ಸುದ್ದಿ

ಹಿರಿಯ ಕಾಂಗ್ರೆಸ್ ನಾಯಕ ಎಕೆ ಆಂಟನಿ ಪುತ್ರ ಅನಿಲ್ ಆಂಟನಿ ಬಿಜೆಪಿ ಸೇರ್ಪಡೆ

ದೆಹಲಿ : ಕೇಂದ್ರ ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಎಕೆ ಆಂಟನಿ ಅವರ ಮಗ ಅನಿಲ್ ಆಂಟನಿ ಎ. 6 ರಂದು ಬಿಜೆಪಿ ಸೇರ್ಪಡೆಯಾದರು. ಪ್ರಧಾನಿ ನರೇಂದ್ರ ಮೋದಿ ಅವರ ಕುರಿತಾದ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರದ ವಿಚಾರವಾಗಿ ಪಕ್ಷದ ನಿಲುವನ್ನು ಟೀಕಿಸಿದ್ದ ಅನಿಲ್ ಆಂಟನಿ, ಜನವರಿಯಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದರು. ಅಂದಿನಿಂದಲೂ ಅವರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ನಿರೀಕ್ಷೆ ವ್ಯಕ್ತವಾಗಿತ್ತು. ಅನಿಲ್ ಆಂಟನಿ ಅವರು ಕೇಂದ್ರ ಸಚಿವರಾದ ಪಿಯೂಷ್ ಗೋಯಲ್ […]

ಹಿರಿಯ ಕಾಂಗ್ರೆಸ್ ನಾಯಕ ಎಕೆ ಆಂಟನಿ ಪುತ್ರ ಅನಿಲ್ ಆಂಟನಿ ಬಿಜೆಪಿ ಸೇರ್ಪಡೆ Read More »

ಆರ್‌ಬಿಐ ವಿತ್ತೀಯ ನೀತಿ ಪ್ರಕಟದಲ್ಲಿ ರೆಪೊ ದರವನ್ನು ಶೇ. 6.5 ರಷ್ಟು ಯಥಾಸ್ಥಿತಿ ಮುಂದುವರಿಸಲು ನಿರ್ಧಾರ

ಮುಂಬೈ : ಹಣದುಬ್ಬರ ಮುಂದುವರಿದಿದ್ದರೂ ರಿಸರ್ವ್ ಬ್ಯಾಂಕ್ ತನ್ನ ನೀತಿಗಳ ದರದಲ್ಲಿ ಬದಲಾವಣೆಯನ್ನು ಮಾಡದೆ ಪ್ರಸಕ್ತ ಆರ್ಥಿಕ ವರ್ಷದ ತ್ರೈಮಾಸಿಕದಲ್ಲಿ ಯಥಾಸ್ಥಿತಿ ಮುಂದುವರಿಯಲು ನಿರ್ಧರಿಸಿದೆ.ಆರ್ ಬಿಐ ಇಂದು ಪ್ರಕಟಿಸಿರುವ ಪ್ರಸಕ್ತ ಆರ್ಥಿಕ ಸಾಲಿನ ವಿತ್ತೀಯ ತ್ರೈಮಾಸಿಕದಲ್ಲಿ ರೆಪೊ ದರವನ್ನು ಶೇಕಡಾ 6.5 ರಷ್ಟು ಯಥಾಸ್ಥಿತಿ ಮುಂದುವರಿಸಲು ನಿರ್ಧರಿಸಿದೆ. ಕಳೆದ ಮೇ 2022 ರಿಂದ 250 ಬೇಸಿಸ್ ಪಾಯಿಂಟ್‌ಗಳಿಗೆ ಒಟ್ಟು ಆರು ಅನುಕ್ರಮ ದರ ಹೆಚ್ಚಳವಾಗಿತ್ತು, ಆ ಬಳಿಕ ದರ ಹೆಚ್ಚಳವನ್ನು ನಿಲ್ಲಿಸಲಾಗಿತ್ತು. ಇಂದು ಆರ್ ಬಿಐ ಗವರ್ನರ್

ಆರ್‌ಬಿಐ ವಿತ್ತೀಯ ನೀತಿ ಪ್ರಕಟದಲ್ಲಿ ರೆಪೊ ದರವನ್ನು ಶೇ. 6.5 ರಷ್ಟು ಯಥಾಸ್ಥಿತಿ ಮುಂದುವರಿಸಲು ನಿರ್ಧಾರ Read More »

ಕಾಂಗ್ರೆಸ್‌ 2ನೇ ಪಟ್ಟಿ ಪ್ರಕಟ

ಬೆಂಗಳೂರು : ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಇಂದು ಬಿಡುಗಡೆ ಮಾಡಲಾಗಿದೆ. ಈ ಪಟ್ಟಿಯಲ್ಲಿ 42 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಇದ್ದು, ಬಾಕಿ 58 ಕ್ಷೇತ್ರಗಳಲ್ಲಿ ಅಭ್ಯರ್ಥಿ ಆಯ್ಕೆ ಗೊಂದಲದ ಹಿನ್ನೆಲೆಯಲ್ಲಿ ಬಿಜೆಪಿ ಪಟ್ಟಿ ಪಗ್ರಕಟವಾದ ನಂತರವೇ ಬಿಡುಗಡೆ ಮಾಡಲು ಹೈಕಮಾಂಡ್‌ ತೀರ್ಮಾನಿಸಿದೆ.ಇಂದು ಹೊಸದಿಲ್ಲಿಯಲ್ಲಿ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ರಾಜ್ಯದ ಮುಖಂಡರಾದ ಸಿದ್ದರಾಮಯ್ಯ, ಜಿ. ಪರಮೇಶ್ವರ, ಹರಿಪ್ರಸಾದ್‌ ಹಾಗೂ ರಾಜ್ಯ ಚುನಾವಣಾ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ

ಕಾಂಗ್ರೆಸ್‌ 2ನೇ ಪಟ್ಟಿ ಪ್ರಕಟ Read More »

ಏ. 6 : ಕಾಂಗ್ರೆಸ್‌ ನ ಎರಡನೇ ಪಟ್ಟಿ ಬಿಡುಗಡೆ

ಭಿನ್ನಮತ ಶಮನಕ್ಕೆ ವರಿಷ್ಠರ ತಿಣುಕಾಟ ಬೆಂಗಳೂರು : ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ನಿರಾಯಾಸವಾಗಿ ಬಿಡುಗಡೆ ಮಾಡಿ ಗೆದ್ದಿದ್ದ ಕಾಂಗ್ರೆಸ್‌ಗೆ ಉಳಿದಿರುವ 100 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಕಗ್ಗಂಟಾಗಿತ್ತು. ಕೈ ನಾಯಕರು ಕಳೆದ ಎರಡು ದಿನಗಳಲ್ಲಿ ದಿಲ್ಲಿಯಲ್ಲೇ ಬೀಡುಬಿಟ್ಟು ನಿರಂತರ ಸಭೆ ನಡೆಸಿದ್ದಾರೆ. ಅಂತಿಮವಾಗಿ 100ರ ಪೈಕಿ 45ರಿಂದ 50 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಫೈನಲ್ ಆಗಿದ್ದು, ಏಪ್ರಿಲ್ 6ರಂದು ಬೆಳಗ್ಗೆ 11 ಗಂಟೆಯೊಳಗೆ ಕೈ ಅಭ್ಯರ್ಥಿಗಳ 2 ನೇ ಪಟ್ಟಿ ಬಿಡುಗಡೆಯಾಗುವುದು ಬಹುತೇಕ ಖಚಿತವಾಗಿದೆ. ಬಾಕಿ ಉಳಿದಿರುವ

ಏ. 6 : ಕಾಂಗ್ರೆಸ್‌ ನ ಎರಡನೇ ಪಟ್ಟಿ ಬಿಡುಗಡೆ Read More »

ಆರೋಗ್ಯ ವಿಮೆ ಯೋಜನೆ ಜಾರಿ ಹಿಂಪಡೆಯದಿದ್ದರೆ ಮಹಾರಾಷ್ಟ್ರ ಹಳ್ಳಿಗಳಿಗೆ ಕನ್ನಡಿಗರು ನುಗ್ಗುತ್ತೇವೆ : ಎಚ್ಚರಿಕೆ ನೀಡಿದ ಸಿಎಂ ಬೊಮ್ಮಾಯಿ

ಬೆಂಗಳೂರು : ಕರ್ನಾಟಕ ಮತ್ತು ಮಹಾರಾಷ್ಟ್ರಗಳ ನಡುವಿನ ಗಡಿ ವಿವಾದ ಕುರಿತ ಪ್ರಕರಣವು ಸುಪ್ರೀಂ ಕೋರ್ಟ್‌ ಅಂಗಳಲ್ಲಿದ್ದರೂ ಮಹಾರಾಷ್ಟ್ರ ಸರಕಾರ ಕರ್ನಾಟಕದ 860ಕ್ಕೂ ಅಧಿಕ ಹಳ್ಳಿಗಳಿಗೆ ಆರೋಗ್ಯ ವಿಮೆಯನ್ನು ಒದಗಿಸುತ್ತಿರುವ ಮೂಲಕ ಉದ್ಧಟತನ ಪ್ರದರ್ಶನ ಮಾಡಿರುವ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿದ್ದಾರೆ. ಈ ಕುರಿತು ಸರಣಿ ಟ್ವೀಟ್‌ಗಳ ಮೂಲಕ ಮಹಾರಾಷ್ಟ್ರ ಸರಕಾರ ಮತ್ತು ಮುಖ್ಯಮಂತ್ರಿಗೆ ತರಾಟೆ ತೆಗೆದುಕೊಂಡಿದ್ದಾರೆ. ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ಸುಪ್ರೀಂ ಕೋರ್ಟ್ ‌ನಲ್ಲಿ ಇದ್ದರೂ ಮಹಾರಾಷ್ಟ್ರ ಸರ್ಕಾರ ಎರಡೂ

ಆರೋಗ್ಯ ವಿಮೆ ಯೋಜನೆ ಜಾರಿ ಹಿಂಪಡೆಯದಿದ್ದರೆ ಮಹಾರಾಷ್ಟ್ರ ಹಳ್ಳಿಗಳಿಗೆ ಕನ್ನಡಿಗರು ನುಗ್ಗುತ್ತೇವೆ : ಎಚ್ಚರಿಕೆ ನೀಡಿದ ಸಿಎಂ ಬೊಮ್ಮಾಯಿ Read More »

ಕಷ್ಟದ ಸಮಯದಲ್ಲಿ ನನ್ನ ಜೊತೆಗಿದ್ದರು, ಸಿಎಂ ಬೊಮ್ಮಾಯಿಗೆ ನನ್ನ ಬೆಂಬಲ: ರಾಜಕೀಯ ಪ್ರವೇಶದ ಬಗ್ಗೆ ನಟ ಸುದೀಪ್ ಸ್ಪಷ್ಟನೆ

ಬೆಂಗಳೂರು: ನಾನು ಸಿಎಂ ಬಸವರಾಜ ಬೊಮ್ಮಾಯಿ ಅವರ ಪರವಾಗಿ ನಿಲ್ಲುತ್ತೇನೆ. ಅವರಿಗೆ ನನ್ನ ಬೆಂಬಲ ಇದೆ ಎಂದು ನಟ ಕಿಚ್ಚ ಸುದೀಪ್‌ ಹೇಳಿದ್ದಾರೆ. ಈ ಮೂಲಕ ಕರ್ನಾಟಕ ವಿಧಾನಸಭಾ ಚುನಾವಣೆ ವೇಳೆ ಬಸವರಾಜ ಬೊಮ್ಮಾಯಿ ಅವರಿಗೆ ಬೆಂಬಲವನ್ನು ಬಹಿರಂಗವಾಗಿ ಘೋಷಿಸಿದ್ದಾರೆ. ಬೆಂಗಳೂರಿನ ಹೋಟೆಲ್‌ ಅಶೋಕದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರೀತಿಯ ವ್ಯಕ್ತಿಯ ಪರವಾಗಿ ನಿಂತುಕೊಳ್ಳುತ್ತೇನೆ ಎಂದು ಹೇಳಲು ಬಂದಿದ್ದೇನೆ. ಸಿನಿಮಾಗೆ ಎಂಟ್ರಿ ಕೊಟ್ಟಾಗ ಯಾರೂ ಗಾಡ್ ಫಾದರ್ ಇರಲಿಲ್ಲ. ನಾನು ಸಿನಿಮಾ ‌ಎಂಟ್ರಿ‌ ಕೊಟ್ಟಾಗ ಬೊಮ್ಮಾಯಿ

ಕಷ್ಟದ ಸಮಯದಲ್ಲಿ ನನ್ನ ಜೊತೆಗಿದ್ದರು, ಸಿಎಂ ಬೊಮ್ಮಾಯಿಗೆ ನನ್ನ ಬೆಂಬಲ: ರಾಜಕೀಯ ಪ್ರವೇಶದ ಬಗ್ಗೆ ನಟ ಸುದೀಪ್ ಸ್ಪಷ್ಟನೆ Read More »

ನೈತಿಕ ಪೊಲೀಸ್‌ ಗಿರಿ : ಹಿಂದೂ ಯುವತಿಯೊಂದಿಗೆ ಮಾತನಾಡಿದ ಮುಸ್ಲಿಂ ಯುವಕನ ಮೇಲೆ ಹಲ್ಲೆ

ಮಂಗಳೂರು : ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್‌ ಗಿರಿ ಘಟನೆ ಎ. 5 ರಂದು ವರದಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆ ಬಳಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮುಸ್ಲಿಂ ಯುವಕನೊಬ್ಬ ಹಿಂದೂ ಸ್ನೇಹಿತೆಯೊಂದಿಗೆ ಮಾತನಾಡಿದ್ದಕ್ಕಾಗಿ ಆತನ ಮೇಲೆ ಗ್ಯಾಂಗ್‌ವೊಂದು ಹಲ್ಲೆ ನಡೆಸಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಸಂತ್ರಸ್ತನನ್ನು ಮೊಹಮ್ಮದ್ ಜಹೀರ್ (22) ಎಂದು ಗುರುತಿಸಲಾಗಿದೆ. ಗಾಯಗೊಂಡ ಯುವಕನನ್ನು ನಂತರ ಆಸ್ಪತ್ರೆಗೆ ದಾಖಲಿಸಲಾಯಿತು. ಈ ಕೃತ್ಯದ ಹಿಂದೆ ಬಜರಂಗದಳದ ಕಾರ್ಯಕರ್ತರು ಇರಬಹುದು ಎಂದು ಶಂಕಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ನೈತಿಕ ಪೊಲೀಸ್‌ ಗಿರಿ : ಹಿಂದೂ ಯುವತಿಯೊಂದಿಗೆ ಮಾತನಾಡಿದ ಮುಸ್ಲಿಂ ಯುವಕನ ಮೇಲೆ ಹಲ್ಲೆ Read More »

ಸಿಕ್ಕಿಂ : ಭಾರಿ ಹಿಮಪಾತದಿಂದಾಗಿ 6 ಸಾವು – 25 ಮಂದಿ ಪ್ರವಾಸಿಗರು ಹಿಮದಡಿಯಲ್ಲಿ ಸಿಲುಕಿರುವ ಶಂಕೆ

ಗ್ಯಾಂಗ್ಟಕ್: ಸಿಕ್ಕಿಂನ ನಾಥುಲಾ ಪ್ರದೇಶದಲ್ಲಿ ಮಂಗಳವಾರ ಭಾರಿ ಹಿಮಪಾತ ಸಂಭವಿಸಿ ಆರು ಪ್ರವಾಸಿಗರು ಸಾವನ್ನಪ್ಪಿದ್ದಾರೆ ಮತ್ತು 11 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಗಾಯಾಳುಗಳನ್ನು ರಾಜಧಾನಿ ಗ್ಯಾಂಗ್ಟಕ್‌ನ ಆಸ್ಪತ್ರೆಗೆ ಕರೆತರಲಾಗುತ್ತಿದೆ ಮತ್ತು 22ಕ್ಕೂ ಹೆಚ್ಚು ಪ್ರವಾಸಿಗರನ್ನು ರಕ್ಷಣೆ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.ಹಿಮದಡಿ ಸಿಲುಕಿರುವವರ ರಕ್ಷಣೆ ಮತ್ತು ರಸ್ತೆ ತೆರವು ಕಾರ್ಯಾಚರಣೆಗಳು ಇನ್ನೂ ನಡೆಯುತ್ತಿವೆ.ನಾಥುಲಾ ಪಾಸ್ ಚೀನಾದ ಗಡಿಯಲ್ಲಿದ್ದು, ಅದರ ರಮಣೀಯ ಸೌಂದರ್ಯದಿಂದಾಗಿ ಪ್ರಮುಖ ಪ್ರವಾಸಿ ತಾಣವಾಗಿದೆ. ಜವಾಹರಲಾಲ್ ನೆಹರು ಮಾರ್ಗದ 14ನೇ ಮೈಲಿಗಲ್ಲು

ಸಿಕ್ಕಿಂ : ಭಾರಿ ಹಿಮಪಾತದಿಂದಾಗಿ 6 ಸಾವು – 25 ಮಂದಿ ಪ್ರವಾಸಿಗರು ಹಿಮದಡಿಯಲ್ಲಿ ಸಿಲುಕಿರುವ ಶಂಕೆ Read More »

error: Content is protected !!
Scroll to Top