ವೈದ್ಯೆ ಪತ್ನಿಯನ್ನು ಪತಿಯೇ ಕೊಂದ ಪ್ರಕರಣ : ಮಗಳ 4 ಕೋಟಿ ರೂ. ಮೌಲ್ಯದ ಮನೆಯನ್ನು ಇಸ್ಕಾನ್‌ಗೆ ದಾನ ಮಾಡಿದ ತಂದೆ
ಅನಾರೋಗ್ಯವಿದ್ದ ಪತ್ನಿಯನ್ನು ಅನೆಸ್ತೇಶಿಯ ಇಂಜೆಕ್ಷನ್ ನೀಡಿ ಕೊಂದಿದ್ದ ಟಾಕ್ಟರ್ ಪತಿ ಬೆಂಗಳೂರು: ನಗರದಲ್ಲಿ ವೈದ್ಯೆಯೊಬ್ಬರನ್ನು ಆಕೆಯ ಡಾಕ್ಟರ್ ಪತಿಯೇ ಅನೆಸ್ತೇಶಿಯ ಇಂಜೆಕ್ಷನ್ ಕೊಟ್ಟು ಕೊಲೆ ಮಾಡಿದ ಪ್ರಕರಣ ದೇಶವೇ ಬೆಚ್ಚಿಬೀಳುವಂತೆ ಮಾಡಿದೆ. ಮಗಳ ಸಾವಿನಿಂದ ತೀವ್ರ ನೊಂದಿರುವ ತಂದೆ ಮಗಳಿಗಾಗಿ ಕಟ್ಟಿಸಿದ್ದ 4 ಕೋ.ರೂ. ಮೌಲ್ಯದ ಮನೆಯನ್ನು ಇಸ್ಕಾನ್‌ಗೆ ದಾನ ಮಾಡಿದ್ದಾರೆ. ಮಗಳ ಸಾವಿನ ನೋವಿನಲ್ಲಿ ತಂದೆ ಮುನಿರೆಡ್ಡಿ ಮಗಳು ವಾಸವಿದ್ದ ಮನೆಯನ್ನು ಇಸ್ಕಾನ್‌ಗೆ ದಾನ ಮಾಡಿದ್ದಾರೆ. ಮಗಳಿಗಾಗಿ ನಾಲ್ಕು ಕೋಟಿ ಖರ್ಚು ಮಾಡಿ ಮನೆ ಕಟ್ಟಿದ್ದರು. […]










