ನಿಧನ

ಮಕ್ಕಳಿಗೆ ಗೂಡ್ಸ್‌ ವಾಹನ ಡಿಕ್ಕಿ : ಇಬ್ಬರು ಸಾವು

ಟ್ಯೂಷನ್‌ ಮುಗಿಸಿ ವಾಪಸಾಗುತ್ತಿದ್ದ ಮಕ್ಕಳಿಗೆ ಡಿಕ್ಕಿ ಹೊಡೆದ ವಾಹನ ಬೆಂಗಳೂರು: ಟ್ಯೂಷನ್ ಮುಗಿಸಿ ಮನೆಗೆ ವಾಪಸಾಗುತ್ತಿದ್ದ ಮಕ್ಕಳ ಮೇಲೆ ಗೂಡ್ಸ್ ವಾಹನ ಹರಿದು ಇಬ್ಬರು ಮಕ್ಕಳು ಸಾವನ್ನಪ್ಪಿದ ದಾರುಣ ಘಟನೆ ನಿನ್ನೆ ರಾತ್ರಿ ರಾಮನಗರದಲ್ಲಿ ಸಂಭವಿಸಿದೆ. ರಾಮನಗರ ತಾಲ್ಲೂಕಿನ ಮಾಗಡಿ ರಸ್ತೆಯ ಗೊಲ್ಲರದೊಡ್ಡಿ ಗ್ರಾಮದಲ್ಲಿ ಬುಧವಾರ ರಾತ್ರಿ ಟ್ಯೂಷನ್ ಮುಗಿಸಿಕೊಂಡು ಮನೆಗೆ ವಾಪಸ್ಸಾಗುತ್ತಿದ್ದ ಐವರು ಮಕ್ಕಳ ಮೇಲೆ ಟಾಟಾ ಏಸ್ ಗೂಡ್ಸ್‌ ವಾಹನ ಹರಿದ ಪರಿಣಾಮ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. 7 ಮಂದಿಗೆ ಗಂಭೀರ ಗಾಯಗಳಾಗಿವೆ. 12 […]

ಮಕ್ಕಳಿಗೆ ಗೂಡ್ಸ್‌ ವಾಹನ ಡಿಕ್ಕಿ : ಇಬ್ಬರು ಸಾವು Read More »

ಸ್ಪಂದನಾ ಅವರ ಪಾರ್ಥೀವ ಶರೀರ ಬೆಂಗಳೂರಿಗೆ | ಇಂದು ಹರಿಶ್ಚಂದ್ರಘಾಟ್ ನಲ್ಲಿ ಅಂತ್ಯಸಂಸ್ಕಾರ

ಬೆಂಗಳೂರು: ಬ್ಯಾಂಕಾಕ್‌ನಲ್ಲಿ ಅಕಾಲಿಕ ಮರಣಕ್ಕೀಡಾದ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಅಂತ್ಯಸಂಸ್ಕಾರ ಇಂದು (ಬುಧವಾರ) ಅಪರಾಹ್ನ ಬೆಂಗಳೂರಿನ ಶ್ರೀರಾಂಪುರದಲ್ಲಿರುವ ಹರಿಶ್ಚಂದ್ರಘಾಟ್‌ನಲ್ಲಿ ನಡೆಯಲಿದೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ. ಪೂರ್ವಾಹ್ನ ಮಲ್ಲೇಶ್ವರಂನಲ್ಲಿರುವ ಸ್ಪಂದನಾ ತಂದೆ ನಿವೃತ್ತ ಐಪಿಎಸ್‌ ಅಧಿಕಾರಿ ಬಿ.ಕೆ. ಶಿವರಾಮ್‌ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ಏರ್ಪಾಡು ಮಾಡಲಾಗಿದೆ. ಮಂಗಳವಾರ ರಾತ್ರಿಯೇ ಪ್ರಕ್ರಿಯೆಗಳನ್ನೆಲ್ಲಾ ಪೂರೈಸಿ ಥಾಯ್ಲೆಂಡ್‌ ಏರ್‌ಲೈನ್ಸ್‌ನ ವಿಶೇಷ ವಿಮಾನದ ಮೂಲಕ ಸ್ಪಂದನಾ ಮೃತದೇಹವನ್ನು ಬೆಂಗಳೂರಿಗೆ ತರಲಾಗಿದೆ. ಥಾಯ್ಲೆಂಡ್‌ನಲ್ಲಿದ್ದ ವಿಜಯ ರಾಘವೇಂದ್ರ, ಬಿ.ಕೆ.

ಸ್ಪಂದನಾ ಅವರ ಪಾರ್ಥೀವ ಶರೀರ ಬೆಂಗಳೂರಿಗೆ | ಇಂದು ಹರಿಶ್ಚಂದ್ರಘಾಟ್ ನಲ್ಲಿ ಅಂತ್ಯಸಂಸ್ಕಾರ Read More »

ದಿನೇಶ್ ಪೆರಿಯಡ್ಕ ನಿಧನ

ಪುತ್ತೂರು: ಹಿಂದೂ ಜಾಗರಣ ವೇದಿಕೆ ಸವಣೂರು ಘಟಕದ ಕಾರ್ಯಕರ್ತ ದಿನೇಶ್ ಪೆರಿಯಡ್ಕ (34) ಅನಾರೋಗ್ಯದಿಂದ ಮಂಗಳವಾರ ನಿಧನರಾಗಿದ್ದಾರೆ. ಮೃತರು ವೃತ್ತಿಯಲ್ಲಿ ಇಲೆಕ್ಟ್ರೀಷಿಯನ್ ಆಗಿದ್ದರು. ಅವರು ತಂದೆ, ತಾಯಿ, ಪತ್ನಿ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ದಿನೇಶ್ ಪೆರಿಯಡ್ಕ ನಿಧನ Read More »

ಇಂದು ರಾತ್ರಿ 11 ಗಂಟೆಗೆ ಸ್ಪಂದನಾ ಪಾರ್ಥೀವ ಶರೀರ ಬೆಂಗಳೂರಿಗೆ | ನಾಳೆ ಅಂತ್ಯ ಸಂಸ್ಕಾರ

ಬೆಂಗಳೂರು: ಥೈಲಾಂಡ್ ನಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಪಾರ್ಥೀವ ಶರೀರ ಇಂದು ರಾತ್ರಿ 11 ಗಂಟೆ ಸುಮಾರಿಗೆ ಬೆಂಗಳೂರಿಗೆ ಆಗಮಿಸಲಿದೆ. ನಾಳೆ (ಬುಧವಾರ) ಮಧ್ಯಾಹ್ನ 12 ಗಂಟೆ ವರೆಗೆ ಮಲ್ಲೇಶ್ವರಂನಲ್ಲಿರುವ ಸ್ಪಂದನಾ ಅವರ ತಂದೆ ಬಿ.ಕೆ.ಶಿವರಾಂ ಮನೆ ಮುಂದೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ ಬೆಂಗಳೂರಿನ ಹರಿಶ್ಚಂದ್ರ ಘಾಟ್ ನಲ್ಲಿ ಅಂತ್ಯ ಸಂಸ್ಕಾರ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ. ಈಗಾಗಲೇ ಥೈಲಾಂಡ್ ನಲ್ಲಿ

ಇಂದು ರಾತ್ರಿ 11 ಗಂಟೆಗೆ ಸ್ಪಂದನಾ ಪಾರ್ಥೀವ ಶರೀರ ಬೆಂಗಳೂರಿಗೆ | ನಾಳೆ ಅಂತ್ಯ ಸಂಸ್ಕಾರ Read More »

ಪಣೆಜಾಲು ನಿವಾಸಿ ಪ್ರವೀಣ್ ಪ್ರಭು ನಿಧನ

ಗುರುವಾಯನಕೆರೆ: ಇಲ್ಲಿಯ ಪಣೆಜಾಲು ನಿವಾಸಿ ಪ್ರವೀಣ್ ಪ್ರಭು (34) ರವರು ಅಲ್ಪ ಕಾಲದ ಅಸೌಖ್ಯದಿಂದ ಆ.7 ರಂದು ನಿಧನರಾದರು.   ಅವರು ಬೆಳ್ತಂಗಡಿ ಬಾಳಿಗ ಜುವೆಲ್ಲರ್ ನಲ್ಲಿ 15 ವರ್ಷಗಳ ಕಾಲ ಕೆಲಸ ಮಾಡುತ್ತಿದ್ದರು. ಮೃತರು ತಾಯಿ, ಪತ್ನಿ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಮೃತರು ಪುತ್ತೂರು ತಾಲೂಕಿನ ಪುರುಷರಕಟ್ಟೆಯ ಶೆಟ್ಟಿಮಜಲಿನಲ್ಲಿ ಹಲವು ವರ್ಷಗಳ ಕಾಲ ವಾಸವಾಗಿದ್ದರು.

ಪಣೆಜಾಲು ನಿವಾಸಿ ಪ್ರವೀಣ್ ಪ್ರಭು ನಿಧನ Read More »

ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ನಿಧನ

ಬೆಂಗಳೂರು:ಸ್ಯಾಂಡಲ್‌ವುಡ್ ನಟ ಚಿನ್ನಾರಿ ಮುತ್ತ ಎಂಬ ಖ್ಯಾತಿ ಹೊಂದಿರುವ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ವಿಜಯರಾಘವೇಂದ್ರ ಅವರು ಹೃದಯಾಘಾತದಿಂದ(spandana passed away) ನಿಧನ ಹೊಂದಿದ್ದಾರೆ. ಸ್ಪಂದನಾ ತಮ್ಮ ಪತಿ ವಿಜಯ ರಾಘವೇಂದ್ರ ನಟಿಸಿ ನಿರ್ಮಿಸುತ್ತಿರುವ `ಕಿಸ್ಕತ್’ ಚಿತ್ರವನ್ನು ನಿರ್ಮಾಣ ಕೂಡ ಮಾಡಿದ್ದಾರೆ.ಈ ದಂಪತಿಗೆ ಶೌರ್ಯ ಎಂಬ ಓರ್ವ ಪುತ್ರನಿದ್ದಾನೆ. ಸ್ಯಾಂಡಲ್‌ವುಡ್ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ವಿಜಯರಾಘವೇಂದ್ರ ಅವರು ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. ಬ್ಯಾಂಕಾಕ್ ನಲ್ಲಿ ಹಾರ್ಟ್ ಅಟ್ಯಾಕ್ ಆಗಿ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ. ರಾಘವೇಂದ್ರ 2007,

ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ನಿಧನ Read More »

ಕೆ.ನಾರಾಯಣ ಶೆಟ್ಟಿ ನಿಧನ

ಪುತ್ತೂರು: ಪುತ್ತೂರು ನಗರದ ಜನತಾ ಕಬ್ಬಿನ ಹಾಲು ಅಂಗಡಿ ಮಾಲಕ ಕೆ.ನಾರಾಯಣ ಶೆಟ್ಟಿ ಭಾನುವಾರ ಸ್ವಗೃಹದಲ್ಲಿ ನಿಧನರಾದರು. ಮೃತರು ಪುತ್ತೂರು ಹಳೆ ಪೊಲೀಸ್ ಸ್ಟೇಷನ್ ಕಟ್ಟಡದ ಬಳಿಯ ಕಟ್ಟಡದಲ್ಲಿ ಕಳೆದ ಹಲವಾರು ವರ್ಷಗಳಿಂದ ಕಬ್ಬಿನ ಹಾಲಿನ ಅಂಗಡಿ ನಡೆಸುತ್ತಿದ್ದರು. ಪುತ್ತೂರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪಂಚವಟಿ ಬಳಿಯ ನಿವಾಸಿಯಾಗಿರುವ ಮೃತರು ಜನಸಂಘದ ಕಾರ್ಯಕರ್ತರಾಗಿದ್ದು, ತುರ್ತು ಸಂದರ್ಭದಲ್ಲಿ ಜೈಲು ಸೇರಿದ್ದರು. ಪುತ್ತೂರು ಪುರಸಭೆಯ ಮಾಜಿ ಸದಸ್ಯರಾಗಿದ್ದು, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದ ಶ್ರೀ ಗಣೇಶೋತ್ಸವ ಸಮಿತಿ ಆರಂಭದ

ಕೆ.ನಾರಾಯಣ ಶೆಟ್ಟಿ ನಿಧನ Read More »

ವಿಶ್ವದ ಅತ್ಯಂತ ಹಿರಿಯ ವ್ಯಕ್ತಿ ಜೋಸ್ ಪಾಲಿನೊ ಗೋಮ್ಸ್ ನಿಧನ

ಬ್ರೆಜಿಲ್ : ವಿಶ್ವದ ಅತ್ಯಂತ ಹಿರಿಯ ವ್ಯಕ್ತಿ ಎನ್ನಲಾದ ಬ್ರೆಜಿಲ್ ಮೂಲದ ಜೋಸ್ ಪಾಲಿನೊ ಗೋಮ್ಸ್ (127) ತಮ್ಮ ನಿವಾಸ ಪೆಡ್ರಾಬೊನಿಟಾದಲ್ಲಿ ನಿಧನರಾಗಿದ್ದಾರೆ ಎಂದು ನ್ಯೂಯಾರ್ಕ್ ಪೋಸ್ಟ್ ವರದಿ ಮಾಡಿದೆ. ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಗೋಮ್ಸ್ ಬದುಕಿದ್ದರೆ ಆ.4 ರಂದು ತನ್ನ ಹುಟ್ಟುಹಬ್ಬ ಆಚರಿಸುವುದರಲ್ಲಿದ್ದರು ಎಂದು ಅವರ ಕುಟುಂಬ ತಿಳಿಸಿದೆ. ಗೋಮ್ಸ್ ಮದುವೆಯ ಪ್ರಮಾಣ ಪತ್ರದ ಪ್ರಕಾರ ಆ.4, 1895 ರಲ್ಲಿ ಜನಿಸಿದ್ದರು. ತನ್ನ ಜೀವಿತಾವಧಿಯಲ್ಲಿ ಮಹಾಯುದ್ಧ ಮತ್ತು ಕೋವಿಡ್ ಎರಡನ್ನೂ ಕಣ್ಣಾರೆ ಕಂಡ ವ್ಯಕ್ತಿ

ವಿಶ್ವದ ಅತ್ಯಂತ ಹಿರಿಯ ವ್ಯಕ್ತಿ ಜೋಸ್ ಪಾಲಿನೊ ಗೋಮ್ಸ್ ನಿಧನ Read More »

ಕೊಳ್ತಿಗೆ ಶಾಲಾ ನಿವೃತ್ತ ಮುಖ್ಯ ಶಿಕ್ಷಕ ನಾರಾಯಣ ರೈ ನಿಧನ

ಪುತ್ತೂರು: ಕೊಳ್ತಿಗೆ ಸರಕಾರಿ ಹಿ.ಪ್ರಾ. ಶಾಲೆಯ ವಿಶ್ರಾಂತ ಮುಖ್ಯ ಶಿಕ್ಷಕ, ಕೊಳ್ತಿಗೆ ಕೆಳಗಿನ ಮನೆಯ ತರವಾಡ್ ಯಜಮಾನ ನಾರಾಯಣ ರೈ (90) ಗುರುವಾರ ಮಧ್ಯಾಹ್ನ ನಿಧನರಾದರು. ಮುರುಳ್ಯ, ಕೊಳ್ತಿಗೆ ಶಾಲೆಯಲ್ಲಿ ಶಿಕ್ಷಕರಾಗಿ, ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದು, ಅವರ ಅವಧಿಯಲ್ಲಿ ಶಾಲೆ ಶೈಕ್ಷಣಿಕವಾಗಿ ಪ್ರಗತಿ ಹೊಂದಿತ್ತು. ಮೃತರು ಮಕ್ಕಳು, ಸೊಸೆಯಂದಿರು, ಸಹೋದರ, ಮೊಮ್ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಕೊಳ್ತಿಗೆ ಶಾಲಾ ನಿವೃತ್ತ ಮುಖ್ಯ ಶಿಕ್ಷಕ ನಾರಾಯಣ ರೈ ನಿಧನ Read More »

ಹಿರಿಯ ನಟಿ ರಂಗಭೂಮಿ ಕಲಾವಿದೆ ಮಮತಾ ಗೂಡೂರ ಅವರು ವಿಧಿವಶ

ಬಾಗಲಕೋಟೆ: ಹಿರಿಯ ನಟಿ ರಂಗಭೂಮಿ ಕಲಾವಿದೆ ಮಮತಾ ಗೂಡೂರ ಅವರು ವಿಧಿವಶರಾಗಿದ್ದಾರೆ. ಮೆದುಳಿನಲ್ಲಿ ರಕ್ತಸ್ರಾವ ಉಂಟಾಗಿ, ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದ ಮಮತಾ ಅವರು ಇಂದು ಬೆಳಿಗ್ಗೆ 7 ಗಂಟೆ ಸುಮಾರಿಗೆ ಬಾಗಲಕೋಟೆಯ ಇಳಕಲ್ ತಾಲ್ಲೂಕಿನ ಗುಡೂರ ಗ್ರಾಮದಲ್ಲಿ ಇಹಲೋಕ ತ್ಯಜಿಸಿದರು. ಮಮತಾ ಅವರು 5 ಸಾವಿರಕ್ಕೂ ಅಧಿಕ ನಾಟಕಗಳಲ್ಲಿ ನಟಿಸಿದ್ದರು. 25 ಸಿನಿಮಾಗಳಲ್ಲಿ ನಟಿಸಿ ಭೇಷ್ ಎನಿಸಿಕೊಂಡಿದ್ದರು. ಕನ್ನಡ ಚಿತ್ರರಂಗದ ಮೇರು ನಟರುಗಳಾದ ಅಂಬರೀಷ್, ವಜ್ರಮುನಿ ಸೇರಿ ಅನೇಕರ ಜೊತೆ ತೆರೆಹಂಚಿಕೊಂಡಿದ್ದರು. ಇತ್ತೀಚಿನ ವರ್ಷಗಳಲ್ಲಿ ಚಿತ್ರರಂಗದಿಂದ ದೂರವೇ

ಹಿರಿಯ ನಟಿ ರಂಗಭೂಮಿ ಕಲಾವಿದೆ ಮಮತಾ ಗೂಡೂರ ಅವರು ವಿಧಿವಶ Read More »

error: Content is protected !!
Scroll to Top