ಸುದ್ದಿ

ಪುತ್ತೂರು : ಆರೋಪಿಗಳಿಗೆ ಗಾಂಜಾ ಪೂರೈಸುತ್ತಿದ್ದ ಮೂವರ ಬಂಧನ

ಪುತ್ತೂರಿನಲ್ಲಿ 1.6 ಕ್ವಿಂಟಾಲ್‌ ಗಾಂಜಾ ವಶವಾದ ಪ್ರಕರಣ ಪುತ್ತೂರು : ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಜ.19ರಂದು 53,03,000 ರೂ .ಮೌಲ್ಯದ 1 ಕ್ವಿಂಟಾಲ್ 6 ಕೆ.ಜಿ 50 ಗ್ರಾಂ ಗಾಂಜಾ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಒಡಿಶಾದ ವ್ಯಕ್ತಿ ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಆರೋಪಿಗಳಿಗೆ ಹಣ ಮತ್ತು ವಾಹನದ ವ್ಯವಸ್ಥೆಯನ್ನು ಮಾಡಿದ ಬೆಳ್ತಂಗಡಿ ಚಾರ್ಮಾಡಿ ನಿವಾಸಿ ಮಹಮ್ಮದ್ ಫಯಾಜ್ ಡಿ.ಕೆ (27) ಹಾಗೂ ಬೆಳ್ತಂಗಡಿ ಕಕ್ಕಿಂಜೆ ನಿವಾಸಿ ನಝಿರ್ (42) […]

ಪುತ್ತೂರು : ಆರೋಪಿಗಳಿಗೆ ಗಾಂಜಾ ಪೂರೈಸುತ್ತಿದ್ದ ಮೂವರ ಬಂಧನ Read More »

ಗೃಹಲಕ್ಷ್ಮಿ ಸಿಗಬೇಕಾದರೆ ಜೀವಿತ ಪ್ರಮಾಣಪತ್ರ ಸಲ್ಲಿಸಬೇಕು

ಮರಣ ಹೊಂದಿದವರ ಖಾತೆಗೆ ಹಣ ಜಮೆಯಾಗುವುದನ್ನು ತಡೆಯಲು ಹೊಸ ನಿಯಮ ಬೆಂಗಳೂರು : ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯ ಹಣ ದುರುಪಯೋಗವಾಗುವುದನ್ನು ತಡೆಯುವ ಉದ್ದೇಶದಿಂದ ಹೊಸ ನಿಯಮ ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ. ಮರಣ ಹೊಂದಿರುವ ಫಲಾನುಭವಿಗಳ ಖಾತೆಗಳಿಗೂ ಹಣ ಜಮಾ ಆಗುತ್ತಿರುವುದನ್ನು ತಪ್ಪಿಸಲು ‘ಜೀವಿತ ಪ್ರಮಾಣಪತ್ರ’ ಸಲ್ಲಿಸುವುದನ್ನು ಕಡ್ಡಾಯಗೊಳಿಸುವ ಬಗ್ಗೆ ಸರ್ಕಾರ ಗಂಭೀರವಾಗಿ ಚಿಂತನೆ ನಡೆಸಿದೆ. ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರು ಹಾಗೂ ಎಂಎಲ್‌ಸಿ ದಿನೇಶ್ ಗೂಳಿಗೌಡ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ

ಗೃಹಲಕ್ಷ್ಮಿ ಸಿಗಬೇಕಾದರೆ ಜೀವಿತ ಪ್ರಮಾಣಪತ್ರ ಸಲ್ಲಿಸಬೇಕು Read More »

ಮದ್ಯದ ನಶೆಯಲ್ಲಿ ನಡುರಸ್ತೆಯಲ್ಲಿ ರಂಪಾಟ ಮಾಡಿದ ಯುವತಿಯರು

ಯದ್ವಾತದ್ವಾ ಸ್ಕೂಟಿ ಚಲಾಯಿಸಿ ಹಲವು ವಾಹನಗಳಿಗೆ ಡಿಕ್ಕಿ ಬೆಂಗಳೂರು: ಇಬ್ಬರು ಯುವತಿಯರು ಕಂಠಪೂರ್ತಿ ಮದ್ಯ ಸೇವಿಸಿ ಹಾದಿಬೀದಿಯಲ್ಲಿ ರಂಪಾಟ ನಡೆಸಿದ ಘಟನೆ ಬೆಂಗಳೂರಿನ ಬನ್ನೇರುಘಟ್ಟ ರಸ್ತೆ ಹುಳಿಮಾವು ಬಳಿ ಶನಿವಾರ ತಡರಾತ್ರಿ ನಡೆದಿದೆ. ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಯುವತಿಯರು ಸಿಕ್ಕ ಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದಿದ್ದಾರೆ. ಕ್ಯಾಬ್‌ಗೆ ಡಿಕ್ಕಿ ಹೊಡೆದು ಚಾಲಕ ಜೊತೆ ಡಿಕ್ಕಿ ಹೊಡೆದು ಜಗಳ ಮಾಡಿದ್ದಾರೆ. ಕ್ಯಾಬ್‌ ಚಾಲಕ ನಿಮ್ಮದೇ ತಪ್ಪು ಎಂದಿದ್ದಕ್ಕೆ ಮದ್ಯದ ಬೆರಳು ತೋರಿಸಿ ಅವಾಚ್ಯ ಪದಗಳಿಂದ ನಿಂದಿಸಿ ಹಲ್ಲೆ ಮಾಡಲು

ಮದ್ಯದ ನಶೆಯಲ್ಲಿ ನಡುರಸ್ತೆಯಲ್ಲಿ ರಂಪಾಟ ಮಾಡಿದ ಯುವತಿಯರು Read More »

ಟಿ20 ವಿಶ್ವಕಪ್‌ : ಅನನುಭವಿ ಅಮೆರಿಕ ಎದುರು ತಿಣುಕಾಡಿದ ಭಾರತ

ಮೊದಲ ಪಂದ್ಯದಲ್ಲೇ ಬ್ಯಾಟಿಂಗ್‌ ಬಂಡವಾಳ ಬಯಲು; ಪ್ರಯಾಸದ ಜಯ ಮುಂಬೈ: ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ಅಮೆರಿಕ ನಡುವಿನ 2026ರ ಟಿ20 ವಿಶ್ವಕಪ್ ಮೊದಲ ದಿನದ ಮೂರನೇ ಪಂದ್ಯದಲ್ಲಿ ಆತಿಥೇಯ ಭಾರತ ತಂಡ ಜಯ ದಾಖಲಿಸಿತು. ಇದರೊಂದಿಗೆ ಹಾಲಿ ಚಾಂಪಿಯನ್ ಆಗಿ ಪಂದ್ಯಾವಳಿಗಿಳಿದಿರುವ ಭಾರತ ಗೆಲುವಿನ ಶುಭಾರಂಭ ಮಾಡಿದೆ. ಕ್ರಿಕೆಟಿನಲ್ಲಿನ್ನೂ ಅಂಬೆಗಾಲಿಡುತ್ತಿರುವ ಅಮೆರಿಕ ತಂಡವನ್ನು ಭಾರತ ಸೋಲಿಸಿದೆ. ಈ ಪಂದ್ಯದಲ್ಲಿ ದುರ್ಬಲ ತಂಡದ ಎದುರು ಭಾರತ ದಾಖಲೆಗಳ ಮೇಲೆ ದಾಖಲೆ ಬರೆಯಬಹುದು ಎಂಬ ನಿರೀಕ್ಷೆ

ಟಿ20 ವಿಶ್ವಕಪ್‌ : ಅನನುಭವಿ ಅಮೆರಿಕ ಎದುರು ತಿಣುಕಾಡಿದ ಭಾರತ Read More »

ಗಾಡಾಯಿಕಲ್ಲು ಚಾರಣಕ್ಕೆ ತಾತ್ಕಾಲಿಕ ನಿಷೇಧ

ಬೆಳ್ತಂಗಡಿ: ಚಾರಣಿಗರ ನೆಚ್ಚಿನ ಸ್ಥಳ ಗಡಾಯಿಕಲ್ಲಿಗೆ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದಿಂದ ಗಡಾಯಿಕಲ್ಲಿಗೆ ತಾತ್ಕಾಲಿಕ ನೆಲೆಯಲ್ಲಿ ಚಾರಣ ಪ್ರವೇಶ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಬೇಸಿಗೆ ಕಾಲವಾದ್ದರಿಂದ ಕಾಡ್ಗಿಚ್ಚು ಹರಡುವ ಸಾಧ್ಯತೆ ಇದ್ದು, ಮುಂಜಾಗ್ರತಾ ಕ್ರಮವಾಗಿ ಈ ಆದೇಶ ಹೊರಡಿಸಲಾಗಿದೆ. ಫೆ. 7 ರಿಂದ ಮುಂದಿನ ಆದೇಶದ ವರೆಗೆ ಈ ನಿಷೇಧ ಇರುವುದಾಗಿ ಆದೇಶದಲ್ಲಿ ತಿಳಿಸಲಾಗಿದೆ.

ಗಾಡಾಯಿಕಲ್ಲು ಚಾರಣಕ್ಕೆ ತಾತ್ಕಾಲಿಕ ನಿಷೇಧ Read More »

ಸುಳ್ಯ ಕ್ಷೇತ್ರದ ಪ.ಜಾ/ಪಂ.ದ ಯೋಜನೆಯಡಿ ರಸ್ತೆ ಅಭಿವೃದ್ಧಿಗೆ 75 ಲಕ್ಷ ರೂ. ಬಿಡುಗಡೆ

ಸುಳ್ಯ: ವಿಧಾನಸಭಾ ಕ್ಷೇತ್ರಕ್ಕೆ 2025-26 ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಯೋಜನೆಯಡಿ ರಸ್ತೆ ಅಭಿವೃದ್ಧಿಯ ಹಿನ್ನೆಲೆಯಲ್ಲಿ 75 ಲಕ್ಷ ರೂ. ಅನುದಾನ ಬಿಡುಗಡೆಯಾಗಿದ್ದು, ಟೆಂಡರ್ ಪ್ರಕ್ರಿಯೆ ಪೂರ್ಣವಾಗಿದೆ. ಹಂಚಿಕೆಯಾಗಿರುವ ಅನುದಾನದಡಿ ವಿವಿಧ ಕ್ರಿಯಾ ಯೋಜನೆಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡುವ ಬಗ್ಗೆ ಸರ್ಕಾರ ನಿರ್ಧರಿಸಿದೆ. ​ಒಟ್ಟು ಅನುದಾನ: ₹75.00 ಲಕ್ಷಗಳು (8 ಕಾಮಗಾರಿಗಳಿಗೆ)​ಅನುಮೋದನೆಗೊಂಡಿದೆ. ಕಾಮಗಾರಿಗಳ ವಿವರ:ಸುಳ್ಯ ತಾಲೂಕು ಎಡಮಂಗಲ ಗ್ರಾಮದ ಡೆಮ್ಮಾಯಿಲ ಪ. ಜಾತಿ ಕಾಲೋನಿ ರಸ್ತೆ ಅಭಿವೃದ್ಧಿಗೆ 10 ಲಕ್ಷಸುಳ್ಯ ತಾಲೂಕು ದೇವಚಳ್ಳ

ಸುಳ್ಯ ಕ್ಷೇತ್ರದ ಪ.ಜಾ/ಪಂ.ದ ಯೋಜನೆಯಡಿ ರಸ್ತೆ ಅಭಿವೃದ್ಧಿಗೆ 75 ಲಕ್ಷ ರೂ. ಬಿಡುಗಡೆ Read More »

ಶಾಸಕರ ಪತ್ನಿಯ ಅವಹೇಳನ: ಆರೋಪಿಯ ಬಂಧನ

ಮಂಗಳೂರು: ಶಾಸಕ ವೇದವ್ಯಾಸ ಕಾಮತ್ ಮತ್ತು ಅವರ ಹೆಂಡತಿಯ ಬಗ್ಗೆ ಶಾಸಕ ಕೆ. ಎಂ. ಶಿವಲಿಂಗೇಗೌಡ ಆಡಿದ್ದಾರೆ ಎನ್ನಲಾದ ಮಾತುಗಳನ್ನು ಉಲ್ಲೇಖ ಮಾಡಿ ಫೇಸ್‌ಬುಕ್‌ನಲ್ಲಿ ಶಾಸಕರ ಪತ್ನಿಯನ್ನು ವ್ಯಕ್ತಿಯೊಬ್ಬ ಅವಮಾನಿಸಿದ ಬಗ್ಗೆ ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ಆರೋಪಿ ಬಂಟ್ವಾಳದ ಅಮ್ಟಾಡಿಯ ಶರತ್ ರೈ ಎಂಬಾತನನ್ನು ಬಂಧಿಸಲಾಗಿದೆ. ಈತ ರಿಯಲ್ ಎಸ್ಟೇಟ್ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದು, ಸಾಮಾಜಿಕ ಜಾಲತಾಣದಲ್ಲಿ ವೇದವ್ಯಾಸ್ ಕಾಮತ್ ಅವರ ಪತ್ನಿಯನ್ನು ಅವಮಾನಿಸುವಂತೆ ಪೋಸ್ಟ್ ಹಾಕಿದ್ದ. ಈ ಸಂಬಂಧ ಮಹಿಳೆಯೊಬ್ಬರು ದೂರು ದಾಖಲು

ಶಾಸಕರ ಪತ್ನಿಯ ಅವಹೇಳನ: ಆರೋಪಿಯ ಬಂಧನ Read More »

ಮೆಟ್ರೋ ದರ ಏರಿಕೆ: ಡಿ ಕೆ ಶಿವಕುಮಾರ್ ಹೇಳಿದ್ದೇನು?

ಬೆಂಗಳೂರು: ಮೆಟ್ರೋ ಪ್ರಯಾಣ ದರ ಏರಿಕೆ ಬಗ್ಗೆ ಸಾರ್ವಜನಿಕ ವಲಯದಲ್ಲೂ ಸಾಕಷ್ಟು ಅಸಮಾಧಾನ ಎದ್ದಿದೆ. ಈ ಬಗ್ಗೆ ಮಾತನಾಡಿರುವ ಡಿ.ಸಿ.ಎಂ. ಡಿ. ಕೆ. ಶಿವಕುಮಾರ್ ಅವರು ಮೆಟ್ರೋ ದರ ಪರಿಷ್ಕರಣೆಗೆ ಸಂಬಂಧಿಸಿದ ಹಾಗೆ ಮಾತನಾಡುತ್ತೇವೆ. ಯಾವ ಕಾರಣಕ್ಕೂ ಜನರಿಗೆ ಸಮಸ್ಯೆಯಾಗಲು ಬಿಡುವುದಿಲ್ಲ ಎಂದು ಹೇಳಿದ್ದಾರೆ. ಮಾಧ್ಯಮಗಳ‌ ಮೂಲಕ ಮೆಟ್ರೋ ದರ ಏರಿಕೆಯಾಗಿದೆ ಎನ್ನುವುದನ್ನು ನೋಡಿದ್ದೇನೆ. ಈ ಬಗ್ಗೆ ನಮ್ಮನ್ನು ಯಾರೂ ಸಂಪರ್ಕಿಸಿಲ್ಲ. ಕೇಂದ್ರ ಸರ್ಕಾರದ ಚೇರ್ಮನ್ ಮೆಟ್ರೋ ಚೇರ್ಮನ್ ಆಗಿದ್ದಾರೆ. ಇಂದು ಅಥವಾ ನಾಳೆ ಅವರೊಂದಿಗೆ ಮಾತುಕತೆ

ಮೆಟ್ರೋ ದರ ಏರಿಕೆ: ಡಿ ಕೆ ಶಿವಕುಮಾರ್ ಹೇಳಿದ್ದೇನು? Read More »

ಜೈಲಿನಲ್ಲಿದ್ದ ಉಗ್ರ ಅನಾರೋಗ್ಯದಿಂದ ಸಾವು

ಆರು ವರ್ಷಗಳಿಂದ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಬಂಧಿಯಾಗಿದ್ದ ಉಗ್ರ ಬೆಂಗಳೂರು : ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಬಂಧಿತನಾಗಿದ್ದ ಶಂಕಿತ ಭಯೋತ್ಪಾದಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ. ಸುದ್ದಗುಂಟೆಪಾಳ್ಯ ಸ್ಫೋಟಕ ವಸ್ತು ಸಂಗ್ರಹ ಪ್ರಕರಣದಲ್ಲಿ ಬಂಧಿತನಾಗಿದ್ದ ಸಾಧಿಕ್ ಪಾಷಾ (47) ಅನಾರೋಗ್ಯದಿಂದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ. ನಿನ್ನೆ ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆಂದು ತಿಳಿದು ಬಂದಿದೆ. ಸಾದಿಕ್ ಪಾಷಾ ಕಳೆದ ಆರು ತಿಂಗಳಿಂದ ಲೋ ಬಿಪಿ ಹಾಗೂ ಹೈ ಶುಗರ್ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ

ಜೈಲಿನಲ್ಲಿದ್ದ ಉಗ್ರ ಅನಾರೋಗ್ಯದಿಂದ ಸಾವು Read More »

ಮೆಟ್ರೋ ದರ ಏರಿಕೆಯಲ್ಲಿ ಕೇಂದ್ರವನ್ನೇಕೆ ದೂಷಿಸುವುದು?: ರಾಜ್ಯ ಸರ್ಕಾರಕ್ಕೆ HDK ಪ್ರಶ್ನೆ

ಬೆಂಗಳೂರು: ಮೆಟ್ರೋ ದರ ಏರಿಕೆ ಖಂಡಿಸಿ ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದರ ಏರಿಕೆ ಮಾಡಿದರೆ ಜನರು ಸಂತೋಷದಿಂದ ಎಲ್ಲವನ್ನೂ ಕೊಡುತ್ತಾರೆ ಎನ್ನುವುದು ಮುಖ್ಯಮಂತ್ರಿಗಳ ಭ್ರಮೆ ಎಂದು ಅವರು ತಿಳಿಸಿದ್ದಾರೆ. ಮೆಟ್ರೋ ಯೋಜನೆಯಲ್ಲಿ ಕೇಂದ್ರದ ಪಾಲು 20% ಇದೆ ಎಂದು ದರ ಏರಿಕೆಯನ್ನು ಕೇಂದ್ರ ಸರ್ಕಾರದ ತಲೆಗೆ ಕಟ್ಟುವುದು ಸರಿಯಲ್ಲ. ಹೆಚ್ಚಿನ ಹಣ ರಾಜ್ಯ ಸರ್ಕಾರವೇ ಈ ಯೋಜನೆಗೆ ಬಳಸಿದೆ ಎಂದಾದ ಮೇಲೆ ದರ ನಿಗದಿ ಮಾಡುವ

ಮೆಟ್ರೋ ದರ ಏರಿಕೆಯಲ್ಲಿ ಕೇಂದ್ರವನ್ನೇಕೆ ದೂಷಿಸುವುದು?: ರಾಜ್ಯ ಸರ್ಕಾರಕ್ಕೆ HDK ಪ್ರಶ್ನೆ Read More »

error: Content is protected !!
Scroll to Top