ಸುದ್ದಿ

ಕಾರು ಢಿಕ್ಕಿ: ಮೂರೂವರೆ ವರ್ಷದ ಮಗು ಸಾವು

ಬೆಳ್ತಂಗಡಿ: ಕಾರು ಡಿಕ್ಕಿ ಹೊಡೆದ ಪರಿಣಾಮ ಮೂರು ವರ್ಷದ ಮಗು ದುರಂತ ಅಂತ್ಯ ಕಂಡ ಘಟನೆ ಚಾರ್ಮಾಡಿಯಲ್ಲಿ ‌ನಡೆದಿದೆ. ಮೃತಪಟ್ಟ ಮಗುವನ್ನು ಮುಹಮ್ಮದ್ ಹಝೀರಿನ್ ಎಂದು ಗುರುತಿಸಲಾಗಿದೆ. ಹಝೀರಿನ್ ತನ್ನ ಅಜ್ಜನ ಜೊತೆಗೆ ತಿಂಡಿ ತರಲೆಂದು ತೆರಳಿದ್ದ. ಅಜ್ಜನ ಕೈ ತಪ್ಪಿಸಿ ಹಿಂದಕ್ಕೆ ತೆರಳಿದ್ದು ಈ ಸಂದರ್ಭದಲ್ಲಿ ಮಗುವಿಗೆ ಕಾರು ಢಿಕ್ಕಿ ಹೊಡೆದಿದೆ. ಈ ಅಪಘಾತದಿಂದ ಮಗು ದೂರಕ್ಕೆ ಎಸೆಯಲ್ಪಟ್ಟಿದ್ದು ತಕ್ಷಣವೇ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಅಲ್ಲಿಂದ ಮಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆ ಮಗು […]

ಕಾರು ಢಿಕ್ಕಿ: ಮೂರೂವರೆ ವರ್ಷದ ಮಗು ಸಾವು Read More »

ಕರ್ನಾಟಕ ರಾಜ್ಯಪಾಲರ ಮೊಮ್ಮಗನ ವಿರುದ್ಧ ವರದಕ್ಷಿಣೆ ಕಿರುಕುಳ ದೂರು

50 ಲ.ರೂ. ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪ ಭೋಪಾಲ: ಕರ್ನಾಟಕದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರ ಮೊಮ್ಮಗ ದೇವೇಂದ್ರ ಗೆಹ್ಲೋಟ್ ಅವರ ಪತ್ನಿ ದಿವ್ಯಾ ಗೆಹ್ಲೋಟ್ ವರದಕ್ಷಿಣೆ ಕಿರುಕುಳ, ಕೊಲೆ ಯತ್ನ, ಕೌಟುಂಬಿಕ ಹಿಂಸೆ ಮತ್ತು ತಮ್ಮ ಅಪ್ರಾಪ್ತ ಮಗಳ ಅಪಹರಣದ ಗಂಭೀರ ಆರೋಪಗಳನ್ನು ಹೊರಿಸಿದ್ದಾರೆ. ಮಧ್ಯಪ್ರದೇಶದ ರತ್ಲಾಂ ಜಿಲ್ಲೆಯ ಪೊಲೀಸ್ ಅಧೀಕ್ಷಕ ಅಮಿತ್ ಕುಮಾರ್ ಅವರ ಗಮನಕ್ಕೆ ವಿಷಯ ತಲುಪಿದ್ದು, ದಿವ್ಯಾ ತುರ್ತು ಕ್ರಮ ಮತ್ತು ತನ್ನ ನಾಲ್ಕು ವರ್ಷದ ಮಗಳನ್ನು ಸುರಕ್ಷಿತವಾಗಿ ಮರಳಿ

ಕರ್ನಾಟಕ ರಾಜ್ಯಪಾಲರ ಮೊಮ್ಮಗನ ವಿರುದ್ಧ ವರದಕ್ಷಿಣೆ ಕಿರುಕುಳ ದೂರು Read More »

ಬಗೆಹರಿಯದ ಇಂಡಿಗೋ ತಾಂತ್ರಿಕ ಅಡಚಣೆ : 300ಕ್ಕೂ ಅಧಿಕ ವಿಮಾನ ಯಾನ ರದ್ದು

ಮೂರನೇ ದಿನವೂ ಪ್ರಯಾಣಿಕರ ಪರದಾಟ ; ಸಂಸ್ಥೆಯ ಉನ್ನತಾಧಿಕಾರಿಗಳಿಗೆ ಸರ್ಕಾರದ ಬುಲಾವ್‌ ಬೆಂಗಳೂರು : ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋದಲ್ಲಿ ಉಂಟಾಗಿರುವ ಭಾರಿ ಅಡಚಣೆ ಮೂರನೇ ದಿನವಾದ ಗುರುವಾರವೂ ಮುಂದುವರಿದಿದೆ. ನಿನ್ನೆ ದೆಹಲಿ, ಮುಂಬೈ, ಬೆಂಗಳೂರು ಏರ್‌ಪೋರ್ಟ್‌ ಸೇರಿದಂತೆ ವಿವಿಧ ವಿಮಾನ ನಿಲ್ದಾಣಗಳಿಂದ ಸುಮಾರು 200 ವಿಮಾನಗಳ ಹಾರಾಟ ರದ್ದುಗೊಳಿಸಲಾಗಿತ್ತು. ಇನ್ನು ಕೆಲ ವಿಮಾನಗಳ ಹಾರಾಟದಲ್ಲಿ ವಿಳಂಬ ಕಂಡುಬಂದಿತ್ತು. ಈ ಸಮಸ್ಯೆ ಸತತ ಮೂರನೇ ದಿನಕ್ಕೆ ಕಾಲಿಟ್ಟಿದೆ. ವಿಮಾನದಲ್ಲಿನ ತಾಂತ್ರಿಕ ದೋಷ ಹಾಗೂ ಸಿಬ್ಬಂದಿ ಕೊರತೆ

ಬಗೆಹರಿಯದ ಇಂಡಿಗೋ ತಾಂತ್ರಿಕ ಅಡಚಣೆ : 300ಕ್ಕೂ ಅಧಿಕ ವಿಮಾನ ಯಾನ ರದ್ದು Read More »

ಆರೋಪಿಯ ಹಣವನ್ನೇ ಕದ್ದುಕೊಂಡು ಹೋದ ಹೆಡ್‌ಕಾನ್‌ಸ್ಟೆಬಲ್‌

11 ಲಕ್ಷ ರೂಪಾಯಿ ಎಗರಿಸಿ ಏನೂ ಗೊತ್ತಿಲ್ಲದಂತೆ ನಾಟಕವಾಡಿದ್ದ ಪೊಲೀಸ್‌ ಸಿಬ್ಬಂದಿ ಬೆಂಗಳೂರು: ಪೊಲೀಸರೇ ಅಪರಾಧ ಕೃತ್ಯಗಳನ್ನು ಎಸಗಿ ಇಲಾಖೆಗೆ ಮಸಿ ಬಳಿಯುತ್ತಿರುವ ಕೃತ್ಯಗಳು ಹೆಚ್ಚುತ್ತಿವೆ. ಈಗ ಮತ್ತೊಬ್ಬ ಪೊಲೀಸ್ ಸಿಬ್ಬಂದಿಯ ಮೇಲೆ ಕಳ್ಳತನ ಆರೋಪ ಬಂದಿದೆ. ನಾಚೆಕೆಗೇಡಿನ ವಿಚಾರವೆಂದರೆ ಪೊಲೀಸ್ ಆಯುಕ್ತರ ಕಚೇರಿಯ ಆವರಣದಲ್ಲಿಯೇ ಈ ಕಳ್ಳತನ ನಡೆದಿದೆ. ಸೈಬರ್ ಪ್ರಕರಣದ ಆರೋಪಿಯನ್ನು ವಿಚಾರಣೆಗೆ ಕರೆತಂದಾಗ ಆತನ ಕಾರಿನಲ್ಲಿದ್ದ 11 ಲಕ್ಷ ರೂ.ತುಂಬಿದ್ದ ಬ್ಯಾಗನ್ನು ಹೆಡ್‌ಕಾನ್‌ಸ್ಟೆಬಲ್‌ ಜಬೀವುಲ್ಲಾ ಕದ್ದಿರುವ ಆರೋಪ ಕೇಳಿಬಂದಿದೆ. ಹಣ ಕಳ್ಳತನ ಮಾಡಿ

ಆರೋಪಿಯ ಹಣವನ್ನೇ ಕದ್ದುಕೊಂಡು ಹೋದ ಹೆಡ್‌ಕಾನ್‌ಸ್ಟೆಬಲ್‌ Read More »

ಪುತ್ತೂರು : ಮಾದಕವಸ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿ ಸೆರೆ

ಪುತ್ತೂರು : ಕಬಕ ಗ್ರಾಮದ ಮುರದಲ್ಲಿರುವ ರೈಲ್ವೆ ಸೇತುವೆ ಬಳಿ ಮಾದಕವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿ ಆತನಿಂದ 10 ಗ್ರಾಂ ಎಂಡಿಎಂಎ ನಿಷೇಧಿತ ಮಾದಕವಸ್ತು ವಶಕ್ಕೆ ಪಡೆದಿದ್ದಾರೆ. ಶಂಕಿತನನ್ನು ಪುತ್ತೂರು ಕಬಕ ನಿವಾಸಿ ಉಮ್ಮರ್ ಫಾರೂಕ್ (41) ಎಂದು ಗುರುತಿಸಲಾಗಿದ್ದು, ಆತನ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್‌ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ರೈಲ್ವೆ ಸೇತುವೆ ಬಳಿ ವ್ಯಕ್ತಿಯೋರ್ವ ಮಾದಕವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ಎಂಬ ನಿಖರ ಮಾಹಿತಿಯ ಮೇರೆಗೆ ಪುತ್ತೂರು ನಗರ ಪೊಲೀಸ್

ಪುತ್ತೂರು : ಮಾದಕವಸ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿ ಸೆರೆ Read More »

ಇಂದು ರಷ್ಯಾ ಅಧ್ಯಕ್ಷ ಪುಟಿನ್‌ ಭಾರತ ಭೇಟಿ

ಹೀಗಿದೆ ರಷ್ಯಾ ಅಧ್ಯಕ್ಷರ ಬಂದೋಬಸ್ತ್‌ ವ್ಯವಸ್ಥೆ ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್‌ ವಾರ್ಷಿಕ ಶೃಂಗಸಭೆಯಲ್ಲಿ ಭಾಗವಹಿಸಲು ಇಂದು ಭಾರತಕ್ಕೆ ಆಗಮಿಸುತ್ತಿದ್ದಾರೆ. ಗುರುವಾರ ಸಂಜೆಯ ವೇಳೆ ಪುಟಿನ್‌ ಅವರ ವಿಮಾನ ದೆಹಲಿಯಲ್ಲಿ ಲ್ಯಾಂಡ್‌ ಆಗಲಿದೆ. ಐದು ಸ್ತರದ ರಕ್ಷಣಾ ವ್ಯವಸ್ಥೆಯೊಂದಿಗೆ ಪುಟಿನ್‌ 2 ದಿನಗಳ ಭಾರತದಲ್ಲಿ ತಂಗಲಿದ್ದಾರೆ. ಪುಟಿನ್‌ ಆಗಮನಕ್ಕೆ ಮೊದಲೇ ಭದ್ರತಾ ವ್ಯವಸ್ಥೆ ಬಗ್ಗೆ ಪರಿಶೀಲನೆ ನಡೆಸಲು 50ಕ್ಕೂ ಹೆಚ್ಚು ರಷ್ಯಾದ ಭದ್ರತಾ ಸಿಬ್ಬಂದಿ ತಂಡ ದೆಹಲಿಗೆ ಆಗಮಿಸಿದೆ. ಪುಟಿನ್ ಭದ್ರತೆಯ ಹೊಣೆ ಪ್ರೆಸಿಡೆನ್ಶಿಯಲ್‌ ಸೆಕ್ಯೂರಿಟಿ

ಇಂದು ರಷ್ಯಾ ಅಧ್ಯಕ್ಷ ಪುಟಿನ್‌ ಭಾರತ ಭೇಟಿ Read More »

ದೆಹಲಿ ಕಾರು ಬಾಂಬ್‌ ಸ್ಫೋಟ : ಬೆಂಗಳೂರು ಜೈಲಿನಲ್ಲಿ ಎನ್‌ಐಎ ತನಿಖೆ

ಜೈಲಿನಲ್ಲಿರುವ ಉಗ್ರನಿಗೆ ಡಾಕ್ಟರ್‌ ಟೆರರ್‌ಗಳ ಜೊತೆ ಸಂಪರ್ಕದ ಅನುಮಾನ ಬೆಂಗಳೂರು : ದೆಹಲಿ ಕಾರು ಬಾಂಬ್‌ಸ್ಫೋಟ ಪ್ರಕರಣದ ತನಿಖೆ ನಡೆಸುತ್ತಿರುವ ಎನ್‌ಐಎ ತಂಡ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಸ್ಫೋಟಕ್ಕೂ ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಂಕಿತ ಉಗ್ರ ಮೊಬೈಲ್ ಬಳಕೆ ಮಾಡಿರುವುದಕ್ಕೂ ಸಂಬಂಧ ಇದೆಯಾ ಎಂಬ ಅನುಮಾನ ಮೂಡಿದೆ. ಈಗಾಗಲೇ ಎನ್ಐಎ ದೇಶದ ಹಲವು ಕಡೆ ದಾಳಿಯನ್ನು ನಡೆಸಿ, ಹಲವು ದಾಖಲೆಗಳು ವಶಪಡಿಸಿಕೊಂಡ ತನಿಖೆ ನಡೆಸುತ್ತಿದೆ. ಇತ್ತೀಚೆಗೆ

ದೆಹಲಿ ಕಾರು ಬಾಂಬ್‌ ಸ್ಫೋಟ : ಬೆಂಗಳೂರು ಜೈಲಿನಲ್ಲಿ ಎನ್‌ಐಎ ತನಿಖೆ Read More »

ಬಾಲಕಿಯನ್ನು ಹಿಂಬಾಲಿಸಿ ಕಿರುಕುಳ ನೀಡಿದ ಆರೋಪಿ ಬಂಧನ

ಉಪ್ಪಿನಂಗಡಿ : ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಹಿಂಬಾಲಿಸಿ ಕಿರುಕುಳ ನೀಡುತ್ತಿದ್ದ ಓರ್ವನನ್ನು ಪೋಕ್ಸೊ ಕಾಯ್ದೆಯಡಿ ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಇಲ್ಲಿನ ಪೆರಿಯಡ್ಕ ನಿವಾಸಿ ಮುಹಮ್ಮದ್ ಮುಸ್ತಫ (40) ಬಂಧಿತ ಆರೋಪಿ. ಈತ ಎರಡು ತಿಂಗಳಿಂದ ಬಾಲಕಿಯನ್ನು ಬಸ್ ನಿಲ್ದಾಣದಿಂದ ಹಿಂಬಾಲಿಸುತ್ತಿದ್ದು, ನ.29ರಂದು ಮನೆಗೆ ಕರೆದಿದ್ದಾನೆ ಎಂದು ಬಾಲಕಿಯ ಸಹೋದರ ಉಪ್ಪಿನಂಗಡಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ಪೊಲೀಸರು

ಬಾಲಕಿಯನ್ನು ಹಿಂಬಾಲಿಸಿ ಕಿರುಕುಳ ನೀಡಿದ ಆರೋಪಿ ಬಂಧನ Read More »

ದುರ್ಬಲ ಬೌಲಿಂಗ್‌, ಕಳಪೆ ಫೀಲ್ಡಿಂಗ್‌ನಿಂದಾಗಿ ಸೋತ ಭಾರತ

358 ರನ್‌ ಮಾಡಿದರೂ ಗೆಲ್ಲಲಾಗದೆ ಸರಣಿ 1-1 ಸಮಬಲ ರಾಯ್‌ಪುರ : ಬರೋಬ್ಬರಿ ಎರಡು ಶತಕಗಳ ನೆರವಿನೊಂದಿಗೆ 358 ರನ್‌ಗಳ ಬೃಹತ್‌ ಮೊತ್ತ ಕಲೆ ಹಾಕಿದರೂ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಸೋತಿದೆ. ರಾಂಚಿಯಲ್ಲಿ ನಡೆದಿದ್ದ ಮೊದಲ ಏಕದಿನ ಪಂದ್ಯವನ್ನು ಕೊನೆಯ ಓವರ್​ನಲ್ಲಿ ಗೆದ್ದಿಕೊಂಡಿದ್ದ ಟೀಂ ಇಂಡಿಯಾ ರಾಯ್‌ಪುರದಲ್ಲಿ ನಡೆದ ಎರಡನೇ ಏಕದಿನ ಪಂದ್ಯವನ್ನು ಕೊನೆಯ ಓವರ್​ನಲ್ಲಿ ಸೋತಿದೆ. ಕಳಪೆ ಫೀಲ್ಡಿಂಗ್, ಬೌಲಿಂಗ್‌ಗೆ ಭಾರತ ಭಾರಿ ಬೆಲೆತೆತ್ತಿದೆ. ಟೀಂ ಇಂಡಿಯಾ ಬ್ಯಾಟರ್​ಗಳು ಕಲೆಹಾಕಿದ್ದ 358 ರನ್​ಗಳನ್ನು ತಂಡದ

ದುರ್ಬಲ ಬೌಲಿಂಗ್‌, ಕಳಪೆ ಫೀಲ್ಡಿಂಗ್‌ನಿಂದಾಗಿ ಸೋತ ಭಾರತ Read More »

ಉದ್ಯೋಗ ವಾರ್ತೆ: ಆಫೀಸ್ ಅಡ್ಮಿನ್ ಹುದ್ದೆಗೆ ಅರ್ಜಿ ಆಹ್ವಾನ

ಸಂಪ್ಯ: ಪುತ್ತೂರಿನ ಆರಕ್ಷಕ ಠಾಣೆಯ ಬಳಿ ಕಾರ್ಯಾಚರಿಸುತ್ತಿರುವ ತರಬೇತಿ ಸಂಸ್ಥೆ ವಿದತ್ (VIDATH) ಇದರ ಆಡಳಿತ ಮಂಡಳಿಯವರು ಕಚೇರಿ ನಿರ್ವಾಹಕ (Office Admin) ಹುದ್ದೆಗೆ ನೇಮಕಾತಿ ಮಾಡಲಿದ್ದು ಆಸಕ್ತರನ್ನು ಆಹ್ವಾನಿಸಿದ್ದಾರೆ. ಕಚೇರಿ ವೇಳೆಯಲ್ಲಿ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಸಂಸ್ಥೆಯ ಆಡಳಿತ ಪಾಲುದಾರರಾಗಿರುವ ಶುಭಾ ಅವರು ತಿಳಿಸಿದ್ದಾರೆ.

ಉದ್ಯೋಗ ವಾರ್ತೆ: ಆಫೀಸ್ ಅಡ್ಮಿನ್ ಹುದ್ದೆಗೆ ಅರ್ಜಿ ಆಹ್ವಾನ Read More »

error: Content is protected !!
Scroll to Top