ಬಿಜೆಪಿ ಶಕ್ತಿಕೇಂದ್ರದಿಂದ ಭಾರತೀಯ ಸೇನೆಗೆ ಒಲಿತಾಗಲೆಂದು ಷಣ್ಮುಖ ದೇವ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ
ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ‘ಅಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿ, ಪಾಕ್ ಆಕ್ರಮಿತ ಕಾಶ್ಮೀರ ಹಾಗೂ ಪಾಕಿಸ್ತಾನದಲ್ಲಿದ್ದ 9 ಉಗ್ರರ ಅಡಗುತಾಣಗಳನ್ನು ಧ್ವಂಸಗೊಳಿಸಿ, 90ಕ್ಕೂ ಹೆಚ್ಚು ಉಗ್ರರನ್ನು ಹತ್ಯೆಮಾಡಲಾಗಿದ್ದು, ಈ ಹಿನ್ನಲೆ ದೇಶದ ಮೇಲೆ ಆಗುತ್ತಿರುವ ಉಗ್ರರ ದಾಳಿಯನ್ನು ಸಮರ್ಥವಾಗಿ ಎದುರಿಸಿ ಉಗ್ರ ನೆಲೆಗಳನ್ನು ದ್ವಂಸ ಮಾಡಿದ ನಮ್ಮ ಸೇನೆಗೆ ಇನ್ನಷ್ಟು ಆತ್ಮಸ್ಥೈರ್ಯ ಹಾಗೂ ಶಕ್ತಿ ಬರಲಿ ಎಂದು ನಮ್ಮ ಶ್ರೀ ಷಣ್ಮುಖ ದೇವ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆಯನ್ನು […]