ಸುದ್ದಿ

ಅಮೆರಿಕ-ಇರಾನ್‌ ಸಂಧಾನ ವಿಫಲ : ಮತ್ತೆ ಯುದ್ಧದ ಕಾರ್ಮೋಡ

ಒಪ್ಪಂದವಿಲ್ಲದೆ ಹಿಂದಿರುಗಿದ ಅಮೆರಿಕದ ರಾಜತಾಂತ್ರಿಕರು ಇಸ್ಲಾಮಾಬಾದ್‌: ಅಮೆರಿಕ ಮತ್ತು ಇರಾನ್ ನಡುವಿನ ದೀರ್ಘಕಾಲದ ವೈಮನಸ್ಸು ಶಮನಗೊಳಿಸಲು ಪಾಕಿಸ್ತಾನದಲ್ಲಿ ನಡೆದ ಸಂಧಾನಕ್ಕೆ ಹಿನ್ನಡೆಯಾಗಿದೆ. ಸತತ 21 ಗಂಟೆಗಳ ಕಾಲ ಎರಡೂ ದೇಶಗಳ ಪ್ರತಿನಿಧಿಗಳು ಮುಖಾಮುಖಿಯಾಗಿ ಚರ್ಚಿಸಿದರೂ ಅಂತಿಮವಾಗಿ ಯಾವುದೇ ಒಪ್ಪಂದಕ್ಕೆ ಸಹಿ ಹಾಕಲು ಸಾಧ್ಯವಾಗಿಲ್ಲ ಎಂದು ಅಮೆರಿಕದ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ ಘೋಷಿಸಿದ್ದಾರೆ. ಇಸ್ಲಾಮಾಬಾದ್‌ನಲ್ಲಿ ನಡೆದ ಸುದೀರ್ಘ 21 ಗಂಟೆಗಳ ಹೈವೋಲ್ಟೇಜ್ ರಾಜತಾಂತ್ರಿಕ ಸಂವಾದ ಅಂತಿಮವಾಗಿ ಯಾವುದೇ ಫಲಿತಾಂಶವಿಲ್ಲದೆ ಅಂತ್ಯಗೊಂಡಿದೆ. ಇಡೀ ಜಗತ್ತು ಕುತೂಹಲದಿಂದ ಕಾಯುತ್ತಿದ್ದ ಅಮೆರಿಕ-ಇರಾನ್ ನೇರ […]

ಅಮೆರಿಕ-ಇರಾನ್‌ ಸಂಧಾನ ವಿಫಲ : ಮತ್ತೆ ಯುದ್ಧದ ಕಾರ್ಮೋಡ Read More »

ಸುಳ್ಯ : ಕಾರು ಚಾಲಕನ ಕಣ್ಣಿಗೆ ಖಾರದ ಪುಡಿ ಎರಚಿ ಸುಲಿಗೆ ಯತ್ನ

ಸುಳ್ಯ: ಐವರ್ನಾಡಿನಲ್ಲಿ ಅಪರಿಚಿತ ವ್ಯಕ್ತಿಗಳು ಕಾರಿನ ಚಾಲಕನಿಗೆ ಖಾರದ ಪುಡಿ ಎರಚಿ ಸುಲಿಗೆಗೆ ಯತ್ನಿಸಿದ ಘಟನೆ ಶುಕ್ರವಾರ ರಾತ್ರಿ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತಮಿಳುನಾಡಿನ ಗುಡಲೂರು ನೀಲಗಿರಿಯ ಅರುಣ್ ಕುಮಾರ್ ಎಂಬವರು ತಮಿಳುನಾಡಿನಿಂದ ಮೈಸೂರು ಆಗಿ ಸುಳ್ಯ ಕಡೆಯಿಂದ ಬೆಳ್ಳಾರೆ ಮಾರ್ಗವಾಗಿ ಮರ್ಧಾಳಕ್ಕೆ ಹೋಗುವಾಗ ರಾತ್ರಿ 12 ಗಂಟೆ ಸಮಯಕ್ಕೆ ಐವರ್ನಾಡು ಗ್ರಾಮದ ಪುತ್ತಿಲ ಸಮೀಪ ತಿರುವಿನಲ್ಲಿ ಮೂತ್ರ ವಿಸರ್ಜನೆಗೆ ಕಾರು ನಿಲ್ಲಿಸಿದರು. ಬಳಿಕ ಕಾರಿನ ಹತ್ತಿರ ಬಂದಾಗ ದೂರದಿಂದ ವಿಶಲ್ ಹಾಕಿದ ಶಬ್ದ

ಸುಳ್ಯ : ಕಾರು ಚಾಲಕನ ಕಣ್ಣಿಗೆ ಖಾರದ ಪುಡಿ ಎರಚಿ ಸುಲಿಗೆ ಯತ್ನ Read More »

ಟಿಪ್ಪರ್‌ ಡಿಕ್ಕಿ : ಸ್ಕೂಟಿ ಸವಾರ ಸಾವು

ಮಂಗಳೂರು: ರಾ.ಹೆ. 66ರ ನಂತೂರು-ಪಂಪ್‌ವೆಲ್ ಸರ್ವಿಸ್ ರಸ್ತೆಯಲ್ಲಿ ಟಿಪ್ಪರ್ ಲಾರಿ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಶನಿವಾರ ರಾತ್ರಿ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಗೋಪಾಲ್ (29) ಎಂದು ಗುರುತಿಸಲಾಗಿದೆ. ಟಿಪ್ಪರ್ ಲಾರಿ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಗುರುಪುರದ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಗೋಪಾಲ ಮುಳಿಹಿತ್ಲು ಬಳಿ ವಾಸವಾಗಿದ್ದರು ಎನ್ನಲಾಗಿದೆ. ಈ ಅಪಘಾತದಲ್ಲಿ ಮತ್ತೊಂದು ದ್ವಿಚಕ್ರ ವಾಹನಕ್ಕೂ ಹಾನಿಯಾಗಿದ್ದು, ಸವಾರನಿಗೆ ಗಾಯವಾಗಿದೆ ಎಂದು ಹೇಳಲಾಗಿದೆ. ಸಂಚಾರ

ಟಿಪ್ಪರ್‌ ಡಿಕ್ಕಿ : ಸ್ಕೂಟಿ ಸವಾರ ಸಾವು Read More »

ಯುವ ಉದ್ಯಮಿ ಸುದೀಪ್‌ ರೈ ಆತ್ಮಹತ್ಯೆ ಪ್ರಕರಣ : ಪತ್ನಿ ಬಂಧನ

ಮದುವೆಯಾದ ಒಂದೇ ತಿಂಗಳಲ್ಲಿ ಆತ್ಮಹತ್ಯೆ ಮಾಡಿಕೊಂಡ ಸುದೀಪ್‌ ರೈ ಬೆಳ್ತಂಗಡಿ : ಪುತ್ತೂರು ತಾಲೂಕಿನ ನೆಲ್ಯಾಡಿ ನಿವಾಸಿ ಯುವ ಉದ್ಯಮಿ ಬಿ.ಸುದೀಪ್ ರೈ (31) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಅವರ ಪತ್ನಿ ಸೌಮ್ಯ ಶೆಟ್ಟಿಯನ್ನು ಕಾರ್ಕಳ ಪೊಲೀಸರು ಶನಿವಾರ ಉಡುಪಿಯಲ್ಲಿ ಬಂಧಿಸಿದ್ದಾರೆ. ಸುದೀಪ್‌ ರೈ ಮಾ.17ರಂದು ಕಾರ್ಕಳ ತಾಲೂಕಿನ ಕಜೆ ಎಂಬಲ್ಲಿರುವ ಹೆಂಡತಿಯ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಮಾ.29 ರಂದು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಪ್ರಕರಣ ಸಂಬಂಧಿಸಿದಂತೆ ಪತ್ನಿ ಸೌಮ್ಯ ಶೆಟ್ಟಿಯನ್ನು

ಯುವ ಉದ್ಯಮಿ ಸುದೀಪ್‌ ರೈ ಆತ್ಮಹತ್ಯೆ ಪ್ರಕರಣ : ಪತ್ನಿ ಬಂಧನ Read More »

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ಆಸ್ಪತ್ರೆಗೆ ದಾಖಲು

ಸಾವಿರಾರು ಹಾಡುಗಳನ್ನು ಹಾಡಿರುವ ಗಾಯಕಿಯ ಚೇತರಿಕೆಗೆ ಪ್ರಾರ್ಥನೆ ಮುಂಬೈ: ಭಾರತೀಯ ಸಿನಿಮಾ ರಂಗದ ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ಅವರಿಗೆ ಹೃದಯಾಘಾತವಾಗಿದ್ದು, ಅವರನ್ನು ಮುಂಬೈನ ಪ್ರತಿಷ್ಠಿತ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆಶಾ ಬೋಸ್ಲೆ ಅವರಿಗೆ 92 ವರ್ಷ ವಯಸ್ಸಾಗಿದ್ದು, ವಯೋಸಜ ಕೆಲವು ಸಮಸ್ಯೆಗಳಿಂದ ಅವರು ಬಳಲುತ್ತಿದ್ದರು ಎನ್ನಲಾಗಿದೆ. ಆಶಾ ಭೋಸ್ಲೆ ಭಾರತ ರತ್ನ ಪುರಸ್ಕೃತ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ ಸಹೋದರಿ ಆಗಿದ್ದು,

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ಆಸ್ಪತ್ರೆಗೆ ದಾಖಲು Read More »

ಪ್ರೀತಿಗಾಗಿ ಆತ್ಮಹತ್ಯೆ ಮಾಡಿಕೊಂಡ ಯುವಕ

ಬೆಂಗಳೂರು: ಯುವತಿ ತನ್ನ ಪ್ರೀತಿಯನ್ನು ನಿರಾಕರಿಸಿದಳು ಎಂಬ ಕಾರಣಕ್ಕೆ ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಯಲಹಂಕದ ನ್ಯೂಟೌನ್‌ನಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದವನನ್ನು ಅಭಿಷೇಕ್ (23) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೂ ‌ಮುನ್ನ ಯುವಕ ಡೆತ್‌ನೋಟ್ ಬರೆದಿದ್ದಾನೆ. ಅದರಲ್ಲಿ ನನ್ನ ಹೆತ್ತವರು ನನ್ನನ್ನು ಚೆನ್ನಾಗಿ ನೋಡಿಕೊಳ್ಳುತ್ತಿದ್ದರು. ಆದರೆ ನಾನು ಅವರಿಗೆ ಒಳ್ಳೆಯ ಮಗನಾಗಲಿಲ್ಲ. ಕ್ಷಮಿಸಿ ಮುಂದಿನ ಜನ್ಮದಲ್ಲಿ ನಾನು ನಿಮ್ಮೆಲ್ಲರ ಜೊತೆಗೆ ಸಂತೋಷವಾಗಿರುತ್ತೇನೆ ಎಂದು ಬರೆದಿದ್ದಾನೆ. ಹಾಗೆಯೇ ಎಲ್ಲರಿಗೂ ಹೇಳುತ್ತಿದ್ದೇನೆ ದಯವಿಟ್ಟು ಯಾರನ್ನೂ ಪ್ರೀತಿಸಬೇಡಿ. ಈಗಿನ ಕಾಲದಲ್ಲಿ ಎಲ್ಲರೂ ವಂಚಕರೇ.

ಪ್ರೀತಿಗಾಗಿ ಆತ್ಮಹತ್ಯೆ ಮಾಡಿಕೊಂಡ ಯುವಕ Read More »

ಬಂಟ್ವಾಳ : ಚಲಿಸುತ್ತಿದ್ದ ರಿಕ್ಷಾ ಬೆಂಕಿಗಾಹುತಿ

ಬಂಟ್ವಾಳ : ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ರಿಕ್ಷಾ ಬೆಂಕಿಗಾಹುತಿಯಾದ ಘಟನೆ ಬಂಟ್ವಾಳದ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಮೂರ್ಜೆ ಎಂಬಲ್ಲಿ ಶುಕ್ರವಾರ ನಡೆದಿದೆ. ಬಿ.ಸಿ.ರೋಡು – ಧರ್ಮಸ್ಥಳ ರಸ್ತೆಯ ಮೂರ್ಜೆ ವಿಶಾಲನಗರ ಎಂಬಲ್ಲಿ ಈ ಘಟನೆ ನಡೆದಿದೆ. ಬಾಂಬಿಲ ನಿವಾಸಿ ರೇವಣ್ಣ ಅವರ ಗ್ಯಾಸ್ ಸಂಪರ್ಕ ಹೊಂದಿದ ರಿಕ್ಷಾದಲ್ಲಿ ಗ್ಯಾಸ್ ಖಾಲಿಯಾಗಿದೆ ಎಂಬ ಕಾರಣಕ್ಕಾಗಿ ಪೆಟ್ರೋಲ್ ತುಂಬಿಸಲು ಹೋಗುತ್ತಿದ್ದ ವೇಳೆ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ. ಗ್ಯಾಸ್ ಸೋರಿಕೆಯ ರೀತಿಯಲ್ಲಿ ವಾಸನೆ ಬರುತ್ತಿದೆ ಎಂದು ಚಾಲಕ ರೇವಣ್ಣ

ಬಂಟ್ವಾಳ : ಚಲಿಸುತ್ತಿದ್ದ ರಿಕ್ಷಾ ಬೆಂಕಿಗಾಹುತಿ Read More »

ಬಂಟ್ವಾಳ : ಮೆಹಂದಿ ಕಾರ್ಯಕ್ರಮದಲ್ಲಿ ನಿರೂಪಕ ಕುಸಿದು ಬಿದ್ದು ಸಾವು

ಬಂಟ್ವಾಳ : ಯುವ ನಿರೂಪಕನೋರ್ವ ಮದುವೆಯ ಮೆಹಂದಿ ಕಾರ್ಯಕ್ರಮದ ನಿರೂಪಣೆ ಮಾಡುತ್ತಿದ್ದ ವೇಳೆ ವೇದಿಕೆಯಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ನಾಯಿಲ ಎಂಬಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಫರಂಗಿಪೇಟೆ ಅಬ್ಬೆಟ್ಟು ನಿವಾಸಿ ಅಶ್ವಿಥ್ ( 32) ಮೃತಪಟ್ಟ ಯುವಕ. ನಾಯಿಲದ ಸಂಬಂಧಿಕರ ಮನೆಯಲ್ಲಿ ಮದರಂಗಿ ಕಾರ್ಯಕ್ರಮದ ನಿರೂಪಣೆಗಾಗಿ ವೇದಿಕೆ ಹತ್ತಿ ಕಾರ್ಯಕ್ರಮ ಪ್ರಾರಂಭಿಸುತ್ತಿದ್ದಂತೆ ಹಠಾತ್ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ. ಕೂಡಲೇ ಖಾಸಗಿ ಆಸ್ಪತ್ರೆಗೆ ಕೊಂಡೊಯ್ದರೂ ಅದಾಗಲೇ ಅವರು ಮೃತಪಟ್ಟ ಬಗ್ಗೆ ವೈದ್ಯರು

ಬಂಟ್ವಾಳ : ಮೆಹಂದಿ ಕಾರ್ಯಕ್ರಮದಲ್ಲಿ ನಿರೂಪಕ ಕುಸಿದು ಬಿದ್ದು ಸಾವು Read More »

ಇಂದು ಇಸ್ಲಾಮಾಬಾದ್‌ನಲ್ಲಿ ಅಮೆರಿಕ-ಇರಾನ್‌ ಕದನ ವಿರಾಮ ಮಾತುಕತೆ

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನಡೆಯುತ್ತಿರುವ ಮಾತುಕತೆ ಮೇಲೆ ಜಗತ್ತಿನ ದೃಷ್ಟಿ ಇಸ್ಲಾಮಾಬಾದ್ : ಇರಾನ್ ಮತ್ತು ಅಮೆರಿಕ ನಡುವಿನ ಶಾಂತಿ ಮಾತುಕತೆ ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಆರಂಭಗೊಂಡಿದೆ. ಈ ಮಹತ್ವದ ಸಭೆಯಲ್ಲಿ ಅಮೆರಿಕವನ್ನು ಉಪಾಧ್ಯಕ್ಷ ಜೆಡಿ ಬ್ಯಾನ್ಸ್ ಪ್ರತಿನಿಧಿಸುತ್ತಿದ್ದರೆ, ಇರಾನ್ ಸ್ಪೀಕರ್ ಮೊಹಮ್ಮದ್ ಭಗರ್ ಭಾಗಿಯಾಗಿದ್ದಾರೆ. ಮಾತುಕತೆಗೂ ಮುನ್ನ ಎರಡು ವಾರಗಳ ಕದನ ವಿರಾಮ ಘೋಷಿಸಲಾಗಿತ್ತು. ಉಭಯ ರಾಷ್ಟ್ರಗಳ ನಡುವಿನ ಒಪ್ಪಂದಗಳು ಮತ್ತು ಅವುಗಳ ಷರತ್ತುಗಳ ಕುರಿತು ಇಂದು ಚರ್ಚೆ ನಡೆಯಲಿದೆ. ನಾಯಕರ ಸುರಕ್ಷತೆ ದೃಷ್ಟಿಯಿಂದ ಇಸ್ಲಾಮಾಬಾದ್ ನಗರವನ್ನು ಸಂಪೂರ್ಣವಾಗಿ

ಇಂದು ಇಸ್ಲಾಮಾಬಾದ್‌ನಲ್ಲಿ ಅಮೆರಿಕ-ಇರಾನ್‌ ಕದನ ವಿರಾಮ ಮಾತುಕತೆ Read More »

ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಫೈರೋಜ್‌ ಪಠಾಣ್‌ ಮನೆಯಲ್ಲೇ ಬರ್ಬರ ಹತ್ಯೆ

ಮನಗೆ ನುಗ್ಗಿ ಯದ್ವಾತದ್ವಾ ಕಡಿದು ಕೊಚ್ಚಿ ಹಾಕಿದ ಹಂತಕರು ಧಾರವಾಡ: ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಫೈರೋಜ್‌ ಪಠಾಣ್‌ ಅವರನ್ನು ದುಷ್ಕರ್ಮಿಗಳು ಅವರ ಮನೆಯಲ್ಲೇ ಅಟ್ಟಾಡಿಸಿ ಬರ್ಬರವಾಗಿ ಕೊಲೆ ಮಾಡಿದ್ದಾರೆ. ಈ ಘಟನೆಯಿಂದಾಗಿ ನಗರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಕಾಂಗ್ರೆಸ್‌ ಕಾರ್ಯಕರ್ತರು ದಿಗ್ಭ್ರಮೆಗೊಂಡಿದ್ದಾರೆ. ​ಧಾರವಾಡದ ಹಾಶ್ಮಿ ನಗರದಲ್ಲಿ ಫೈರೋಜ್‌ ಪಠಾಣ್‌ ವಾಸವಿದ್ದರು. ನಿನ್ನೆ ಅವರ ಮನೆಗೆ ನುಗ್ಗಿದ ನಾಲ್ವರು ಅಪರಿಚಿತ ದುಷ್ಕರ್ಮಿಗಳು, ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ಮನಬಂದಂತೆ ಹಲ್ಲೆ ನಡೆಸಿದ ಪರಿಣಾಮ ತೀವ್ರ ರಕ್ತಸ್ರಾವವಾಗಿ ಫೈರೋಜ್‌ ಸ್ಥಳದಲ್ಲೇ

ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಫೈರೋಜ್‌ ಪಠಾಣ್‌ ಮನೆಯಲ್ಲೇ ಬರ್ಬರ ಹತ್ಯೆ Read More »

error: Content is protected !!
Scroll to Top