ನಿಧನ

ನಟ ಸುದೀಪ್‌ ತಾಯಿ ಸರೋಜಾ ನಿಧನ

ಬೆಂಗಳೂರು : ಜನಪ್ರಿಯ ನಟ ಕಿಚ್ಚ ಸುದೀಪ್ ಅವರ ತಾಯಿ ಮಂಗಳೂರು ಮೂಲದ ಸರೋಜಾ ಇಂದು ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅರೋಜಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಸರೋಜಾ ಅವರು ನಿಧನರಾಗಿದ್ದಾರೆ. ಪಾರ್ಥಿವ ಶರೀರವನ್ನು ಮಧ್ಯಾಹ್ನ 12 ಗಂಟೆಗೆ ಸುದೀಪ್​ರ ಜೆ.ಪಿ ನಗರ ನಿವಾಸಕ್ಕೆ ತಂದು ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ಸುದೀಪ್ ಅವರ ತಾಯಿಯವರು ಕಳೆದ ಕೆಲ ದಿನಗಳಿಂದಲೂ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯ ಸಂಬಂಧ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ […]

ನಟ ಸುದೀಪ್‌ ತಾಯಿ ಸರೋಜಾ ನಿಧನ Read More »

ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್ ನಿಧನ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್ (49) ಅಪಘಾತದಿಂದಾಗಿ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ನೇರಳಕಟ್ಟೆ ಪೆರಾಜೆ ಬೀರಕೋಡಿ ನಿವಾಸಿಯಾಗಿರುವ ಭಾಸ್ಕರ್ ಅವರು ಗುರುವಾರ ಮಂಗಳೂರಿನಲ್ಲಿ ಬೈಕ್ ಚಲಾಯಿಸುತ್ತಿದ್ದ ಸಂದರ್ಭ ನ್ಯಾನೋ ಕಾರು ಡಿಕ್ಕಿ ಹೊಡೆದಿತ್ತು. ತೀವೃ ಗಾಯಗೊಂಡ ಅವರನ್ನು ಮಂಗಳೂರು ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಇಂದು ಬೆಳಿಗ್ಗೆ ನಿಧನರಾದರು.

ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್ ನಿಧನ Read More »

ಕೇಂದ್ರ ಸಹಕಾರಿ ಬ್ಯಾಂಕ್‍ ಪುತ್ತೂರು ಶಾಖಾ ನಿವೃತ್ತ ಮ್ಯಾನೇಜರ್ ಉಮೇಶ್ ಗೌಡ ನಿಧನ

ಪುತ್ತೂರು: ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ ಪುತ್ತೂರು ಶಾಖಾ ನಿವೃತ್ತ ಮ್ಯಾನೇಜರ್, ಕೊಂಬೆಟ್ಟು ನಿವಾಸಿ ಉಮೇಶ್‍ ಗೌಡ (72) ಶನಿವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸುಮಾರು 38 ವರ್ಷಗಳ ಕಾಲ ಕೇಂದ್ರ ಸಹಕಾರಿ ಬ್ಯಾಂಕ್‍ ನಲ್ಲಿ ಕೆಲಸ ನಿರ್ವಹಿಸಿ ನಿವೃತ್ತರಾಗಿದ್ದರು. ಬೆಂಗಳೂರಿನಲ್ಲಿದ್ದ ಅವರು ಅಲ್ಲಿ ಹೃದಯಾಘಾತದಿಂದ ಶನಿವಾರ ನಿಧನರಾದರು. ಮೃತರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.

ಕೇಂದ್ರ ಸಹಕಾರಿ ಬ್ಯಾಂಕ್‍ ಪುತ್ತೂರು ಶಾಖಾ ನಿವೃತ್ತ ಮ್ಯಾನೇಜರ್ ಉಮೇಶ್ ಗೌಡ ನಿಧನ Read More »

ಜರ್ಮನಿಯ ಸಾಫ್ಟ್ ವೇರ್ ಇಂಜಿನಿಯರ್ ಆದಿತ್ಯ ಭಟ್‍ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಹೃದಯಾಘಾತದಿಂದ ಯುವಕ ಮೃತಪಟ್ಟ ಘಟನೆ ಉಜಿರೆಯಲ್ಲಿ ನಡೆದಿದೆ. ಉಜಿರೆ ಗ್ರಾಮದ ಅತ್ತಾಜೆ ನಿವಾಸಿ, ಜರ್ಮನಿಯಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಆದಿತ್ಯ ಭಟ್ (28) ಮೃತಪಟ್ಟ ಯುವಕ ರಮೇಶ್ ಭಟ್ ಎಂಬವರ ಪುತ್ರ ಆದಿತ್ಯ ಭಟ್‍ ಶುಕ್ರವಾರ ಮನೆಯಲ್ಲಿ ನಡೆದ ಆಯುಧ ಪೂಜೆಯ ಸಂಭ್ರಮದಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭ ಅವರಿಗೆ ಎದೆನೋವು ಕಾಣಿಸಿಕೊಂಡು ಅಸ್ವಸ್ಥರಾದ ತಕ್ಷಣ ಮನೆಯವರು ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದುಕೊಂಡು ಹೋಗಿದ್ದಾರೆ. ಅದರೆ ಅಷ್ಟೊತ್ತಿಗಾಗಲೇ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತರು ತಂದೆ, ತಾಯಿ, ಸಹೋದರಿ

ಜರ್ಮನಿಯ ಸಾಫ್ಟ್ ವೇರ್ ಇಂಜಿನಿಯರ್ ಆದಿತ್ಯ ಭಟ್‍ ಹೃದಯಾಘಾತದಿಂದ ನಿಧನ Read More »

ಉದ್ಯಮ ಕ್ಷೇತ್ರದ ದಂತಕಥೆ ರತನ್‌ ಟಾಟಾ ವಿಧಿವಶ

ರಾಷ್ಟ್ರಪತಿ, ಪ್ರಧಾನಿಯಿಂದ ಸಂತಾಪ ಮುಂಬಯಿ : ದೇಶದ ಅಗ್ರಗಣ್ಯ ಉದ್ಯಮಿ, ಟಾಟಾ ಸನ್ಸ್ ಗೌರವಾಧ್ಯಕ್ಷ ರತನ್ ನಾವಲ್ ಟಾಟಾ (86) ನಿನ್ನೆ ರಾತ್ರಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಸೋಮವಾರ ಮುಂಬಯಿಯ ಬ್ರೀಚ್‌ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿತ್ತು. ಬುಧವಾರ ರಾತ್ರಿ ರತನ್ ಟಾಟಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.ನಾವಲ್ ಹರ್ಮುಸ್ ಜಿ ಟಾಟಾ ಮತ್ತು ಸೂನಿ ದಂಪತಿಯ ಹಿರಿಯ ಮಗನಾಗಿ ರತನ್ ಟಾಟಾ ಬೊಂಬಾಯಿನಲ್ಲಿ 1937ರಲ್ಲಿ ಜನಿಸಿದರು. ರತನ್ ಟಾಟಾ ಅವರಿಗೆ ಭಾರತ ಸರ್ಕಾರ 2008ರಲ್ಲಿ ದೇಶದ ಎರಡನೇ

ಉದ್ಯಮ ಕ್ಷೇತ್ರದ ದಂತಕಥೆ ರತನ್‌ ಟಾಟಾ ವಿಧಿವಶ Read More »

ನಿವೃತ್ತ ಮುಖ್ಯ ಶಿಕ್ಷಕ, ಸಾಹಿತಿ ನುಳಿಯಾಲು ರಘುನಾಥ ರೈ ನಿಧನ

ಪುತ್ತೂರು: ನಿವೃತ್ತ ಶಿಕ್ಷಕ, ಸಾಹಿತಿ ನುಳಿಯಾಲು ರಘುನಾಥ ರೈ (80) ಅಲ್ಪ ಕಾಲದ ಅಸೌಖ್ಯದಿಂದ ಶನಿವಾರ ರಾತ್ರಿ ಸ್ವಗೃಹದಲ್ಲಿ ನಿಧನರಾದರು.  ಕಳೆದ ಎರಡು ವಾರಗಳಿಂದ ತೀವೃ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಗಳೂರಿನಲ್ಲಿ ಚಿಕಿತ್ಸೆ ಪಡೆದಿದ್ದರು. ಸುಳ್ಯಪದವು ಬಾಲಸುಬ್ರಹ್ಮಣ್ಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 33 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಬಹುಮುಖ ಪ್ರತಿಭೆಯಾಗಿದ್ದ ಅವರಿಗೆ 1993 ರಲ್ಲಿ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ, 2015 ರಲ್ಲಿ ಎನ್‍.ಎಸ್‍.ಕಿಲ್ಲೆ ಪ್ರಶಸ್ತಿ ಲಭಿಸಿದೆ. 2018 ರಲ್ಲಿ ಪುತ್ತೂರಿನಲ್ಲಿ ನಡೆದ ಕರ್ನಾಟಕ ಏಕೀಕರಣ

ನಿವೃತ್ತ ಮುಖ್ಯ ಶಿಕ್ಷಕ, ಸಾಹಿತಿ ನುಳಿಯಾಲು ರಘುನಾಥ ರೈ ನಿಧನ Read More »

ವಿಟ್ಲಮುಡ್ನೂರು ಗ್ರಾಮ ಪಂಚಾಯಿತಿ ಸದಸ್ಯ ಉಮೇಶ್‍  ಗೌಡ ಅರ್ಕಲತೋಟ ನಿಧನ

ವಿಟ್ಲ: ವಿಟ್ಲಮುಡ್ನೂರು ಗ್ರಾಮ ಪಂಚಾಯಿತಿ ‌ಸದಸ್ಯ, ಕುಂಡಡ್ಕ ಬಿಜೆಪಿ ಬೂತ್ ಅಧ್ಯಕ್ಷ ಉಮೇಶ್ ಗೌಡ ಅರ್ಕಲತೋಟರವರು ಇಂದು ಮುಂಜಾನೆ ನಿಧನರಾಗಿದ್ದಾರೆ. ಅಲ್ಪಕಾಲದ ಅಸೌಖ್ಯದಿಂದಿದ್ದ ಅವರು ನಿಧನರಾದರು. ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ, ಬಾಲ್ಯ ಸ್ನೇಹಿತರಾದ ದಯಾನಂದ ಶೆಟ್ಟಿ ಉಜ್ರೆಮಾರು, ಮಂಡಲ ಉಪಾಧ್ಯಕ್ಷ ಹರಿಪ್ರಸಾದ್ ಯಾದವ್, ಪಕ್ಷದ ಕಾರ್ಯಕರ್ತರು ಆಸ್ಪತ್ರೆಗೆ ತೆರಳಿ ಅಂತಿಮ ದರ್ಶನ ಪಡೆದರು.

ವಿಟ್ಲಮುಡ್ನೂರು ಗ್ರಾಮ ಪಂಚಾಯಿತಿ ಸದಸ್ಯ ಉಮೇಶ್‍  ಗೌಡ ಅರ್ಕಲತೋಟ ನಿಧನ Read More »

ಪುತ್ತೂರು ತಾಲೂಕು ಕಚೇರಿ ಉದ್ಯೋಗಿ ಕನಕರಾಜ್ ನಿಧನ

ಪುತ್ತೂರು: ಇಲ್ಲಿನ ತಾಲೂಕು ಕಚೇರಿಯ ಉದ್ಯೋಗಿ ಕನಕರಾಜ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಚುನಾವಣಾ ಶಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿದ್ದ ಕನಕರಾಜ್ ಹೃದಯಾಘಾತದಿಂದ ನಿಧನರಾದರು. ನಿನ್ನೆ ರಾತ್ರಿ ವೇಳೆ ಕನಕರಾಜ್ ಅವರ ಅರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಕೂಡಲೇ ಆಸ್ಪತ್ರೆಗೆ ಕರೆ ತರಲಾಯಿತು. ಆದರೆ ಆಸ್ಪತ್ರೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೈಸೂರಿನ ಕೊಳ್ಳೆಗಾಲ ನಿವಾಸಿಯಾಗಿರುವ ಕನಕರಾಜ್ ಈ ಹಿಂದೆ ಬೆಟ್ಟಂಪಾಡಿಯಲ್ಲಿ ಗ್ರಾಮ ಆಡಳಿತಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ನಂತರ ಪ್ರಥಮ ದರ್ಜೆ ಸಹಾಯಕರಾಗಿ ಭಡ್ತಿ ಪಡೆದು ತಾಲೂಕು ಕಚೇರಿಯ ಚುನಾವಣಾ

ಪುತ್ತೂರು ತಾಲೂಕು ಕಚೇರಿ ಉದ್ಯೋಗಿ ಕನಕರಾಜ್ ನಿಧನ Read More »

ತೆಂಕುತಿಟ್ಟಿನ ಯಕ್ಷಗಾನ ಕಲಾವಿದ ಮುಂಡ್ಕೂರು ವಸಂತ ಶೆಟ್ಟಿ ನಿಧನ

ತೆಂಕು ತಿಟ್ಟಿನ ಹಿರಿಯ ಯಕ್ಷಗಾನ ಕಲಾವಿದ ಮುಂಡ್ಕೂರು ವಸಂತ ಶೆಟ್ಟಿ(83) ಶನಿವಾರ ನಿಧನರಾಗಿದ್ದಾರೆ. ಮುಂಡ್ಕೂರು ಕೃಷ್ಣ ಶೆಟ್ಟಿಯವರಲ್ಲಿ ಹೆಜ್ಜೆಗಾರಿಕೆ ಕಲಿತು ಮುಂಡ್ಕೂರು ಮೇಳದಲ್ಲಿ ಹವ್ಯಾಸಿ ವೇಷಧಾರಿಯಾಗಿ, ಮುಂದೆ ಉದ್ಯೋಗ ನಿಮಿತ್ತ ಮುಂಬಯಿ ಸೇರಿ ಯಕ್ಷಗಾನಾಸಕ್ತಿಯಿಂದ ಮತ್ತೆ ಊರಿಗೆ ಬಂದು ಕಟೀಲು ಮೇಳ ಸೇರಿದ ಅವರು, ಬೆಳ್ಮಣ್ಣು ಮತ್ತು ಬಪ್ಪನಾಡು ಮೇಳಗಳಲ್ಲೂ ಕೆಲವು ತಿರುಗಾಟ ಮಾಡಿದ್ದರು. ಕಳೆದ ವರ್ಷ ಸಂಸ್ಥೆ ಕಟೀಲಿನಲ್ಲಿ ಆಯೋಜಿಸಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ  ‘ಯಕ್ಷಗಾನಕಲಾರಂಗ ಪ್ರಶಸ್ತಿ’ ನೀಡಿ ಗೌರವಿಸಿತ್ತು. ಅವರು ಪತ್ನಿ ನಾಲ್ವರು ಪುತ್ರಿಯರನ್ನು

ತೆಂಕುತಿಟ್ಟಿನ ಯಕ್ಷಗಾನ ಕಲಾವಿದ ಮುಂಡ್ಕೂರು ವಸಂತ ಶೆಟ್ಟಿ ನಿಧನ Read More »

ಸಂಬಂಧಿಕ ಮಹಿಳೆಗೆ ಯಕೃತ್‌ ದಾನ ಮಾಡಿದ ಉಪನ್ಯಾಸಕಿ ಸಾವು

ಇನ್ನೊಬ್ಬರ ಪ್ರಾಣ ಉಳಿಸಲು ಹೋಗಿ ತನ್ನ ಪ್ರಾಣ ಕಳೆದುಕೊಂಡ ಮಹಿಳೆ ಮಂಗಳೂರು: ಸಂಬಂಧಿಕರೊಬ್ಬರ ಪ್ರಾಣ ಉಳಿಸುವ ಸಲುವಾಗಿ ತನ್ನ ಯಕೃತ್‌ ದಾನ ಮಾಡಿದ ನಗರದ ಕಾಲೇಜು ಉಪನ್ಯಾಸಕಿಯೊಬ್ಬರು ಮೃತಪಟ್ಟ ಹೃದಯವಿದ್ರಾವಕ ಘಟನೆ ಮಂಗಳೂರಿನಲ್ಲಿ ನಿನ್ನೆ ಸಂಭಿವಿಸದೆ. ಮೂಲತಃ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊಟೇಶ್ವರದವರಾದ ಅರ್ಚನಾ ಕಾಮತ್ (34) ಮೃತಪಟ್ಟವರು. 69 ವರ್ಷ ಸಂಬಂಧಿಕ ಮಹಿಳೆಗೆ ಯಕೃತ್ತಿನ (Liver) ಕಸಿಗೆ ದಾನಿಯಾಗಲು ಬಯಸಿದ್ದ 34 ವರ್ಷದ ಅರ್ಚನಾ ಕಾಮತ್ ಅವರು ಯಕೃತ್ ದಾನ ಬಳಿಕ ಮಂಗಳೂರಿನ ಆಸ್ಪತ್ರೆಗೆ

ಸಂಬಂಧಿಕ ಮಹಿಳೆಗೆ ಯಕೃತ್‌ ದಾನ ಮಾಡಿದ ಉಪನ್ಯಾಸಕಿ ಸಾವು Read More »

error: Content is protected !!
Scroll to Top