ಸುದ್ದಿ

ನವವಿವಾಹಿತೆ ಆತ್ಮಹತ್ಯೆ ಪ್ರಕರಣ : ಪತಿಯೂ ಆತ್ಮಹತ್ಯೆ, ಅತ್ತೆ ಆತ್ಮಹತ್ಯೆ ಯತ್ನ

ಹನಿಮೂನ್‌ನಿಂದ ಅರ್ಧಕ್ಕೆ ವಾಪಸು ಬಂದು ಆತ್ಮಹತ್ಯೆ ಮಾಡಿಕೊಂಡಿರುವ ನವವಿವಾಹಿತೆ ಬೆಂಗಳೂರು: ನವವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ ಸಿಕ್ಕಿದೆ. ಗಾನವಿ ಪತಿ ಸೂರಜ್ ಆತ್ಮಹತ್ಯೆ ಮಾಡಿಕೊಂಡರೆ ಅತ್ತೆ ಜಯಂತಿ ಆತ್ಮಹತ್ಯೆಗೆ ಯತ್ನಿಸಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. ಗಾನವಿ ಆತ್ಮಹತ್ಯೆಯ ಬಳಿಕ ಸೂರಜ್‌, ಜಯಂತಿ, ಸೂರಜ್‌ ಸಹೋದರ ಸಂಜಯ್‌ ಮಹಾರಾಷ್ಟ್ರದ ನಾಗ್ಪುರಕ್ಕೆ ತೆರಳಿದ್ದರು. ಖಾಸಗಿ ಹೋಟೆಲಿನಲ್ಲಿ ಸೂರಜ್‌ ಆತ್ಮಹತ್ಯೆ ಮಾಡಿಕೊಂಡರೆ, ಆತ್ಮಹತ್ಯೆಗೆ ಯತ್ನಿಸಿದ ಜಯಂತಿ ಈಗ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. ಶುಕ್ರವಾರ ಸಂಜೆ ಸೂರಜ್ ಆತ್ಮಹತ್ಯೆ […]

ನವವಿವಾಹಿತೆ ಆತ್ಮಹತ್ಯೆ ಪ್ರಕರಣ : ಪತಿಯೂ ಆತ್ಮಹತ್ಯೆ, ಅತ್ತೆ ಆತ್ಮಹತ್ಯೆ ಯತ್ನ Read More »

16 ವರ್ಷಕ್ಕಿಂತ ಕೆಳಗಿನವರಿಗೆ ಸೋಷಿಯಲ್‌ ಮೀಡಿಯಾ ಬ್ಯಾನ್‌ : ಹೈಕೋರ್ಟ್‌ ಸಲಹೆ

ಆಸ್ಟ್ರೇಲಿಯಾ ಮಾದರಿ ಕಟ್ಟುನಿಟ್ಟಿನ ಕಾನೂನು ಜಾರಿಗೆ ತರುವ ಚಿಂತನೆ ಚೆನ್ನೈ: ಆಸ್ಟ್ರೇಲಿಯಾದ ಮಾದರಿಯಲ್ಲಿ ಭಾರತದಲ್ಲೂ 16 ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಸೋಷಿಯಲ್‌ ಮೀಡಿಯಾ ಕಾನೂನು ಜಾರಿಗೆ ತರುವ ಸಾಧ್ಯತೆಗಳನ್ನು ಪರಿಶೀಲಿಸುವಂತೆ ಕೇಂದ್ರ ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ಸೂಚಿಸಿದೆ. ಅಪ್ರಾಪ್ತ ವಯಸ್ಕರು ಸೋಷಿಯಲ್ ಮೀಡಿಯಾದಲ್ಲಿ ಸುಲಭವಾಗಿ ಅಶ್ಲೀಲ ವಿಷಯಗಳಿಗೆ ಒಡ್ಡಿಕೊಳ್ಳುತ್ತಿರುವುದನ್ನು ತಡೆಗಟ್ಟಲು ಆಸ್ಟ್ರೇಲಿಯಾ ಮಾದರಿ ಕಾನೂನನ್ನ ಭಾರತದಲ್ಲಿ ಪರಿಗಣಿಸಬೇಕು ಎಂದು ಮದ್ರಾಸ್ ಕೋರ್ಟ್ ಸಲಹೆ ನೀಡಿದೆ. ನ್ಯಾಯಮೂರ್ತಿಗಳಾದ ಜಿ.ಜಯಚಂದ್ರನ್ ಮತ್ತು ಕೆ.ಕೆ.ರಾಮಕೃಷ್ಣನ್ ಅವರಿದ್ದ ವಿಭಾಗೀಯ ಪೀಠ ಪಿಐಎಲ್ ಅರ್ಜಿ

16 ವರ್ಷಕ್ಕಿಂತ ಕೆಳಗಿನವರಿಗೆ ಸೋಷಿಯಲ್‌ ಮೀಡಿಯಾ ಬ್ಯಾನ್‌ : ಹೈಕೋರ್ಟ್‌ ಸಲಹೆ Read More »

ಮೈಸೂರು ಸ್ಫೋಟ : ಮೃತರ ಸಂಖ್ಯೆ ಮೂರಕ್ಕೇರಿಕೆ

ಅರಮನೆಯ ಜಯಮಾರ್ತಾಂಡ ದ್ವಾರದ ಬಳಿ ಸಂಭವಿಸಿದ ಸ್ಫೋಟ ಮೈಸೂರು: ನಗರದ ಅಂಬಾವಿಲಾಸ ಅರಮನೆ ಬಳಿ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡಿದ್ದ ಮತ್ತೋರ್ವ ಮಹಿಳೆ ಲಕ್ಷ್ಮಿ ಎಂಬವರು ಕೂಡ ಸಾವನ್ನಪ್ಪಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 3ಕ್ಕೆ ಏರಿಕೆಯಾಗಿದೆ. ಲಕ್ಷ್ಮೀ ಅವರ ಮಗಳು ಡಿಂಪಲ್​​ ದುರಂತದಿಂದ ಬಚಾವ್‌ ಆಗಿದ್ದಾರೆ. ಬಲೂನ್‌ ಮಾರಾಟ ಮಾಡುತ್ತಿದ್ದ ವೇಳೆ ಅರಮನೆಯ ಜಯಮಾರ್ತಾಂಡ ದ್ವಾರದ ಬಳಿ ಸಂಭವಿಸಿದ ಸ್ಫೋಟದಿಂದ ಗಾಯಗೊಂಡಿದ್ದ ಲಕ್ಷ್ಮಿ ಅವರನ್ನ ಕೆ.ಆರ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬೆಂಗಳೂರು ಮೂಲದ ಲಕ್ಷ್ಮಿ ಕುಟುಂಬದ

ಮೈಸೂರು ಸ್ಫೋಟ : ಮೃತರ ಸಂಖ್ಯೆ ಮೂರಕ್ಕೇರಿಕೆ Read More »

ಮೆದುಳಿನ ರಕ್ತಸ್ರಾವದಿಂದ ‌ಮೃತಪಟ್ಚ ಯುವತಿಯ ಅಂಗಾಂಗ ದಾನ ಮಾಡಿದ ಕುಟುಂಬ

ಪುತ್ತೂರು: ಮೆದುಳಿನ ರಕ್ತಸ್ರಾವದಿಂದಾಗಿ ‌ಮೃತಪಟ್ಟ ಯುವತಿಯ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಕುಟುಂಬ ಬೇರೆ ಕುಟುಂಬಗಳ ಪಾಲಿಗೆ ಬೆಳಕಾಗಿ ಮಾನವೀಯತೆ ಮೆರೆದಿದೆ. ಸುಳ್ಯದ ರಥಬೀದಿ ‌ನಿವಾಸಿ ಸಿಂಧೂ ಎಂಬ ಯುವತಿ ಪುತ್ತೂರು ಆದರ್ಶ ಸೊಸೈಟಿಯಲ್ಲಿ ಕೆಲಸ ಮಾಡುತ್ತಿದ್ದರು. ಡಿ. 16 ರಂದು ಪುತ್ತೂರಿನಿಂದ ಸುಳ್ಯಕ್ಕೆ ಬಸ್ಸಿನಲ್ಲಿ ಹೋಗುತ್ತಿದ್ದ ವೇಳೆ ಬಸ್ಸಿನ ಸೀಟಿನಿಂದ ಜಾರಿ ಬಿದ್ದಿದ್ದರು. ತಕ್ಷಣವೇ ಅವರಿಗೆ ಸುಳ್ಯದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ನರಕ್ಕೆ ಸಮಸ್ಯೆ ಉಂಟಾಗಿದ್ದ ಕಾರಣದಿಂದ ಸುಳ್ಯದ ಆಸ್ಪತ್ರೆಯಿಂದ ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಗೆ

ಮೆದುಳಿನ ರಕ್ತಸ್ರಾವದಿಂದ ‌ಮೃತಪಟ್ಚ ಯುವತಿಯ ಅಂಗಾಂಗ ದಾನ ಮಾಡಿದ ಕುಟುಂಬ Read More »

ತಾಳಮದ್ದಳೆ ಪ್ರಸರಣದಲ್ಲಿ ಶ್ರೀ ಆಂಜನೇಯ ಯಕ್ಷಗಾನ ಕಲಾಸಂಘದ ಪಾತ್ರ ಶ್ಲಾಘನೀಯ: ಎಡನೀರು ಶ್ರೀ

ಪುತ್ತೂರು: ತಾಳಮದ್ದಳೆ ಕಲೆಯನ್ನು ಉಳಿಸುವ ಮತ್ತು ಪಸರಿಸುವಲ್ಲಿ ಪಬೊಳುವಾರಿನ ಶ್ರೀ ಆಂಜನೇಯ ಯಕ್ಷಗಾನ ಕಲಾಸಂಘದ 56 ವರ್ಷಗಳ ಪ್ರಯತ್ನ ಶ್ಲಾಘನೀಯವಾಗಿದೆ. ಸಹ ಸಂಸ್ಥೆಯಾದ ಮಹಿಳಾ ಯಕ್ಷಗಾನ ಸಂಘವು 20 ವರ್ಷಗಳಿಂದ ಕ್ರಿಯಾಶೀಲವಾಗಿ ತಾಳಮದ್ದಳೆಯ ಅಭಿರುಚಿಯನ್ನು ವಿಸ್ತರಿಸಿ ರಾಜ್ಯಾದ್ಯಂತ ಪ್ರದರ್ಶನ ನೀಡಿದ ತಂಡವಾಗಿರುವುದು ಉತ್ತಮ ಬೆಳವಣಿಗೆ ಎಂದು ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಹೇಳಿದರು. ಪುತ್ತೂರು ಮಹಾಲಿಂಗೇಶ್ವರ ದೇವಾಲಯದ ನಟರಾಜ ವೇದಿಕೆಯಲ್ಲಿ ಜರಗಿದ ಶ್ರೀ ಆಂಜನೇಯ 57 ವಾರ್ಷಿಕೋತ್ಸವ ಸಮಾರಂಭದಲ್ಲಿ ಆಶೀರ್ವಚನ ನೀಡಿ ಯಕ್ಷಗಾನ ಕಲಾವಿದರನ್ನು

ತಾಳಮದ್ದಳೆ ಪ್ರಸರಣದಲ್ಲಿ ಶ್ರೀ ಆಂಜನೇಯ ಯಕ್ಷಗಾನ ಕಲಾಸಂಘದ ಪಾತ್ರ ಶ್ಲಾಘನೀಯ: ಎಡನೀರು ಶ್ರೀ Read More »

ಡಿ. 27: ಕಾರ್ಗಿಲ್ ಹುಲಿ, ಪರಮವೀರಚಕ್ರ ಪುರಸ್ಕೃತ ಯೋಧ ಗೌ. ಲೆ. ಸಂಜಯ್ ಕುಮಾರ್ ಪುತ್ತೂರಿಗೆ

ಪುತ್ತೂರು: ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಯ ಬೆಳ್ಳಿ ಹಬ್ಬದ ಪ್ರಯುಕ್ತ ,ಪುತ್ತೂರಿನ ಮಾಜಿ ಸೈನಿಕರ ಸಂಘದ ಸಹಯೋಗದಲ್ಲಿ ಪರಮವೀರಚಕ್ರ ಪುರಸ್ಕೃತ ಕಾರ್ಗಿಲ್ ಹುಲಿ, ವೀರ ಯೋಧ ಗೌ. ಲೆ. ಸಂಜಯ್ ಕುಮಾರ್ ಅವರಿಗೆ ಸಾರ್ವಜನಿಕ ಅಭಿನಂದನಾ ಸಭೆ ಡಿ. 27 ರಂದು ಬಪ್ಪಳಿಗೆಯ ಶ್ರೀ ಶಂಕರ ಸಭಾಭವನದಲ್ಲಿ ನಡೆಯಲಿದೆ. ಬೆಳಗ್ಗೆ 9 ಗಂಟೆಗೆ ಗೌ. ಲೆ. ಸಂಜಯ್ ಕುಮಾರ್ ಅವರನ್ನು ದರ್ಬೆ ವೃತ್ತದಿಂದ ಕಿಲ್ಲೆ ಮೈದಾನದ ಅಮರ್ ಜವಾನ್ ಜ್ಯೋತಿ ಸ್ಮಾರಕದವರೆಗೆ ಭವ್ಯ ಮೆರವಣಿಗೆಯ ಮೂಲಕ ಕರೆತರಲಾಗುವುದು.

ಡಿ. 27: ಕಾರ್ಗಿಲ್ ಹುಲಿ, ಪರಮವೀರಚಕ್ರ ಪುರಸ್ಕೃತ ಯೋಧ ಗೌ. ಲೆ. ಸಂಜಯ್ ಕುಮಾರ್ ಪುತ್ತೂರಿಗೆ Read More »

ಕಲಾ ರತ್ನ ರವಿ ಪಾಂಬಾರ್ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಗರಿ

ಬೆಂಗಳೂರು: ಆರ್ ಪಿ ಕಲಾ ಸೇವಾ ಟ್ರಸ್ಟ್ ( ರಿ) ಇದರ ಸಂಚಾಲಕ, ಸಂಘಟಕ, ಗಾಯಕ, ಯುವ ಸಾಹಿತಿ, ಕವಿ, ಜಾನಪದ ನೃತ್ಯಗಾರ ಕಲಾ ರತ್ನ ರವಿ ಪಾಂಬಾರು ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯ ಗರಿ ಮುಡಿಗೇರಿದೆ. ಸಮಾಜದ ಮುಖ್ಯ ವಾಹಿನಿಯಲ್ಲಿ ತಮ್ಮದೇ ಆದಾ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ್ದು, ಮತ್ತಷ್ಟು ಸಾಧನೆಯ ಹಾದಿಯಲ್ಲಿ ಸಾಗುತ್ತಿರುವ ಪ್ರತಿಭೆಯಾಗಿದ್ದಾರೆ. ಇವರ ಕಲಾ ಸಂಸ್ಕೃತಿಯನ್ನು ಗುರುತಿಸಿ ಕನ್ನಡ ಫಿಲಂ ಚೇಂಬರ್ (ರಿ) ಇದರ ವತಿಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ

ಕಲಾ ರತ್ನ ರವಿ ಪಾಂಬಾರ್ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಗರಿ Read More »

ನೇಮೋತ್ಸವದಲ್ಲಿ ನೂರಾರು ಜನರ ಎದುರೇ ವೃದ್ಧೆಯ ಸರ ಎಗರಿಸಿದ ಕಳ್ಳಿಯರು

ಉಡುಪಿ: ಜಿಲ್ಲೆಯ ಕಾಪು ತಾಲೂಕಿನ ಹೆಜಮಾಡಿ ಗರಡಿಯಲ್ಲಿ ನಡೆದ ಶ್ರೀ ಬ್ರಹ್ಮ ಬೈದರ್ಕಳ ಗರಡಿ ನೇಮೋತ್ಸವದ ವೇಳೆ ವೃದ್ಧೆಯೊಬ್ಬರ ಚಿನ್ನದ ಸರವನ್ನು ಕಳ್ಳಿಯರು ಎಗರಿಸಿರುವ ಘಟನೆ ನಡೆದಿದೆ. ಮೂವರು ಕಳ್ಳಿಯರು ನಡೆಸಿದ ಈ ಕೃತ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸ್ಪಷ್ಟವಾಗಿ ದಾಖಲಾಗಿದೆ. ಹೆಜಮಾಡಿ ನಿವಾಸಿ ಕಮಲ ಎಂಬವರು ಪೂಜೆಯಲ್ಲಿ ತೊಡಗಿಸಿಕೊಂಡಿದ್ದ ಸಂದರ್ಭ, ಮೂವರು ಕಳ್ಳಿಯರು ಅವರನ್ನು ಮೂರು ಕಡೆಯಿಂದ ಸುತ್ತುವರಿದು, ಗಂಟೆ ಹೊಡೆಯುವ ನೆಪದಲ್ಲಿ ಕುತ್ತಿಗೆಯಲ್ಲಿದ್ದ ಬಂಗಾರದ ಸರವನ್ನು ಎಗರಿಸಿ ಪರಾರಿಯಾಗಿದ್ದಾರೆ. ಕಳ್ಳತನವಾದ ಚಿನ್ನದ ಸರದ ಮೌಲ್ಯ ಸುಮಾರು

ನೇಮೋತ್ಸವದಲ್ಲಿ ನೂರಾರು ಜನರ ಎದುರೇ ವೃದ್ಧೆಯ ಸರ ಎಗರಿಸಿದ ಕಳ್ಳಿಯರು Read More »

ಚಾಲಕನಿಗೆ ಎದೆನೋವು : ಪ್ರಯಾಣಿಕನ ಸಮಯ ಪ್ರಜ್ಞೆಯಿಂದ ತಪ್ಪಿದ ಅಪಘಾತ

ಉಪ್ಪಿನಂಗಡಿ: ಬಸ್ ಚಾಲಕನಿಗೆ ಎದೆ ನೋವು ಕಾಣಿಸಿಕೊಂಡಾಗ ಪ್ರಯಾಣಿಕರೋರ್ವರ ಸಮಯ ಪ್ರಜ್ಞೆಯಿಂದ ಭಾರಿ ಅಪಘಾತ ತಪ್ಪಿಸಿ ಬಸ್ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಿದ ಘಟನೆ ಉಪ್ಪಿನಂಗಡಿಯ ಪೆರ್ನೆ ಎಂಬಲ್ಲಿ ನಡೆದಿದೆ. ಗುರುವಾರ ಸುಬ್ರಹ್ಮಣ್ಯದಿಂದ ಕಾರವಾರಕ್ಕೆ ಕೆಎಸ್ಸಾರ್ಟಿಸಿ ಬಸ್ ಚಾಲನೆ ಮಾಡುತ್ತಿದ್ದ ಚಾಲಕ ಗೋವಿಂದ ನಾಯ್ಕ ಎಂಬವರಿಗೆ ಪೆರ್ನೆ ಗ್ರಾಮದ ಕರ್ವೇಲು ಎಂಬಲ್ಲಿ ಸಮೀಪಿಸುತ್ತಿದ್ದಾಗ ಎದೆನೋವು ಕಾಣಿಸಿಕೊಂಡಿದ್ದು, ಬಸ್ ಚಾಲನೆಯಲ್ಲಿ ವ್ಯತ್ಯಾಸ ಕಂಡು ಬಂದಿತ್ತು. ಇದನ್ನು ಗಮನಿಸಿದ ಬಸ್ಸಿನಲ್ಲಿದ್ದ ವಕೀಲ ನೆಲ್ಯಾಡಿಯ ಇಸ್ಮಾಯಿಲ್ ಅವರ ಪುತ್ರ ಸಲ್ಮಾನುಲ್‌ ಫಾರಿಸ್ ತಕ್ಷಣವೇ

ಚಾಲಕನಿಗೆ ಎದೆನೋವು : ಪ್ರಯಾಣಿಕನ ಸಮಯ ಪ್ರಜ್ಞೆಯಿಂದ ತಪ್ಪಿದ ಅಪಘಾತ Read More »

ಮೈಸೂರು ಸ್ಫೋಟ ಪ್ರಕರಣಕ್ಕೆ ಎನ್‌ಐಎ ಎಂಟ್ರಿ

ದಟ್ಟವಾಗುತ್ತಿದೆ ಭಯೋತ್ಪಾದನೆ ಕೃತ್ಯದ ಅನುಮಾನ ಮೈಸೂರು: ಮೈಸೂರಿನ ಅರಮನೆ ಸಮೀಪ ಸಂಭವಿಸಿದ ಹೀಲಿಯಂ ಸಿಲಿಂಡರ್‌ ಸ್ಫೋಟ ಪ್ರಕರಣ ಕ್ಷಣ ಕ್ಷಣಕ್ಕೂ ತಿರುವು ಪಡೆಯುತ್ತಿದ್ದು, ಇದೀಗ ತನಿಖೆಗೆ ರಾಷ್ಟ್ರೀಯ ತನಿಖೆ (ಎನ್‌ಐಎ) ದಳ ಎಂಟ್ರಿಯಾಗಿದೆ. ಹೀಗಾಗಿ ಇದು ಭಯೋತ್ಪಾದನಾ ಕೃತ್ಯವಿರಬೇಕೆಂಬ ಅನುಮಾನ ದಟ್ಟವಾಗಿದೆ. ಇಂದು ಮೈಸೂರಿಗೆ ಎನ್‌ಎಐ ಅಧಿಕಾರಿಗಳು ಆಗಮಿಸಿ ಸ್ಥಳ ಪರಿಶೀಲನೆ ನಡೆಸಿ ಪೊಲೀಸರ ಜೊತೆ ತನಿಖೆಯ ಮಾಹಿತಿ ಪಡೆಯಲಿದ್ದಾರೆ. ಸಾಧಾರಣವಾಗಿ ಹೀಲಿಯಂ ಸ್ಫೋಟವಾಗುವುದಿಲ್ಲ. ಹೀಗಿದ್ದರೂ ಅರಮನೆಯ ಆವರಣದಲ್ಲೇ ಸ್ಫೋಟಗೊಂಡ ಹಿನ್ನೆಲೆಯಲ್ಲಿ ಹಲವಾರು ಅನುಮಾನಗಳು ಈಗ ವ್ಯಕ್ತವಾಗಿವೆ.

ಮೈಸೂರು ಸ್ಫೋಟ ಪ್ರಕರಣಕ್ಕೆ ಎನ್‌ಐಎ ಎಂಟ್ರಿ Read More »

error: Content is protected !!
Scroll to Top