ಸುದ್ದಿ

ಶಾಶ್ವತವಾದದ್ದು ಎಂದಿಗೂ ನಾಶವಾಗುವುದಿಲ್ಲ: ಪ್ರಧಾನಿ ಮೋದಿ

ನವದೆಹಲಿ: ಸಾವಿರಾರು ವರುಷಗಳ ಐಹಿತ್ಯವುಳ್ಳ ಪ್ರಸಿದ್ಧ ಸೋಮನಾಥ ದೇಗುಲದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಲೇಖನವೊಂದನ್ನು ಬರೆದಿದ್ದಾರೆ. ದೇಗುಲದ ಮೇಲೆ ಘಜ್ನಿ ದಾಳಿ ನಡೆಸಿ ಸಾವಿರ ವರ್ಷಗಳಾಗುತ್ತಿದ್ದು, ಇದೇ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ಶ್ರೀ ಸೋಮನಾಥ ಟ್ರಸ್ಟ್ ಅಧ್ಯಕ್ಷರಾಗಿದ್ದಾರೆ. ಈ ಹಿನ್ನೆಲೆ ಅವರು ದೇವಾಲಯದ ಬಗ್ಗೆ ಬರೆದುಕೊಂಡಿದ್ದು, ಇದು ಕೇವಲ ಆರಾಧನಾ ಸ್ಥಳವಲ್ಲ ಬದಲಾಗಿ ಭಾರತದ ಆತ್ಮ, ನಾಗರೀಕತೆಯ ಪ್ರತೀಕ ಎಂದು ವರ್ಣಿಸಿದ್ದಾರೆ. ಸೋಮನಾಥ ಎಂಬ ಹೆಸರು ಕೇಳಿದಾಗ ಹೃದಯದಲ್ಲಿ ಹೆಮ್ಮೆ ಮೂಡುತ್ತದೆ. ಇದು […]

ಶಾಶ್ವತವಾದದ್ದು ಎಂದಿಗೂ ನಾಶವಾಗುವುದಿಲ್ಲ: ಪ್ರಧಾನಿ ಮೋದಿ Read More »

ಹೀಲಿಯಂ ಗ್ಯಾಸ್ ಸ್ಪೋಟ: ಮೃತರ ಕುಟುಂಬಗಳಿಗೆ ಆರ್ಥಿಕ ಸಹಾಯ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮೈಸೂರು ಅರಮನೆ ಮುಂಭಾಗದಲ್ಲಿ ಸಂಭವಿಸಿದ ಹೀಲಿಯಂ ಗ್ಯಾಸ್ ಸ್ಫೋಟದಲ್ಲಿ ಮೃತರಾದವರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರವನ್ನು ಸಿಎಂ ‌ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಕ್ರಿಸ್‌ಮಸ್‌ ದಿನದಂದು ಅರಮನೆ ಮುಂದೆ ಬಲೂನಿಗೆ ತುಂಬುವ ಹೀಲಿಯಂ ಗ್ಯಾಸ್ ಸ್ಪೋಟವಾಗಿತ್ತು. ಈ ದುರ್ಘಟನೆಯಲ್ಲಿ ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರಿಗೆ ಗಂಭೀರ ಗಾಯಗಳಾಗಿದ್ದ ಪರಿಣಾಮ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಗಾಯಾಳುಗಳ ಪೈಕಿ ಇಬ್ಬರು ಮೃತಪಟ್ಟಿದ್ದರು. ಮೃತರ ನೋವಿಗೆ ಸ್ಪಂದಿಸಿರುವ ಸಿ ಎಂ ಸಿದ್ದರಾಮಯ್ಯ ಸಂತ್ರಸ್ತ ಕುಟುಂಬಗಳಿಗೆ ಆರ್ಥಿಕ ಪರಿಹಾರದ ಭರವಸೆ

ಹೀಲಿಯಂ ಗ್ಯಾಸ್ ಸ್ಪೋಟ: ಮೃತರ ಕುಟುಂಬಗಳಿಗೆ ಆರ್ಥಿಕ ಸಹಾಯ ಘೋಷಿಸಿದ ಸಿಎಂ ಸಿದ್ದರಾಮಯ್ಯ Read More »

ಓಂ ಶಕ್ತಿ ತೇರಿನ ಮೇಲೆ ಕಲ್ಲೆಸೆದವರು ಹುಡುಗರು : ಪರಮೇಶ್ವರ್‌

15-17 ವರ್ಷದ ನಾಲ್ಕು ಮಂದಿಯನ್ನು ಬಂಧಿಸಿದ್ದೇವೆ ಎಂದ ಗೃಹ ಸಚಿವ ಬೆಂಗಳೂರು: ಬೆಂಗಳೂರಿನಲ್ಲಿ ಭಾನುವಾರ ರಾತ್ರಿ ಓಂ ಶಕ್ತಿ ಮಾಲಾಧಾರಿಗಳ ಮೆರವಣಿಗೆ ಮೇಲೆ ಕಲ್ಲೆಸೆದವರು ನಾಲ್ಕೈದು ಚಿಕ್ಕ ಹುಡುಗರು, ಅವರನ್ನೆಲ್ಲ ಬಂಧಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಜೆಜೆಆರ್ ನಗರದ ವಿಎಸ್ ಗಾರ್ಡನ್‌ನ ಓಂ ಶಕ್ತಿ ದೇವಸ್ಥಾನದ ಬಳಿ ಓಂ ಶಕ್ತಿ ಮಾಲಾಧಾರಿಗಳ ಮೇಲೆ ನಾಲ್ಕೈದು 15-17 ವರ್ಷದವರು ಕಲ್ಲೆಸೆದಿದ್ದಾರೆ. ಎಲ್ಲರನ್ನೂ ಈಗಾಗಲೇ ಅವರನ್ನು ಬಂಧಿಸಲಾಗಿದೆ. ಇದು ಬಾಲಾಪರಾಧದ ವ್ಯಾಪ್ತಿಗೆ ಬರುತ್ತದೆ. ಪೊಲೀಸರು ಮುಂದಿನ ಕ್ರಮ

ಓಂ ಶಕ್ತಿ ತೇರಿನ ಮೇಲೆ ಕಲ್ಲೆಸೆದವರು ಹುಡುಗರು : ಪರಮೇಶ್ವರ್‌ Read More »

ದೆಹಲಿ ಗಲಭೆ ಪ್ರಕರಣ : ಉಮರ್ ಖಾಲಿದ್, ಶಾರ್ಜೀಲ್ ಇಮಾಮ್‌ಗೆ ಜಾಮೀನು ನಿರಾಕರಣೆ

ಗಲಭೆಯಲ್ಲಿ ಪ್ರಮುಖ ಪಾತ್ರ ವಹಿಸಿರುವುದಕ್ಕೆ ಸಾಕ್ಷಿ ಇದೆ ಎಂದ ಸುಪ್ರೀಂ ಕೋರ್ಟ್‌ ನವದೆಹಲಿ : ದೆಹಲಿಯಲ್ಲಿ 2020ರಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರ ಜಾಮೀನು ಅರ್ಜಿಗಳನ್ನು ಸುಪ್ರೀಂ ಕೋರ್ಟ್​ ಇಂದು ವಜಾಗೊಳಿಸಿದೆ. ಡಿಸೆಂಬರ್ 10ರಂದು ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ಪೀಠ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್ಜಿ) ಎಸ್.ವಿ. ರಾಜು ಮತ್ತು ಹಿರಿಯ ವಕೀಲರಾದ ಕಪಿಲ್ ಸಿಬಲ್, ಅಭಿಷೇಕ್

ದೆಹಲಿ ಗಲಭೆ ಪ್ರಕರಣ : ಉಮರ್ ಖಾಲಿದ್, ಶಾರ್ಜೀಲ್ ಇಮಾಮ್‌ಗೆ ಜಾಮೀನು ನಿರಾಕರಣೆ Read More »

ಕೋಗಿಲು ಲೇಔಟ್‌ ಬಿಬಿಎಂಪಿಗೆ ಸೇರಿದ್ದು : ಕೃಷ್ಣ ಬೈರೇಗೌಡ

ಅಕ್ರಮವಾಗಿ ಮನೆ ನಿರ್ಮಿಸಿದ್ದು ನಿಜ ಎಂದ ಸಚಿವ ಬೆಂಗಳೂರು: ಕೋಗಿಲು ಲೇಔಟ್‌ನಲ್ಲಿ ಅನಧಿಕೃತವಾಗಿ ಮನೆ ನಿರ್ಮಾಣ ಆಗಿದ್ದು ನಿಜ. ಇದು ಬಿಬಿಎಂಪಿ ಜಾಗವಾಗಿದ್ದು, ಕಂದಾಯ ಇಲಾಖೆಯ ಜಾಗವಲ್ಲ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಬಿಬಿಎಂಪಿ ಇರಲಿ, ಕಂದಾಯ ಇರಲಿ ಒತ್ತುವರಿಯಾಗಿರುವ ಜಾಗವನ್ನು ನಿರಂತರವಾಗಿ ತೆರವು ಮಾಡಲಾಗುತ್ತದೆ. ಇದು ಆಡಳಿತ ವ್ಯವಸ್ಥೆಯಲ್ಲಿ ನಿರಂತರವಾಗಿ ನಡೆಯುವ ಕೆಲಸ. ಕಂದಾಯ ಇಲಾಖೆಯಲ್ಲಿ ಪ್ರತಿ ಶನಿವಾರ ತೆರವು ನಡೆಯುತ್ತಿರುತ್ತದೆ. ಸರ್ಕಾರಿ ಜಾಗದಲ್ಲಿ ಇರಬಹುದು, ಬಿಬಿಎಂಪಿ ಜಾಗದಲ್ಲಿ ಹಕ್ಕುಪತ್ರ ನೀಡಲು ಸಾಧ್ಯವಿಲ್ಲ

ಕೋಗಿಲು ಲೇಔಟ್‌ ಬಿಬಿಎಂಪಿಗೆ ಸೇರಿದ್ದು : ಕೃಷ್ಣ ಬೈರೇಗೌಡ Read More »

ಇಂದಿನಿಂದ ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಪೂರ್ವಸಿದ್ಧತಾ ಪರೀಕ್ಷೆ

ಮೂರು ಹಂತಗಳಲ್ಲಿ ನಡೆಯಲಿದೆ ಪ್ರಿಪರೇಟರಿ ಎಕ್ಸಾಮ್‌ ಬೆಂಗಳೂರು: 2025-26ನೇ ಸಾಲಿನ ಎಸ್ಎಸ್ಎಲ್‌ಸಿ ವಿದ್ಯಾರ್ಥಿಗಳಿಗೆ ಇಂದಿನಿಂದ ಮೊದಲ ಹಂತದ ಪೂರ್ವ ತಯಾರಿ ಪರೀಕ್ಷೆ ಆರಂಭಗೊಳ್ಳಲಿದೆ. ಮುಖ್ಯ ಪರೀಕ್ಷೆಗೂ ಮುನ್ನ 3 ಹಂತದಲ್ಲಿ ಪ್ರಿಪರೇಟರಿ ಪರೀಕ್ಷೆ ನಡೆಯಲಿದ್ದು, ಫೆಬ್ರುವರಿಯಲ್ಲಿ ಕೊನೆಯ ಹಂತದ ಪರೀಕ್ಷೆ ಮುಕ್ತಾಯಗೊಳ್ಳಲಿದೆ. ಪೂರ್ವ ಸಿದ್ಧತಾ ಪರೀಕ್ಷೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (ಕೆಎಸ್‌ಇಎಬಿ) ಈಗಾಗಲೇ ವೇಳಾಪಟ್ಟಿಗಳನ್ನು ಪ್ರಕಟಿಸಿದೆ. ಈ ಪರೀಕ್ಷೆಯು ಮುಖ್ಯ ಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ದಿಕ್ಸೂಚಿಯಾಗಿರಲಿದೆ ಎಂದು ಹೇಳಲಾಗಿದೆ. ಮೊದಲ

ಇಂದಿನಿಂದ ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಪೂರ್ವಸಿದ್ಧತಾ ಪರೀಕ್ಷೆ Read More »

ದೇವರಾಜ ಅರಸು ದಾಖಲೆ ಬ್ರೇಕ್‌ ಮಾಡುವತ್ತ ಸಿದ್ದರಾಮಯ್ಯ

ದೀರ್ಘಾವಧಿಗೆ ರಾಜ್ಯದ ಸಿಎಂ ಆಗಿ ಅಧಿಕಾರ ಚಲಾಯಿಸಿದ ದಾಖಲೆ ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ (ಜ.6) ದೇವರಾಜ ಅರಸು ಅವರ ದಾಖಲೆಯನ್ನು ಸರಿಗಟ್ಟಲಿದ್ದು, ಅತಿಹೆಚ್ಚು ಅವಧಿಗೆ ರಾಜ್ಯದ ಚುಕ್ಕಾಣಿ ಹಿಡಿದ ಮುಖ್ಯಮಂತ್ರಿ ಎಂಬ ಇತಿಹಾಸ ಸೃಷ್ಟಿಸಲಿದ್ದಾರೆ. ಜ.7 ಕಳೆದರೆ ಸಿದ್ದರಾಮಯ್ಯ ಅವರೇ ರಾಜ್ಯದಲ್ಲಿ ಅತಿಹೆಚ್ಚು ಕಾಲ ಆಡಳಿತ ನಡೆಸಿದ ಮುಖ್ಯಮಂತ್ರಿ ಎನಿಸಿಕೊಳ್ಳಲಿದ್ದಾರೆ. ರಾಜ್ಯ ರಾಜಕಾರಣದಲ್ಲಿ ಉಳುವವನೇ ಹೊಲದೊಡೆಯ ಎಂಬ ಕ್ರಾಂತಿಕಾರಿ ಕ್ರಮ ಕೈಗೊಂಡಿದ್ದ ದೇವರಾಜ ಅರಸರು ಏಳೂವರೆ ವರ್ಷ ಮುಖ್ಯಮಂತ್ರಿಯಾಗಿದ್ದರು. ಅರಸು ತಮ್ಮ ಏಳೂವರೆ ವರ್ಷದ

ದೇವರಾಜ ಅರಸು ದಾಖಲೆ ಬ್ರೇಕ್‌ ಮಾಡುವತ್ತ ಸಿದ್ದರಾಮಯ್ಯ Read More »

ಸೋಷಿಯಲ್‌ ಮೀಡಿಯಾದಲ್ಲಿ ಪ್ರಚೋದನಕಾರಿ ಪೋಸ್ಟ್ : ಸ್ವಯಂಪ್ರೇರಿತ ಕೇಸ್‌ ದಾಖಲಿಸಿದ ಪೊಲೀಸರು

ಗೋಮಾಂಸ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಮಂಗಳೂರು: ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ ಡಿ.27ರಂದು ನಾರ್ಲಪದವು ಪ್ರದೇಶದಲ್ಲಿ ನಡೆದ ಎರಡು ಪ್ರತ್ಯೇಕ ಘಟನೆಗಳಿಗೆ ಸಂಬಂಧಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಗೂ ಬೆದರಿಕೆ ಕಾಮೆಂಟ್ ಮಾಡಿದ ಕುರಿತು ಬಜಪೆ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ನಾರ್ಲಪದವು ಎಂಬಲ್ಲಿ ಅಬ್ದುಲ್ ಸತ್ತಾರ್ ಎಂಬವರು ಮಗಳನ್ನು ಸ್ಕೂಟರ್‌ನಲ್ಲಿ ಕೂರಿಸಿಕೊಂಡು ಅಕ್ರಮವಾಗಿ ದನದ ಮಾಂಸ ಸಾಗಾಟ ಮಾಡುತ್ತಿದ್ದ ಆರೋಪದ ಕುರಿತು ಒಂದು ಪ್ರಕರಣ ದಾಖಲಾಗಿದ್ದು, ಇದೇ

ಸೋಷಿಯಲ್‌ ಮೀಡಿಯಾದಲ್ಲಿ ಪ್ರಚೋದನಕಾರಿ ಪೋಸ್ಟ್ : ಸ್ವಯಂಪ್ರೇರಿತ ಕೇಸ್‌ ದಾಖಲಿಸಿದ ಪೊಲೀಸರು Read More »

ಸುಳ್ಯ : ತಾಯಿ, ಮಗುವಿನ ಮೃತದೇಹ ಕೆರೆಯಲ್ಲಿ ಪತ್ತೆ

ಸುಳ್ಯ: ತಾಯಿ ಮತ್ತು ಮೂರು ವರ್ಷದ ಮಗುವಿನ ಮೃತದೇಹ ಮನೆ ಸಮೀಪದ ಕೆರೆಯಲ್ಲಿ ಪತ್ತೆಯಾಗಿರುವ ಘಟನೆ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡಿಯಾಲ ಗ್ರಾಮದಲ್ಲಿ ಭಾನುವಾರ ನಡೆದಿದೆ. ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಆರ್ವಾರ ಹರೀಶ್ ಎಂಬವರ ಪತ್ನಿ ಮಧುಶ್ರೀ (34) ಹಾಗೂ ಅವರ ಮೂರು ವರ್ಷದ ಮಗು ಧನ್ವಿ ಮೃತರು. ಹರೀಶ್ ಅವರು ತಂದೆ, ತಾಯಿ, ಪತ್ನಿ, ಮಗುವಿನೊಂದಿಗೆ ಆರ್ವಾರ ಮನೆಯಲ್ಲಿ ವಾಸಿಸುತ್ತಿದ್ದು, ಶನಿವಾರ ರಾತ್ರಿ ಮಲಗಿದ್ದ ತಾಯಿ, ಮಗು ಭಾನುವಾರ ಬೆಳಗ್ಗೆ ಕಾಣೆಯಾಗಿದ್ದರು. ಹುಡುಕಾಡಿದಾಗ

ಸುಳ್ಯ : ತಾಯಿ, ಮಗುವಿನ ಮೃತದೇಹ ಕೆರೆಯಲ್ಲಿ ಪತ್ತೆ Read More »

ಓಂ ಶಕ್ತಿ ರಥಯಾತ್ರೆ ಮೇಲೆ ಕಲ್ಲು ತೂರಾಟ : ಮೂವರಿಗೆ ಗಾಯ

ರಾತ್ರಿ ರಥಯಾತ್ರೆ ನಡೆಯುತ್ತಿದ್ದಾಗ ಕಲ್ಲು ತೂರಿದ ಅನ್ಯಕೋಮಿನವರು ಬೆಂಗಳೂರು: ದೇವಿಯ ತೇರು ಎಳೆಯುತ್ತಿರುವ ವೇಳೆ ತೇರಿನ ಮೇಲೆ ಹಾಗೂ ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ಎಸೆದಿರುವ ಘಟನೆ ಬೆಂಗಳೂರಿನ ಜೆಜೆ ನಗರದ ವಿಎಸ್ ಗಾರ್ಡನ್‌ನ ಓಂ ಶಕ್ತಿ ದೇವಸ್ಥಾನದ ಬಳಿ ಭಾನುವಾರ ರಾತ್ರಿ ನಡೆದಿದ್ದು, ಇಲ್ಲಿನ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಮೂವರಿಗೆ ಕಲ್ಲೇಟು ಬಿದ್ದಿರುವ ಬಗ್ಗೆ ಆರೋಪ ಕೇಳಿಬಂದಿದೆ. ಕಲ್ಲು ಎಸೆದು ಕಿಡಿಗೇಡಿಗಳು ಪರಾರಿಯಾಗಿದ್ದಾರೆ. ಮಗು, ಯುವತಿ, ವಯಸ್ಕ ಮಹಿಳೆಯ ಮೇಲೆ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ. ಕಿಡಿಗೇಡಿಗಳನ್ನು

ಓಂ ಶಕ್ತಿ ರಥಯಾತ್ರೆ ಮೇಲೆ ಕಲ್ಲು ತೂರಾಟ : ಮೂವರಿಗೆ ಗಾಯ Read More »

error: Content is protected !!
Scroll to Top