ಸುದ್ದಿ

ಬೆಳ್ತಂಗಡಿ : ಆಟೋರಿಕ್ಷಾ ಪಲ್ಟಿಯಾಗಿ ಬಾಲಕ ಸಾವು; 5 ಮಂದಿಗೆ ಗಾಯ

ಬೆಳ್ತಂಗಡಿ : ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿ ಓರ್ವ ಬಾಲಕ ಮೃತಪಟ್ಟು, ಐವರು ಗಾಯಗೊಂಡಿರುವ ಘಟನೆ ಭಾನುವಾರ ರಾತ್ರಿ ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಕುತ್ರೋಟ್ಟು ಟಿ.ಬಿ.ಕ್ರಾಸ್ ರಸ್ತೆಯ ಹೊಕ್ಕಿಲ ಎಂಬಲ್ಲಿ ನಡೆದಿದೆ. ನಾವೂರಿನ ಶಶಿ ಎಂಬವರ ಆಟೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಆಟೋದಲ್ಲಿದ್ದ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಕುಂಡಡ್ಕ ನಿವಾಸಿ ಗಣೇಶ್ ಪುತ್ರ ತನ್ವಿತ್(12) ಎಂಬ ಬಾಲಕ ಮೃತಪಟ್ಟಿದ್ದಾನೆ. ಆಟೋ ಪಲ್ಟಿಯಾದ ರಭಸಕ್ಕೆ ಗಾಯಗೊಂಡಿದ್ದ ತನ್ವಿತ್‌ನನ್ನು ಖಾಸಗಿ ಆಸ್ಪತ್ರೆಗೆ ಸಾಗಿಸುವ ವೇಳೆ […]

ಬೆಳ್ತಂಗಡಿ : ಆಟೋರಿಕ್ಷಾ ಪಲ್ಟಿಯಾಗಿ ಬಾಲಕ ಸಾವು; 5 ಮಂದಿಗೆ ಗಾಯ Read More »

ಸುಳ್ಯ : ಕಾಡುಹಂದಿ ಅಡ್ಡಬಂದು ಕಾರು ಪಲ್ಟಿ

ಸುಳ್ಯ : ಹಂದಿ ಅಡ್ಡ ಬಂದ ಪರಿಣಾಮ ಕಾರು ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಘಟನೆ ಸುಳ್ಯ ಸಮೀಪದ ಕೋಲ್ಚಾರಿನ ಕಣಕ್ಕೂರು ಎಂಬಲ್ಲಿ ಭಾನುವಾರ ನಡೆದಿದೆ. ಘಟನೆಯಲ್ಲಿ ಕಾರು ಚಾಲಕ ಗಾಯಗೊಂಡಿದ್ದಾರೆ. ಸುಳ್ಯದಿಂದ ಕೇರಳದ ಬಂದಡ್ಕ ಕಡೆಗೆ ಸಂಚರಿಸುತ್ತಿದ್ದ ಕಾರಿನ ಎದುರು ದಿಢೀರ್‌ ಎಂದು ಕಾಡುಹಂದಿ ರಸ್ತೆಗೆ ಜಿಗಿದು ಅಡ್ಡ ಬಂದಿದೆ. ಈ ವೇಳೆ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಮೋರಿಯ ಕೆಳಗೆ ಉರುಳಿದೆ. ಘಟನೆಯಲ್ಲಿ ಕಾರು ಸಂಪೂರ್ಣ ಜಖಂಗೊಂಡಿದೆ.

ಸುಳ್ಯ : ಕಾಡುಹಂದಿ ಅಡ್ಡಬಂದು ಕಾರು ಪಲ್ಟಿ Read More »

ಕಡಬ: ಮಹಿಳೆಗೆ ಕಿರುಕುಳ ನೀಡಿದ ಆರೋಪಿ ಬಂಧನ

ಕಡಬ: ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ವ್ಯಕ್ತಿಯನ್ನು ಕಡಬ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕಡಬ ನಿವಾಸಿ ಉಮೇಶ್ ಗೌಡ ಬಂಧಿತ ಆರೋಪಿ. ನ.13ರಂದು ರಾತ್ರಿ ಸಂತ್ರಸ್ತ ಮಹಿಳೆ ಮನೆಯ ಹೊರ ಭಾಗದ ಕೊಟ್ಟಿಗೆಯಲ್ಲಿ ನಿದ್ರಿಸುತ್ತಿದ್ದ ವೇಳೆ ಆರೋಪಿ ಅಲ್ಲಿಗೆ ಅಕ್ರಮವಾಗಿ ಪ್ರವೇಶಿಸಿ ಲೈಂಗಿಕ ಕಿರುಕುಳ ನೀಡಲು ಯತ್ನಿಸಿರುವುದಾಗಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ ಈ ವೇಳೆ ಸಂತ್ರಸ್ತೆ ಸಹಾಯಕ್ಕಾಗಿ ಬೊಬ್ಬೆ ಹೊಡೆದಿದ್ದು, ಮನೆಯೊಳಗಿದ್ದ ಆಕೆಯ ಪತಿ, ಮಕ್ಕಳು ಬಂದು ಆರೋಪಿಯನ್ನು ಹಿಡಿಯಲು ಯತ್ನಿಸಿದಾಗ ಆರೋಪಿ ಹಲ್ಲೆ

ಕಡಬ: ಮಹಿಳೆಗೆ ಕಿರುಕುಳ ನೀಡಿದ ಆರೋಪಿ ಬಂಧನ Read More »

ಪಾಕಿಸ್ತಾನದಲ್ಲಿ ಜಾಫರ್‌ ಎಕ್ಸ್‌ಪ್ರೆಸ್‌ ರೈಲಿನ ಮೇಲೆ ಮತ್ತೆ ದಾಳಿ : ಹಲವು ಸೈನಿಕರ ಸಾವು

ಬಾಂಬ್‌ ಸ್ಫೋಟಿಸಿ ರೈಲಿನ ಹಳಿತಪ್ಪಿಸಿದ ಬಂಡುಕೋರರು ಇಸ್ಲಾಮಾಬಾದ್ : ಪಾಕಿಸ್ತಾನದಲ್ಲಿ ಕ್ವೆಟ್ಟಾದಿಂದ ಪೇಶಾವರಕ್ಕೆ ಹೋಗುತ್ತಿದ್ದ ಜಾಫರ್ ಎಕ್ಸ್‌ಪ್ರೆಸ್ ಮೇಲೆ ಮತ್ತೆ ದಾಳಿ ನಡೆದಿದೆ. ಸಿಬಿ ಜಿಲ್ಲೆಯ ಬಳಿಯ ನಾಸಿರಾಬಾದ್ ಪ್ರದೇಶದಲ್ಲಿ ಜಾಫರ್ ಎಕ್ಸ್‌ಪ್ರೆಸ್ ಮೇಲೆ ಈ ದಾಳಿ ನಡೆಸಲಾಗಿದೆ. ಈ ಬಾರಿ ಬಾಂಬ್‌ ಸ್ಫೋಟದಲ್ಲಿ ಜಾಫರ್ ಎಕ್ಸ್‌ಪ್ರೆಸ್‌ನ ಹಲವಾರು ಬೋಗಿಗಳು ಹಳಿತಪ್ಪಿವೆ. ಬಲೂಚ್ ರಿಪಬ್ಲಿಕನ್ ಗಾರ್ಡ್‌ (ಬಿಆರ್‌ಜಿ) ಬಂಡುಕೋರರ ಗುಂಪು ಈ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ. ಈ ದಾಳಿಯಲ್ಲಿ ಹಲವಾರು ಪಾಕಿಸ್ತಾನಿ ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಅವರು

ಪಾಕಿಸ್ತಾನದಲ್ಲಿ ಜಾಫರ್‌ ಎಕ್ಸ್‌ಪ್ರೆಸ್‌ ರೈಲಿನ ಮೇಲೆ ಮತ್ತೆ ದಾಳಿ : ಹಲವು ಸೈನಿಕರ ಸಾವು Read More »

ವಿವೇಕಾನಂದ ಕಾಲೇಜಿನ ಪ್ರಾಂಶುಪಾಲ ಡಾಕ್ಟರ್ ಶ್ರೀಧರ್ ನಾಯ್ಕ್ ಅಸ್ತಂಗತ

ಪುತ್ತೂರು: ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ನಡೆಯುತ್ತಿರುವ, 1965ರಲ್ಲಿ ಸ್ಥಾಪನೆಗೊಂಡ, ವಿವೇಕಾನಂದ ಕಾಲೇಜಿನ ಪ್ರಾಂಶುಪಾಲ ಡಾ. ಶ್ರೀಧರ್ ನಾಯ್ಕ್ ಅಸ್ತಂಗತರಾಗಿದ್ದಾರೆ. ಇತಿಹಾಸ ವಿಭಾಗದ ಪ್ರಾಧ್ಯಾಪಕರಾಗಿ, ವಸತಿ ನಿಲಯದ ಮೇಲ್ವಿಚಾರಕರಾಗಿ, ರಾಷ್ಟ್ರೀಯ ಸೇವಾ ಯೋಜನೆಯ ಅಧಿಕಾರಿಯಾಗಿ ಕಾಲೇಜಿನ ಅಭಿವೃದ್ಧಿಗೆ ಅನನ್ಯ ಸೇವೆ ಸಲ್ಲಿಸಿದ್ದರು . ಆಡಳಿತ ಮಂಡಳಿಯ ಅಧ್ಯಕ್ಷ ಕಲ್ಲಡ್ಕ ಪ್ರಭಾಕರ ಭಟ್, ಉಪನ್ಯಾಸಕ ಹಾಗೂ ಅಪಾರ ಸಂಖ್ಯೆಯ ವಿದ್ಯಾರ್ಥಿಗಳು ಮತ್ತು ಹಿತೈಷಿಗಳು ಕಂಬನಿ ಮಿಡಿದಿದ್ದಾರೆ.

ವಿವೇಕಾನಂದ ಕಾಲೇಜಿನ ಪ್ರಾಂಶುಪಾಲ ಡಾಕ್ಟರ್ ಶ್ರೀಧರ್ ನಾಯ್ಕ್ ಅಸ್ತಂಗತ Read More »

ಬೆಳಗಾವಿ ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವಿನ ಸಂಖ್ಯೆ 30ಕ್ಕೇರಿಕೆ

ಬ್ಯಾಕ್ಟೀರಿಯ ಇನ್‌ಫೆಕ್ಷನ್‌ನಿಂದ ಸಾಯುತ್ತಿರುವ ಪ್ರಾಣಿಗಳು ಬೆಳಗಾವಿ : ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಬಳಿಯಿರುವ ಚೆನ್ನಮ್ಮ ಕಿರು ಮೃಗಾಲಯದಲ್ಲಿ ಮತ್ತೊಂದು ಕೃಷ್ಣಮೃಗ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದೆ. ಆ ಮೂಲಕ ಕೃಷ್ಣಮೃಗಗಳ ಸಾವಿನ ಸಂಖ್ಯೆ 30ಕ್ಕೆ ಏರಿಕೆ ಆಗಿದೆ. ಬ್ಯಾಕ್ಟೀರಿಯಾ ಇನ್‌ಪೆಕ್ಷನ್‌ನಿಂದಲೇ ಕೃಷ್ಣಮೃಗಗಳು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ನವೆಂಬರ್ 13ರಂದು 8, ಶನಿವಾರ ಒಂದೇ ದಿನ 20, ತಡರಾತ್ರಿ ಒಂದು, ನಿನ್ನೆ ಸಂಜೆ ಗಂಡು ಕೃಷ್ಣಮೃಗ ಸಾವನ್ನಪ್ಪಿವೆ. ಆ ಮೂಲಕ ಚೆನ್ನಮ್ಮ ಕಿರು ಮೃಗಾಲಯದಲ್ಲಿ ಈವರೆಗೆ 30 ಕೃಷ್ಣಮೃಗಗಳ ಸಾವಾಗಿದೆ.

ಬೆಳಗಾವಿ ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವಿನ ಸಂಖ್ಯೆ 30ಕ್ಕೇರಿಕೆ Read More »

ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಅನಂತಾಡಿಯ ರುತಿಕ್ ಪೂಜಾರಿ ಪ್ರಥಮ ಮತ್ತು ಉದ್ದಜಿಗಿತದಲ್ಲಿ‌ ರಾಜ್ಯ ಮಟ್ಟಕ್ಕೆ ಆಯ್ಕೆ

ಪುತ್ತೂರು: ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇದರ ವತಿಯಿಂದ ಬೆಂಗಳೂರಿನಲ್ಲಿ ನಡೆದ 2025-26 ನೇ ಸಾಲಿನ 17 ರ ವಯೋಮಾನದ ಬಾಲಕರ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ವಿವೇಕಾನಂದ ತೆಂಕಿಲ ಕನ್ನಡ ಮಾದ್ಯಮ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿ ರುತಿಕ್ ಪೂಜಾರಿ ಪ್ರಥಮ‌ ಸ್ಥಾನ ಪಡೆದುಕೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ,ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ದ.ಕ ಜಿಲ್ಲೆ ಇದರ ವತಿಯಿಂದ 2025 – 26 ನೇ ಸಾಲಿನ ಪಂಜದಲ್ಲಿ

ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಅನಂತಾಡಿಯ ರುತಿಕ್ ಪೂಜಾರಿ ಪ್ರಥಮ ಮತ್ತು ಉದ್ದಜಿಗಿತದಲ್ಲಿ‌ ರಾಜ್ಯ ಮಟ್ಟಕ್ಕೆ ಆಯ್ಕೆ Read More »

ಕೊನೆಗೂ ಚಿತ್ತಾಪುರದಲ್ಲಿ ನಡೆಯಿತು RSS ಪಥಸಂಚಲನ

ಸ್ವಯಂಸೇವಕರಿಗೆ ಹೂಮಳೆಗೈದ ಜನತೆ ಚಿತ್ತಾಪುರ: RSS ಪಥ ಸಂಚಲನಕ್ಕೆ ‌ಸಂಬಂಧಿಸಿದಂತೆ ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರೋಧದ ಕಾರಣಕ್ಕೆ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದ್ದ ಚಿತ್ತಾಪುರದಲ್ಲಿ ಹೈಕೋರ್ಟ್ ಅನುಮತಿಯೊಂದಿಗೆ ಇಂದು RSS ಗಣವೇಷಧಾರಿಗಳ ಪಥ ಸಂಚಲನ ಯಾವುದೇ ತೊಡಕಿಲ್ಲದೆ ನಡೆದಿದೆ. ಖಾಕಿ ಸರ್ಪಗಾವಲಿನಲ್ಲಿ ಸುಮಾರು 300 ಮಂದಿ ಸ್ವಯಂಸೇವಕರು, 50 ಮಂದಿ ಘೋಷವಾದಕರು ಯಶಸ್ವಿಯಾಗಿ ಪಥಸಂಚಲನ ನಡೆಸಿದ್ದು, ಇದು ಕಾಂಗ್ರೆಸ್‌ ನಾಯಕರಿಗೆ ಮುಖಭಂಗವಾದಂತಾಗಿದೆ. ಬಜಾಜ್ ಕಲ್ಯಾಣ ಮಂಟಪದಿಂದ ತೊಡಗಿ ಬಸವೇಶ್ವರ ವೃತ್ತ, ಬಸ್ ನಿಲ್ದಾಣ ವೃತ್ತ, ಅಂಬೇಡ್ಕರ್ ವೃತ್ತ, ರಾಘವೇಂದ್ರ

ಕೊನೆಗೂ ಚಿತ್ತಾಪುರದಲ್ಲಿ ನಡೆಯಿತು RSS ಪಥಸಂಚಲನ Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಭಜನೋತ್ಸವ ಕಾರ್ಯಕ್ರಮದ ಪೂರ್ವ ತಯಾರಿ ಸಮಾಲೋಚನಾ ಸಭೆ

ಅಳಿಕೆ ವಲಯ ಮಟ್ಟದ ಭಜನೋತ್ಸವ ಸಮಿತಿ ಅಧ್ಯಕ್ಷರಾಗಿ ಮಾರಪ್ಪ ಶೆಟ್ಟಿ ಬೈಲುಗುತ್ತು ಆಯ್ಕೆ ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ, ಅಳಿಕೆ ವಲಯದ ಭಜನೋತ್ಸವ ಕಾರ್ಯಕ್ರಮದ ಪೂರ್ವತಯಾರಿ ಬಗ್ಗೆ ಸಮಾಲೋಚನೆ ಸಭೆ ನಡೆಯಿತು. ಡಿ. 21 ಆದಿತ್ಯವಾರದಂದು ನಡೆಯುವ ವಲಯಮಟ್ಟದ ಭಜನೋತ್ಸವ ಕಾರ್ಯಕ್ರಮದ ಪೂರ್ವತಯಾರಿ ಸಭೆಯನ್ನು ಪುಣಚ ಮಹಿಷಮರ್ದಿನಿ ದೇವಸ್ಥಾನದಲ್ಲಿ ನಡೆಸಲಾಯಿತು. ಸಭೆಯಲ್ಲಿ ಸಮಿತಿ ರಚನೆ ಮಾಡಲಾಗಿದ್ದು, ಅಧ್ಯಕ್ಷರಾಗಿ ದೇವಸ್ಥಾನದ ಆಡಳಿತ ಅಧ್ಯಕ್ಷ ಮಾರಪ್ಪ ಶೆಟ್ಟಿ ಬೈಲುಗುತ್ತು ಅವರನ್ನು ನೇಮಕ ಮಾಡಲಾಯಿತು. ಸಭೆಯಲ್ಲಿ ತಾಲೂಕು

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಭಜನೋತ್ಸವ ಕಾರ್ಯಕ್ರಮದ ಪೂರ್ವ ತಯಾರಿ ಸಮಾಲೋಚನಾ ಸಭೆ Read More »

ಡಾಕ್ಟರ್‌ಗಳ ವೈಟ್‌ ಕಾಲರ್‌ ಉಗ್ರ ಜಾಲಕ್ಕೆ ಹರಿದು ಬಂದಿದೆ ಅಪಾರ ಹಣ

ಕಾರು ಸ್ಫೋಟಿಸಿಕೊಂಡು ಸತ್ತಿರುವ ಡಾ.ಉಮರ್‌ ನಬಿಯ ಖಾತೆಯಲ್ಲಿ ಲಕ್ಷಾಂತರ ರೂ. ವ್ಯವಹಾರ ಪತ್ತೆ ನವದೆಹಲಿ: ಇತ್ತೀಚೆಗೆ ಪೊಲೀಸರು ಬಯಲಿಗೆಳೆದಿರುವ ಡಾಕ್ಟರ್‌ಗಳು ಒಳಗೊಂಡಿರುವ ವೈಟ್‌ ಕಾಲರ್‌ ಉಗ್ರ ಜಾಲಕ್ಕೆ ಅಪಾರ ಪ್ರಮಾಣದಲ್ಲಿ ಹಣ ಹರಿದು ಬಂದಿರುವುದು ತನಿಖೆಯಿಂದ ಬಯಲಾಗಿದೆ. ದೆಹಲಿ ಕೆಂಪುಕೋಟೆ ಬಳಿ ಕಾರು ಸ್ಫೋಟಿಸಿಕೊಂಡು ಸತ್ತಿರುವ ಡಾ.ಉಮರ್‌ ನಬಿಯ ಒಂದು ಖಾತೆಗೆ ಸುಮಾರು 20 ಲ.ರೂ. ವರ್ಗಾಯಿಸಿದ್ದನ್ನು ತನಿಖಾಧಿಕಾರಿಗಳು ಪತ್ತೆಹಚ್ಚಿದ್ದಾರೆ. ಈ ಹಿನ್ನೆಲೆಯಲ್ಲಿ ಇತರ ವೈಟ್‌ ಕಾಲರ್‌ ಉಗ್ರರ ಹಣಕಾಸು ವಹಿವಾಟುಗಳ ಕುರಿತು ತೀವ್ರ ತನಿಖೆ ನಡೆಯುತ್ತಿದೆ.

ಡಾಕ್ಟರ್‌ಗಳ ವೈಟ್‌ ಕಾಲರ್‌ ಉಗ್ರ ಜಾಲಕ್ಕೆ ಹರಿದು ಬಂದಿದೆ ಅಪಾರ ಹಣ Read More »

error: Content is protected !!
Scroll to Top