ಸುದ್ದಿ

ಮಂಗಳೂರು : ಮೂರು ಶೂಟೌಟ್‌ ಪ್ರಕರಣದಲ್ಲಿ ಬನ್ನಂಜೆರಾಜ ಖುಲಾಸೆ

ಮಂಗಳೂರು : ಕುಖ್ಯಾತ ಪಾತಕಿ ಬನ್ನಂಜೆರಾಜನ ವಿರುದ್ದ ಮಂಗಳೂರಿನಲ್ಲಿ ದಾಖಲಾಗಿದ್ದ 3 ಶೂಟೌಟ್‌ ಪ್ರಕರಣಗಳಲ್ಲಿ ಖುಲಾಸೆಗೊಂಡಿದೆ. ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮೂರೂ ಪ್ರಕರಣಗಳಲ್ಲಿ ಖುಲಾಸೆಗೊಳಿಸಿ ತೀರ್ಪು ನೀಡಿದೆ.ಈತನ ವಿರುದ್ದ ಪಾಂಡೇಶ್ವರ ಪೊಲೀಸ್‌ ಠಾಣೆ, ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಮೂರೂ ಪ್ರಕರಣಗಳಲ್ಲಿ ಪೊಲೀಸರು ತನಿಖೆ ನಡೆಸಿ ಬನ್ನಂಜೆರಾಜ ಮತ್ತು ಆತನ ಸಹಚರರ ಮೇಲೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಈ ಘಟನೆಗಳ ವೇಳೆಯಲ್ಲಿ ಬನ್ನಂಜೆರಾಜ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ. 2015 ನೇ ಇಸವಿಯಲ್ಲಿ […]

ಮಂಗಳೂರು : ಮೂರು ಶೂಟೌಟ್‌ ಪ್ರಕರಣದಲ್ಲಿ ಬನ್ನಂಜೆರಾಜ ಖುಲಾಸೆ Read More »

ನಾಯಿ ಮುಖ ನಾಪತ್ತೆಯಾಗಿ ಮತ್ತೆ ಟ್ವಿಟರ್‌ ಗೆ ಮರಳಿದ ನೀಲಿ ಹಕ್ಕಿ

ಸ್ಯಾನ್‌ ಫ್ರಾನ್ಸಿಸ್ಕೊ : ಕೆಲವೇ ದಿನಗಳ ಹಿಂದೆಯಷ್ಟೇ ಟ್ವಿಟರ್‌ನ ಸಿಇಒ ಎಲಾನ್‌ ಮಸ್ಕ್‌ ಅವರು ಟ್ವಿಟರ್‌ನ ಲೋಗೊದಲ್ಲಿ ನೀಲಿ ಹಕ್ಕಿಯ ಚಿತ್ರವನ್ನು ತೆಗೆದು ಹಾಕಿ ಅದರ ಬದಲಿಗೆ ಡಾಗ್‌ ಕಾಯಿನ್‌ ಎಂಬ ಕ್ರಿಪ್ಟೊ ಕರೆನ್ಸಿ ಮೇಲಿರುವ ನಾಯಿಯ ಮೀಮ್ಸ್‌ ಚಿತ್ರವನ್ನು ಟ್ವಿಟರ್‌ನ ಲೋಗೊವಾಗಿ ಬಳಸಿದ್ದರು. ಆದರೆ ಇದೀಗ ಏ. 7 ರಂದು ನಾಯಿ ಮುಖದ ಲೋಗೋ ನಾಪತ್ತೆಯಾಗಿ ಮತ್ತೆ ನೀಲಿ ಹಕ್ಕಿಯನ್ನೇ ಬಳಸಲಾಗಿದೆ.2013ರಲ್ಲಿ ಜೋಕ್‌ನಂತೆ ಸೃಷ್ಟಿಯಾದ ಡಾಗ್‌ ಕಾಯಿನ್‌ ಬಳಿಕ ವ್ಯಾಪಕವಾಗಿ ಬಳಕೆಯಾಗಿ ಜನಪ್ರಿಯವಾಗಿದ್ದು, ಟೆಸ್ಲಾದಲ್ಲೂ ಡಾಗ್‌

ನಾಯಿ ಮುಖ ನಾಪತ್ತೆಯಾಗಿ ಮತ್ತೆ ಟ್ವಿಟರ್‌ ಗೆ ಮರಳಿದ ನೀಲಿ ಹಕ್ಕಿ Read More »

ಸುದೀಪ್ ಸಿನಿಮಾದ ಪ್ರಚಾರ ಕಾರ್ಯಗಳನ್ನು ನಿಷೇಧಿಸುವಂತೆ ಒತ್ತಾಯ

ಬೆಂಗಳೂರು : ಮೇ 10 ರಂದು ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸೂಚನೆ ಮೇರೆಗೆ ಬಿಜೆಪಿ ಪರ ಪ್ರಚಾರ ಮಾಡುವುದಾಗಿ ನಟ ಕಿಚ್ಚ ಸುದೀಪ್ ಘೋಷಿಸಿದ ಬೆನ್ನಲ್ಲೇ, ಜೆಡಿಎಸ್ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗೆ ಪತ್ರ ಬರೆದಿದ್ದು, ನಟನನ್ನು ಒಳಗೊಂಡ ಚಲನಚಿತ್ರಗಳು, ಜಾಹೀರಾತುಗಳು ಮತ್ತು ಇತರ ಕಾರ್ಯಕ್ರಮಗಳ ಪ್ರಸಾರವನ್ನು ನಿಷೇಧಿಸುವಂತೆ ಕೋರಿದೆ. ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಸುದೀಪ್ ಅವರ ಸಿನಿಮಾ, ಜಾಹೀರಾತು, ಟಿವಿ ಕಾರ್ಯಕ್ರಮಗಳ ಪ್ರಸಾರವನ್ನು ನಿಷೇಧಿಸಬೇಕು ಎಂದು ಜೆಡಿಎಸ್ ರಾಜ್ಯ ಕಾನೂನು

ಸುದೀಪ್ ಸಿನಿಮಾದ ಪ್ರಚಾರ ಕಾರ್ಯಗಳನ್ನು ನಿಷೇಧಿಸುವಂತೆ ಒತ್ತಾಯ Read More »

ಇಂದು ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ

ಬಂಡೀಪುರ ಅರಣ್ಯದಲ್ಲಿ ಹುಲಿ ಸಫಾರಿ ಬೆಂಗಳೂರು : ಬಂಡೀಪುರ ಅರಣ್ಯವನ್ನು ರಾಷ್ಟ್ರೀಯ ಹುಲಿ ಸಂರಕ್ಷಿತಾರಣ್ಯವೆಂದು ಘೋಷಿಸಿ 50 ವರ್ಷ ಸಂದ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಬಂಡೀಪುರ ಅಭಯಾರಣ್ಯಕ್ಕೆ ಭೇಟಿ ನೀಡಲಿದ್ದಾರೆ.ಇಂದು ರಾತ್ರಿ 8.40ಕ್ಕೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಆಗಮಿಸಲಿದ್ದು, ಬಳಿಕ ವಿಮಾನ‌ ನಿಲ್ದಾಣದಿಂದ ರಸ್ತೆ ಮಾರ್ಗವಾಗಿ ರಾತ್ರಿ 8.50ಕ್ಕೆ ಮೈಸೂರಿನ ಅಡಿಸನ್​​​​​​​ ಬ್ಲೂ ಹೋಟೆಲ್​ಗೆ ತೆರಳಲಿದ್ದಾರೆ. ಇಂದು ರಾತ್ರಿ ಅಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ಬಳಿಕ ನಾಳೆ ಬೆಳಗ್ಗೆ 6.20ಕ್ಕೆ ಹೋಟೆಲ್​ನಿಂದ ಮಂಡಕಳ್ಳಿ

ಇಂದು ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ Read More »

ದಾವಣಗೆರೆಯಲ್ಲಿ ಬಿಎಂಡಬ್ಲ್ಯು ಕಾರು ಸಮೇತ ಬೆಳ್ಳಿ ವಶ

ನಟಿ ಶ್ರೀದೇವಿ ಪತಿ ಕಾರಿನಲ್ಲಿ ಬೆಳ್ಳಿ ಅಕ್ರಮ ಸಾಗಾಟ ದಾವಣಗೆರೆ : ಬಾಲಿವುಡ್‌ನ ಖ್ಯಾತ ನಟಿಯೊಬ್ಬರ ಪತಿಯ ಕುಟುಂಬಕ್ಕೆ ಸೇರಿದ ಬಿಎಂಡಬ್ಲ್ಯು ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 66 ಕೆಜಿ ಬೆಳ್ಳಿ ಸಾಮಾಗ್ರಿಗಳನ್ನು ದಾವಣಗೆರೆ ತಾಲೂಕಿನ ಹೆಬ್ಬಾಳ ಟೋಲ್ ಬಳಿ ಚುನಾವಣಾಧಿಕಾರಿಯಾಗಿರುವ ತಹಶೀಲ್ದಾರ್‌ ಜಪ್ತಿ ಮಾಡಿದ್ದಾರೆ. ತಹಶೀಲ್ದಾರ್‌ ಡಾ.ಅಶ್ವತ್ಥ್‌ ತಪಾಸಣೆ ವೇಳೆ ಬಿಎಂಡಬ್ಲ್ಯು ಕಾರೊಂದನ್ನು ತಡೆದು ಪರಿಶೀಲನೆ ನಡೆಸಿದಾಗ ಬಾಕ್ಸ್​ಗಳು ಪತ್ತೆಯಾಗಿದ್ದು, ಇನ್ನಷ್ಟು ತಪಾಸಣೆ ನಡೆಸಿದಾಗ ಅದರೊಳಗೆ ಬೆಳ್ಳಿ ಸಾಮಾಗ್ರಿಗಳು ಸಿಕ್ಕಿವೆ. ಅವುಗಳ ಒಟ್ಟು ಮೌಲ್ಯ 39 ಲಕ್ಷ

ದಾವಣಗೆರೆಯಲ್ಲಿ ಬಿಎಂಡಬ್ಲ್ಯು ಕಾರು ಸಮೇತ ಬೆಳ್ಳಿ ವಶ Read More »

ನೈಜೀರಿಯಾದಲ್ಲಿ ಡಕಾಯಿತರ ದಾಳಿಯಿಂದ 46 ನಾಗರಿಕರ ಹತ್ಯೆ

ಎರಡು ದಿನ ನಿರಂತರ ದಾಳಿ ಲಾಗೋಸ್: ನೈಜೀರಿಯಾದ ಬೆನ್ಯೂ ರಾಜ್ಯದಲ್ಲಿ ಸಮುದಾಯವೊಂದರ ಮೇಲೆ ಶಸ್ತ್ರಸಜ್ಜಿತ ಡಕಾಯಿತರು ನಡೆಸಿದ ದಾಳಿಯಲ್ಲಿ ಕನಿಷ್ಠ 46 ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಯೋರ್ವರು ತಿಳಿಸಿದ್ದಾರೆ.ರಾಜ್ಯದ ಉಮೊಗಿಡಿ ಸಮುದಾಯದಲ್ಲಿ ಮಂಗಳವಾರ ಮತ್ತು ಬುಧವಾರದ ನಡುವೆ ಸಂಭವಿಸಿದ ದಾಳಿಯಲ್ಲಿ ನೂರಾರು ನಿವಾಸಿಗಳು ಗಾಯಗೊಂಡಿದ್ದು, ಹಲವರು ತಮ್ಮ ಮನೆಗಳಿಂದ ಓಡಿಹೋದರು ಎಂದು ಸ್ಥಳೀಯ ಸರ್ಕಾರಿ ಅಧಿಕಾರಿ ಖಚಿತಪಡಿಸಿದ್ದಾರೆ. ದಾಳಿಕೋರರು ಬುಧವಾರ ಮನಬಂದಂತೆ ಗುಂಡು ಹಾರಿಸಿ 46 ಜನರನ್ನು ಕೊಂದಿದ್ದಾರೆ ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ.

ನೈಜೀರಿಯಾದಲ್ಲಿ ಡಕಾಯಿತರ ದಾಳಿಯಿಂದ 46 ನಾಗರಿಕರ ಹತ್ಯೆ Read More »

ಬೆಂಗಳೂರಿಗೆ ಬರುತ್ತಿದ್ದ ಇಂಡಿಗೊ ವಿಮಾನದಲ್ಲಿ ತುರ್ತು ದ್ವಾರ ತೆರೆಯಲು ಯತ್ನಿಸಿದ ಕುಡುಕ ಪ್ರಯಾಣಿಕ

ದೆಹಲಿ : ದಿಲ್ಲಿಯಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಗೊ ವಿಮಾನದಲ್ಲಿ ಪಾನಮತ್ತ ಪ್ರಯಾಣಿಕನೋರ್ವತುರ್ತು ಬಾಗಿಲು ತೆರೆಯಲು ಪ್ರಯತ್ನಿಸಿದ ಘಟನೆ ನಡೆದಿದೆ. ಈ ಕುರಿತು ಸಂಬಂಧಪಟ್ಟ ಸಂಸ್ಥೆಗಳಿಗೆ ದೂರು ನೀಡಲಾಗಿದ್ದು, ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ದಿಲ್ಲಿಯಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಗೋ 6E 308 ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕ ಅಮಲೇರಿದ ಸ್ಥಿತಿಯಲ್ಲಿ ತುರ್ತು ನಿರ್ಗಮನದ ದ್ವಾರ ತೆರೆಯಲು ಪ್ರಯತ್ನಿಸಿದ್ದಾನೆ. ಇದನ್ನು ಗಮನಿಸಿದ ಸಿಬ್ಬಂದಿ ಕ್ಯಾಪ್ಟನ್‌ಗೆ ಎಚ್ಚರಿಕೆ ನೀಡಿ ಅವನನ್ನು ತಡೆದಿದ್ದಾರೆ ಎಂದು ಏರ್‌ಲೈನ್ ವಕ್ತಾರರು ತಿಳಿಸಿದ್ದಾರೆ. ಬೆಂಗಳೂರಿಗೆ ಆಗಮಿಸಿದ ನಂತರ ಪ್ರಯಾಣಿಕನನ್ನು

ಬೆಂಗಳೂರಿಗೆ ಬರುತ್ತಿದ್ದ ಇಂಡಿಗೊ ವಿಮಾನದಲ್ಲಿ ತುರ್ತು ದ್ವಾರ ತೆರೆಯಲು ಯತ್ನಿಸಿದ ಕುಡುಕ ಪ್ರಯಾಣಿಕ Read More »

ರಾಹುಲ್‌ಗೆ ಶಿಕ್ಷೆ ವಿಧಿಸಿದ ಸೂರತ್ ನ್ಯಾಯಾಲಯದ ನ್ಯಾಯಾಧೀಶರ ನಾಲಗೆ ಕತ್ತರಿಸುವ ಬೆದರಿಕೆ

ಕಾಂಗ್ರೆಸ್‌ ನಾಯಕನ ವಿರುದ್ಧ ಕೇಸು ದಾಖಲು ಚೆನ್ನೈ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿದ ಸೂರತ್ ನ್ಯಾಯಾಲಯದ ನ್ಯಾಯಾಧೀಶರ ನಾಲಿಗೆ ಕತ್ತರಿಸುವುದಾಗಿ ತಮಿಳುನಾಡಿನ ಕಾಂಗ್ರೆಸ್ ನಾಯಕರೊಬ್ಬರು ಬೆದರಿಕೆಯೊಡ್ಡಿದ್ದಾರೆ.ಮೋದಿ ಹೆಸರಿನವರೆಲ್ಲ ಕಳ್ಳರು ಎಂದು ಟೀಕಿಸಿದ್ದ ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ ಸೂರತ್ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಎಚ್. ವರ್ಮಾ ಮಾ. 23 ರಂದು ರಾಹುಲ್ ಗಾಂಧಿಗೆ 2 ವರ್ಷಗಳ ಜೈಲು ಶಿಕ್ಷೆ ವಿಧಿಸಿದ್ದಾರೆ.

ರಾಹುಲ್‌ಗೆ ಶಿಕ್ಷೆ ವಿಧಿಸಿದ ಸೂರತ್ ನ್ಯಾಯಾಲಯದ ನ್ಯಾಯಾಧೀಶರ ನಾಲಗೆ ಕತ್ತರಿಸುವ ಬೆದರಿಕೆ Read More »

ಬೆಳ್ತಂಗಡಿ : ಆಲಿಕಲ್ಲು ಸಹಿತ ಮಳೆ

ಬೆಳ್ತಂಗಡಿ : ಬೇಸಗೆ ತಾಪಮಾನದಿಂದ ಬಸವಳಿದಿದ್ದ ಮಂದಿಗೆ ಮಳೆ ಕೊಂಚ ತಣಿಸಿದ್ದು, ಬೆಳ್ತಂಗಡಿ ತಾಲೂಕಿನ ಹಲವೆಡೆ ಎ.7ರ ಶುಕ್ರವಾರ ಸಂಜೆ ಆಲಿಕಲ್ಲು ಸಹಿತ ಮಳೆಯಾಗಿದೆ. ಉಜಿರೆ, ಮುಂಡಾಜೆ, ಧರ್ಮಸ್ಥಳ, ಕೊಕ್ಕಡ, ನಾರಾವಿ, ಬೆಳ್ತಂಗಡಿ, ಚಾರ್ಮಾಡಿ, ಸವಣಾಲು, ಕಡಿರುದ್ಯಾವರ ಸಹಿತ ಬಹುತೇಕ ಕಡೆಗಳಲ್ಲಿ ಉತ್ತಮ ಮಳೆ ಸುರಿದಿದೆ. ಗುರುವಾರ ಮಧ್ಯರಾತ್ರಿಯೇ ಮಳೆ ಮುನ್ಸೂಚನೆ ನೀಡಿದ್ದು, ಗುಡುಗು ಸಹಿತ ಹನಿ ಮಳೆಯಾಗಿತ್ತು. ಇದೀಗ ಶುಕ್ರವಾರ ತಣ್ಣನೆ ಗಾಳಿಯೊಂದಿಗೆ ಮಳೆ ಆರಂಭಗೊಂಡು ರಸ್ತೆ,‌ ಚರಂಡಿಗಳ್ಳಿ ನೀರು ಹರಿಯುವ ಮಟ್ಟಿಗೆ ಮಳೆಯಾಗಿದೆ. ಬೇಸಗೆ ಬಿಸಿಯಿಂದ

ಬೆಳ್ತಂಗಡಿ : ಆಲಿಕಲ್ಲು ಸಹಿತ ಮಳೆ Read More »

ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು : ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಕಾರಣಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅವರ ರಾಜಕೀಯ ಕಾರ್ಯದರ್ಶಿ ಮತ್ತು ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಏ. 7 ರಂದು ಎಫ್‌ಐಆರ್ ದಾಖಲಿಸಲಾಗಿದೆ. ನೀತಿ ಸಂಹಿತೆ ಉಲ್ಲಂಘಿಸಿ ಕಲ್ಯಾಣ ಮಂಟಪದಲ್ಲಿ ಸಭೆ ನಡೆಸಿದ ಆರೋಪದಲ್ಲಿ ಚುನಾವಣಾಧಿಕಾರಿ ದೂರು ಸಲ್ಲಿಸಿದ್ದು ಐಪಿಸಿಯ ಸೆಕ್ಷನ್ 171 E ಮತ್ತು 171 I ಅಡಿಯಲ್ಲಿ ಆರೋಪ ಹೊರಿಸಲಾಗಿದೆ. ನೀತಿ ಸಂಹಿತೆ ಜಾರಿಯಾದ ಬಳಿಕ ಅನುಮತಿ ಪಡೆಯದೆ

ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ವಿರುದ್ಧ ಎಫ್‌ಐಆರ್‌ ದಾಖಲು Read More »

error: Content is protected !!
Scroll to Top