ಸುದ್ದಿ

ಎನ್.ಎಸ್.ಎಸ್. ಸೇವಾ ಸಂಗಮ ಟ್ರಸ್ಟ್ (ರಿ.) ಸುಳ್ಯ: ಕನ್ನಡ ಗೀತಾ ಗಾಯನ ಸ್ಪರ್ಧೆಯ ಫಲಿತಾಂಶ

ಸುಳ್ಯ: ಎನ್.ಎಸ್.ಎಸ್. ಸೇವಾ ಸಂಗಮ ಟ್ರಸ್ಟ್ (ರಿ.), ಸುಳ್ಯ ವತಿಯಿಂದ ದಶಮಾನೋತ್ಸವ ಕಾರ್ಯಕ್ರಮದ ಪ್ರಯುಕ್ತ ಹಮ್ಮಿಕೊಂಡ ಕನ್ನಡ ಗೀತಾ ಗಾಯನ ಆನ್ ಲೈನ್ ಸ್ಪರ್ಧೆಯ ಫಲಿತಾಂಶ ಪ್ರಕಟಗೊಂಡಿದೆ. ವಿವಿಧ ಶಾಲೆಗಳ ಹಾಗೂ ಸಾರ್ವಜನಿಕವಾಗಿ ಪಿಯುಸಿವರೆಗಿನ ವಿದ್ಯಾರ್ಥಿ ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. ಸ್ಪರ್ಧೆಯಲ್ಲಿ ಸುಮಾರು 15 ತಂಡಗಳು ಭಾಗವಹಿಸಿದ್ದು, ಸ್ಪರ್ಧಿಗಳ ಹಾಡಿನ ಪ್ರಸ್ತುತಿ, ಸ್ವರ-ತಾಳ, ಲಯ, ಹೊಂದಾಣಿಕೆಯನ್ನು ಆಧಾರವಾಗಿಟ್ಟುಕೊಂಡು ತೀರ್ಪುಗಾರರ ಮೌಲ್ಯಮಾಪನದ ಆಧಾರದ ಮೇಲೆ ಪ್ರಥಮ, ದ್ವಿತೀಯ, ತೃತೀಯ ಹಾಗೂ 5 ಸಮಧಾನಕರ ಬಹುಮಾನದೊಂದಿಗೆ ವಿಜೇತ ತಂಡಗಳನ್ನು ಆಯ್ಕೆಮಾಡಲಾಯಿತು. […]

ಎನ್.ಎಸ್.ಎಸ್. ಸೇವಾ ಸಂಗಮ ಟ್ರಸ್ಟ್ (ರಿ.) ಸುಳ್ಯ: ಕನ್ನಡ ಗೀತಾ ಗಾಯನ ಸ್ಪರ್ಧೆಯ ಫಲಿತಾಂಶ Read More »

4 ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಒಕ್ಕಲಿಗ ಸಮುದಾಯ ಪತ್ತಿನ ಸ. ಸಂಘ (ನಿ.) ಕಾಣಿಯೂರು ಶಾಖೆ

ಪುತ್ತೂರು: ಒಕ್ಕಲಿಗ ಸಮುದಾಯ ಪತ್ತಿನ ಸಹಕಾರಿ ಸಂಘ (ನಿ.) ದ ಕಾಣಿಯೂರು ಶಾಖೆಯು ಮೂರು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿ ನಾಲ್ಕನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಡಿ. 12 ರಂದು ರಂದು ಸಂಸ್ಥೆಯಲ್ಲಿ ಗಣ ಹೋಮ ಮತ್ತು ಲಕ್ಷ್ಮೀ ಪೂಜೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಸದಸ್ಯರು ಮತ್ತು ಗ್ರಾಹಕ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಸಂಸ್ಥೆಗೆ ಮತ್ತಷ್ಟು ಬೆಂಬಲ ಸೂಚಿಸುವಂತೆ ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

4 ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಒಕ್ಕಲಿಗ ಸಮುದಾಯ ಪತ್ತಿನ ಸ. ಸಂಘ (ನಿ.) ಕಾಣಿಯೂರು ಶಾಖೆ Read More »

ಆರ್‌ಎಸ್‌ಎಸ್‌ ಪಥಚಂಚಲನದಿಂದ ಎಲ್ಲಿಯೂ ದೊಂಬಿ, ಗಲಾಟೆ ಆಗಿಲ್ಲ : ಸದನದಲ್ಲಿ ಒಪ್ಪಿಕೊಂಡ ಸರ್ಕಾರ

ಈ ವರ್ಷ ರಾಜ್ಯದಲ್ಲಿ 518 ಪಥಸಂಚಲನ ಶಾಂತಿಯುತವಾಗಿ ನಡೆದಿದೆ ಎಂದು ಮಾಹಿತಿ ನೀಡಿದ ಗೃಹ ಸಚಿವ ಬೆಳಗಾವಿ : ಈ ವರ್ಷ ಕರ್ನಾಟಕದಾದ್ಯಂತ 518 ಕಡೆ ಆರ್​ಎಸ್​ಎಸ್ ಕಾರ್ಯಕ್ರಮ, ಪಥಸಂಚಲನ ನಡೆದಿದೆ. ಎಲ್ಲಿಯೂ ಗಲಾಟೆ, ದೊಂಬಿ ಆಗಿಲ್ಲ ಎಂದು ಕಾಂಗ್ರೆಸ್ ಸರ್ಕಾರವೇ ಒಪ್ಪಿಕೊಂಡಿದೆ. ಆರ್​ಎಸ್‌ಎಸ್‌ ಕಾರ್ಯಕ್ರಮಗಳ ಬಗ್ಗೆ ಅಧಿವೇಶನದಲ್ಲಿ ಬಿಜೆಪಿ ಶಾಸಕ ವಿ.ಸುನೀಲ್ ಕುಮಾರ್ ಕೇಳಿದ ಪ್ರಶ್ನೆಗೆ ಉತ್ತರಿಸಿ ಗೃಹ ಸಚಿವ ಅವರೇ ಡಾ.ಜಿ.ಪರಮೇಶ್ವರ, ಕರ್ನಾಟಕದಾದ್ಯಂತ ಒಟ್ಟು 518 ಕಡೆಗಳಲ್ಲಿ ಆರ್​ಎಸ್​ಎಸ್ ಪಥ ಸಂಚಲನ ನಡೆದಿದೆ. ಅಂದಾಜು

ಆರ್‌ಎಸ್‌ಎಸ್‌ ಪಥಚಂಚಲನದಿಂದ ಎಲ್ಲಿಯೂ ದೊಂಬಿ, ಗಲಾಟೆ ಆಗಿಲ್ಲ : ಸದನದಲ್ಲಿ ಒಪ್ಪಿಕೊಂಡ ಸರ್ಕಾರ Read More »

ಅಪಘಾತದಲ್ಲಿ ಯುವ ಉದ್ಯಮಿ ಸಾವು

ನಸುಕಿನ ವೇಳೆ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಅಪಘಾತ ಮಂಗಳೂರು: ಮಂಗಳೂರಿನ ಹೆಸರಾಂತ ಗೌಜಿ ಇವೆಂಟ್‌ನ ಮಾಲಕ ಅಭಿಷೇಕ್ ಎಂಬವರು ಪಡುಬಿದ್ರಿ ಹೆದ್ದಾರಿಯಲ್ಲಿ ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ನಿಧನರಾಗಿದ್ದಾರೆ. ನಸುಕಿನ ಜಾವ 2.20ರ ಸುಮಾರಿಗೆ ಪಡುಬಿದ್ರಿ ಹೆದ್ದಾರಿಯ ಬಳಿ ಅಪಘಾತ ಸಂಭವಿಸಿದೆ. ಭೀಕರ ಕಾರು ಅಪಘಾತದಲ್ಲಿ ಗಾಯಗೊಂಡ ಅಭಿಷೇಕ್ ಅವರನ್ನು ಮುಕ್ಕ ಶ್ರೀನಿವಾಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಅಭಿಷೇಕ್‌ ಕೊನೆಯುಸಿರೆಳೆದಿದ್ದಾರೆ.

ಅಪಘಾತದಲ್ಲಿ ಯುವ ಉದ್ಯಮಿ ಸಾವು Read More »

ದ.ಕ. ಜಿಲ್ಲೆಯ ಕಾಡಂಚು ಪ್ರದೇಶಗಳಲ್ಲಿ ಕಾಡಾನೆ ದಾಳಿ: ಅರಣ್ಯ ಸಚಿವರನ್ನು ತರಾಟೆಗೆ ತೆಗೆದುಕೊಂಡ ಕಿಶೋರ್ ಕುಮಾರ್

ಪುತ್ತೂರು: ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಉಡುಪಿ–ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರು ಜಿಲ್ಲೆಯ ಕಾಡಂಚಿನ ಜನರನ್ನು ದಿನದಿಂದ ದಿನಕ್ಕೆ ಸಂಕಷ್ಟಕ್ಕೆ ಒಳಪಡಿಸುತ್ತಿರುವ ಕಾಡಾನೆ ದಾಳಿಯ ಗಂಭೀರ ಸಮಸ್ಯೆ ಕುರಿತು ಅರಣ್ಯ ಸಚಿವರನ್ನು ಪ್ರಶ್ನಿಸಿದರು. ಕಳೆದ ಅಧಿವೇಶನದಲ್ಲಿ ಸಚಿವರು ದಕ್ಷಿಣ ಕನ್ನಡದಲ್ಲಿ ಎಲಿಫಂಟ್ ಟಾಸ್ಕ್ ಫೋರ್ಸ್ (ETF) ಸ್ಥಾಪಿಸುವುದಾಗಿ ಹಾಗೂ ಜಿಲ್ಲೆಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸುವುದಾಗಿ ಘೋಷಣೆ ಮಾಡಿದ್ದರೂ ಕೂಡ, ಇವತ್ತು ತನಕ ಯಾವುದೇ ಭೇಟಿ ನಡೆದಿಲ್ಲ

ದ.ಕ. ಜಿಲ್ಲೆಯ ಕಾಡಂಚು ಪ್ರದೇಶಗಳಲ್ಲಿ ಕಾಡಾನೆ ದಾಳಿ: ಅರಣ್ಯ ಸಚಿವರನ್ನು ತರಾಟೆಗೆ ತೆಗೆದುಕೊಂಡ ಕಿಶೋರ್ ಕುಮಾರ್ Read More »

ಸೆರೆ ಹಿಡಿದಿದ್ದ ನಾಲ್ಕು ಹುಲಿಮರಿಗಳು ಪುನರ್ವಸತಿ ಕೇಂದ್ರದಲ್ಲಿ ಸಾವು

ತಾಯಿ ಹುಲಿಯೊಂದಿಗೆ ಸೆರೆ ಸಿಕ್ಕಿದ್ದ ನಾಲ್ಕು ಹುಲಿಮರಿಗಳು ಮೈಸೂರು : ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಗೌಡನಕಟ್ಟೆ ಗ್ರಾಮದಲ್ಲಿ ನ.29ರಂದು ತಾಯಿಯೊಂದಿಗೆ ಸೆರೆ ಹಿಡಿದಿದ್ದ 4 ಹುಲಿ ಮರಿಗಳು ಆಹಾರ ಸೇವಿಸದೆ ಅಸ್ವಸ್ಥಗೊಂಡು ಮೃತಪಟ್ಟಿವೆ ಎಂದು ತಿಳಿದುಬಂದಿದೆ. ಮರಿಗಳ ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಪಶುವೈದ್ಯರು ಮೃತ ಹುಲಿ ಮರಿಗಳ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ನವೆಂಬರ್ 28ರಂದು ಈ ನಾಲ್ಕು ಮರಿಗಳ ಜೊತೆಗೆ ತಾಯಿ ಹುಲಿಯೂ ಕಾಣಿಸಿಕೊಂಡಿದ್ದು, ನವೆಂಬರ್ 29 ಮತ್ತು 30ರಂದು ಗೌಡನಕಟ್ಟೆಯ ಪ್ರಕಾಶ್‌

ಸೆರೆ ಹಿಡಿದಿದ್ದ ನಾಲ್ಕು ಹುಲಿಮರಿಗಳು ಪುನರ್ವಸತಿ ಕೇಂದ್ರದಲ್ಲಿ ಸಾವು Read More »

ಗೂಗಲ್‌ ಮ್ಯಾಪ್‌ ನಂಬಿ ಬಂದ ಲಾರಿ ಅಪಘಾತ

ಮಂಗಳೂರು : ಗೂಗಲ್‌ ಮ್ಯಾಪ್‌ ನಂಬಿ ಬಂದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಇಳಿಜಾರಿನ ತಿರುವಿನಲ್ಲಿ ರಸ್ತೆ ಪಕ್ಕದ ದರೆಗೆ ಡಿಕ್ಕಿ ಹೊಡೆದು ಘಟನೆ ಮಂಗಳವಾರ ತಡರಾತ್ರಿ ಮೂಡುಬಿದಿರೆಯ ಪಾಲಡ್ಕ ಪಂಚಾಯಿತಿ ವ್ಯಾಪ್ತಿಯ ಕಡಂದಲೆಯಲ್ಲಿ ಸಂಭವಿಸಿದೆ. ಅಪಘಾತದಲ್ಲಿ ಚಾಲಕ ಪಾರಾಗಿದ್ದಾನೆ. ರಾತ್ರಿ 2 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಚಾಲಕ ಗೂಗಲ್‌ ಮ್ಯಾಪ್‌ ಹಾಕಿಕೊಂಡು ಮೂಡುಬಿದಿರೆ ಕಡೆಗೆ ಲಾರಿ ಚಲಾಯಿಸಿಕೊಂಡು ಬರುತ್ತಿದ್ದ. ಆದರೆ ಗೂಗಲ್‌ ಮ್ಯಾಪ್‌ ಮುಖ್ಯರಸ್ತೆ ಬಿಟ್ಟು ಒಳರಸ್ತೆಯ ದಾರಿ ತೋರಿಸಿದ್ದು, ಅದನ್ನು ನಂಬಿ

ಗೂಗಲ್‌ ಮ್ಯಾಪ್‌ ನಂಬಿ ಬಂದ ಲಾರಿ ಅಪಘಾತ Read More »

ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ ಹತ್ತು ಮಂದಿಗೆ ಜೈಲು ಶಿಕ್ಷೆ

ನಕಲಿ ಆಧಾರ್‌ ಕಾರ್ಡ್‌ ಬಳಸಿ ಅಕ್ರಮವಾಗಿ ವಾಸ ಉಡುಪಿ : ಅಕ್ರಮವಾಗಿ ನೆಲೆಸಿದ್ದ 10 ಬಾಂಗ್ಲಾದೇಶದ ಪ್ರಜೆಗಳಿಗೆ ಉಡುಪಿ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸಿಜೆಎಂ ನ್ಯಾಯಾಲಯ ತಲಾ 10,000 ರೂ. ದಂಡದೊಂದಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಅಕ್ಟೋಬರ್ 11, 2024ರಂದು ಮಲ್ಪೆಯ ವಡಬಾಂಡೇಶ್ವರ ಬಸ್ ನಿಲ್ದಾಣದ ಬಳಿ ಗಸ್ತು ತಿರುಗುತ್ತಿದ್ದ ಮಲ್ಪೆ ಪೊಲೀಸ್ ಠಾಣೆಯ ಪಿಎಸ್‌ಐ ಪ್ರವೀಣ್ ಕುಮಾರ್ ಆರ್ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಏಳು ಜನರನ್ನು ಗಮನಿಸಿದಾಗ ಅವರು ಬಾಂಗ್ಲಾದೇಶದಿಂದ ಅಕ್ರಮವಾಗಿ

ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ ಹತ್ತು ಮಂದಿಗೆ ಜೈಲು ಶಿಕ್ಷೆ Read More »

ಗ್ಯಾರಂಟಿ ಬಿಟ್ಟು ಅಭಿವೃದ್ಧಿ ಯೋಜನೆಗಳನ್ನು ಕೊಡಿ : ಕಾಂಗ್ರೆಸ್‌ ಶಾಸಕರ ಆಗ್ರಹ

ಗ್ಯಾರಂಟಿ ನಂಬಿ ಚುನಾವಣೆ ಎದುರಿಸಲು ಸಾಧ್ಯವಿಲ್ಲ ಎಂದು ದೂರು ಬೆಳಗಾವಿ: ಗ್ಯಾರಂಟಿಗಳ ಬಗ್ಗೆ ಕಾಂಗ್ರೆಸ್‌ ಶಾಸಕರು ಈಗ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಲು ಪ್ರಾರಂಭಿಸಿದ್ದಾರೆ. ಬೆಳಗಾವಿಯ ಹೋಟೆಲೊಂದರಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ಹಲವು ಶಾಸಕರು ಗ್ಯಾರಂಟಿ ಯೋಜನೆಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ, ಗ್ಯಾರಂಟಿಗಳನ್ನು ಮಾತ್ರ ನಂಬಿಕೊಂಡು ಚುನಾವಣೆ ಎದುರಿಸಲು ಸಾಧ್ಯವಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ. ಗ್ಯಾರಂಟಿ ಬಿಟ್ಟು ನಮಗೆ ಅಭಿವೃದ್ಧಿ ಯೋಜನೆಗಳನ್ನು ಕೊಡಿ. ಜನರು ಗ್ಯಾರಂಟಿಗಳ ಬಗ್ಗೆ ಶ್ಲಾಘನೆ

ಗ್ಯಾರಂಟಿ ಬಿಟ್ಟು ಅಭಿವೃದ್ಧಿ ಯೋಜನೆಗಳನ್ನು ಕೊಡಿ : ಕಾಂಗ್ರೆಸ್‌ ಶಾಸಕರ ಆಗ್ರಹ Read More »

ಡ್ರಗ್ಸ್‌ ಕೊಡಲಿಲ್ಲ ಎಂದು ಜೈಲಿನ ಟಿವಿಯನ್ನು ಒಡೆದು ಹಾಕಿ ದಾಂಧಲೆ ಎಸಗಿದ ಕೈದಿಗಳು

ಕಾರವಾರ ಜೈಲಿನಲ್ಲಿ ಮಂಗಳೂರಿನ ಕೈದಿಗಳಿಂದ ಮಾರಾಮಾರಿ ಬೆಂಗಳೂರು: ಕೆಲದಿನಗಳ ಹಿಂದೆಯಷ್ಟೇ ತಂಬಾಕು ಕೊಟ್ಟಿಲ್ಲವೆಂದು ಜೈಲು ಸಿಬ್ಬಂದಿ ಮೇಲೆಯೇ ಹಲ್ಲೆ ಮಾಡಿ ಸುದ್ದಿಯಾಗಿದ್ದ ಕಾರಾವಾರ ಜೈಲಿನಲ್ಲಿ ಇದೀಗ ಮತ್ತೊಮ್ಮೆ ಕೈದಿಗಳು ಡ್ರಗ್ಸ್‌ಗಾಗಿ ಮಾರಾಮಾರಿ ನಡೆಸಿದ್ದಾರೆ. ಇಬ್ಬರು ಕೈದಿಗಳು ಮಾದಕವಸ್ತು ಕೊಟ್ಟಿಲ್ಲವೆಂದು ಟಿವಿ ಒಡೆದು ದಾಂಧಲೆ ಎಬ್ಬಿಸಿದ ಘಟನೆ ಕಾರವಾರ ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ. ಕೆಲವು ದಿನಗಳ ಹಿಂದೆ ಜೈಲರ್ ಹಾಗೂ ಮೂವರು ಸಿಬ್ಬಂದಿ ಮೇಲೆ ಮಂಗಳೂರು ಮೂಲದ ರೌಡಿಗಳಾದ ಮೊಹಮ್ಮದ್ ಅಬ್ದುಲ್, ಫಯಾನ್ ಹಾಗೂ ಕೌಶಿಕ್ ನಿಹಾಲ್ ಎಂಬವರು

ಡ್ರಗ್ಸ್‌ ಕೊಡಲಿಲ್ಲ ಎಂದು ಜೈಲಿನ ಟಿವಿಯನ್ನು ಒಡೆದು ಹಾಕಿ ದಾಂಧಲೆ ಎಸಗಿದ ಕೈದಿಗಳು Read More »

error: Content is protected !!
Scroll to Top