ಪುತ್ತೂರಿಗೆ ಮತ್ತೊಂದು ರೈಲು ಯೋಜನೆ| ಹಾರಾಡಿ ರೈಲ್ವೆ ಮೇಲ್ಸೇತುವೆ ಮರು ನಿರ್ಮಾಣಕ್ಕೆ 8 ಕೋಟಿ ರೂ. ಪ್ರಸ್ತಾವಣೆ | ಪುತ್ತೂರು- ಉಪ್ಪಿನಂಗಡಿ ಮಧ್ಯೆ ಬಾಕಿಯಾಗಿರುವ ಚತುಷ್ಪಥ ಕಾಮಗಾರಿ ಮತ್ತೆ ಆರಂಭ
ಪುತ್ತೂರು : ಪುತ್ತೂರು- ಉಪ್ಪಿನಂಗಡಿ- ಗುರುವಾಯನಕೆರೆ ರಾಜ್ಯ ಹೆದ್ದಾರಿಯಲ್ಲಿ ಪುತ್ತೂರು- ಉಪ್ಪಿನಂಗಡಿ ಮಧ್ಯೆ ಬಾಕಿಯಾಗಿರುವ ಚತುಷ್ಪಥ ಕಾಮಗಾರಿ ಪ್ರಾರಂಭಗೊಂಡಿದೆ. ಪುತ್ತೂರು- ಉಪ್ಪಿನಂಗಡಿ ಕಾಮಗಾರಿ ಮಧ್ಯೆಯೇ ಹೆದ್ದಾರಿಯಲ್ಲಿ ಬರುವ ಹಾರಾಡಿ ರೈಲ್ವೆ ಮೇಲ್ಸೇತುವೆಯನ್ನು ಹೊಸದಾಗಿ ಮರು ನಿರ್ಮಿಸಲು ಪ್ರಸ್ತಾವನೆ ಸಿದ್ಧಪಡಿಸಲಾಗಿದ್ದು, ಶೀಘ್ರದಲ್ಲೇ ಅಂತಿಮವಾಗಲಿದೆ. ಹಾರಾಡಿ ರೈಲ್ವೆ ಮೇಲ್ಸೇತುವೆ ಮರು ನಿರ್ಮಾಣಕ್ಕೆ ಸುಮಾರು 8 ಕೋಟಿ ರೂ. ಮೊತ್ತವನ್ನು ಅಂದಾಜಿಸಲಾಗಿದೆ. ಬಳಿಕ ಪುತ್ತೂರು ನಗರದ ಬೊಳುವಾರಿನ ಆಂಜನೇಯ ಮಂತ್ರಾಲಯದ ಬಳಿಯಿಂದ ಚತುಷ್ಪಥ ಕಾಮಗಾರಿ ಆರಂಭವಾಗಲಿದೆ. ರೈಲ್ವೆ ಯೋಜನೆ ಬೊಳುವಾರು ಬಳಿಯ […]