ಸುದ್ದಿ

ಡಿಜಿಟಲ್‌ ಅರೆಸ್ಟ್‌ಗೆ ಒಳಗಾಗಿ 2 ಕೋ. ರೂ. ಕಳೆದುಕೊಂಡ ಮಹಿಳಾ ಟೆಕ್ಕಿ

ಸೈಟ್‌, ಫ್ಲಾಟ್‌ ಮಾರಿ, ಸಾಲ ತೆಗೆದು ವಂಚಕರಿಗೆ ಹಣ ಪಾವತಿಸಿ ಮೋಸ ಹೋದ ಸಾಫ್ಟ್‌ವೇರ್‌ ಉದ್ಯೋಗಿ ಬೆಂಗಳೂರು : ಮಹಿಳಾ ಟೆಕ್ಕಿಯೊಬ್ಬರನ್ನು ಸೈಬರ್ ವಂಚಕರು ಡಿಜಿಟಲ್ ಅರೆಸ್ಟ್ ಮಾಡಿ 2 ಕೋ. ರೂ. ಲೂಟಿ ಮಾಡಿದ ಪ್ರಕರಣವೊಂದು ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಸೈಬರ್‌ ಚೋರರ ಬೆದರಿಕೆಗೆ ಮಣಿದ ಮಹಿಳೆ ತನ್ನ ಫ್ಲಾಟ್‌, ಸೈಟ್‌ಗಳನ್ನು ಮಾರಾಟ ಮಾಡಿ, ಸಾಲ ತೆಗೆದು ಹಣ ಹೊಂದಿಸಿ ಕೊಟ್ಟಿದ್ದಾರೆ. ವಿಜ್ಞಾನ ನಗರದ ನ್ಯೂ ತಿಪ್ಪಸಂದ್ರ ನಿವಾಸಿ, ಸಾಫ್ಟ್‌ವೇರ್ ಉದ್ಯೋಗಿ ಭಾರಿ ವಂಚನೆಗೆ ಒಳಗಾದ […]

ಡಿಜಿಟಲ್‌ ಅರೆಸ್ಟ್‌ಗೆ ಒಳಗಾಗಿ 2 ಕೋ. ರೂ. ಕಳೆದುಕೊಂಡ ಮಹಿಳಾ ಟೆಕ್ಕಿ Read More »

ಲೋಕಾಯುಕ್ತ ದಾಳಿಯಾದಾಗ 50 ಸಾವಿರ ರೂ. ಟಾಯ್ಲೆಟ್‌ ಕಮೋಡ್‌ಗೆ ಹಾಕಿದ ಅಧಿಕಾರಿ

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ದಾಳಿ ಬಿಸಿ ಬೆಂಗಳೂರು : ರಾಜ್ಯದ ವಿವಿಧೆಡೆ ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್​​ ಕೊಟ್ಟಿದೆ. ಅಧಿಕಾರಿಗಳಿಗೆ ಸೇರಿದ ಮನೆ, ಕಚೇರಿ ಸೇರಿ ವಿವಿಧೆಡೆ ಶೋಧ ನಡೆಸಿರುವ ಲೋಕಾಯುಕ್ತ ಸಿಬ್ಬಂದಿ ಕೆಲವೆಡೆ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಧಾರವಾಡ, ಶಿವಮೊಗ್ಗ, ಮಂಡ್ಯ, ಚಿಕ್ಕಮಗಳೂರು, ಬೆಂಗಳೂರು ಸೇರಿ ವಿವಿಧೆಡೆ ದಾಳಿ ನಡೆದಿದೆ. ಬೆಳಗಾವಿ ಕೃಷಿ ಇಲಾಖೆ ಜಂಟಿ ನಿರ್ದೇಶಕರಾಗಿರುವ ರಾಜಶೇಖರ್​ ಅವರ ಧಾರವಾಡದ ಸಿಲ್ವರ್ ಆರ್ಕೇಡ್ ಬಡಾವಣೆಯಲ್ಲಿರುವ ನಿವಾಸದ ಮೇಲೆ ಲೋಕಾಯುಕ್ತ ದಾಳಿ

ಲೋಕಾಯುಕ್ತ ದಾಳಿಯಾದಾಗ 50 ಸಾವಿರ ರೂ. ಟಾಯ್ಲೆಟ್‌ ಕಮೋಡ್‌ಗೆ ಹಾಕಿದ ಅಧಿಕಾರಿ Read More »

ಬಂಟ್ವಾಳ : ಮದುವೆಗೆ ಕೆಲವೇ ತಾಸು ಬಾಕಿಯಿರುವಾಗ ವಧು ನಾಪತ್ತೆ!

ಬಂಟ್ವಾಳ : ಮದುವೆಗೆ ಕೆಲವೇ ತಾಸುಗಳು ಬಾಕಿಯಿರುವಾಗ ವಧು ಮನೆ ಬಿಟ್ಟು ಹೋದ ಘಟನೆಯೊಂದು ಬಂಟ್ವಾಳದ ಬಿ.ಸಿ.ರೋಡಿನ ಪಲ್ಲಮಜಲು ಎಂಬಲ್ಲಿ ಸಂಭವಿಸಿದೆ. ಅಶ್ಪಿಯ (21) ನಾಪತ್ತೆಯಾದ ಯುವತಿಯಾಗಿದ್ದು, ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ. ಡಿ.14ರಂದು ಅಶ್ಪಿಯಳ ಮದುವೆ ಬಂಟ್ವಾಳ ಬಿ ಮೂಡ ಗ್ರಾಮದ ಯುವಕನೊಂದಿಗೆ ನಿಶ್ಚಯವಾಗಿತ್ತು. ಹಿರಿಯರು ನಿಶ್ಚಯಿಸಿದ ಮದುವೆಗೆ ಎಲ್ಲ ತಯಾರಿ ಮುಗಿದಿತ್ತು. ಡಿ.14ರಂದು ಯುನಿಟಿ ಹಾಲ್‌ನಲ್ಲಿ ಮದುವೆ ನೆರವೇರಬೇಕಿತ್ತು. ಈ ನಡುವೆ ವಧು ಏಕಾಏಕಿ ಮನೆಯಿಂದ ನಾಪತ್ತೆಯಾಗಿದ್ದಾಳೆ. ಡಿ‌.14ರಂದು ನಸುಕಿನ

ಬಂಟ್ವಾಳ : ಮದುವೆಗೆ ಕೆಲವೇ ತಾಸು ಬಾಕಿಯಿರುವಾಗ ವಧು ನಾಪತ್ತೆ! Read More »

ಚಲಿಸುತ್ತಿದ್ದ ಬೈಕ್‌ನಲ್ಲೇ ಹೃದಯಾಘಾತ : ಸವಾರ ನಡುರಸ್ತೆಯಲ್ಲಿ ಸಾವು

ಅಂಗಲಾಚಿದರೂ ಸಹಾಯಕ್ಕೆ ಬಾರದೆ ಅಮಾನವೀಯವಾಗಿ ನಡೆದುಕೊಂಡ ಜನ ಬೆಂಗಳೂರು: ಚಲಿಸುತ್ತಿದ್ದ ಬೈಕ್‌ನಲ್ಲೇ ಹೃದಯಾಘಾತವಾಗಿ 34ರ ಹರೆಯದ ವ್ಯಕ್ತಿ ನಡುರಸ್ತೆಯಲ್ಲೇ ಪ್ರಾಣ ಬಿಟ್ಟಿರುವ ಹೃದಯ ವಿದ್ರಾವಕ ಬೆಂಗಳೂರಿನಲ್ಲಿ ನಡೆದಿದೆ. ರಸ್ತೆಯಲ್ಲಿ ಬಿದ್ದಿದ್ದ ಪತಿಯ ಜೀವ ಉಳಿಸಲು ಪತ್ನಿ ಕೈಮುಗಿದು ಅಂಗಲಾಚಿದರೂ ಜನರು ಯಾರು ಕೂಡ ನೆರವಿಗೆ ಬಂದಿಲ್ಲ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬನಶಂಕರಿ ಮೂರನೇ ಸ್ಟೇಜ್ ಇಟ್ಟುಮಡುವಿನ ಬಾಲಾಜಿ ನಗರದ ನಿವಾಸಿ ವೆಂಕಟರಾಮಣನ್ ಮೃತ ದುರ್ದೈವಿ. ಬೆಳಗಿನ ಜಾವ 3.30ರ ಸುಮಾರಿಗೆ ಇವರಿಗೆ ಮನೆಯಲ್ಲಿಯೇ ಎದೆನೋವು ಕಾಣಿಸಿಕೊಂಡಿದೆ.

ಚಲಿಸುತ್ತಿದ್ದ ಬೈಕ್‌ನಲ್ಲೇ ಹೃದಯಾಘಾತ : ಸವಾರ ನಡುರಸ್ತೆಯಲ್ಲಿ ಸಾವು Read More »

ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಕರ್ನಾಟಕಕ್ಕೆ ಆಗಮನ

ಶಿವರಾತ್ರೀಶ್ವರ ಶ್ರೀವಯೋಗಿಗಳ 1066ನೇ ಜಯಂತಿ ಮಹೋತ್ಸವ ಉದ್ಘಾಟನೆ ಮಂಡ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಮಂಡ್ಯದ ಮಳವಳ್ಳಿಯಲ್ಲಿ ಡಿ.16 ನಡೆಯಲಿರುವ ಶಿವರಾತ್ರೀಶ್ವರ ಶ್ರೀವಯೋಗಿಗಳ 1066ನೇ ಜಯಂತಿ ಮಹೋತ್ಸವದಲ್ಲಿ ಭಾಗಿಯಾಗುವ ಸಲುವಾಗಿ ರಾಷ್ಟ್ರಪತಿ ಆಗಮಿಸಲಿದ್ದಾರೆ. ಮಳವಳ್ಳಿ ಪಟ್ಟಣದ ಶಾಂತಿ ಕಾಲೇಜು ಮುಂಭಾಗದಲ್ಲಿ ನಡೆಯಲಿರುವ ವೇದಿಕೆ ಕಾರ್ಯಕ್ರಮದಲ್ಲಿ ರಾಷ್ಟ್ರಪತಿಗಳು ಭಾಗಿಯಾಗಲಿದ್ದಾರೆ. ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ. ಇಂದಿನಿಂದ ಡಿ.22ರವರೆಗೆ ಏಳು ದಿನಗಳ ಕಾಲ ಬೃಹತ್ ಸಮಾರಂಭ ನಡೆಯಲಿದೆ. ಜಯಂತಿ ಮಹೋತ್ಸವ ಹಿನ್ನೆಲೆ

ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಕರ್ನಾಟಕಕ್ಕೆ ಆಗಮನ Read More »

ವೃದ್ಧೆಯ ಮನೆಯಿಂದ ಚಿನ್ನ ದರೋಡೆಗೈದಿದ್ದ ಆರೋಪಿಗಳು ಸೆರೆ

ಒಂಟಿ ವೃದ್ಧೆಯನ್ನು ಬೆದರಿಸಿ ಚಿನ್ನ-ನಗದು ದೋಚಿದ್ದ ದುಷ್ಕರ್ಮಿಗಳು ಮಂಗಳೂರು: ಕುಡಿಯಲು ನೀರು ಕೇಳುವ ನೆಪದಲ್ಲಿ ವೃದ್ಧೆಯೊಬ್ಬರೇ ಇದ್ದ ಮನೆಗೆ ನುಗ್ಗಿ ಚಿನ್ನ ಹಾಗೂ ನಗದು ದೋಚಿದ ಪ್ರಕರಣವನ್ನು ಸುರತ್ಕಲ್ ಪೊಲೀಸರು ಭೇದಿಸಿದ್ದು, 4.43 ಲಕ್ಷ ರೂ.ಮೌಲ್ಯದ ಚಿನ್ನಾಭರಣಗಳನ್ನು ವಶಕ್ಕೆ ಪಡೆದು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನೊಬ್ಬ ಆರೋಪಿ ಪರಾರಿಯಾಗಿದ್ದಾನೆ. ಸುರತ್ಕಲ್ ಮುಕ್ಕದ ಸಸಿಹಿತ್ಲು ರಸ್ತೆಯ ಮಿತ್ರಪಟ್ಟಣದ ಜಯಲಕ್ಷ್ಮೀ ನಿವಾಸದಲ್ಲಿ ವಾಸವಾಗಿರುವ ದಿ.ಜಿನ್ನಪ್ಪ ಸುವರ್ಣ ಅವರ ಪತ್ನಿ ಜಲಜ (85) ನೀಡಿದ ದೂರಿನ ಪ್ರಕಾರ, ಡಿಸೆಂಬರ್ 3ರಂದು ಮಧ್ಯಾಹ್ನ

ವೃದ್ಧೆಯ ಮನೆಯಿಂದ ಚಿನ್ನ ದರೋಡೆಗೈದಿದ್ದ ಆರೋಪಿಗಳು ಸೆರೆ Read More »

ಉಗ್ರರ ಜೊತೆ ಎನ್‌ಕೌಂಟರ್‌ನಲ್ಲಿ ಪೊಲೀಸ್‌ ಸಿಬ್ಬಂದಿ ಹುತಾತ್ಮ

ಶ್ರೀನಗರ: ಜಮ್ಮು-ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಜಲ್ಟಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಪ್ರದೇಶಗಳನ್ನು ಸುತ್ತುವರಿದು ನಡೆಸಿದ ಶೋಧ ಕಾರ್ಯಾಚರಣೆಯ ಸಮಯದಲ್ಲಿ ಗುಂಡಿನ ಚಕಮಕಿ ನಡೆಯಿತು. ಭದ್ರತಾ ಪಡೆಗಳು ಭದ್ರತೆಯನ್ನು ಬಿಗಿಗೊಳಿಸಿ ಶೋಧ ಆರಂಭಿಸುತ್ತಿದ್ದಂತೆ, ಉಗ್ರರು ಗುಂಡು ಹಾರಿಸಿದರು. ಗುಂಡಿನ ಚಕಮಕಿ ನಡೆಯಿತು. ಆರಂಭಿಕ ಗುಂಡಿನ ಚಕಮಕಿಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಗಂಭೀರವಾಗಿ ಗಾಯಗೊಂಡರು.

ಉಗ್ರರ ಜೊತೆ ಎನ್‌ಕೌಂಟರ್‌ನಲ್ಲಿ ಪೊಲೀಸ್‌ ಸಿಬ್ಬಂದಿ ಹುತಾತ್ಮ Read More »

ದಿಢೀರ್‌ ಮುಷ್ಕರಕ್ಕೆ ಸಾರಿಗೆ ನೌಕರರ ಸಿದ್ಧತೆ

ವೇತನ ಹೆಚ್ಚಳ, ಹಿಂಬಾಕಿ ಪಾವತಿ ಬೇಡಿಕೆ ಬೆಂಗಳೂರು: ಕೆಎಸ್ಆರ್​​ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ನೌಕರರು ಮತ್ತೆ ಸಾರಿಗೆ ಮುಷ್ಕರಕ್ಕೆ ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ. ಆಗಸ್ಟ್‌ 5ರಂದು ನಾಲ್ಕು ನಿಗಮಗಳ ನೌಕರರು ಮುಷ್ಕರಕ್ಕೆ ಮುಂದಾದಾಗ ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮುಷ್ಕರವನ್ನು ಕೈಬಿಡಲಾಗಿತ್ತು. ಆದರೆ ಈ ಬಾರಿ ಮುಷ್ಕರದ ದಿನಾಂಕವನ್ನು ಘೋಷಣೆ ಮಾಡದೆ ಹಠಾತ್ ಸೇವೆ ಸ್ಥಗಿತಗೊಳಿಸಲು ನಿರ್ಧರಿಸಿದ್ದಾರೆ. ಸಾರಿಗೆ ನೌಕರರ ಬೇಡಿಕೆಗಳ ಸಂಬಂಧ ಶನಿವಾರ ಸಾರಿಗೆ ಸಚಿವರ ಜೊತೆಗೆ ಸಭೆ ನಡೆದಿತ್ತು. ಆದರೆ ಬೇಡಿಕೆಗಳ ಈಡೇರಿಕೆ ಸಂಬಂಧ

ದಿಢೀರ್‌ ಮುಷ್ಕರಕ್ಕೆ ಸಾರಿಗೆ ನೌಕರರ ಸಿದ್ಧತೆ Read More »

ಸ್ನೇಹಿತರ ನಡುವೆ ಶುರುವಾದ ಕ್ಷುಲ್ಲಕ ಜಗಳ ಕೊಲೆಯಲ್ಲಿ ಅಂತ್ಯ

ಶಬರಿಮಲೆ ಯಾತ್ರೆ ಮುಗಿಸಿ ಬಂದ ಖುಷಿಯಲ್ಲಿ ಎಣೆಣೆ ಪಾರ್ಟಿ ಮಾಡುತ್ತಿದ್ದ ಗೆಳೆಯರು ಉಡುಪಿ : ಸ್ನೇಹಿತರ ನಡುವೆ ಗುಂಡಿನ ಪಾರ್ಟಿಯಲ್ಲಿ ಶುರುವಾದ ಕ್ಷುಲ್ಲಕ ಜಗಳ ಕೊಲೆಯಲ್ಲಿ ಅಂತ್ಯವಾದ ದಾರುಣ ಘಟನೆ ಉಡುಪಿಯ ಬ್ರಹ್ಮಾವರ ಸಮೀಪ ನಡೆದಿದೆ. ನಾಲ್ವರು ಗೆಳೆಯರು ಸೇರಿ ತಮ್ಮ ಓರ್ರವ ಗೆಳೆಯನನ್ನು ಕೊಲೆ ಮಾಡಿದ್ದು, ಅವರನ್ನು ಪೊಲೀಸರು ಬಂಧಿಸಿದ್ದಾರೆ. ಶಬರಿಮಲೆ ಯಾತ್ರೆ ಮುಗಿಸಿಬಂದ ಖುಷಿಯಲ್ಲಿ ಮರುದಿನವೇ ಸ್ನೇಹಿತರು ಗುಂಡು ಹಾಕಲು ಕುಳಿತಿದ್ದರು ಎನ್ನಲಾಗಿದೆ. ಉಡುಪಿಯ ಬ್ರಹ್ಮಾವರ ತಾಲೂಕಿನ ಕೋಟ ಪಡುಕರೆಯಲ್ಲಿ ಘಟನೆ ನಡೆದಿದ್ದು, ಬ್ಯಾಂಕ್‌

ಸ್ನೇಹಿತರ ನಡುವೆ ಶುರುವಾದ ಕ್ಷುಲ್ಲಕ ಜಗಳ ಕೊಲೆಯಲ್ಲಿ ಅಂತ್ಯ Read More »

ಎನ್ ಎಸ್ ಎಸ್ ಸೇವಾ ಸಂಗಮದ ದಶಮಾನೋತ್ಸವದ ಲೋಗೊ ಬಿಡುಗಡೆ

ಸುಳ್ಯ: ಎನ್ ಎಸ್ ಎಸ್ ಸೇವಾ ಸಂಗಮ ಟ್ರಸ್ಟ್ (ರಿ), ಸುಳ್ಯ ಇದರ ದಶಮಾನೋತ್ಸವ ಕಾರ್ಯಕ್ರಮವು ಜನವರಿ 2 ಮತ್ತು 3 ರಂದು ಮುಳ್ಯ ಅಟ್ಲೂರು ಶಾಲೆಯಲ್ಲಿ ನಡೆಯಲಿದ್ದು, ಆ ಪ್ರಯುಕ್ತ ಕಾರ್ಯಕ್ರಮದ ಲೋಗೊ ಬಿಡುಗಡೆ ಕಾರ್ಯಕ್ರಮವು ಇತ್ತೀಚೆಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಂತಮಂಗಲದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಗೌರವಾಧ್ಯಕ್ಷ ಬಾಲಕೃಷ್ಣ ಬೊಳ್ಳೂರು ವಹಿಸಿದ್ದರು. ಅತಿಥಿಗಳಾಗಿ ಗೌರವ ಸಲಹೆಗಾರ ಜಯಪ್ರಕಾಶ್ ಕಲ್ಲುಗದ್ದೆ, ಚಂದ್ರಶೇಖರ ಬಿಳಿನಲೆ, ಡಾ. ಅನುರಾಧ ಕುರುಂಜಿ, ಫಾಲಚಂದ್ರ ವೈ.ವಿ., ಶಾಲೆಯ ಮುಖ್ಯಗುರು

ಎನ್ ಎಸ್ ಎಸ್ ಸೇವಾ ಸಂಗಮದ ದಶಮಾನೋತ್ಸವದ ಲೋಗೊ ಬಿಡುಗಡೆ Read More »

error: Content is protected !!
Scroll to Top