ನಿಧನ

ತುಳು ರಂಗಭೂಮಿಯ ಹಿರಿಯ ಕಲಾವಿದ ಚಿ.ರಮೇಶ್ ಕಲ್ಲಡ್ಕ ನಿಧನ

20 ವರ್ಷಗಳಿಂದ ಕಲಾಸಂಗಮ ತಂಡದಲ್ಲಿ ಬಣ್ಣ ಹಚ್ಚುತ್ತಿದ್ದ ಕಲಾವಿದ ಬಂಟ್ವಾಳ: ತುಳು ರಂಗಭೂಮಿಯ ಹಿರಿಯ ಕಲಾವಿದ, ಚಲನಚಿತ್ರ ನಟ ಚಿ.ರಮೇಶ್ ಕಲ್ಲಡ್ಕ (68) ಹೃದಯಾಘಾತದಿಂದ ಬುಧವಾರ ಬೆಳಗ್ಗೆ ಕಲ್ಲಡ್ಕದ ಕೊಳಕೀರುವಿನಲ್ಲಿರುವ ಮನೆಯಲ್ಲಿ ನಿಧನ ಹೊಂದಿದ್ದಾರೆ. ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ. ರಂಗಭೂಮಿಯಲ್ಲಿ 30 ವರ್ಷಗಳಿಗೂ ಹೆಚ್ಚು ಕಾಲ ಕಲಾಸೇವೆಗೈದಿರುವ ರಮೇಶ್ ಕಲ್ಲಡ್ಕ ಕಳೆದ 20 ವರ್ಷಗಳಿಂದ ವಿಜಯಕುಮಾರ್ ಕೊಡಿಯಾಲಬೈಲ್ ಅವರ ಕಲಾಸಂಗಮ ತಂಡದಲ್ಲಿ ಕಲಾಸೇವೆ ಮಾಡುತ್ತಿದ್ದರು. ವಿಜಯಕುಮಾರ್ ಕೊಡಿಯಾಲಬೈಲ್ ಅವರಿಂದ ತರಬೇತಿ ಪಡೆದ ರಮೇಶ್ ಕಲ್ಲಡ್ಕ ಕಲಾಸಂಗಮದ […]

ತುಳು ರಂಗಭೂಮಿಯ ಹಿರಿಯ ಕಲಾವಿದ ಚಿ.ರಮೇಶ್ ಕಲ್ಲಡ್ಕ ನಿಧನ Read More »

ಆರ್ಯಾಪು ನಿವಾಸಿ ವಿಶ್ವನಾಥ ನಾಯ್ಕ ನಿಧನ

ಪುತ್ತೂರು: ತಾಲೂಕಿನ ಆರ್ಯಾಪು ಗ್ರಾಮದ ಮೇಗಿನ‌ ಪಂಜ ನಿವಾಸಿ, ಅರ್ಯಾಪು ಗ್ರಾಪಂನ ಮಾಜಿ ಅಧ್ಯಕ್ಷೆ ಸರಸ್ವತಿ ಅವರ ಪತಿ ವಿಶ್ವನಾಥ ನಾಯ್ಕ(42) ಅವರು ಸೋಮವಾರ ಬೆಳಗ್ಗೆ ನಿಧನರಾದರು. ಕೂಲಿ ಕಾರ್ಮಿಕರಾಗಿದ್ದ ವಿಶ್ವನಾಥ ಅವರು ಭಾನುವಾರ ಸಂಜೆ ಅಸ್ವಸ್ಥತೆಗೆ ಒಳಗಾಗಿದ್ದರು. ಅವರನ್ನು ಚಿಕಿತ್ಸೆಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಬೆಳಗ್ಗೆ ಅವರು ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತ್ನಿ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ.

ಆರ್ಯಾಪು ನಿವಾಸಿ ವಿಶ್ವನಾಥ ನಾಯ್ಕ ನಿಧನ Read More »

ಯಕ್ಷರಂಗದ ಪ್ರಸಿದ್ಧ ಬಣ್ಣದ ವೇಷಧಾರಿ ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರ್ ಇನ್ನಿಲ್ಲ

ಬಂಟ್ವಾಳ: ತಾಲೂಕಿನ ಮಂಚಕಲ್ಲು ‌ನಿವಾಸಿ, ಹಿರಿಯ ಯಕ್ಷಗಾನ ಕಲಾವಿದ, ಪ್ರಸಿದ್ಧ ಬಣ್ಣದ ವೇಷಧಾರಿ ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರ್ (60) ಅವರು ಇಂದು ಮದ್ಯಾಹ್ನ ಇಹಲೋಕ ತ್ಯಜಿಸಿದ್ದಾರೆ. ಹನುಮಗಿರಿ ಮೇಳದಲ್ಲಿ ಇತ್ತೀಚೆಗಿನ ವರೆಗೆ ಬಣ್ಣದ ವೇಷಧಾರಿಯಾಗಿ ಪಾತ್ರ ನಿರ್ವಹಿಸುತ್ತಿದ್ದ ಸದಾಶಿವ ಶೆಟ್ಟಿಗಾರರು, ಸುಮಾರು ಮೂರು ದಶಕಗಳಿಗೂ ಹೆಚ್ಚಿನ ಕಾಲ ಯಕ್ಷಗಾನ ರಂಗಕ್ಕೆ ಸೇವೆ ಸಲ್ಲಿಸಿದವರು. ರೆಂಜಾಳ ರಾಮಕೃಷ್ಣ ರಾವ್, ಬಣ್ಣದ ಮಾಲಿಂಗ ಮೊದಲಾದ ದಿಗ್ಗಜರಲ್ಲಿ ಯಕ್ಷಗಾನ ನಾಟ್ಯಾಭ್ಯಾಸ ಮಾಡಿದವರು. ಕಟೀಲು, ಧರ್ಮಸ್ಥಳ, ಹೊಸನಗರ, ಎಡನೀರು, ಹನುಮಗಿರಿ ಮೇಳಗಳಲ್ಲಿ ಸುಮಾರು

ಯಕ್ಷರಂಗದ ಪ್ರಸಿದ್ಧ ಬಣ್ಣದ ವೇಷಧಾರಿ ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರ್ ಇನ್ನಿಲ್ಲ Read More »

ಹಿರಿಯ ಯಕ್ಷಗಾನ ಕಲಾವಿದ ಪಾತಾಳ ವೆಂಕಟರಮಣ ಭಟ್ ಇನ್ನಿಲ್ಲ

ಪುತ್ತೂರು: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಯಕ್ಷಗಾನ ಕಲಾವಿದ ಪಾತಾಳ ವೆಂಕಟರಮಣ ಭಟ್ ಅವರು ಇಂದು ಉಪ್ಪಿನಂಗಡಿಯ ‌ತಮ್ಮ ಸ್ವಗೃಹದಲ್ಲಿ ನಿಧನರಾದರು. ಇವರಿಗೆ 92 ವರ್ಷಗಳಾಗಿತ್ತು. ತೆಂಕು ಮತ್ತು ಬಡಗುತಿಟ್ಟು‌ಗಳೆರಡರಲ್ಲೂ ಅಗ್ರಮಾನ್ಯ ವೇಷಗಳನ್ನು ‌ಮಾಡಿ ಹೆಸರುವಾಸಿಯಾದವರು. ಮುಲ್ಕಿ, ಸೌಕೂರು, ಸುರತ್ಕಲ್ ಮೇಳಗಳು, ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಯಕ್ಷಗಾನ ಮಂಡಳಿಗಳಲ್ಲಿ ತಿರುಗಾಟ ನಡೆಸಿದ್ದರು. ಬೇಲೂರಿನ ಶಿಲಾ ಬಾಲಿಕೆಯರ ಅಂಗಭಂಗಿಗಳನ್ನು ಬೇಲೂರಿಗೆ ಹೋಗಿ ಸ್ವತಃ ಅಭ್ಯಸಿಸಿ ಯಕ್ಷಗಾನದಲ್ಲಿ ಅಳವಡಿಸಿದವರು. ಇವರ ತಂದೆ ಪುತ್ತೂರಿನ ಸಮೀಪದ ಬೈಪದವಿನ ರಾಮ ಭಟ್ಟ, ತಾಯಿ

ಹಿರಿಯ ಯಕ್ಷಗಾನ ಕಲಾವಿದ ಪಾತಾಳ ವೆಂಕಟರಮಣ ಭಟ್ ಇನ್ನಿಲ್ಲ Read More »

ತೆಲುಗಿನ ಖ್ಯಾತ ನಟ ಫಿಶ್‌ ವೆಂಕಟ್‌ ನಿಧನ

ಎಲ್ಲ ಸ್ಟಾರ್‌ ನಟರೊಂದಿಗೆ ಅಭಿನಯಿಸಿದ್ದ ಹಾಸ್ಯ ನಟ ಹೈದರಾಬಾದ್: ಕೋಟ ಶ್ರೀನಿವಾಸ್ ರಾವ್ ನಿಧನ ಬೆನ್ನಲ್ಲೇ ತೆಲುಗು ಚಿತ್ರರಂಗಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಖ್ಯಾತ ಹಾಸ್ಯ ನಟ ಫಿಶ್ ವೆಂಕಟ್ (53) ಶನಿವಾರ ನಿಧನರಾಗಿದ್ದಾರೆ. ತೆಲುಗು ಚಿತ್ರರಂಗದಲ್ಲಿ ಹಾಸ್ಯ ನಟನಾಗಿ ತಮ್ಮದೇ ಆದ ಛಾಪು ಮೂಡಿಸಿದ್ದ ಫಿಶ್ ವೆಂಕಟ್ ಅನಾರೋಗ್ಯದ ಕಾರಣದಿಂದಾಗಿ ಕೊನೆಯುಸಿರೆಳೆದಿದ್ದಾರೆ. ಫಿಶ್ ವೆಂಕಟ್ ಟಾಲಿವುಡ್‌ನಲ್ಲಿ ಹಲವು ಚಿತ್ರಗಳಲ್ಲಿ ಖಳ ನಟನಾಗಿ, ಹಾಸ್ಯ ನಟನಾಗಿ ನಟಿಸಿದ್ದರು. ಅನಾರೋಗ್ಯ ಕಾರಣದಿಂದಾಗಿ ಕಳೆದ ಕೆಲವು ಕಾಲದಿಂದ ಸಿನಿಮಾಗಳಿಂದ ದೂರ

ತೆಲುಗಿನ ಖ್ಯಾತ ನಟ ಫಿಶ್‌ ವೆಂಕಟ್‌ ನಿಧನ Read More »

ಶಾಸಕ ಸುನಿಲ್‌ ಕುಮಾರ್‌ಗೆ ಪಿತೃ ವಿಯೋಗ

ಕಾರ್ಕಳ : ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಅವರ ತಂದೆ ಎಂ.ಕೆ. ವಾಸುದೇವ (87) ಇಂದು ಮುಂಜಾನೆ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಇಂದು ಮುಂಜಾನೆ ನಿಧನರಾಗಿದ್ದಾರೆ. ಜು.17ರಂದು ಮಧ್ಯಾಹ್ನ 12 ಗಂಟೆಗೆ ಶಾಸಕರ ಸ್ವಗೃಹಕ್ಕೆ ಪಾರ್ಥೀವ ಶರೀರ ತರಲಾಗುವುದು. ಸಂಜೆ ನಾಲ್ಕು ಗಂಟೆಗೆ ಅಂತಿಮ ವಿಧಿವಿಧಾನ ನಡೆಯಲಿದೆ. ಮೃತರು ಪತ್ನಿ, ಮಗ ಮತ್ತು ಮಗಳನ್ನು ಅಗಲಿದ್ದಾರೆ.

ಶಾಸಕ ಸುನಿಲ್‌ ಕುಮಾರ್‌ಗೆ ಪಿತೃ ವಿಯೋಗ Read More »

ಜಾರ್ಖಂಡ್‌: ಭದ್ರತಾ ಪಡೆಗಳ ಗುಂಡಿಗೆ ಇಬ್ಬರು ನಕ್ಸಲರ ಖತಂ, ಓರ್ವ ಯೋಧ ಹುತಾತ್ಮ

ನವದೆಹಲಿ: ಜಾರ್ಖಂಡ್ ರಾಜ್ಯದ ಬೊಕಾರೋ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ನಕ್ಸಲರನ್ನು ಯಮಪುರಿಗೆ ಅಟ್ಟಲಾಗಿದೆ. ಈ ಸಂದರ್ಭದಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆ. ಭದ್ರತಾ ಪಡೆಗಳು ಬಿರ್ಹೊರ್ಡೆರಾ ಅರಣ್ಯ ಪ್ರದೇಶದಲ್ಲಿ ನಕ್ಸಲ್ ನಿಗ್ರಹ ಕಾರ್ಯಾಚರಣೆ ನಡೆಸಿದ್ದು, ಈವೇಳೆ ಯೋಧರು ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ. ಘಟನೆಯಲ್ಲಿ ಸಿಆರ್‌ಪಿಎಫ್ ಯೋಧರೊಬ್ಬರು ಹುತಾತ್ಮರಾಗಿದ್ದು, ಇಬ್ಬರು ಮಾವೋವಾದಿಗಳನ್ನು ಹತ್ಯೆ ಮಾಡಿರುವುದಾಗಿ ‌ಮೂಲಗಳು ಮಾಹಿತಿ ನೀಡಿವೆ. ಪ್ರದೇಶದಲ್ಲಿ ಕಾರ್ಯಾಚರಣೆ ಮುಂದುವರಿದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಜಾರ್ಖಂಡ್‌: ಭದ್ರತಾ ಪಡೆಗಳ ಗುಂಡಿಗೆ ಇಬ್ಬರು ನಕ್ಸಲರ ಖತಂ, ಓರ್ವ ಯೋಧ ಹುತಾತ್ಮ Read More »

ಅಪರಿಚಿತ ವಾಹನ ಢಿಕ್ಕಿ ಹೊಡೆದು ಹಿರಿಯ ಮ್ಯಾರಥಾನ್ ಓಟಗಾರ ಫೌಜಾ ಸಿಂಗ್ ನಿಧನ

ಜಲಂಧರ್: ಹಿರಿಯ ಮ್ಯಾರಥಾನ್ ಓಟಗಾರ ಫೌಜಾ ಸಿಂಗ್ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿದ್ದಾರೆ. ಜಲಂಧರ್‌ನ ತಮ್ಮ ಮನೆಯ ಸಮೀಪ ಸೋಮವಾರ ಸಂಜೆ ವಾಕಿಂಗ್ ಮಾಡುತ್ತಿದ್ದ ವೇಳೆ ಅಪರಿಚಿತ ಕಾರೊಂದು ಫೌಜಾ ಸಿಂಗ್ ಅವರಿಗೆ ಢಿಕ್ಕಿ ಹೊಡೆದಿದೆ. ಈ ಅಪಘಾತದಿಂತ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವುದಾಗಿದೆ. ಸಿಂಗ್ ಅವರು 2000 ನೇ ಇಸವಿಯಲ್ಲಿ ಮ್ಯಾರಥಾನ್ ಪಯಣವನ್ನು ಆರಂಭಿಸಿದ್ದರು. ಅಂತಿಮವಾಗಿ ಎಂಟು ರೇಸ್‌ಗಳಲ್ಲಿ ಅವರು ಭಾಗವಹಿಸಿದ್ದರು. ಟೊರೆಂಟೋ ಮ್ಯಾರಥಾನ್‌ನಲ್ಲಿ 2011 ರಲ್ಲಿ ಭಾಗವಹಿಸಿದ

ಅಪರಿಚಿತ ವಾಹನ ಢಿಕ್ಕಿ ಹೊಡೆದು ಹಿರಿಯ ಮ್ಯಾರಥಾನ್ ಓಟಗಾರ ಫೌಜಾ ಸಿಂಗ್ ನಿಧನ Read More »

ಬನ್ನೂರು ನಿವಾಸಿ ಸೀತಾರಾಮ ಶೆಟ್ಟಿ ನಿಧನ

ಪುತ್ತೂರು: ಬನ್ನೂರು ನಿವಾಸಿ ಸೀತಾರಾಮ ಶೆಟ್ಟಿ (65) ಅವರು ಮಂಗಳವಾರ ಮಧ್ಯಾಹ್ನ ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಅಪ್ಪಟ ಕನ್ನಡ ಪ್ರೇಮಿಯಾಗಿದ್ದ ಇವರು, ಪ್ರತಿವರ್ಷ ಕನ್ನಡ ರಾಜ್ಯೋತ್ಸವದಂದು ಕನ್ನಡ ಧ್ವಜ ವಿತರಿಸುತ್ತಿದ್ದರು. ಕನ್ನಡದ ಎಲ್ಲಾ ಕಾರ್ಯಕ್ರಮಗಳಲ್ಲೂ ಭಾಗವಹಿಸುತ್ತಿದ್ದರು. ಯಕ್ಷಗಾನ ಪ್ರೇಮಿಯೂ ಆಗಿದ್ದರು. ದಿ. ಚಿದಾನಂದ ಕಾಮತ್ ಕಾಸರಗೋಡು ಅವರ ಸಾಂಸ್ಕೃತಿಕ ಕಲಾಕೇಂದ್ರದ ಎಲ್ಲಾ ಕನ್ನಡ ಕಾರ್ಯಕ್ರಮಗಳಲ್ಲಿ ಸಕ್ರೀಯರಾಗಿದ್ದರು. ಮೃತರರು ಇಬ್ಬರು ಪುತ್ರರು, ಓರ್ವ ಪುತ್ರಿ, ಸೊಸೆಯಂದಿರು, ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಬನ್ನೂರು ನಿವಾಸಿ ಸೀತಾರಾಮ ಶೆಟ್ಟಿ ನಿಧನ Read More »

ಹಿರಿಯ ನಟಿ, ‘ಅಭಿನಯ ಸರಸ್ವತಿ’ ಖ್ಯಾತಿಯ ಬಿ.ಸರೋಜಾದೇವಿ ನಿಧನ

ಬೆಂಗಳೂರು: ಹಿರಿಯ ನಟಿ ಬಿ. ಸರೋಜಾದೇವಿ ಅವರು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾದರು.  ವಯೋಸಹಜ ಕಾಯಿಲೆಯಿಂದ ಕೊನೆಯುಸಿರೆಳೆದರು ಎಂದು ತಿಳಿದುಬಂದಿದೆ.  ಅವರ ನಿಧನಕ್ಕೆ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ. ಸರೋಜಾ ದೇವಿ ಅವರು ಕನ್ನಡ ಚಿತ್ರರಂಗದ ಪ್ರಮುಖ ನಟಿಯರಲ್ಲಿ ಒಬ್ಬರಾಗಿದ್ದರು ಮತ್ತು ʼಅಭಿನಯ ಸರಸ್ವತಿʼ ಎಂಬ ಹೆಸರಿನಿಂದ ಖ್ಯಾತರಾಗಿದ್ದರು. ಅವರು 6 ದಶಕಗಳಿಗೂ ಹೆಚ್ಚು ಕಾಲ ಕನ್ನಡ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ್ದರು. 

ಹಿರಿಯ ನಟಿ, ‘ಅಭಿನಯ ಸರಸ್ವತಿ’ ಖ್ಯಾತಿಯ ಬಿ.ಸರೋಜಾದೇವಿ ನಿಧನ Read More »

error: Content is protected !!
Scroll to Top