ಸುದ್ದಿ

ಮಾ.11 : ಪುತ್ತೂರು ಅಂಚೆ ವಿಭಾಗದ ತ್ರೈಮಾಸಿಕ ಅಂಚೆ ಅದಾಲತ್

ಪುತ್ತೂರು : ಅಂಚೆ ವಿಭಾಗದ ತ್ರೈಮಾಸಿಕ ಅಂಚೆ ಅದಾಲತ್ ಮಾ.11 ರಂದು ಪುತ್ತೂರು ಅಂಚೆ ವಿಭಾಗದ ಹಿರಿಯ ಅಂಚೆ ಅಧೀಕ್ಷಕರ ಕಚೇರಿಯಲ್ಲಿ  ನಡೆಯಲಿದೆ. ಅದಾಲತ್ತಿನಲ್ಲಿ ಪುತ್ತೂರು, ಕಡಬ, ಸುಳ್ಯ, ಬಂಟ್ವಾಳ, ಮೂಡಬಿದ್ರೆ, ಬೆಳ್ತಂಗಡಿ, ಕಾರ್ಕಳ ಹಾಗೂ ಹೆಬ್ರಿ ತಾಲೂಕುಗಳ ವ್ಯಾಪ್ತಿಯ ಅಂಚೆ ಸೇವೆಗೆ ಸಂಬಂಧಪಟ್ಟ  ಎಲ್ಲಾ ರೀತಿಯ ಸಾರ್ವಜನಿಕ ಕುಂದು ಕೊರತೆಗಳನ್ನು, ತಕರಾರುಗಳನ್ನು  ಪರಿಶೀಲಿಸಲಾಗುವುದು.  ಸಾರ್ವಜನಿಕರು ಪುತ್ತೂರು ವಿಭಾಗಕ್ಕೆ ಸಂಬಂಧಪಟ್ಟ ದೂರುಗಳನ್ನು   ಪತ್ರಮುಖೇನ, ಅಂಚೆ ಅದಾಲತ್ ತಲೆಬರಹದಡಿ ಮಾ.7 ರೊಳಗೆ ಹಿರಿಯ ಅಂಚೆ  ಅಧೀಕ್ಷಕರು, ಪುತ್ತೂರು ವಿಭಾಗ, […]

ಮಾ.11 : ಪುತ್ತೂರು ಅಂಚೆ ವಿಭಾಗದ ತ್ರೈಮಾಸಿಕ ಅಂಚೆ ಅದಾಲತ್ Read More »

ಕೈದಿಗಳಿಗೂ ಮಹಾಕುಂಭಮೇಳದಲ್ಲಿ ಪುಣ್ಯಸ್ನಾನದ ಭಾಗ್ಯ

90 ಸಾವಿರ ಕೈದಿಗಳಿಗಾಗಿ ಜೈಲಿಗೆ ಹರಿಯಲಿದೆ ತ್ರಿವೇಣಿ ಸಂಗಮದ ಜಲ ಪ್ರಯಾಗ್‌ರಾಜ್‌: ಉತ್ತರ ಪ್ರದೇಶ ಸರ್ಕಾರ ರಾಜ್ಯದ ವಿವಿಧ ಜೈಲುಗಳಲ್ಲಿ ಸೆರೆವಾಸದಲ್ಲಿರುವ ಕೈದಿಗಳಿಗೂ ಪವಿತ್ರ ಸ್ನಾನ ಮಾಡುವ ಅವಕಾಶ ಕಲ್ಪಿಸುವ ಮಹತ್ವದ ಹೆಜ್ಜೆ ಇಟ್ಟಿದೆ. ಈ ಮೂಲಕ ಕೈದಿಗಳಿಗೂ ಮಹಾಕುಂಭ ಮೇಳದಲ್ಲಿ ಭಾಗವಹಿಸುವ ಅವಕಾಶ ನೀಡಲಿದೆ. ಉತ್ತರ ಪ್ರದೇಶದ ಜೈಲು ಆಡಳಿತ ರಾಜ್ಯದಲ್ಲಿರುವ 75 ಜೈಲುಗಳಿಗೆ ಪ್ರಯಾಗ್‌ರಾಜ್‌ನ ತ್ರಿವೇಣಿ ಸಂಗಮದಿಂದ ಪವಿತ್ರ ನೀರನ್ನು ತರಲು ವ್ಯವಸ್ಥೆ ಮಾಡುತ್ತಿದೆ. ಉತ್ತರ ಪ್ರದೇಶದ ಸಚಿವ ದಾರಾ ಸಿಂಗ್ ಚೌಹಾಣ್ ಅವರ

ಕೈದಿಗಳಿಗೂ ಮಹಾಕುಂಭಮೇಳದಲ್ಲಿ ಪುಣ್ಯಸ್ನಾನದ ಭಾಗ್ಯ Read More »

ಸಿದ್ದರಾಮಯ್ಯಗೆ ಕ್ಲೀನ್‌ಚಿಟ್‌ ಐತಿಹಾಸಿಕ ದುರಂತ : ಬಿಜೆಪಿ ಟೀಕೆ

ಸಿದ್ದರಾಮಯ್ಯರಿಂದ, ಸಿದ್ದರಾಮಯ್ಯರಿಗಾಗಿ, ಸಿದ್ದರಾಮಯ್ಯರಿಗೋಸ್ಕರ ನಡೆಸಿದ ತನಿಖೆ ಎಂದು ಕಿಡಿಕಾರಿದ ಬಿಜೆಪಿ ನಾಯಕರು ಬೆಂಗಳೂರು: ಭಾರಿ ಚರ್ಚೆಗೆ ಗ್ರಾಸವಾಗಿದ್ದ ಮುಡಾ ನಿವೇಶನ ಅಕ್ರಮ ಹಂಚಿಕೆ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಬಿ.ಎಂ. ಪಾರ್ವತಿ ಸೇರಿ ನಾಲ್ವರು ಆರೋಪಿಗಳಿಗೆ ಕ್ಲೀನ್‌ಚಿಟ್ ನೀಡಿದ್ದು, ಈ ತನಿಖೆಯಲ್ಲಿ ಪಕ್ಷಪಾತ ನಡೆದಿದೆ ಎಂದು ಬಿಜೆಪಿ ಆರೋಪಿಸಿದೆ. ಮುಡಾ ಹಗರಣದಲ್ಲಿ ನಡೆಸಲಾಗಿರುವ ಲೋಕಾಯುಕ್ತ ತನಿಖೆ ಸಿದ್ದರಾಮಯ್ಯರಿಂದ, ಸಿದ್ದರಾಮಯ್ಯರಿಗಾಗಿ, ಸಿದ್ದರಾಮಯ್ಯರಿಗೋಸ್ಕರ ನಡೆಸಿದ ತನಿಖೆಯಾಗಿದ್ದು, ಇದರಲ್ಲಿ ನ್ಯಾಯ ಸಿಕ್ಕುತ್ತದೆ ಎನ್ನುವ ಭರವಸೆ ಯಾರಿಗೂ

ಸಿದ್ದರಾಮಯ್ಯಗೆ ಕ್ಲೀನ್‌ಚಿಟ್‌ ಐತಿಹಾಸಿಕ ದುರಂತ : ಬಿಜೆಪಿ ಟೀಕೆ Read More »

ದಿಲ್ಲಿ ಮುಖ್ಯಮಂತ್ರಿಯಾಗಿ ರೇಖಾ ಗುಪ್ತ ಇಂದು ಪ್ರಮಾಣ ವಚನ ಸ್ವೀಕಾರ

ಮೊದಲ ಸಲ ಶಾಸಕಿಯಾದ ಮಹಿಳೆಗೆ ಒಲಿದ ಅದೃಷ್ಟ ಹೊಸದಿಲ್ಲಿ: ದಿಲ್ಲಿಯ ಮುಖಯಮಂತ್ರಿಯ ಆಯ್ಕೆಯಲ್ಲಿ ಬಿಜೆಪಿ ಹೈಕಮಾಂಡ್‌ ಸಣ್ಣದೊಂದು ಅಚ್ಚರಿಯನ್ನು ನೀಡಿದೆ. ರೇಖಾ ಗುಪ್ತ ನೂತನ ಮುಖ್ಯಮಂತ್ರಿಯಾಗಿ ನಿನ್ನೆ ಆಯ್ಕೆಯಾಗಿದ್ದು, ಇಂದು ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಹಾಗೂ ಇತರ ಸಂಸದೀಯ ಸದಸ್ಯರು ಬನಿಯಾ ಸಮುದಾಯದವರನ್ನು ಸಿಎಂ ಆಗಿ ಆಯ್ಕೆ ಮಾಡುವ ಅಭಿಪ್ರಾಯ ವ್ಯಕ್ತಪಡಿಸಿದ್ದರು ಎನ್ನಲಾಗಿದೆ. ಅದರಂತೆ ಬನಿಯಾ ಸಮುದಾಯದ ರೇಖಾ ಗುಪ್ತ ದಿಲ್ಲಿ ಮುಖ್ಯಮಂತ್ರಿಯಾಗಿದ್ದಾರೆ. ಮೊದಲು

ದಿಲ್ಲಿ ಮುಖ್ಯಮಂತ್ರಿಯಾಗಿ ರೇಖಾ ಗುಪ್ತ ಇಂದು ಪ್ರಮಾಣ ವಚನ ಸ್ವೀಕಾರ Read More »

ಚಾಂಪಿಯನ್ಸ್‌ ಟ್ರೋಫಿ : ಇಂದು ಭಾರತಕ್ಕೆ ಮೊದಲ ಪಂದ್ಯ

ದುಬೈ ಇಂಟರ್​ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಬಾಂಗ್ಲಾದೇಶದ ಎದುರು ಮುಖಾಮುಖಿ ದುಬೈ: ಚಾಂಪಿಯನ್ಸ್ ಟ್ರೋಫಿಗೆ ನಿನ್ನೆ ಚಾಲನೆ ದೊರೆತಿದ್ದು, ಕರಾಚಿಯಲ್ಲಿ ನಡೆದ ಮೊದಲ ಪಂದ್ಯದಲ್ಲಿ ಆತಿಥೇಯ ಪಾಕಿಸ್ಥಾನ ತಂಡವನ್ನು ಬಗ್ಗುಬಡಿದು ನ್ಯೂಜಿಲ್ಯಾಂಡ್ ತಂಡ ಶುಭಾರಂಭ ಮಾಡಿದೆ. ಕೂಟದ ಎರಡನೇ ಪಂದ್ಯದಲ್ಲಿ ಭಾರತ ತಂಡ ಬಾಂಗ್ಲಾದೇಶವನ್ನು ಎದುರಿಸಲಿದೆ. ಈ ಪಂದ್ಯಕ್ಕೆ ದುಬೈನ ಇಂಟರ್​ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂ ಆತಿಥ್ಯ ವಹಿಸಲಿದೆ.ಭಾರತ ತಂಡದ ಚಾಂಪಿಯನ್ಸ್ ಟ್ರೋಫಿ ಅಭಿಯಾನ ಇಂದಿನಿಂದ ಆರಂಭವಾಗಲಿದೆ. ಲೀಗ್ ಹಂತದ ಮೊದಲ ಪಂದ್ಯದಲ್ಲೇ ಗೆಲ್ಲುವ ಮೂಲಕ ಭಾರತ ತಂಡ ಚಾಂಪಿಯನ್ಸ್

ಚಾಂಪಿಯನ್ಸ್‌ ಟ್ರೋಫಿ : ಇಂದು ಭಾರತಕ್ಕೆ ಮೊದಲ ಪಂದ್ಯ Read More »

ಬೆಳ್ತಂಗಡಿ ಮತ್ತು ಪುತ್ತೂರು ಮುಳಿಯದಲ್ಲಿ Gem Stone ಉತ್ಸವದ ಸಂಭ್ರಮ

ಬೆಳ್ತಂಗಡಿ : ನವೀನತೆ ಹಾಗೂ ಪರಿಶುದ್ಧತೆ ಆಭರಣದ ಮೂಲಕ ಮನೆ ಮಾತಾಗಿರುವ ಮುಳಿಯ ಜ್ಯುವೆಲ್ಸ್ ಪುತ್ತೂರು ಹಾಗೂ ಬೆಳ್ತಂಗಡಿ ಮಳಿಗೆಯಲ್ಲಿ ಪೆ.15 ರಿಂದ ಆರಂಭಗೊಂಡಿದ್ದು ಫೆ 28 ರವರೆಗೆ Gem stone ಉತ್ಸವ ನಡೆಯಲಿದೆ. ಗ್ರಾಹಕರಿಗೆ ವಿಶೇಷತೆಗಳನ್ನು ನೀಡುತ್ತಾ ಬಂದಿರುವ ಮುಳಿಯದಲಿ 13 ದಿನಗಳ ಕಾಲ gem Stone ಉತ್ಸವದಲ್ಲಿ ಒಂಬತ್ತು ವಿಭಿನ್ನ ರತ್ನದ ಕಲ್ಲುಗಳನ್ನು ಒಳಗೊಂಡಿರುವ ಮಾಣಿಕ್ಯ, ಮುತ್ತು, ಹವಳ, ಪಚ್ಚೆ, ಪುಷ್ಯರಾಗ, ವಜ್ರ, ನೀಲ, ಗೋಮೇಧಿಕ ಮತ್ತು ವೈಢೂರ್ಯ ಗಳಾದ ನವರತ್ನ  ಆಭರಣಗಳ ಉತ್ಸವದ

ಬೆಳ್ತಂಗಡಿ ಮತ್ತು ಪುತ್ತೂರು ಮುಳಿಯದಲ್ಲಿ Gem Stone ಉತ್ಸವದ ಸಂಭ್ರಮ Read More »

ಜೆಸಿಬಿ ಹರಿದು 2 ವರ್ಷದ ಮಗು ಮೃತ್ಯು

ಬೆಂಗಳೂರು : ಆಟವಾಡುತ್ತಿದ್ದ ಮಗುವಿನ ಮೇಲೆ ಜೆಸಿಬಿ ಹರಿದ ಘಟನೆ ಕಾಡುಗೋಡಿ ಬಳಿಯ ಸಿಟಿ ಲೇಔಟ್​ನಲ್ಲಿ ನಡೆದಿದೆ. ಜೆಸಿಬಿ ಹರಿದು ಮೃತ ಪಟ್ಟ ಮಗು ಥವನ್ ರೆಡ್ಡಿ (2) ಎನ್ನಲಾಗಿದೆ. ಮಂಗಳವಾರ ಸಂಜೆ 6.30ಕ್ಕೆ ಘಟನೆ ನಡೆದಿದ್ದು, ಜೆಸಿಬಿ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿದ್ದರಿಂದ ಈ ದುರ್ಘಟನೆ ನಡೆದಿದೆ. ಮೃತ ಮಗು ಥವನ್ ರೆಡ್ಡಿ ಮನೆ ಮುಂದೆ ಆಟವಾಡುತ್ತಿದ್ದಾಗ ವೇಗವಾಗಿ ಬಂದ ಜೆಸಿಬಿ ಮಗುವಿನ ತಲೆಯ ಮೇಲೆ ಹರಿದು ಹೋಗಿದೆ.  ಗಾಯಗೊಂಡ ಮಗುವನ್ನು ವೈದೇಹಿ ಆಸ್ಪತ್ರೆಗೆ

ಜೆಸಿಬಿ ಹರಿದು 2 ವರ್ಷದ ಮಗು ಮೃತ್ಯು Read More »

ಲಾರಿ-ಬೈಕ್‍ ಡಿಕ್ಕಿ | ಬೈಕ್‍ ಸವಾರ ಗಂಭೀರ ಗಾಯ

ಕಾರ್ಕಳ : ಅಜೆಕ್ಕಾರು-ಕೈಕಂಬ ಸರ್ಕಲ್ ಬಳಿ ಹಾದು ಹೋಗಿರುವ ರಾಜ್ಯ ಹೆದ್ದಾರಿಯಲ್ಲಿ ಲಾರಿ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ ಹೊಡೆದ ಘಟನೆ ನಡೆದಿದ್ದು, ಬೈಕ್‍ ಸವಾರನಿಗೆ ಗಂಭೀರಗಾಯವಾಗಿದ್ದು, ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳವಾರ ಸಂಜೆ 6.30ರ ವೇಳೆಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರರು ರಸ್ತೆಗೆಸೆಯಲ್ಪಟ್ಟು ಇಬ್ಬರ ಕೈ ಹಾಗೂ ಕಾಲುಗಳ ಮೂಳೆ ಮುರಿತಕ್ಕೊಳಗಾಗಿ ಕೋಮಾಸ್ಥಿತಿಯಲ್ಲಿ ಇದ್ದರು. ಬಿಹಾರ ಮೂಲದವರಾಗಿದ್ದು, ಅವರಲ್ಲಿ ಓರ್ವನ ಹೆಸರು ಆರಿಫ್ (20) ಎಂದು ತಿಳಿಬಂದಿದೆ.   ಈತನನ್ನು  ಅಂಬುಲೆನ್ಸ್ ಮೂಲಕ

ಲಾರಿ-ಬೈಕ್‍ ಡಿಕ್ಕಿ | ಬೈಕ್‍ ಸವಾರ ಗಂಭೀರ ಗಾಯ Read More »

ಕಾರು ಅಪಘಾತ | ಮೂವರಿಗೆ ಗಾಯ

ಪುತ್ತೂರು: ಎರಡು ಕಾರುಗಳು ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಘಟನೆ ಪುತ್ತೂರಿನ ಪೋಳ್ಯ ಸಮೀಪದ ಪುಳಿತ್ತಡಿಯಲ್ಲಿ  ನಡೆದಿದ್ದು, ಕಾರಿನಲ್ಲಿದ್ದ ಮೂವರಿಗೆ ಗಾಯಗಳಾಗಿವೆ. ಬಿ.ಸಿ.ರೋಡ್ ಸಾಗರ್ ಆಡಿಟೋರಿಯಂ ನಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ ರೆಮ್ಮಾಯಿ ಸಮೀಪದ ನಿವಾಸಿಗಳಿದ್ದ ಕಾರು ಹಾಗೂ ಮಂಗಳೂರಿನಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಕಾರಿನ ಮಧ್ಯೆ ಈ ಅಪಘಾತ ಸಂಭವಿಸಿದೆ. ಮದುವೆಗೆ ತೆರಳುತ್ತಿದ್ದ ಕಾರಿನ ಮುಂಭಾಗದಲ್ಲಿ ಹೂವಿನ ಬೊಕ್ಕೆಯಿಂದ ಅಲಂಕಾರ ಮಾಡಿದ್ದು, ಗಾಳಿಗೆ ಹೂವಿನ ಬೊಕ್ಕೆ ಚಾಲಕನ ಸೈಡಿನ ಗಾಜಿಗೆ ಬಡಿದ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ

ಕಾರು ಅಪಘಾತ | ಮೂವರಿಗೆ ಗಾಯ Read More »

ಮಾ.5ರಂದು ಸಂಸದ ತೇಜಸ್ವಿ ಸೂರ್ಯ ವಿವಾಹ

ಗಾಯಕಿ, ಭರತನಾಟ್ಯ ಕಲಾವಿದೆ ಶಿವಶ್ರೀಯನ್ನು ವರಿಸಲಿರುವ ತೇಜಸ್ವಿ ಬೆಂಗಳೂರು: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮಾ.5ರಂದು ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ಅವರ ಜೊತೆ ಹಸೆಮಣೆ ಏರಲಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಸಾಂಪ್ರದಾಯಿಕವಾಗಿ ವಿವಾಹ ಕಾರ್ಯಕ್ರಮ ನಡೆಯಲಿದೆ. ತಮಿಳುನಾಡು ಮೂಲದ ಶಿವಶ್ರೀ ಅವರು ಈಗಾಗಲೇ ಗಾಯಕಿಯಾಗಿ ಖ್ಯಾತರಾಗಿದ್ದಾರೆ. ಮಾರ್ಚ್‌ 5 ಮತ್ತು 6ರಂದು ಬೆಂಗಳೂರಿನಲ್ಲಿ ಇವರ ವಿವಾಹ ಸಮಾರಂಭ ನೆರವೇರಲಿದೆ. 5ರಂದು ಕನಕಪುರ ರಸ್ತೆಯಲ್ಲಿರುವ ಖಾಸಗಿ ರೆಸಾರ್ಟ್‍ವೊಂದರಲ್ಲಿ ಮದುವೆ ನಡೆಯಲಿದೆ ಎಂದು ತಿಳಿದುಬಂದಿದೆ. ಮದುವೆ ಸಮಾರಂಭ

ಮಾ.5ರಂದು ಸಂಸದ ತೇಜಸ್ವಿ ಸೂರ್ಯ ವಿವಾಹ Read More »

error: Content is protected !!
Scroll to Top