ಪುತ್ತೂರಿನ ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆ ‘ಸ್ವಾಮಿ ವಿವೇಕಾನಂದ ಸದ್ಭಾವನಾ ರಾಜ್ಯ ಸಾಂಘಿಕ ಪ್ರಶಸ್ತಿ’ಗೆ ಆಯ್ಕೆ
ಪುತ್ತೂರು: ನಗರದ ಏಳ್ಮುಡಿಯಲ್ಲಿರುವ ಪ್ರಭು ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ನೀಡುವ ಸ್ವಾಮಿ ವಿವೇಕಾನಂದ ಸದ್ಭಾವನಾ ರಾಜ್ಯ ಸಾಂಘಿಕ ಪ್ರಶಸ್ತಿಗೆ ಆಯ್ಕೆಯಾಗಿದೆ. ಪ್ರತೀ ವರ್ಷದಂತೆ ಈ ವರ್ಷವೂ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು ಹಾಗೂ ವಿಜಯಪುರ ಜಿಲ್ಲಾ ಘಟಕದ ಸಂಯುಕ್ತ ಆಶ್ರಯದಲ್ಲಿ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ನಗರದ ಗವಿಸಿದ್ದೇಶ್ವರ ವೇದಿಕೆಯಲ್ಲಿ ಫೆ.5 ರಂದು ಸ್ವಾಮಿ ವಿವೇಕಾನಂದ ಜಯಂತ್ಯೋತ್ಸವ ಹಾಗೂ ಸ್ವಾಮಿ ವಿವೇಕಾನಂದ ರಾಷ್ಟ್ರೀಯ, ರಾಜ್ಯ ಸದ್ಭಾವನಾ […]