ಸುದ್ದಿ

ಎಚ್‌ಎಂಪಿವಿ ವೈರಸ್‌ ಸೋಂಕಿಗೆ ಸಾಮಾನ್ಯ ಎಚ್ಚರಿಕೆ ಸಾಕು : ಕೇಂದ್ರ ಮಾರ್ಗಸೂಚಿ

ಚಳಿಗಾಲದಲ್ಲಿ ಕಾಣಿಸಿಕೊಳ್ಳುವ ಶೀತ ಜ್ವರದ ಚಿಕಿತ್ಸೆ ಪಡೆಯಲು ಸಲಹೆ ಹೊಸದಿಲ್ಲಿ : ಚೀನದಲ್ಲಿ ಕಂಡು ಬಂದಿರುವ ಹ್ಯೂಮನ್ ಮೆಟಾನ್ಯೂಮೋ ವೈರಸ್ (HMPV) ಹರಡುವ ಬಗ್ಗೆ ಭಯಪಡುವ ಅಗತ್ಯವಿಲ್ಲ. ಎಲ್ಲ ಉಸಿರಾಟದ ಸೋಂಕುಗಳ ವಿರುದ್ಧ ತೆಗೆದುಕೊಳ್ಳುವ ಸಾಮಾನ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡರೆ ಸಾಕು ಎಂದು ಕೇಂದ್ರ ಆರೋಗ್ಯ ಸೇವೆಗಳ ಮಹಾನಿರ್ದೇಶನಾಲಯ ಹೇಳಿದೆ. ನಾವು ದೇಶದಲ್ಲಿ ಉಸಿರಾಟದ ಸಮಸ್ಯೆಗಳಿಗೆ ಸಂಬಂಧಿಸಿದಂತೆ ದಾಖಲಾದ ರೋಗಿಗಳ ಡೇಟಾವನ್ನು ವಿಶ್ಲೇಷಿಸಿದ್ದೇವೆ. ಡಿಸೆಂಬರ್ 2024ರ ಡೇಟಾದಲ್ಲಿ ಯಾವುದೇ ಗಣನೀಯ ಹೆಚ್ಚಳ ಕಂಡುಬಂದಿಲ್ಲ. ನಮ್ಮ ಯಾವುದೇ ಸಂಸ್ಥೆಗಳಿಂದ ಹೆಚ್ಚಿನ […]

ಎಚ್‌ಎಂಪಿವಿ ವೈರಸ್‌ ಸೋಂಕಿಗೆ ಸಾಮಾನ್ಯ ಎಚ್ಚರಿಕೆ ಸಾಕು : ಕೇಂದ್ರ ಮಾರ್ಗಸೂಚಿ Read More »

ಚೀನಾದಲ್ಲಿ ಹರಡುತ್ತಿದೆ ಕೊರೊನಕ್ಕಿಂತಲೂ ಅಪಾಯಕಾರಿ ವೈರಸ್‌

ಆಸ್ಪತ್ರೆ, ಸ್ಮಶಾನಗಳು ತುಂಬಿ ತುಳುಕುತ್ತಿರುವ ವೀಡಿಯೊಗಳು ವೈರಲ್‌ ಬೀಜಿಂಗ್‌ : ಇಡೀ ಜಗತ್ತಿಗೆ ಕೊರೊನ ವೈರಸ್‌ ಹರಡಿ ತತ್ತರಿಸುವಂತೆ ಮಾಡಿದ್ದ ಚೀನಾದಲ್ಲಿ ಐದು ವರ್ಷಗಳ ಬಳಿಕ ಇದೇ ಮಾದರಿಯ ಇನ್ನೊಂದು ವೈರಸ್‌ ಕಾಣಿಸಿಕೊಂಡಿದೆ ಎಂಬ ಸುದ್ದಿಯೊಂದು ಸೋಷಿಯಲ್‌ ಮೀಡಿಯಾಗಳಲ್ಲಿ ಬಿರುಗಾಳಿಯಂತೆ ಹರಿದಾಡುತ್ತಿದೆ. ಎಕ್ಸ್‌, ಫೇಸ್‌ಬುಕ್‌, ವಾಟ್ಸಪ್‌, ಟೆಲಿಗ್ರಾಂ, ಇನ್‌ಸ್ಟಾಗ್ರಾಂ ಸೇರಿದಂತೆ ಎಲ್ಲ ಸೋಷಿಯಲ್‌ ಮೀಡಿಯಾಗಳಲ್ಲಿ ಈ ವೈರಸ್‌ ಕುರಿತು ಚರ್ಚೆಯಾಗುತ್ತಿದೆ. ಕೆಲವರು ಆಸ್ಪತ್ರೆಗಳು ತುಂಬಿ ತುಳುಕುತ್ತಿರುವ, ಸ್ಮಶಾನಗಳಲ್ಲಿ ಸಾಲಾಗಿ ಹೆಣಗಳನ್ನು ಇಟ್ಟಿರುವ ವೀಡಿಯೊಗಳನ್ನು ಹಂಚಿಕೊಂಡು ಇದು ಕೊರೊನ

ಚೀನಾದಲ್ಲಿ ಹರಡುತ್ತಿದೆ ಕೊರೊನಕ್ಕಿಂತಲೂ ಅಪಾಯಕಾರಿ ವೈರಸ್‌ Read More »

ಶ್ರೀ ರಾಮ ಭಜನಾ ತಂಡದ ಭಜನಾ ಕೀರ್ತನ ಸಂಭ್ರಮ | ಭಕ್ತಿ-ಭಾವ ಕುಣಿತದ ಸಮ್ಮಿಲನ

ಪುತ್ತೂರು : ಶ್ರೀ ರಾಮ ಭಜನಾ ತಂಡ ಆನಡ್ಕ, ಪುತ್ತೂರು ಇದರ ಪ್ರಥಮ ವಾರ್ಷಿಕೋತ್ಸವದ ಪ್ರಯುಕ್ತ ಭಜನಾ ಕೀರ್ತನ ಸಂಭ್ರಮ, ಭಕ್ತಿ-ಭಾವ- ಕುಣಿತದ ಸಮ್ಮಿಲನವು ಜ.5 ರಂದು ಆನಡ್ಕದಲ್ಲಿ ನಡೆಯಲಿದೆ. ಸಭಾ ಕಾರ್ಯಕ್ರಮ ಸಂಜೆ 7ಗಂಟೆಗೆ ನಡೆಯಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆನಡ್ಕದ ಶ್ರೀ ರಾಮ ಭಜನಾ ತಂಡ ಅಧ್ಯಕ್ಷ ಗುರುಪ್ರಸಾದ್‍ ವಾಲ್ತಾಜೆ, ಮುಖ್ಯ ಅತಿಥಿಯಾಗಿ ಪುತ್ತೂರು ನರಿಮೊಗರು ಸರಸ್ವತಿ ವಿದ್ಯಾ ಮಂದಿರದ ಸಂಚಾಲಕ ಅವಿನಾಶ್‍ ಕೊಡಂಕಿರಿ, ಪುತ್ತೂರು ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‍

ಶ್ರೀ ರಾಮ ಭಜನಾ ತಂಡದ ಭಜನಾ ಕೀರ್ತನ ಸಂಭ್ರಮ | ಭಕ್ತಿ-ಭಾವ ಕುಣಿತದ ಸಮ್ಮಿಲನ Read More »

ದೂರು ನೀಡಲು ಬಂದ ಮಹಿಳೆ ಜೊತೆ ಡಿವೈಎಸ್‌ಪಿ ಅಸಭ್ಯ ವರ್ತನೆ

ಗೃಹ ಸಚಿವರ ತವರು ಜಿಲ್ಲೆಯಲ್ಲೇ ನಡೆದ ಘಟನೆ ತುಮಕೂರು : ದೂರು ನೀಡಲು ಕಚೇರಿಗೆ ಬಂದ ಮಹಿಳೆಯ ಜೊತೆ ಡಿವೈಎಸ್‌ಪಿ ದರ್ಜೆಯ ಪೊಲೀಸ್‌ ಅಧಿಕಾರಿಯೇ ಅಸಭ್ಯವಾಗಿ ವರ್ತಿಸಿದ ವೀಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು, ಪೊಲೀಸ್‌ ಇಲಾಖೆ ತಲೆ ತಗ್ಗಿಸುವಂತಾಗಿದೆ. ಗೃಹ ಸಚಿವ ಜಿ.ಪರಮೇಶ್ವರ್‌ ಅವರ ತವರು ಜಿಲ್ಲೆಯಲ್ಲೇ ಈ ಘಟನೆ ನಡೆದಿದೆ. ಮಧುಗಿರಿ ಉಪವಿಭಾಗದ ಡಿವೈಎಸ್​​ಪಿ ರಾಮಚಂದ್ರಪ್ಪ ಅಸಭ್ಯವಾಗಿ ವರ್ತಿಸಿದ್ದು, ವೀಡಿಯೊ ವೈರಲ್‌ ಆದ ಬಳಿಕ ಅವರು ತಲೆಮರೆಸಿಕೊಂಡಿದ್ದಾರೆ. ಜಮೀನು ವ್ಯಾಜ್ಯದ ಬಗ್ಗೆ ದೂರು ನೀಡಲು

ದೂರು ನೀಡಲು ಬಂದ ಮಹಿಳೆ ಜೊತೆ ಡಿವೈಎಸ್‌ಪಿ ಅಸಭ್ಯ ವರ್ತನೆ Read More »

ಮಹಿಳೆಯರಿಗೆ ಸಿಗಲಿದೆ ಶಕ್ತಿ ಸ್ಮಾರ್ಟ್‌ಕಾರ್ಡ್‌

ಸರಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ದಾಖಲೆಯಾಗಿ ಸ್ಮಾರ್ಟ್‌ಕಾರ್ಡ್‌ ಬಳಕೆ ಬೆಂಗಳೂರು: ಶಕ್ತಿ ಯೋಜನೆಯಡಿ ಸರಕಾರಿ ಬಸ್‌ಗಳಲ್ಲಿ ಪ್ರಯಾಣಿಸುವ ಮಹಿಳೆಯರು ಪ್ರತಿಸಲ ಆಧಾರ್‌ ಕಾರ್ಡ್‌ ಒಯ್ದು ನಿರ್ವಾಹಕರಿಗೆ ತೋರಿಸುವ ಕಷ್ಟವನ್ನು ತಪ್ಪಿಸುವ ಸಲುವಾಗಿ ಸರಕಾರ ಮಹಿಳೆಯರಿಗೆ ಸ್ಮಾರ್ಟ್‌ ಕಾರ್ಡ್‌ ವಿತರಿಸಲಿದೆ. ಶಕ್ತಿ ಯೋಜನೆಯನ್ನು ಸರಳೀಕರಿಸುವ ಪ್ರಕ್ರಿಯೆಯಂಗವಾಗಿ ಶೀಘ್ರದಲ್ಲೇ ಎಲ್ಲ ಫಲಾನುಭವಿ ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ವಿತರಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಪ್ರತಿ ಸಲ ಸರಕಾರಿ ಬಸ್‌ನಲ್ಲಿ ಪ್ರಯಾಣಿಸುವಾಗ ಮಹಿಳೆಯರು ತಮ್ಮ ಆಧಾರ್‌ ಕಾರ್ಡ್‌ ತೋರಿಸಬೇಕಾಗುತ್ತದೆ.

ಮಹಿಳೆಯರಿಗೆ ಸಿಗಲಿದೆ ಶಕ್ತಿ ಸ್ಮಾರ್ಟ್‌ಕಾರ್ಡ್‌ Read More »

ಕುತೂಹಲ ಕೆರಳಿಸಿದ ಸಿದ್ದರಾಮಯ್ಯ ಡಿನ್ನರ್‌ ಮೀಟಿಂಗ್‌

ಡಿಕೆಶಿ ವಿದೇಶದಲ್ಲಿರುವಾಗ ಆಪ್ತರೊಂದಿಗೆ ಗೂಢಾಲೋಚನೆ ಬೆಂಗಳೂರು : ರಾಜ್ಯದಲ್ಲಿ ಮತ್ತೊಮ್ಮೆ ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಗುಸುಗುಸು ಪ್ರಾರಂಭವಾಗಿದೆ. ಬೆಳಗಾವಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತನ್ನ ಆಪ್ತ ಸಚಿವರ ಜೊತೆ ನಡೆಸಿದ ಡಿನ್ನರ್ ಮೀಟಿಂಗ್‌ನಲ್ಲಿ ಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಜೊತೆಗೆ ಸಂಪುಟ ಪುನರ್‌ ರಚನೆಯ ಕುರಿತು ಚರ್ಚೆ ನಡೆದಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ರಾಜಕೀಯದ ಪಡಸಾಲೆಯಲ್ಲಿ ಈ ಡಿನ್ನರ್‌ ಮೀಟಿಂಗ್‌ ಬಗ್ಗೆ ಬಿಸಿಬಿಸಿ ಚರ್ಚೆಯಾಗುತ್ತದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ವಿದೇಶ ಪ್ರವಾಸದಲ್ಲಿರುವಾಗಲೇ ಸಿದ್ದರಾಮಯ್ಯ ಆಪ್ತರ

ಕುತೂಹಲ ಕೆರಳಿಸಿದ ಸಿದ್ದರಾಮಯ್ಯ ಡಿನ್ನರ್‌ ಮೀಟಿಂಗ್‌ Read More »

ಪ್ರೀತಿಸುವ ನೆಪದಲ್ಲಿ ವಿದ್ಯಾರ್ಥಿನಿಯ ಅತ್ಯಾಚಾರ | ಆರೋಪಿ ಮೇಲೆ ಪೋಕ್ಸೋ, ಅಟ್ರಾಸಿಟಿ ಪ್ರಕರಣ ದಾಖಲು

ಕಡಬ : ಕಾಲೇಜ್ ವಿದ್ಯಾರ್ಥಿನಿಯನ್ನು ಪ್ರೀತಿಸುವ ನೆಪದಲ್ಲಿ ದೈಹಿಕ ಸಂಪರ್ಕ ಬೆಳೆಸಿ ಅದನ್ನು ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್‍ ಮೇಲ್‍ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಕಡಬ ತಾಲೂಕು ಕೋಡಿಂಬಾಳ ಗ್ರಾಮದ ಒಂಕಲ್ ನಿವಾಸಿ ಪ್ರವೀಣ್ ಪೂಜಾರಿ ಬಂಧಿತ ಆರೋಪಿ. ಸಂತ್ರಸ್ತೆಯು ಕಾಲೇಜು ವಿದ್ಯಾರ್ಥಿನಿಯಾಗಿದ್ದು ಆಕೆಯನ್ನು ಪ್ರವೀಣ್ ಪ್ರೀತಿಯ ಬಲೆಗೆ ಬೀಳಿಸಿದ ಬಳಿಕ ತನ್ನ ಬಾಡಿಗೆ ಮನೆಗೆ ಕರೆದುಕೊಂಡು ಬಂದು ಲೈಂಗಿಕವಾಗಿ ಬಳಸಿಕೊಂಡಿದ್ದ. ಅಲ್ಲದೆ ವೀಡಿಯೋ ಚಿತ್ರೀಕರಿಸಿಕೊಂಡು ಬ್ಲ್ಯಾಕ್‍ ಮೇಲ್‍ ಮಾಡುತ್ತಿದ್ದ ಅನೇಕ ಬಾರಿ ಆಕೆಯನ್ನು ಪುತ್ತೂರು ಬಳಿಯ ಬಾಡಿಗೆ ರೂಂಗೆ

ಪ್ರೀತಿಸುವ ನೆಪದಲ್ಲಿ ವಿದ್ಯಾರ್ಥಿನಿಯ ಅತ್ಯಾಚಾರ | ಆರೋಪಿ ಮೇಲೆ ಪೋಕ್ಸೋ, ಅಟ್ರಾಸಿಟಿ ಪ್ರಕರಣ ದಾಖಲು Read More »

ಗ್ರಾಪಂ ಕಚೇರಿಯಲ್ಲಿ ಮೌಲ್ವಿಯಿಂದ ಪ್ರಾರ್ಥನೆ : ಹಿಂದು ಸಂಘಟನೆಗಳ ವಿರೋಧ

ಕಾಂಗ್ರೆಸ್‌-ಎಸ್‌ಡಿಪಿಐ ಅಧಿಕಾರ ಸ್ವೀಕಾರ ವೇಳೆ ಮೌಲ್ವಿಯನ್ನು ಕರೆಸಿ ಪ್ರಾರ್ಥನೆ ಉಡುಪಿ: ಗಂಗೊಳ್ಳಿ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಮುಸ್ಲಿಂ ಮೌಲ್ವಿಯೊಬ್ಬರು ಪ್ರಾರ್ಥನೆ ಸಲ್ಲಿಸಿರುವ ವೀಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್​ ಆಗಿದ್ದು, ಹಿಂದೂ ಸಂಘಟನೆಗಳು ಅಕ್ರೋಶ ವ್ಯಕ್ತಪಡಿಸಿವೆ. ಗಂಗೊಳ್ಳಿ ಗ್ರಾಮ ಪಂಚಾಯತ್ ಮೂರು ದಶಕಗಳ ಬಳಿಕ ಕಾಂಗ್ರೆಸ್​ ಮತ್ತು ಎಸ್​ಡಿಪಿಐ ಮೈತ್ರಿಯ ತೆಕ್ಕೆಗೆ ಬಿದ್ದಿದೆ. ಈ ಹಿನ್ನೆಲೆಯಲ್ಲಿ ಗುರುವಾರ ಅಧಿಕಾರ ಹಂಚಿಕೆಯಾಗಿದೆ. ಕಾಂಗ್ರೆಸ್​ನ ಜಯಂತಿ ಖಾರ್ವಿ ಎಂಬುವರು ಅಧ್ಯಕ್ಷರಾಗಿದ್ದರೆ, ಎಸ್​ಡಿಪಿಐ ಬೆಂಬಲಿತ ಸದಸ್ಯ ತಬ್ರೇಜ್ ಉಪಾಧ್ಯಕ್ಷರಾಗಿದ್ದಾರೆ. ತಬ್ರೇಜ್ ಉಪಾಧ್ಯಕ್ಷ ಅಧಿಕಾರ

ಗ್ರಾಪಂ ಕಚೇರಿಯಲ್ಲಿ ಮೌಲ್ವಿಯಿಂದ ಪ್ರಾರ್ಥನೆ : ಹಿಂದು ಸಂಘಟನೆಗಳ ವಿರೋಧ Read More »

ಪುರುಷರಿಗೆ ಟಿಕೆಟ್‌ ದರ ಏರಿಕೆ ಬರೆ

ಕೆಎಸ್‌ಆರ್‌ಟಿಸಿ ಟಿಕೆಟ್‌ ದರ ಶೇ.15ರಂತೆ ಹೆಚ್ಚಳ; ಜ.5ರಿಂದ ಜಾರಿ ಬೆಂಗಳೂರು: ನಿರೀಕ್ಷೆಯಂತೆಯೇ ಹೊಸ ವರ್ಷದಲ್ಲಿ ಸರಕಾರ ಜನರಿಗೆ ಕೆಎಸ್‌ಆರ್‌ಟಿಸಿ ಬಸ್‌ ಟಿಕೆಟ್‌ ದರ ಏರಿಕೆಯ ಬರೆ ಎಳೆದಿದೆ. ಮಹಿಳೆಯರಿಗೆ ಶಕ್ತಿ ಯೋಜನೆಯಲ್ಲಿ ಉಚಿತ ಪ್ರಯಾಣದ ಕೊಡುಗೆ ನೀಡಿ ಅದರ ಮೂರುಪಟ್ಟು ದರವನ್ನು ಪುರುಷರಿಂದ ವಸೂಲು ಮಾಡಲು ಮುಂದಾಗಿದೆ. ನಿನ್ನೆ ನಡೆದ ಸಂಪುಟ ಸಭೆಯಲ್ಲಿ ಬಸ್‌ ಟಿಕೆಟ್‌ ದರ ಶೇ.15 ಏರಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಈ ಮೊದಲು ಸಂಕ್ರಾಂತಿ ನಂತರ ಟಿಕೆಟ್‌ ದರ ಏರಿಕೆಯಾಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ

ಪುರುಷರಿಗೆ ಟಿಕೆಟ್‌ ದರ ಏರಿಕೆ ಬರೆ Read More »

ಮಾಜಿ ಶಾಸಕರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುವುದನ್ನು ಬಿಟ್ಟು ಹಾಲಿ ಶಾಸಕರು ಅಭಿವೃದ್ಧಿ ಕಡೆ ಗಮನಹರಿಸಲಿ | ಪತ್ರಿಕಾಗೋಷ್ಠಿಯಲ್ಲಿ ಶೌಕತ್ ಅಲಿ

ಪುತ್ತೂರು: ಹಿರೇಬಂಡಾಡಿಯಲ್ಲಿ ನಡೆದ ಅಕ್ರಮ-ಸಕ್ರಮ ಬೈಠಕ್‍ ನಲ್ಲಿ ಶಾಸಕ ಅಶೋಕ್‍ ಕುಮಾರ್‍ ರೈ ಯವರು ಟ್ಯಾಕ್ಸ್ ಕಲೆಕ್ಷನ್ ಎಂಬ ಶಬ್ದವನ್ನು ಬಳಸಿ ಮಾಜಿ ಶಾಸಕರ ಮೇಲೆ ಸುಳ್ಳು ಆರೋಪಗಳನ್ನು ಹೊರಿಸಿದ್ದು, ಈ ಕುರಿತು ನೀವು ಕೊಡುವ ಸರ್ಟಿಫಿಕೇಟ್‍ ಅಗತ್ಯವಿಲ್ಲ. ಇದು ರಾಜಕೀಯ ಪ್ರೇರಿತ ಹೇಳಿಕೆಯಾಗಿದ್ದು, ಮಾಜಿ ಶಾಸಕರ ರಾಜಕೀಯ ಜೀವನದ 35 ವರ್ಷಗಳ ಬಗ್ಗೆ ಹಿರೇಬಂಡಾಡಿ ಜನರಿಗೆ ತಿಳಿದಿದೆ ಎಂದು ಹಿರೇಬಂಡಾಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಶೌಕತ್ ಅಲಿ ತಿಳಿಸಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ,

ಮಾಜಿ ಶಾಸಕರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುವುದನ್ನು ಬಿಟ್ಟು ಹಾಲಿ ಶಾಸಕರು ಅಭಿವೃದ್ಧಿ ಕಡೆ ಗಮನಹರಿಸಲಿ | ಪತ್ರಿಕಾಗೋಷ್ಠಿಯಲ್ಲಿ ಶೌಕತ್ ಅಲಿ Read More »

error: Content is protected !!
Scroll to Top