ನಿಧನ

ಕಬಕ ಬೈಲು ನಿವಾಸಿ ಭೈರಪ್ಪ ಗೌಡ ನಿಧನ

ಕಬಕ: ಇಲ್ಲಿನ ಬೈಲು ನಿವಾಸಿ ಬೈರಪ್ಪ ಗೌಡ ಶನಿವಾರ ರಾತ್ರಿ ಸ್ವಗೃಹದಲ್ಲಿ ಹೃದಯದಾಘತದಿಂದ ನಿಧನರಾದರು. ಲಾರಿ ಚಾಲಕ ಹಾಗೂ ನಿರ್ವಾಹಕ ಕೆಲಸ ನಿರ್ವಹಿಸುತಿದ್ದ ಅವರು ಹಲವು ವರ್ಷಗಳಿಂದ ನಿವೃತ್ತಿ ಜೀವನ ನಡೆಸುತಿದ್ದರು. ಮೃತರು ಪತ್ನಿ,ಪುತ್ರ ಹಾಗೂ ಮೂವರು ಪುತ್ರಿಯರ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಕಬಕ ಬೈಲು ನಿವಾಸಿ ಭೈರಪ್ಪ ಗೌಡ ನಿಧನ Read More »

ಹೃದಯಾಘಾತದಿಂದ ನವವಿವಾಹಿತೆ ಪುಷ್ಪಾ ಮೃತ್ಯು

ಪುತ್ತೂರು: ನವವಿವಾಹಿತೆಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಪಡುವನ್ನೂರು ಗ್ರಾಮದ ಪದಡ್ಕದಲ್ಲಿ ನಡೆದಿದೆ. ಪುಷ್ಪಾ (22) ಹೃದಯಾಘಾತದಿಂದ ಮೃತಪಟ್ಟವರು. ಅವರಿಗೆ ಬೆಳಗ್ಗೆ 4 ಗಂಟೆಯ ಸುಮಾರಿಗೆ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಆಸ್ಪತ್ರೆ ತಲುಪುವ ಮೊದಲೇ ಪುಷ್ಪಾ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಪುಷ್ಪಾ ಅವರು ಕೇವಲ 6 ತಿಂಗಳ ಹಿಂದಷ್ಟೇ ಮದುವೆಯಾಗಿದ್ದರು ಎನ್ನಲಾಗಿದೆ.

ಹೃದಯಾಘಾತದಿಂದ ನವವಿವಾಹಿತೆ ಪುಷ್ಪಾ ಮೃತ್ಯು Read More »

ಗಂಡಿಬಾಗಿಲು ಶಾಲಾ ಮುಖ್ಯ ಶಿಕ್ಷಕ ಜನಾರ್ದನ ಗೌಡ ನಿಧನ

ರಾಮಕುಂಜ: ಕೊಯಿಲ ಗ್ರಾಮದ ಗಂಡಿಬಾಗಿಲು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ, ಅಲಂಕಾರು ಗ್ರಾಮದ ತೀರ್ಥಜಾಲು ನಿವಾಸಿ ಜನಾರ್ದನ ಗೌಡ (59) ಮಂಗಳವಾರ ತಡರಾತ್ರಿ ಹೃದಯಾಘಾತದಿಂದ ನಿಧನರಾದರು. ಜನಾರ್ದನ ಗೌಡ ಅವರು ಮಂಗಳವಾರ ಮಧ್ಯಾಹ್ನದ ವರೆಗೆ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸಿ ಬಳಿಕ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ಹೋಗಿ ಸಂಜೆ ಮನೆಗೆ ಬಂದಿದ್ದರು. ರಾತ್ರಿ ಅವರಿಗೆ ಎದೆನೋವು ಹಾಗೂ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು ಮನೆಯವರು ತಕ್ಷಣ ಉಪ್ಪಿನಂಗಡಿಯ ಆಸ್ಪತ್ರೆಗೆ ಕರೆತಂದರಾದರು ಆ ವೇಳೆಗಾಗಲೇ ಜನಾರ್ದನಗೌಡರವರು ವೃತಪಟ್ಟಿದ್ದರು ಎನ್ನಲಾಗಿದೆ.

ಗಂಡಿಬಾಗಿಲು ಶಾಲಾ ಮುಖ್ಯ ಶಿಕ್ಷಕ ಜನಾರ್ದನ ಗೌಡ ನಿಧನ Read More »

ಸೂರಪ್ಪ ಗೌಡ ಇಡ್ಯಡ್ಕ ನಿಧನ

ಕಾಣಿಯೂರು : ಇಡ್ಯಡ್ಕ ನಿವಾಸಿ ಸೂರಪ್ಪ ಗೌಡ ಇಡ್ಯಡ್ಕ ಸೋಮವಾರ ನಿಧನರಾದರು. ಮೃತರು ಇಡ್ಯಡ್ಕ ಕುಟುಂಬದ ಯಜಮಾನರಾಗಿದ್ದಾರೆ. ಮೃತರು ಪುತ್ರರಾದ ರಮೇಶ ಗೌಡ, ಕುಸುಮಾಧರ ಗೌಡ, ಪುತ್ರಿಯರಾದ ಕುಸುಮಾವತಿ, ಮೀನಾಕ್ಷಿ, ಸೊಸೆಯಂದಿರು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಸೂರಪ್ಪ ಗೌಡ ಇಡ್ಯಡ್ಕ ನಿಧನ Read More »

ಬಂಡೀಪುರ ರಾಂಪುರ ಆನೆ ಶಿಬಿರದ ವಿನಾಯಕ ಕುಸಿದು ಬಿದ್ದು ಸಾವು

ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ರಾಂಪುರ ಆನೆ ಶಿಬಿರದಲ್ಲಿದ್ದ ವಿನಾಯಕ ಎಂಬ ಆನೆ ಮಂಗಳವಾರ ಸಾವನ್ನಪ್ಪಿದೆ. ಆನೆಗಳಿಗೆ ತರಬೇತಿ ನೀಡುತ್ತಿದ್ದ ಸಂದರ್ಭದಲ್ಲಿ ದಿಢೀರ್‌ ಆಗಿ ಅಸ್ವಸ್ಥಗೊಂಡು ಕುಸಿದು ಬಿದ್ದು ಮೃತಪಟ್ಟಿದೆ. ಮರಣೋತ್ತರ ಪರೀಕ್ಷೆಯ ಬಳಿಕ ನಿಖರ ಕಾರಣಗೊತ್ತಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಆನೆಗೆ ಅಕ್ಕಿರಾಜ, ವಿನಾಯಗನ್‌ ಎಂಬ ಹೆಸರು ಇದೆ. ಕೊಯಮತ್ತೂರಿನಲ್ಲಿ 2021ರಲ್ಲಿ ಈ ಆನೆಯನ್ನು ಸೆರೆ ಹಿಡಿದು ಮಧುಮಲೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬಿಡಲಾಗಿತ್ತು. ಆನೆಯು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದುಕೆರೆ

ಬಂಡೀಪುರ ರಾಂಪುರ ಆನೆ ಶಿಬಿರದ ವಿನಾಯಕ ಕುಸಿದು ಬಿದ್ದು ಸಾವು Read More »

ಸರ್ವೆ ಕಲ್ಪನೆ ಶಾಲಾ ವಿದ್ಯಾರ್ಥಿ ಸುಪ್ರೀತ್ ನಿಧನ

ಸರ್ವೆ: ಕಲ್ಪನೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ 7ನೇ ತರಗತಿ ವಿದ್ಯಾರ್ಥಿ ಸುಪ್ರೀತ್ ಬುಧವಾರ ನಿಧನರಾಗಿದ್ದಾರೆ. ಎರಡು ದಿನಗಳ ಹಿಂದೆ ಅನಾರೋಗ್ಯಕ್ಕೆ ಒಳಗಾದ ಸುಪ್ರೀತ್‍ ಅವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ದಾಖಲಿಸಲಾಗಿದ್ದು, ಅಲ್ಲಿ ಚಿಕಿತ್ಸೆಗೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸುಪ್ರೀತ್ ಮುಂಡೂರು ಗ್ರಾಮ ಪಂಚಾಯಿತಿ ಮಾಜಿ ಸದಸ್ಯೆ ಕುಸುಮಾ ಪೆರಂಟೋಳು ಹಾಗೂ ಕುಂಞ ಮೇಸ್ತ್ರಿ ದಂಪತಿ ಪುತ್ರ.

ಸರ್ವೆ ಕಲ್ಪನೆ ಶಾಲಾ ವಿದ್ಯಾರ್ಥಿ ಸುಪ್ರೀತ್ ನಿಧನ Read More »

ನೆಲ್ಲಿಕಟ್ಟೆ ರುಕ್ಮಿಣಿ ನಿಧನ

ಪುತ್ತೂರು: ನೆಲ್ಲಿಕಟ್ಟೆ ನಿವಾಸಿ ರುಕ್ಮಿಣಿ (92) ಸ್ವಗೃಹದಲ್ಲಿ ಇಂದು ಮುಂಜಾನೆ ನಿಧನರಾದರು. ನೆಲ್ಲಿಕಟ್ಟೆ ದಿ.ಭಟ್ಯಪ್ಪ ಗೌಡರ ಪತ್ನಿಯಾಗಿರುವ ಅವರು ವಯೋ ಸಹಜ ನಿಧನರಾದರು. ಮೃತರು ಪುತ್ರರಾದ ನಿವೃತ್ತ ಬ್ಯಾಂಕ್ ಉದ್ಯೋಗಿ ರಾಧಾಕೃಷ್ಣ ಗೌಡ, ನಿವೃತ್ತ ಎಸ್ಪಿ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ರಾಮದಾಸ ಗೌಡ, ಶ್ರೀ ಮಹಾಲಿಂಗೇಶ್ವರ ಐಟಿಐ ಆಡಳಿತ ಸಮಿತಿ ನಿರ್ದೇಶಕ ಕಿಶೋರ್ ಕುಮಾರ್, ಪುತ್ರಿಯರಾದ ಜಯಲಕ್ಷ್ಮೀ ತಾರಾಮತಿ, ಭಾರತಿ, ಅಂಬಿಕಾ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.

ನೆಲ್ಲಿಕಟ್ಟೆ ರುಕ್ಮಿಣಿ ನಿಧನ Read More »

ಯಕ್ಷಗಾನ ಹಾಸ್ಯ ಕಲಾವಿದ ಪೆರುವೋಡಿ ನಾರಾಯಣ ಭಟ್ ಇನ್ನಿಲ್ಲ

ಪೆರುವೋಡಿ: ಯಕ್ಷಗಾನದ ಹಿರಿಯ ಹಾಸ್ಯ ಕಲಾವಿದ ಪೆರುವೋಡಿ ನಾರಾಯಣ ಭಟ್ (96) ಮಂಗಳವಾರ ನಿಧನರಾದರು. ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ  ಪದ್ಯಾಣದಲ್ಲಿ 1927 ರಲ್ಲಿ ಜನಿಸಿದ ಪೆರುವೋಡಿ ಪ್ರಸಿದ್ಧ ಧರ್ಮಸ್ಥಳ ಮೇಳಕ್ಕೆ ಸೇರಿ ಹಲವಾರು ಮೇಳಗಳಲ್ಲಿ ಕಲಾವಿದರಾಗಿ ಸೇವೆ ಸಲ್ಲಿಸಿದ್ದಾರೆ. ಪಾಪಣ್ಣ ಭಟ್ರು ಎಂದೇ ಖ್ಯಾತಿ ಪಡೆದ ನಾರಾಯಣ ಭಟ್ ಅವರು ಯಕ್ಷಗಾನದ ಹಾಸ್ಯ ಪಾತ್ರಗಳಿಗೆ ವಿಶೇಷ ಮಾನ, ಮಾನ್ಯತೆ ತಂದು ಕೊಟ್ಟಿದ್ದಾರೆ. ‘ಪಾಪಣ್ಣ ವಿಜಯ’ ಪ್ರಸಂಗದ ಪಾಪಣ್ಣ ಪಾತ್ರದ ವಿನ್ಯಾಸ ಹಾಗೂ ಪಾತ್ರಾಭಿವ್ಯಕ್ತಿಯ ಮೂಲಕ ತಮ್ಮ ಕಲ್ಪನಾಶಕ್ತಿಯನ್ನು

ಯಕ್ಷಗಾನ ಹಾಸ್ಯ ಕಲಾವಿದ ಪೆರುವೋಡಿ ನಾರಾಯಣ ಭಟ್ ಇನ್ನಿಲ್ಲ Read More »

ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಡಾ.ಮೋಹನ್ ಆಳ್ವರ ತಂದೆ ಆನಂದ ಆಳ್ವ ನಿಧನ

ಮಂಗಳೂರು : ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಆಧ್ಯಕ್ಷ ಡಾ. ಮೋಹನ್ ಆಳ್ವರ ತಂದೆ ಆನಂದ ಆಳ್ವ (106) ತಮ್ಮ ಸ್ವಗೃಹದಲ್ಲಿ ಇಂದು ನಿಧನರಾಗಿದ್ದಾರೆ. ಆನಂದ ಆಳ್ವ ಇಳಿ ವಯಸ್ಸಿನಲ್ಲೂ ಅತ್ಯಂತ ಕ್ರೀಯಾಶೀಲರಾಗಿ ಗುರುತಿಸಿಕೊಂಡಿದ್ದರು. ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ನಡೆಯುವ ಎಲ್ಲಾ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲೂ ಮುಂಚೂಣಿಯಲ್ಲಿ ಭಾಗವಹಿಸುವ ಕೆಲವೇ ಮಂದಿಗಳಲ್ಲಿ ಆನಂದ ಆಳ್ವರೂ ಒಬ್ಬರಾಗಿದ್ದಾರೆ. ದೇವಸ್ಥಾನಗಳ ಜೀರ್ಣೋದ್ಧಾರ ಸೇರಿದಂತೆ ಹಲವು ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಆನಂದ ಆಳ್ವ ಮೂಡಬಿದಿರೆ ಪರಿಸರದಲ್ಲಿ ಜನಾನುರಾಗಿಯಾಗಿ

ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಡಾ.ಮೋಹನ್ ಆಳ್ವರ ತಂದೆ ಆನಂದ ಆಳ್ವ ನಿಧನ Read More »

ಲೇಖಕ, ಸಾಹಿತಿ, ಪತ್ರಕರ್ತ ಶೇಖರ್ ಅಜೆಕಾರು ನಿಧನ

ಕಾರ್ಕಳ: ತಾಲೂಕಿನ ಅಜೆಕಾರು ನಿವಾಸಿ ಲೇಖಕ, ಸಾಹಿತಿ, ಪತ್ರಕರ್ತ ಶೇಖರ್ ಅಜೆಕಾರು (54) ಹೃದಯಾಘಾತದಿಂದ ನಿಧನರಾದರು. ಶೇಖರ್ ಅಜೆಕಾರ್ ಅವರು ಮಕ್ಕಳ ಸಾಹಿತ್ಯದ ಕುರಿತು ಹೆಚ್ಚು ಆಸಕ್ತಿ ವಹಿಸಿದ್ದು, ಮಕ್ಕಳ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳುವ ಮೂಲಕ ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡಿದ್ದರು. ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

ಲೇಖಕ, ಸಾಹಿತಿ, ಪತ್ರಕರ್ತ ಶೇಖರ್ ಅಜೆಕಾರು ನಿಧನ Read More »

error: Content is protected !!
Scroll to Top