ಸುದ್ದಿ

ಟಿಪ್ಪರ್-ಕಾರ್ ಢಿಕ್ಕಿ: ಎರಡು ಸಾವು, ಮೂವರಿಗೆ ಗಾಯ

ಚಾಮರಾಜನಗರ: ಮೈಸೂರು – ಗುಂಡ್ಲುಪೇಟೆ ರಾಷ್ಟ್ರೀಯ ಹೆದ್ದಾರಿ -766 ರ ಬಳಿ ಇಂದು ಮುಂಜಾನೆ ಟಿಪ್ಪರ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ‌ಕೇರಳ ಮೂಲದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮಗುವೂ ‌ಸೇರು ಮೂವರು ಗಾಯಗೊಂಡ ಘಟನೆ ನಡೆದಿದೆ. ಮೃತರನ್ನು ಬಷೀರ್, ನಸೀಮಾ ಬಷೀರ್ ಎಂದು ಗುರುತಿಸಲಾಗಿದೆ. ಮಹಮ್ಮದ್ ಷಪಿ, ಜಸೀರಾ ಮತ್ತು ಮೂರು ವರ್ಷದ ಮಗು ಅಜೈಮ್ ಅನಾನ್‌ಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಗಾಯಾಳುಗಳನ್ನು ಮೈಸೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ. […]

ಟಿಪ್ಪರ್-ಕಾರ್ ಢಿಕ್ಕಿ: ಎರಡು ಸಾವು, ಮೂವರಿಗೆ ಗಾಯ Read More »

ನೇತ್ರಾವತಿ ನದಿಗೆ ಹಾರಿ ವೃದ್ಧೆ ಆತ್ಮಹತ್ಯೆ

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ವೃದ್ಧೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸರಪಾಡಿಯಲ್ಲಿ ನಡೆದಿದೆ. ಮೃತರನ್ನು ಅಲ್ಲಿಪಾದೆಯ ಉಜಿರಾಡಿ ನಿವಾಸಿ ಮೀನಾಕ್ಷಿ ಪೂಜಾರಿ (70) ಎಂದು ಗುರುತಿಸಲಾಗಿದೆ. ಸರಪಾಡಿಯ ಅಂಗಡಿಯೊಂದಕ್ಕೆ ಹೋಗಿ ಬಂದ ಮೀನಾಕ್ಷಿ ಅವರು, ಅಲ್ಲಿಂದ ನೇರವಾಗಿ ನೇತ್ರಾವತಿ ನದಿ ಸಮೀಪ ಬಂದಿದ್ದು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಲ್ಲೇ ಸಮೀಪದಲ್ಲಿ ಮರಳು ತೆಗೆಯುತ್ತಿದ್ದ ಕಾರ್ಮಿಕರು ನದಿಗೆ ಹಾರಿ ಅವರನ್ನು ಬದುಕಿಸಲು ಪ್ರಯತ್ನ ನಡೆಸಿದರಾದರೂ, ಆ ಪ್ರಯತ್ನ ವಿಫಲವಾಗಿದೆ. ಸ್ಥಳಕ್ಕೆ ಬಂಟ್ವಾಳ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.

ನೇತ್ರಾವತಿ ನದಿಗೆ ಹಾರಿ ವೃದ್ಧೆ ಆತ್ಮಹತ್ಯೆ Read More »

ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಬೆಳ್ಳಿ ರಥ ಸಮರ್ಪಣಾ ಆಮಂತ್ರಣ ಪತ್ರಿಕೆ ಬಿಡುಗಡೆ

ಸುಬ್ರಹ್ಮಣ್ಯ: ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಕಮಿಟಿ ಬಿ ಅಧ್ಯಕ್ಷ ಡಾ. ರೇಣುಕಾ ಪ್ರಾಸಾದ್ ಕೆ. ವಿ. ಮತ್ತು ಮನೆಯವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲಕ್ಕೆ ಸೇವಾ ರೂಪದಲ್ಲಿ ನೀಡುವ ಬೆಳ್ಳಿ ರಥ ಸಮರ್ಪಣಾ ಆಮಂತ್ರಣ ಪತ್ರಿಕೆ ಬಿಡುಗಡೆ ಕೆ.ವಿ.ಜಿ. ಸಮುದಾಯ ಭವನ ಅಮರಶ್ರೀಭಾಗ್‌ನಲ್ಲಿ ನಡೆಯಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ ಡಾ. ರೇಣುಕಾ ಪ್ರಸಾದ್, ಕಾರ್ಯಕ್ರಮದ ರೂಪುರೇಶೆಯ ಬಗ್ಗೆ ತಿಳಿಸಿದರು. ಹಾಗೆಯೇ ಎಲ್ಲರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಪ್ರೀತಿಪೂರ್ವಕವಾಗಿ ಆಮಂತ್ರಿಸಿದರು. ಕಾರ್ಯಕ್ರಮದಲ್ಲಿ ಅಕಾಡೆಮಿ ಆಫ್‌ ಲಿಬರಲ್ ಎಜ್ಯುಕೇಶನ್‌ನ

ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಬೆಳ್ಳಿ ರಥ ಸಮರ್ಪಣಾ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ನ. 10: ರೇಣುಕಾ ಪ್ರಸಾದ್ ಕೆ.ವಿ. ಕುಟುಂಬದಿಂದ ಕುಕ್ಕೆ ಕ್ಷೇತ್ರಕ್ಕೆ ಬೆಳ್ಳಿ ರಥ ಸಮರ್ಪಣೆ

ಸುಬ್ರಹ್ಮಣ್ಯ: ನವೆಂಬರ್ 10 ರಂದು ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ನಮ್ಮ ಕುಟುಂಬದ ವತಿಯಿಂದ ಬೆಳ್ಳಿ ರಥ ಸಮರ್ಪಣಾ ಕಾರ್ಯಕ್ರಮ ನಡೆಯಲಿದೆ ಎಂದು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್‌ ಕಮಿಟಿ ಬಿ ಇದರ ಅಧ್ಯಕ್ಷ, ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ‌. ರೇಣುಕಾ ಪ್ರಸಾದ್ ಕೆ. ವಿ. ತಿಳಿಸಿದ್ದಾರೆ. ಕೆ.ವಿ.ಜಿ. ಡೆಂಟಲ್ ಕಾಲೇಜು ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳ್ಳಿ ರಥ ನಿರ್ಮಾಣ ಕಾರ್ಯ ಕೊನೆಯ ಹಂತದಲ್ಲಿದೆ. ನವೆಂಬರ್ 3 ರಂದು ಕೋಟೇಶ್ವರದಿಂದ ಹೊರಟು ನ. 4

ನ. 10: ರೇಣುಕಾ ಪ್ರಸಾದ್ ಕೆ.ವಿ. ಕುಟುಂಬದಿಂದ ಕುಕ್ಕೆ ಕ್ಷೇತ್ರಕ್ಕೆ ಬೆಳ್ಳಿ ರಥ ಸಮರ್ಪಣೆ Read More »

ಗ್ಯಾಸ್‌ ಗೀಸರ್‌ ಲೀಕ್‌ ಆಗಿ ಅಕ್ಕ-ತಂಗಿ ಸಾವು

ಸ್ನಾನ ಮಾಡುತ್ತಿದ್ದಾಗ ಸಂಭವಿಸಿದ ದಾರುಣ ಘಟನೆ ಮೈಸೂರು : ಸ್ನಾನಕ್ಕೆ ತೆರಳಿದಾಗ ಗ್ಯಾಸ್ ಗೀಸರ್ ಲೀಕ್ ಆಗಿ ಅಕ್ಕ ಮತ್ತು ತಂಗಿ ಉಸಿರುಗಟ್ಟಿ ಸಾವನ್ನಪ್ಪಿರುವ ದಾರುಣ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದ ಬೆಟ್ಟದಪುರ ಎಂಬಲ್ಲಿ ಸಂಭವಿಸಿದೆ. ಮೃತರನ್ನು ಗುಲ್ಫಾರ್ಮ್ (23) ಮತ್ತು ಸಿಮ್ರಾನ್ ತಾಜ್ (20) ಎಂದು ಗುರುತಿಸಲಾಗಿದೆ. ಅಕ್ಕ-ತಂಗಿಯರಾದ ಗುಲ್ಫಾರ್ಮ್, ಸಿಮ್ರಾನ್ ತಾಜ್ ಇಬ್ಬರೂ ಒಟ್ಟಿಗೆ ಸ್ನಾನ ಮಾಡಲು ಹೋಗಿದ್ದಾರೆ. ಆದರೆ ಸ್ನಾನಕ್ಕೆ ಹೋದವರು ಬಹಳ ಸಮಯವಾದರೂ ಹೊರಗೆ ಬಂದಿರಲಿಲ್ಲ. ಇದರಿಂದ ಅನುಮಾನಗೊಂಡ ತಂದೆ ಅಲ್ತಾಫ್‌

ಗ್ಯಾಸ್‌ ಗೀಸರ್‌ ಲೀಕ್‌ ಆಗಿ ಅಕ್ಕ-ತಂಗಿ ಸಾವು Read More »

ಸುಳ್ಯ : ಕ್ರಿಪ್ಟೋ ಕರೆನ್ಸಿ ಹೂಡಿಕೆ ನೆಪದಲ್ಲಿ 2.90 ಲ.ರೂ. ವಂಚನೆ

ಸುಳ್ಯ: ಕ್ರಿಪ್ಟೋ ಕರೆನ್ಸಿ ಇನ್‌ವೆಸ್ಟ್‌ಮೆಂಟ್‌ ಆ್ಯಂಡ್‌ ಟ್ರೇಡಿಂಗ್‌ ಹೆಸರಲ್ಲಿ ಸುಳ್ಯದ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಬಗ್ಗೆ ಮಂಗಳೂರು ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆ್ಯಪೊಂದರ ಮೂಲಕ ಪರಿಚಯವಾದ ಮಹಿಳೆಯ ಮಾತು ನಂಬಿ ಅವರು ಹಣ ಕಳೆದುಉಕೊಂಡಿದ್ದಾರೆ. ಸುಳ್ಯದ ಕೆರೆಮೂಲೆಯ 50 ವರ್ಷದ ವ್ಯಕ್ತಿ ವಂಚನೆಗೊಳಗಾದವರು. ಇವರು ಮೊಬೈಲ್‌ನಲ್ಲಿ ಚಾಟ್‌ಜಿಪಿಟಿ ಮೂಲಕ ಆ್ಯಪ್‌ವೊಂದನ್ನು ಡೌನ್‌ಲೋಡ್‌ ಮಾಡಿಕೊಂಡಿದ್ದು, ಅದರ ಮೂಲಕ ಇಶಾ ಸಿಂಗ್‌ ಎಂಬವರ ಪರಿಚಯವಾಗಿ ಬಳಿಕ ಟೆಲಿಗ್ರಾಂ ಚಾಟ್‌ ಮಾಡಿಕೊಂಡಿದ್ದರು. ಈ ವೇಳೆ ಇಶಾ ಸಿಂಗ್‌ ಕ್ರಿಪ್ಟೋ

ಸುಳ್ಯ : ಕ್ರಿಪ್ಟೋ ಕರೆನ್ಸಿ ಹೂಡಿಕೆ ನೆಪದಲ್ಲಿ 2.90 ಲ.ರೂ. ವಂಚನೆ Read More »

ಮಂಗಳೂರಿನಲ್ಲಿ ಪ್ರಥಮ ಬಾರಿಗೆ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಟೂರ್ನಮೆಂಟ್‌

ಅ.27ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಕ್ರೀಡಾಕೂಟಕ್ಕೆ ಚಾಲನೆ ಮಂಗಳೂರು: ಇದೇ ಮೊದಲ ಬಾರಿಗೆ ಮಂಗಳೂರಿನಲ್ಲಿ ಅಂತಾರಾರಾಷ್ಟ್ರೀಯ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿ “ಮಂಗಳೂರು ಇಂಡಿಯಾ ಇಂಟರ್‌ನ್ಯಾಷನಲ್ ಚಾಲೆಂಜ್ 2025” ಕ್ರೀಡಾಕೂಟ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅಕ್ಟೋಬರ್ 27ರಂದು ನಗರದ ಉರ್ವ ಒಳಾಂಗಣ ಕ್ರೀಡಾಂಗಣದಲ್ಲಿ ಚಾಲನೆ ನೀಡಲಿದ್ದಾರೆ. ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಕ್ರೀಡಾಕೂಟ ನಡೆಯುತ್ತಿದ್ದು, ಯಾವುದೇ ಲೋಪವಾಗದಂತೆ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಜಿಲ್ಲೆಯ ಕ್ರೀಡಾ ಮೂಲಸೌಲಭ್ಯಗಳು ಜಾಗತಿಕ ಮಟ್ಟದಲ್ಲಿ ಗುರುತಿಸುವಂತಾಗಬೇಕು. ಈ ಕ್ರೀಡಾಕೂಟದಲ್ಲಿ ದೇಶ-ವಿದೇಶಗಳಿಂದ ಕ್ರೀಡಾಪಟುಗಳು

ಮಂಗಳೂರಿನಲ್ಲಿ ಪ್ರಥಮ ಬಾರಿಗೆ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಟೂರ್ನಮೆಂಟ್‌ Read More »

ನಮ್ಮ ಮಾತು ಕೇಳದಿದ್ದರೆ ಬೀಳುತ್ತೆ ಕೇಸ್‌ : ಕ್ರಿಮಿನಲ್‌ಗಳಿಗೆ ಕಮಿಷನರ್‌ ಸುಧೀರ್ ರೆಡ್ಡಿ ವಾರ್ನಿಂಗ್

ಪಟಾಕಿ ಅಂಗಡಿ ಮಾಲಕರಿಂದ ಸುಲಿಗೆ ಮಾಡಿದ ಹಿನ್ನೆಲೆಯಲ್ಲಿ ಎಚ್ಚರಿಕೆ ಮಂಗಳೂರು: ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಗಳ ಜೊತೆಗೆ ತಿರುಗಾಡದಂತೆ ಈ ಮೊದಲೇ ಹೇಳಿದ್ದೆ. ರೌಡಿಗಳ ಜೊತೆಗಿದ್ದು ಅಪರಾಧದಲ್ಲಿ ಸಿಲುಕಬೇಡಿ ಎಂದೂ ಹೇಳಿದ್ದೆ. ನೀವು ನಮ್ಮ ಮಾತು ಕೇಳ್ತಾ ಇಲ್ಲ ಎನಿಸುತ್ತೆ. ನಮ್ಮ ಮಾತು ಕೇಳಲ್ಲಾಂದ್ರೆ ನಾವು ಏನು ಮಾಡಬೇಕೆಂದು ಗೊತ್ತಿದೆ. ನಾವು ನಮ್ಮ ಕೆಲಸ ಮಾಡ್ತೀವಿ. ನಿಮ್ಮ ಇಷ್ಟದಂತೆ ಮಾಡ್ಕೊಂಡ್ರೆ ನಮಗೆ ತೊಂದರೆ ಇಲ್ಲ. ಏನು ಬೇಕಾದರೂ ಮಾಡ್ಕೊಂಡು ಹೋಗಿ‌. ಪೊಲೀಸರು ತಮ್ಮ ಕೆಲಸ ಮಾಡುತ್ತಾರೆ ಎಂದು ಮಂಗಳೂರು

ನಮ್ಮ ಮಾತು ಕೇಳದಿದ್ದರೆ ಬೀಳುತ್ತೆ ಕೇಸ್‌ : ಕ್ರಿಮಿನಲ್‌ಗಳಿಗೆ ಕಮಿಷನರ್‌ ಸುಧೀರ್ ರೆಡ್ಡಿ ವಾರ್ನಿಂಗ್ Read More »

ಬೆಲೆ ಇಳಿಕೆಯಿಂದ ಜನ ಸಂಭ್ರಮಿಸಿದರೆ ಕಾಂಗ್ರೆಸ್‌ನವರಿಗೆ ಹೊಟ್ಟೆಯುರಿ : ಬಿಜೆಪಿ ಲೇವಡಿ

ರಾಜ್ಯದಲ್ಲಿ ಬೆಲೆ ಏರಿಸಿರುವುದಷ್ಟೆ ಕಾಂಗ್ರೆಸ್‌ ಸರ್ಕಾರದ ಸಾಧನೆ ಎಂದು ಟೀಕೆ ಮಂಗಳೂರು: ಕೇಂದ್ರ ಸರ್ಕಾರ ಜಿಎಸ್‌ಟಿ ದರ ಇಳಿಕೆ ಮಾಡಿ ಜನತೆಗೆ ನೆಮ್ಮದಿ ನೀಡಿದರೆ, ರಾಜ್ಯ ಸರ್ಕಾರ ಪ್ರತಿಯೊಂದು ವಸ್ತುಗಳ ಬೆಲೆ ಏರಿಸಿ ಜನರ ಬದುಕಿಗೆ ಸಂಕಷ್ಟ ತಂದೊಡ್ಡಿದೆ. ಕೇಂದ್ರದ ಜಿಎಸ್‌ಟಿ ದರ ಇಳಿಕೆ ಕುರಿತು ಶಾಸಕ ವೇದವ್ಯಾಸ ಕಾಮತ್ ಮನೆಮನೆಗೆ ಕರಪತ್ರ ವಿತರಣೆ ಕಾರ್ಯ ಆರಂಭಿಸಿದಾಗ ಕಾಂಗ್ರೆಸ್ ನಾಯಕರಾದ ಐವನ್ ಡಿಸೋಜ ಮತ್ತು ಪದ್ಮರಾಜ್ ಅವರಲ್ಲಿ ಹೊಟ್ಟೆಕಿಚ್ಚು ಶುರುವಾಗಿದೆ. ಜನರಿಗೆ ಸಿಗುತ್ತಿರುವ ಪ್ರಯೋಜನವೇ ಇವರಿಗೆ ಅಸಹ್ಯ

ಬೆಲೆ ಇಳಿಕೆಯಿಂದ ಜನ ಸಂಭ್ರಮಿಸಿದರೆ ಕಾಂಗ್ರೆಸ್‌ನವರಿಗೆ ಹೊಟ್ಟೆಯುರಿ : ಬಿಜೆಪಿ ಲೇವಡಿ Read More »

ಚಿತ್ತಾಪುರ ಪಥ ಸಂಚಲನ ತಿಕ್ಕಾಟ : ಶಾಂತಿ ಸಭೆ ನಡೆಸಲು ಹೈಕೋರ್ಟ್‌ ಸೂಚನೆ

ಆರ್‌ಎಸ್‌ಎಸ್‌ ಸಹಿತ ಹಲವು ಸಂಘಟನೆಗಳಿಂದ ಪಥ ಸಂಚಲನ ನಡೆಸಲು ಅನುಮತಿ ಕೋರಿಕೆ ಬೆಂಗಳೂರು: ಕಲಬುರಗಿಯ ಚಿತ್ತಾಪುರದಲ್ಲಿ ನ.2ರಂದು ಆರ್‌ಎಸ್‌ಎಸ್‌ ಸಹಿತ ಹಲವು ಸಂಘಟನೆಗಳು ಪಥ ಸಂಚಲನ ನಡೆಸಲು ಪಟ್ಟು ಹಿಡಿದಿರುವ ಹಿನ್ನೆಲೆಯಲ್ಲಿ ಶಾಂತ ಸಭೆ ನಡೆಸುವಂತೆ ಜಿಲ್ಲಾಡಳಿತಕ್ಕೆ ಹೈಕೋರ್ಟ್‌ ಸೂಚಿಸಿದೆ. ಅಕ್ಟೋಬರ್ 28ರಂದು ಉದ್ದೇಶಿತ ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್)ದ ರೂಟ್ ಮಾರ್ಚ್‌ನ ಆಯೋಜಕರೊಂದಿಗೆ ಶಾಂತಿ ಸಭೆ ನಡೆಸುವಂತೆ ಕರ್ನಾಟಕ ಹೈಕೋರ್ಟ್ ಶುಕ್ರವಾರ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಇದರಿಂದ ಅನುಮತಿ ಸಿಗುವ ನಿರೀಕ್ಷೆಯಲ್ಲಿದ್ದ ಆರ್‌ಎಸ್‌ಎಸ್‌ಗೆ ತುಸು ನಿರಾಶೆಯಾಗಿದೆ. ಪಥ

ಚಿತ್ತಾಪುರ ಪಥ ಸಂಚಲನ ತಿಕ್ಕಾಟ : ಶಾಂತಿ ಸಭೆ ನಡೆಸಲು ಹೈಕೋರ್ಟ್‌ ಸೂಚನೆ Read More »

error: Content is protected !!
Scroll to Top