ನಿಧನ

ನದಿಯಲ್ಲಿ ಮುಳುಗಿ ಬಾಲಕ ಸಾವು

ಮುಂಡಾಜೆ: ದ್ವಿತೀಯ ಪಿಯುಸಿಯ ವಿದ್ಯಾರ್ಥಿಯೊಬ್ಬ ನೇತ್ರಾವತಿ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಅರಸಮಜಲು ಎಂಬಲ್ಲಿ ನಡೆದಿದೆ. ಮೃತನನ್ನು ನಿಶಾಂತ್ ಎಂದು ಗುರುತಿಸಲಾಗಿದೆ. ಈತ ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದ. ಮಾ. 18 ರ ಮಧ್ಯಾಹ್ನ ಆತ ಈಜಾಟಕ್ಕೆಂದು ನದಿಗೆ ತೆರಳಿದ್ದು, ಈ ವೇಳೆ ಮುಳುಗಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಆತನ ಜೊತೆಗಿದ್ದವರು ಅವನನ್ನು ರಕ್ಷಿಸಲು ಪ್ರಯತ್ನ ನಡೆಸಿದ್ದಾರೆ. ಆದರೆ ದುರದೃಷ್ಟವಶಾತ್ ಅದಾಗಲೇ ಆತ ಸಾವನ್ನಪ್ಪಿದ್ದಾನೆ.

ನದಿಯಲ್ಲಿ ಮುಳುಗಿ ಬಾಲಕ ಸಾವು Read More »

ಅಪರಿಚಿತ ವ್ಯಕ್ತಿಯ ಶವ ಪತ್ತೆ

ಕೌಡಿಚ್ಚಾರು: ಅಪರಿಚಿತ ವ್ಯಕ್ತಿಯೊಬ್ಬರ ಶವ ಕೌಡಿಚ್ಚಾರಿನ ಮುಖ್ಯ ರಸ್ತೆಯ ಬದಿಯಲ್ಲಿ ಪತ್ತೆಯಾಗಿದೆ. ಶವ ಕಂಡ ಸ್ಥಳೀಯರು ತಕ್ಷಣವೇ ಸಂಪ್ಯ ಪೊಲೀಸ್‌ ಠಾಣೆಗೆ ಮಾಹಿತಿ ನೀಡಿದ್ದಾರೆ. ಸಂಪ್ಯ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅಪರಿಚಿತ ವ್ಯಕ್ತಿಯ ಶವ ಪತ್ತೆ Read More »

ತೋಟದಲ್ಲಿ ಬಿದ್ದು ಮೃತಪಟ್ಚ ಮಹಿಳೆ

ಕಡಬ: ತೋಟಕ್ಕೆ ಬಂದ ದನಗಳನ್ನು ಓಡಿಸಲು ಹೋಗಿ ಆಕಸ್ಮಿಕವಾಗಿ ಬಿದ್ದು ಮಹಿಳೆ ಮೃತಪಟ್ಟ ಘಟನೆ ಕೊಣಾಲು ಗ್ರಾಮದಲ್ಲಿ ನಡೆದಿದೆ. ಪಾತೃಪಾಡಿ ನಿವಾಸಿ ಲೀಲಾವತಿ ಶೆಟ್ಟಿ (64) ಮೃತ ದುರ್ದೈವಿ. ಮಾ. 11 ರ ಸಂಜೆ ಹೊತ್ತಲ್ಲಿ ‌ಲೀಲಾವತಿ ಅವರ ತೋಟಕ್ಕೆ ದನಗಳು ಮೇಯಲು ಬಂದಿದ್ದು, ಅವುಗಳನ್ನು ಓಡಿಸಲು ಹೋಗಿದ್ದಾರೆ. ಈ ವೇಳೆ ಆಕಸ್ಮಿಕವಾಗಿ ಬಿದ್ದು ಅವರು ಮೃತಪಟ್ಟಿದ್ದಾಗಿ ತಿಳಿದು ಬಂದಿದೆ. ರಾತ್ರಿ ಲೀಲಾವತಿ ಅವರ ಪುತ್ರ ಹರೀಶ್ ಅವರು ಕೆಲಸ ಮುಗಿಸಿ ಮನೆಗೆ ಬಂದಾಗ ಬಾಗಿಲು ತೆರೆದೇ

ತೋಟದಲ್ಲಿ ಬಿದ್ದು ಮೃತಪಟ್ಚ ಮಹಿಳೆ Read More »

ಕಾಡಾನೆ ದಾಳಿಗೆ ವ್ಯಕ್ತಿ ಬಲಿ

ಸಿದ್ಧಾಪುರ: ಕಾಡಾನೆ ದಾಳಿಗೆ ಕಾಫಿ ಬೆಳೆಗಾರರೊಬ್ಬರು ಮೃತಪಟ್ಟ ಘಟನೆ ಹೈಸ್ಕೂಲ್ ಪೈಸಾರಿ ಎಂಬಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಚೌರಿರ ಗಣಪತಿ(49) ಎಂದು ಗುರುತಿಸಲಾಗಿದೆ. ಗುರುವಾರ ಹಾಡು ಹಗಲೇ ಕಾಡಾನೆ ದಾಳಿ ನಡೆದಿದೆ. ಅವರು ಕಾರ್ಮಿಕರ ಜೊತೆಗೆ ತಮ್ಮ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಕಾಡಾನೆ ಏಕಾಏಕಿ ದಾಳಿ ನಡೆಸಿದ್ದು, ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.‌ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾಡಾನೆ ದಾಳಿ ಅರಣ್ಯ ಇಲಾಖೆಯ ವೈಫಲ್ಯಕ್ಕೆ ಸಾಕ್ಷಿಯಾಗಿದ್ದು, ಸಾರ್ವಜನಿಕರು

ಕಾಡಾನೆ ದಾಳಿಗೆ ವ್ಯಕ್ತಿ ಬಲಿ Read More »

ಕರೆಂಟ್ ಶಾಕ್‌ನಿಂದ ವಿದ್ಯಾರ್ಥಿ ಸಾವು: ಶವವನ್ನು ನೀರಿಗೆಸೆದ ‌ಸ್ನೇಹಿತರು

ರಾಯಚೂರು: ಕರೆಂಟ್ ಶಾಕ್‌ನಿಂದ 9 ನೇ ತರಗತಿಯ ಬಾಲಕನೊಬ್ಬ ಮೃತಪಟ್ಚ ಘಟನೆ ನಡೆದಿದ್ದು, ಸ್ನೇಹಿತರು ಆತನ ಶವವನ್ನು ಕೆರೆಗೆಸೆದ ಘಟನೆ ನಡೆದಿದೆ. ಮೃತನನ್ನು ಗುಂಡಸಾಗರ ‌ಗ್ರಾಮದ ಕಾರ್ತಿಕ್(15) ಎಂದು ಗುರುತಿಸಲಾಗಿದೆ. ಕಾರ್ತಿಕ್ ಓದುತ್ತಿದ್ದ ಶಾಲೆಯಲ್ಲಿ ಹತ್ತನೇ ತರಗತಿಯ ಮಕ್ಕಳಿಗೆ ಬೀಳ್ಕೊಡುಗೆ ಸಮಾರಂಭ ಏರ್ಪಡಿಸಿದ್ದರು. ಆ ಕಾರ್ಯಕ್ರಮಕ್ಕೆ ಹೊಸ ಬಟ್ಟೆ ಖರೀದಿ ಮಾಡಲು ಹತ್ತನೇ ತರಗತಿಯ ತನ್ನ ಇಬ್ಬರು ಸ್ನೇಹಿತರ ಜೊತೆಗೆ ಹೋಗಿದ್ದ. ದಾರಿ ಮಧ್ಯೆ ನೀರು ಕುಡಿಯಲು ಬಾವಿಯೊಂದರ ಸಮೀಪ ಹೋಗಿದ್ದು, ಕರೆಂಟ್ ಶಾಕ್ ತಗುಲಿ ಮೃತಪಟ್ಟಿದ್ದಾನೆ.

ಕರೆಂಟ್ ಶಾಕ್‌ನಿಂದ ವಿದ್ಯಾರ್ಥಿ ಸಾವು: ಶವವನ್ನು ನೀರಿಗೆಸೆದ ‌ಸ್ನೇಹಿತರು Read More »

ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ

ಉಳ್ಳಾಲ: ಕೆಲಸಕ್ಕೆಂದು ಮನೆಯಿಂದ ತೆರಳಿ ಸೋಮವಾರದಿಂದ ನಾಪತ್ತೆಯಾಗಿದ್ದ ಯುವಕನ ಮೃತ ದೇಹ ಸೋಮೇಶ್ವರ ಸೋಮನಾಥ ಗದಾತೀರ್ಥ ಕೆರೆಯಲ್ಲಿ ಪತ್ತೆಯಾಗಿದೆ. ಮೃತನನ್ನು ವಿವೇಕ್ ಶೆಟ್ಟಿಗಾರ್(32) ಎಂದು ಗುರುತಿಸಲಾಗಿದೆ. ಪತ್ನಿಯಿಂದ ‌ವಿಚ್ಛೇದನಗೊಂಡು ಖಿನ್ನತೆಯಿಂದ ವಿವೇಕ್ ಆತ್ಮಹತ್ಯೆಗೆ ಶರಣಾಗಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ. ವಿವೇಕ್ ಕದ್ರಿ ವೇದ ಮೋಟಾರ್ಸ್‌ನಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ ಸೋಮವಾರ ಕೆಲಸಕ್ಕೆಂದು ‌ಮನೆಯಿಂದ ಹೋಗಿದ್ದರು. ಅದೇ ರಾತ್ರಿ ಸುಮಾರು 9 ಗಂಟೆಯ ವೇಳೆಗೆ ತಾಯಿಗೆ ಕರೆ ಮಾಡಿ ತಾನು ದೇವಸ್ಥಾನಕ್ಕೆ ಹೋಗುವುದಾಗಿ ಹೇಳಿದ್ದರು. ಆದರೆ ರಾತ್ರಿ

ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ Read More »

ಬಂಧನದಲ್ಲಿದ್ದ ಯುವಕ ಸಾವು: ಪೊಲೀಸರ ಚಿತ್ರಹಿಂಸೆಯೇ ‌ಕಾರಣ ಎಂದು ಕುಟುಂಬಸ್ಥರ ಆರೋಪ

ಮಧುರೈ: ಪ್ರಕರಣವೊಂದಕ್ಕೆ ಸಂಬಂಧಿಸಿದ ಹಾಗೆ ವಿಚಾರಣೆಗಾಗಿ ಪೊಲೀಸರ ಕಸ್ಟಡಿಯಲ್ಲಿದ್ದ ದಲಿತ ಯುವಕನೊಬ್ಬ ಮೃತಪಟ್ಟಿದ್ದು, ಪೊಲೀಸರ ಚಿತ್ರಹಿಂಸೆಯಿಂದ ಈ ಘಟನೆ ನಡೆದಿದೆ ಎಂದು ಯುವಕನ ಕುಟುಂಬಸ್ಥರು ಆರೋಪಿಸಿದ್ದಾರೆ. ಮೃತನನ್ನು ಆಕಾಶ್ (26) ಎಂದು ಗುರುತಿಸಲಾಗಿದೆ. ಶಿವಗಂಗಾದಲ್ಲಿ ‌ನಡೆದ ಹಲ್ಲೆ ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ ಈತನನ್ನು ಪೊಲೀಸರು ಬಂಧಿಸಿದ್ದರು. ಈ ಬಗ್ಗೆ ಆಕಾಶ್ ತಂದೆ ಮಾತನಾಡಿದ್ದು, ಸ್ನೇಹಿತರ ನಡುವೆ ಜಗಳ ನಡೆದಿದ್ದು, ಈ ಪ್ರಕರಣದಲ್ಲಿ ಆಕಾಶ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಆದರೆ ‌ವಶಕ್ಕೆ ಪಡೆದಿದ್ದ ನನ್ನ ಪುತ್ರನನ್ನು ಪೊಲೀಸರು ಠಾಣೆಗೆ

ಬಂಧನದಲ್ಲಿದ್ದ ಯುವಕ ಸಾವು: ಪೊಲೀಸರ ಚಿತ್ರಹಿಂಸೆಯೇ ‌ಕಾರಣ ಎಂದು ಕುಟುಂಬಸ್ಥರ ಆರೋಪ Read More »

ಪ್ರೇಮ ವೈಫಲ್ಯ: ಸೋಮೇಶ್ವರದ ಯುವಕ ಒಮಾನಿನಲ್ಲಿ ಆತ್ಮಹತ್ಯೆ

ಉಳ್ಳಾಲ: ಪ್ರೇಮ ವೈಫಲ್ಯದ ಕಾರಣಕ್ಕ. ಒಮಾನ್‌ನಲ್ಲಿ ಉದ್ಯೋಗ ಮಾಡುತ್ತಿದ್ದ ಸೋಮೇಶ್ವರದ ಯುವಕನೊಬ್ಬ ತನ್ನ ಕೊಠಡಿಯಲ್ಲೇ ‌ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಮೃತನನ್ನು ಪುನೀತ್ ಪೂಜಾರಿ(32) ಎಂದು ಗುರುತಿಸಲಾಗಿದೆ. ಕಳೆದ ಒಂದೂವರೆ ವರ್ಷದಿಂದ ಒಮಾನ್‌ನ ಲಿಫ್ಟ್ ಕಂಪನಿಯೊಂದರಲ್ಲಿ ಪುನೀತ್ ಕೆಲಸ ಮಾಡುತ್ತಿದ್ದರು. ಒಂದೂವರೆ ತಿಂಗಳ ಹಿಂದಷ್ಟೇ ಊರಿಗೆ ಬಂದು ಮತ್ತೆ ಒಮಾನ್‌ಗೆ ತೆರಳಿದ್ದರು. ಪುನೀತ್ ಉರ್ವಾ ಮೂಲದ ಯುವತಿಯೊಬ್ಬಳನ್ನು ಪ್ರೀತಿ ಮಾಡುತ್ತಿದ್ದರು. ಆದರೆ ಇತ್ತೀಚೆಗೆ ಆ ಯುವತಿ ಪುನೀತ್ ಅವರ ಕರೆ, ಸಂದೇಶಗಳಿಗೆ ‌ಸ್ಪಂದನೆ ನೀಡುತ್ತಿರಲಿಲ್ಲ.

ಪ್ರೇಮ ವೈಫಲ್ಯ: ಸೋಮೇಶ್ವರದ ಯುವಕ ಒಮಾನಿನಲ್ಲಿ ಆತ್ಮಹತ್ಯೆ Read More »

ಪಿಯುಸಿ ವಿದ್ಯಾರ್ಥಿನಿಯನ್ನು ಬಲಿ ಪಡೆದ ಕಾಡಾನೆ

ಮಡಿಕೇರಿ: ಕಾಡಾನೆಯ ದಾಳಿಗೆ ವಿದ್ಯಾರ್ಥಿನಿಯೊಬ್ಬಳು ಬಲಿಯಾದ ಘಟನೆ ಬೆಟ್ಟತ್ತೂರಿನಲ್ಲಿ ‌ನಡೆದಿದೆ. ಪೂಜಾ(17) ಎಂಬಾಕೆಯೇ ಮೃತ ದುರ್ದೈವಿ. ಮಡಿಕೇರಿಯ ಸಂತ ಜೋಸೆಫ್ ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ಕಲಿಯುತ್ತಿದ್ದಳು ಎಂದು ತಿಳಿದು ಬಂದಿದೆ. ಫೆ. 28 ರಂದು ಕಾಲೇಜು ಮುಗಿಸಿ ಬೆಟ್ಟತ್ತೂರಿನ ತನ್ನ ಮನೆಯ ಸಮೀಪ ಬಸ್ಸಿನಿಂದ ಇಳಿದಿದ್ದಳು. ಆ ಬಳಿಕ ಆಕೆಯನ್ನು ಕಾಡಾನೆ ದಾಳಿ ನಡೆಸಿ ಕೊಂದಿದೆ ಎಂದು ಹೇಳಲಾಗಿದೆ. ಪ್ರಕರಣ ನಡೆದ ಬಳಿಕ ಗ್ರಾಮಸ್ಥರು ಅರಣ್ಯ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದಲೇ ಇಂತಹ

ಪಿಯುಸಿ ವಿದ್ಯಾರ್ಥಿನಿಯನ್ನು ಬಲಿ ಪಡೆದ ಕಾಡಾನೆ Read More »

ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ

ಬೆಳಗಾವಿ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದ ಮೃತಪಟ್ಚ ಘಟನೆ ಚಿಕ್ಕೋಡಿಯ ಬಂಬಲವಾಡ ಗ್ರಾಮದಲ್ಲಿ ನಡೆದಿದೆ. ಭೂಮಿಕಾ ಮಾಳಂಗಿ(17) ಮೃತ ದುರ್ದೈವಿ. ಇಂದಿನಿಂದ ದ್ವಿತೀಯ ಪಿಯು ಅಂತಿಮ ಪರೀಕ್ಷೆ ಆರಂಭವಾಗಿದ್ದು, ಆಕೆ ಅದಕ್ಕಾಗಿ ಉತ್ತಮ ಸಿದ್ಧತೆ ಸಹ ಮಾಡಿಕೊಂಡಿದ್ದರು. ಇಂದು ಬೆಳಗ್ಗೆಯೂ ಪರೀಕ್ಷೆಗೆ ತೆರಳುವುದಕ್ಕೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದಾಗಿ ತಿಳಿದು ಬಂದಿದೆ. ಆದರೆ ಬೆಳಗ್ಗೆ ಸ್ನಾನ ಮುಗಿಸಿ ಬರುತ್ತಿದ್ದ ಹಾಗೆಯೇ ಆಕೆಗೆ ಎದೆ ನೋವು ಕಾಣಿಸಿಕೊಂಡಿದ್ದು, ಕುಸಿದು ಬಿದ್ದಿದ್ದಾಳೆ. ತಕ್ಷಣವೇ ಅವಳನ್ನು ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ಮಾಡಲಾಯಿತಾದರೂ

ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ Read More »

error: Content is protected !!
Scroll to Top