಪಾಜೆ ಆಸ್ಪತ್ರೆಗೆ ಸಾಗಿಸುವ ಸಂದರ್ಭ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಕಾಡಾನೆ ದಾಳಿಗೆ ವೃದ್ಧ ಬಲಿ Read More »

ಪಶು ವೈದ್ಯೆ ಕೀರ್ತನಾ ಜೋಶಿ ಆತ್ಮಹತ್ಯೆ

ಪುತ್ತೂರು: ಇಲ್ಲಿನ ಬಪ್ಪಳಿಗೆ ನಿವಾಸಿ, ಚಾರ್ಟರ್ಡ್ ಅಕೌಂಟೆಂಟ್ ಗಣೇಶ್ ಜೋಶಿ ಅವರ ಪುತ್ರಿ ಕೀರ್ತನಾ ಜೋಶಿ (27 ವ.) ಅವರು ಸೋಮವಾರ ರಾತ್ರಿ ಮಂಗಳೂರಿನ ಸ್ವಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಕೀರ್ತನಾ ಜೋಶಿ ಅವರ ಮೃತದೇಹವನ್ನು ಪುತ್ತೂರಿನ ಮನೆಗೆ ತಂದು, ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಪಶುವೈದ್ಯಕೀಯದಲ್ಲಿ ಎಂ.ಡಿ. ಶಿಕ್ಷಣ ಪೂರೈಸಿರುವ ಡಾ. ಕೀರ್ತನಾ ಜೋಶಿ ಅವರು ಪುತ್ತೂರು, ಕೊಯಿಲ ಹಾಗೂ ಮಂಗಳೂರಿನಲ್ಲಿ ಖಾಸಗಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಅವರು ಸೋಮವಾರ ತಡರಾತ್ರಿ ಸ್ವಗೃಹದಲ್ಲಿ ನೇಣಿಗೆ ಕೊರಳೊಡ್ಡಿದ್ದಾರೆ ಎಂದು

ಪಶು ವೈದ್ಯೆ ಕೀರ್ತನಾ ಜೋಶಿ ಆತ್ಮಹತ್ಯೆ Read More »

ಕನ್ನಡದ ಯುವ ನಾಯಕ ನಟ ಸಂತೋಷ್ ಬಾಲರಾಜ್ ನಿಧನ

ಅನಾರೋಗ್ಯ ಉಲ್ಬಣಿಸಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ನಟ ಬೆಂಗಳೂರು : ಕನ್ನಡ ಚಿತ್ರರಂಗದ ಯುವ ನಾಯಕ ನಟ ಸಂತೋಷ್ ಬಾಲರಾಜ್ (34) ಇಂದು ನಿಧನ ಹೊಂದಿದ್ದಾರೆ. ಇಂದು ಬೆಳಗ್ಗೆ 9.30ರ ಸುಮಾರಿಗೆ ಕುಮಾರಸ್ವಾಮಿ ಲೇಔಟ್‌ನ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಹಿರಿಯ ನಿರ್ಮಾಪಕ ಆನೇಕಲ್ ಬಾಲರಾಜ್ ಅವರ ಪುತ್ರ ಸಂತೋಷ್ ಬಾಲರಾಜ್ ಕಳೆದ ತಿಂಗಳು ಜಾಂಡೀಸ್‌ನಿಂದಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಮತ್ತೆ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿ, ತೀವ್ರ ನಿಗಾ ಘಟಕದಲ್ಲಿದ್ದರು. ಜಾಂಡೀಸ್ ಉಲ್ಬಣಿಸಿ ಗಂಭೀರ ಸ್ಥಿತಿಯಲ್ಲಿ

ಕನ್ನಡದ ಯುವ ನಾಯಕ ನಟ ಸಂತೋಷ್ ಬಾಲರಾಜ್ ನಿಧನ Read More »

ಜಾರ್ಖಂಡ್‌ ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್‌ ನಿಧನ

ರಾಂಚಿ: ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಹಾಗೂ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಸ್ಥಾಪಕರಲ್ಲಿ ಒಬ್ಬರಾದ ಶಿಬು ಸೊರೇನ್‌ 81ನೇ ವಯಸ್ಸಿನಲ್ಲಿ ಇಂದು ವಿಧಿವಶರಾಗಿದ್ದಾರೆ. ಮೂತ್ರಪಿಂಡ ಸಂಬಂಧಿತ ಸಮಸ್ಯೆಯಿಂದ ಬಳಲುತ್ತಿದ್ದ ಸೊರೇನ್ ಅವರನ್ನ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಒಂದು ತಿಂಗಳಿಗೂ ಹೆಚ್ಚು ಸಮಯದಿಂದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯ ಪರಿಸ್ಥಿತಿ ಗಂಭೀರವಾಗಿದ್ದರಿಂದ ಇತ್ತೀಚೆಗೆ ವೆಂಟಿಲೇಟರ್‌ನಲ್ಲಿ ಇರಿಸಲಾಗಿತ್ತು ಎಂದು ತಿಳಿದುಬಂದಿದೆ. ತಂದೆಯ ನಿಧನದ ಮಾಹಿತಿಯನ್ನು ಪುತ್ರ, ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್ ಸೊರೇನ್‌ ತಮ್ಮ ಎಕ್ಸ್‌ ಪೋಸ್ಟ್‌ನಲ್ಲಿ ಹಂಚಿಕೊಂಡಿದ್ದಾರೆ.

ಜಾರ್ಖಂಡ್‌ ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್‌ ನಿಧನ Read More »

ಖ್ಯಾತ ಹಾಸ್ಯನಟ ಮದನ್‌ ಬಾಬು ನಿಧನ

ಕಮಲಹಾಸನ್‌, ರಜನಿಕಾಂತ್‌ರಂಥ ಸ್ಟಾರ್‌ ನಟರೊಂದಿಗೆ ಅಭಿನಯಿಸಿದ್ದ ಕಲಾವಿದ ಚೆನ್ನೈ: ತಮಿಳು ಚಿತ್ರರಂಗದ ಜನಪ್ರಿಯ ಹಾಸ್ಯನಟ ಮದನ್ ಬಾಬ್ (71) ಶನಿವಾರ ರಾತ್ರಿ ನಿಧನ ಹೊಂದಿದ್ದಾರೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ನಟ ಶನಿವಾರ ಸಂಜೆ ತನ್ನ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. 1984ರಲ್ಲಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದ ಮದನ್‌ ಬಾಬ್‌, ಕಮಲಹಾಸನ್, ರಜನಿಕಾಂತ್, ಅಜಿತ್ ಕುಮಾರ್‌, ಸೂರ್ಯ ಮತ್ತು ವಿಜಯ್ ಅವರಂತಹ ಸ್ಟಾರ್‌ ನಟರೊಂದಿಗೆ ಅಭಿನಯಿಸಿದ್ದಾರೆ. ಹಾಸ್ಯ, ಖಳನಾಯಕ ಸೇರಿದಂತೆ ಪ್ರಮುಖ ಪಾತ್ರಗಳಲ್ಲಿ ನಟಿಸಿ ರಂಜಿಸಿದ್ದರು. ಸುದೀರ್ಘ ವೃತ್ತಿಜೀವನದಲ್ಲಿ, ಅವರು 150ಕ್ಕೂ ಹೆಚ್ಚು

ಖ್ಯಾತ ಹಾಸ್ಯನಟ ಮದನ್‌ ಬಾಬು ನಿಧನ Read More »

ಕಡಬ: ನಾಪತ್ತೆಯಾದ ಆ್ಯಂಬುಲೆನ್ಸ್ ಚಾಲಕನ ಮೃತದೇಹ ಪತ್ತೆ

ಕಡಬ: ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಆ್ಯಂಬುಲೆನ್ಸ್ ಚಾಲಕ ಹೊನ್ನಪ್ಪ ದೇವರಗದ್ದೆ (52) ಎಂಬುವರು ಜುಲೈ 22ರಂದು ನಾಪತ್ತೆಯಾಗಿದ್ದು, ಶುಕ್ರವಾರ ಅವರ ಮೃತ ದೇಹ ಕುಮಾರಧಾರ ನದಿಯಲ್ಲಿ ಪತ್ತೆಯಾಗಿದೆ. ಈಶ್ವರ್ ಮಲ್ಪೆ ಹಾಗೂ ತಂಡದವರ ಮೂರು ದಿನದ ಕಾರ್ಯಾಚರಣೆಯ ಬಳಿಕ ಶವವನ್ನು ಮೇಲೆತ್ತಿದ್ದಾರೆ. ಈಶ್ವರ್ ಮಲ್ಪೆ ಜೊತೆಗೆ ಸುಳ್ಯದ ಪ್ರಗತಿ ಆ್ಯಂಬುಲೆನ್ಸ್ ಚಾಲಕ ಅಚ್ಚು ಪ್ರಗತಿ ಸೇರಿದಂತೆ ಸುಳ್ಯ ತಾಲೂಕು ಆ್ಯಂಬುಲೆನ್ಸ್ ಚಾಲಕ- ಮಾಲಕರು ಪಾಲ್ಗೊಂಡಿದ್ದರು.

ಕಡಬ: ನಾಪತ್ತೆಯಾದ ಆ್ಯಂಬುಲೆನ್ಸ್ ಚಾಲಕನ ಮೃತದೇಹ ಪತ್ತೆ Read More »

error: Content is protected !!
Scroll to Top