ಸುದ್ದಿ

ಕಾಂತಾರದಲ್ಲಿ ದೈವಾರಾಧನೆ ಬಳಕೆ : ದೈವಾರಾಧಾಕರಿಂದ ದೈವಕ್ಕೇ ದೂರು

ದೈವ ಆವೇಶದ ರೀಲ್ಸ್‌ಗಳಿಂದ ಪಾವಿತ್ರ್ಯಕ್ಕೆ ಅಪಚಾರ ಎಂದು ಕಳವಳ ಮಂಗಳೂರು: ಕಾಂತಾರಾ ಚಿತ್ರದಲ್ಲಿದ್ದಂತೆ ಈಗ ಕಾಂತಾರ ಅಧ್ಯಾಯ 1ರಲ್ಲೂ ದೈವಾರಾಧನೆ ಮತ್ತು ದೈವದ ಆವೇಶವನ್ನು ತೋರಿಸಿರುವುದಕ್ಕೆ ನಟ, ನಿರ್ದೇಶಕ ರಿಷಬ್‌ ಶೆಟ್ಟಿಯವರ ಮೇಲೆ ದೈವಾರಾಧಾಕರು ಅಸಮಾಧಾನಗೊಂಡಿದ್ದಾರೆ. ತೆರೆಯ ಮೇಲೆ ದೈವದ ಆವೇಶವನ್ನು ನೋಡಿದ ಕೆಲವರು ಪುಕ್ಕಟೆ ಪ್ರಚಾರಕ್ಕಾಗಿ ಅದೇ ರೀತಿ ಆವೇಶದ ಅಭಿನಯ ಮಾಡಿ ರೀಲ್ಸ್‌ಗಳನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಾಕುತ್ತಿರುವುದು ಹೆಚ್ಚಾಗುತ್ತಿದೆ. ಇದರಿಂದ ದೈವಾರಾಧನೆಯ ಪಾವಿತ್ರ್ಯಕ್ಕೆ ಅಪಚಾರವಾಗುತ್ತಿದೆ ಎಂದು ದೈವಾರಾಧಾಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಇದೀಗ […]

ಕಾಂತಾರದಲ್ಲಿ ದೈವಾರಾಧನೆ ಬಳಕೆ : ದೈವಾರಾಧಾಕರಿಂದ ದೈವಕ್ಕೇ ದೂರು Read More »

ಬಾಲಕನಿಗೆ ದ್ವಿಚಕ್ರ ವಾಹನ ನೀಡಿದ ವ್ಯಕ್ತಿಗೆ 29 ಸಾವಿರ ರೂ ದಂಡ

ಮಂಗಳೂರು : ಅಪ್ರಾಪ್ತ ವಯಸ್ಸಿನ ಬಾಲಕನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ ವ್ಯಕ್ತಿಗೆ ನ್ಯಾಯಾಲಯ 29,000 ರೂ. ದಂಡ ವಿಧಿಸಿದೆ. ಮಾರುತಿ ಕಂಬಾಲ್ ದಂಡ ಪಾವತಿಸಬೇಕಾದ ವ್ಯಕ್ತಿ ಎಂದು ತಿಳಿದುಬಂದಿದೆ. ಜೆಎಂಎಫ್‌ಸಿ 4 ನ್ಯಾಯಾಲಯದ ಪ್ರಭಾರ ನ್ಯಾಯಾಧೀಶೆ ಶಿಲ್ಪ ಎಸ್ ಬ್ಯಾಡಗಿ ಅವರು ಮಾರುತಿ ಕಂಬಾಲ್‌ಗೆ ದಂಡ ವಿಧಿಸಿ ಆದೇಶ ನೀಡಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ಬಾಲಕನಿಗೆ ದ್ವಿಚಕ್ರ ವಾಹನ ನೀಡಿದ ವ್ಯಕ್ತಿಗೆ 29 ಸಾವಿರ ರೂ ದಂಡ Read More »

ಮಕ್ಕಳ ಸಾವಿಗೆ ಕಾರಣವಾದ ಸಿರಪ್‌ ಕಂಪನಿ ಮಾಲಕ ಸೆರೆ

ಕೋಲ್ಟ್ರಿಫ್‌ ಕೆಮ್ಮಿನ ಸಿರಪ್‌ ಸೇವಿಸಿ 20ಕ್ಕೂ ಹೆಚ್ಚು ಮಕ್ಕಳ ಸಾವು ನವದೆಹಲಿ: ಹಲವು ಮಕ್ಕಳ ಸಾವಿಗೆ ಕಾರಣವಾಗಿರುವ ಕೋಲ್ಡ್ರಿಫ್ ಕೆಮ್ಮಿನ ಸಿರಪ್ ತಯಾರಿಸಿದ ಕಂಪನಿಯ ಮಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ಸ್ರೆಸನ್ ಫಾರ್ಮಾಸ್ಯುಟಿಕಲ್ಸ್ ಕಂಪನಿ ಈ ಸಿರಪ್‌ ತಯಾರಿಸಿದ್ದು, ಕಂಪನಿಯ ಮಾಲಕ ಎಸ್. ರಂಗನಾಥನ್ ಅವರನ್ನು ಮಧ್ಯಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಮಧ್ಯಪ್ರದೇಶ ಮತ್ತು ತಮಿಳುನಾಡು ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ರಂಗನಾಥನ್ ಅವರನ್ನು ಚೆನ್ನೈಯಲ್ಲಿ ಬಂಧಿಸಲಾಯಿತು. ಬುಧವಾರ ರಾತ್ರಿ ಅವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ. ಮಧ್ಯಪ್ರದೇಶದ

ಮಕ್ಕಳ ಸಾವಿಗೆ ಕಾರಣವಾದ ಸಿರಪ್‌ ಕಂಪನಿ ಮಾಲಕ ಸೆರೆ Read More »

ಉಳ್ಳಾಲದಲ್ಲಿ ಮೀನು ಸಂಸ್ಕರಣಾ ಘಟಕ ಬೆಂಕಿಗಾಹುತಿ

ಮಂಗಳೂರು : ಉಳ್ಳಾಲದ ಕೋಟೆಪುರದಲ್ಲಿರುವ ಮೀನಿನ ಆಹಾರ ತಯಾರಿಕ ಸಂಸ್ಕರಣಾ ಘಟಕದ ಗೋದಾಮು ಬುಧವಾರ ರಾತ್ರಿ ಸಂಭವಿಸಿದ ಬೆಂಕಿ ಅವಘಡದಲ್ಲಿ ನಾಶವಾಗಿದೆ. ಲಕ್ಷಾಂತರ ರೂ. ನಷ್ಟ ಉಂಟಾಗಿದೆ. ಖಾದರ್ ಎಂಬವರಿಗೆ ಸೇರಿದ ಎಂಎಂಪಿ ಫಿಶ್ ಫುಡ್ ಗೋದಾಮಿಗೆ ರಾತ್ರಿ ಬೆಂಕಿಹತ್ತಿಕೊಂಡಿದೆ. ಬೆಂಕಿಯ ಕೆನ್ನಾಲೆ ಹೊರಗೂ ಆವರಿಸಿದ್ದು, ತಕ್ಷಣ ಕಾರ್ಯಪ್ರವೃತ್ತರಾದ ಸ್ಥಳೀಯರು ನೀರು ಎರಚಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ತುಂಬಾ ಹೊತ್ತಿನ ನಂತರ ಮಂಗಳೂರಿನಿಂದ ಅಗ್ನಿ ಶಾಮಕ ದಳದ ವಾಹನ ಬಂದು ಬೆಂಕಿ ನಂದಿಸಿದೆ. ಉಳ್ಳಾಲ ಪೊಲೀಸರು ಸ್ಥಳದಲ್ಲಿದ್ದರು.

ಉಳ್ಳಾಲದಲ್ಲಿ ಮೀನು ಸಂಸ್ಕರಣಾ ಘಟಕ ಬೆಂಕಿಗಾಹುತಿ Read More »

ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈ ವರ್ಷದಿಂದಲೇ ರದ್ದು

ಉನ್ನತ ಆಯ್ಕೆ ಸಮಿತಿ ಆರಿಸಿದವರಿಗಷ್ಟೇ ಪ್ರಶಸ್ತಿ ಬೆಂಗಳೂರು: ಈ ವರ್ಷದಿಂದಲೇ ಜಾರಿಗೆ ಬರುವಂತೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯ ನಿಯಮ ಬದಲಾಗಲಿದೆ. ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಹಾಕುವ ಪ್ರಕ್ರಿಯೆಯನ್ನೇ ರಾಜ್ಯ ಸರ್ಕಾರ ಕೈಬಿಟ್ಟಿದೆ. ವರ್ಷದಿಂದ ವರ್ಷಕ್ಕೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಸಲ್ಲಿಸುವವರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ. ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಹೊಸ ನಿಯಮ ಜಾರಿಗೊಳಿಸಲಾಗುತ್ತಿದ್ದು, ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸುವ ಪ್ರಕ್ರಿಯೆ ಕೈಬಿಟ್ಟಿದೆ. ಈ ಬಗ್ಗೆ ಕನ್ನಡ

ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈ ವರ್ಷದಿಂದಲೇ ರದ್ದು Read More »

ಶರಣ್‌ ಪಂಪ್‌ವೆಲ್‌ಗೆ 2 ಲ.ರೂ. ದಂಡ ವಿಧಿಸಿದ ಹೈಕೋರ್ಟ್‌

ಗಣೇಶೋತ್ಸವದಲ್ಲಿ ಹೈಕೋರ್ಟ್‌ ಷರತ್ತು ಉಲ್ಲಂಘಿಸಿದ ಆರೋಪ ಬೆಂಗಳೂರು: ಆದೇಶ ಉಲ್ಲಂಘನೆ ಆರೋಪ ಎದುರಿಸುತ್ತಿದ್ದ ವಿಶ್ವ ಹಿಂದೂ ಪರಿಷತ್​​ ಸಹಕಾರ್ಯದರ್ಶಿ ಶರಣ್ ಪಂಪ್​​ವೆಲ್​​ಗೆ ಹೈಕೋರ್ಟ್ 2 ಲಕ್ಷ ರೂ. ದಂಡ ವಿಧಿಸಿದೆ. ಇದರಲ್ಲಿ ರಾಜ್ಯ ಲೀಗಲ್ ಸರ್ವೀಸ್ ಅಥಾರಿಟಿಗೆ 1 ಲಕ್ಷ ರೂ. ಮತ್ತು ಪೋಲಿಸ್ ಕ್ಷೇಮಾಭಿವೃದ್ಧಿ ನಿಧಿಗೆ 1 ಲಕ್ಷ ರೂ ನೀಡಲು ಬುಧವಾರ ಕೋರ್ಟ್‌ ಆದೇಶ ನೀಡಿದೆ. ಇತ್ತೀಚೆಗೆ ಚಿತ್ರದುರ್ಗದಲ್ಲಿ ಹಿಂದೂ ಮಹಾಗಣಪತಿ ಶೋಭಾಯಾತ್ರೆ ಹಿನ್ನಲೆ ಜಿಲ್ಲೆ ಪ್ರವೇಶಿಸದಂತೆ ಜಿಲ್ಲಾಡಳಿತ ಶರಣ್ ಪಂಪ್​​ವೆಲ್​​ಗೆ ನಿರ್ಬಂಧ ವಿಧಿಸಿತ್ತು.

ಶರಣ್‌ ಪಂಪ್‌ವೆಲ್‌ಗೆ 2 ಲ.ರೂ. ದಂಡ ವಿಧಿಸಿದ ಹೈಕೋರ್ಟ್‌ Read More »

ಬಿಗ್‌ಬಾಸ್‌ ಮನೆಯ ಬೀಗ ತೆರವು : ಮರಳಿ ಬಂದ ಸ್ಪರ್ಧಿಗಳು

ಉಪಮುಖ್ಯಮಂತ್ರಿ ಡಿಕೆಶಿ ನಿರ್ದೇಶನದಂತೆ ರಿಯಾಲಿಟಿ ಶೋ ಮುಂದುವರಿಸಲು ಅನುಮತಿ ಬೆಂಗಳೂರು : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಆದೇಶದಂತೆ ಅಧಿಕಾರಿಗಳು ಜಾಲಿವುಡ್‌ ಸ್ಟುಡಿಯೊಗೆ ಹಾಕಿದ್ದ ಬೀಗ ತೆಗೆದಿದ್ದು, ಇದರಿಂದಾಗಿ ಜನಪ್ರಿಯ ಬಿಗ್‌ಬಾಸ್‌ ರಿಯಾಲಿಟಿ ಶೋ ಮರಳಿ ಶುರುವಾಗಿದೆ. ನಿನ್ನೆ ರಾತ್ರಿಯೇ ರೆಸಾರ್ಟ್‌ನಲ್ಲಿದ್ದ ಎಲ್ಲ ಸ್ಪರ್ಧಿಗಳು ಮರಳಿ ಬಿಗ್‌ಬಾಸ್‌ ಮನೆಗೆ ಬಂದಿದ್ದಾರೆ. ಈ ಕುರಿತು ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಡಿಕೆಶಿ, ಬಿಗ್‌ಬಾಸ್ ಕನ್ನಡ ಚಿತ್ರೀಕರಣ ನಡೆಯುತ್ತಿರುವ ಬಿಡದಿಯಲ್ಲಿರುವ ಜಾಲಿವುಡ್ ಆವರಣದ ಸೀಲ್ ತೆಗೆದುಹಾಕಲು ಬೆಂಗಳೂರು ದಕ್ಷಿಣ ಜಿಲ್ಲೆಯ ಜಿಲ್ಲಾಧಿಕಾರಿಗೆ ನಾನು

ಬಿಗ್‌ಬಾಸ್‌ ಮನೆಯ ಬೀಗ ತೆರವು : ಮರಳಿ ಬಂದ ಸ್ಪರ್ಧಿಗಳು Read More »

ನ. 15: ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವೀರಮಂಗಲ ಇದರ ವಾರ್ಷಿಕೋತ್ಸವ

ಪುತ್ತೂರು: ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವೀರಮಂಗಲ ಇದರ ವಾರ್ಷಿಕೋತ್ಸವ ಪಿಎಂಶ್ರೀ ಸಡಗರವು 15 ನವೆಂಬರ್ 2025 ರಂದು ನಡೆಯಲಿದ್ದು, ಆ ಪ್ರಯುಕ್ತ ಶಾಲಾ ಮಕ್ಕಳ ವಾರ್ಷಿಕ ಕ್ರೀಡಾಕೂಟ ನವೆಂಬರ್ 8, 2025 ರಂದು ನಡೆಯಲಿದೆ. ಕ್ರೀಡಾಕೂಟದ ಉದ್ಘಾಟನೆಯನ್ನು ಪುತ್ತೂರು ನಗರ ಪೊಲೀಸ್ ಠಾಣಾ ಉಪನಿರೀಕ್ಷಕ ಆಂಜನೇಯ ರೆಡ್ಡಿ ಅವರು ನಿರ್ವಹಿಸಲಿದ್ದಾರೆ. ಧ್ವಜವಂದನೆಯನ್ನು ಶಾರೀರಿಕ ಶಿಕ್ಷಣ ಇಲಾಖೆ ಪುತ್ತೂರಿನ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಚಕ್ರಪಾಣಿ ಎ.ವಿ. ಸ್ವೀಕರಿಸಲಿದ್ದಾರೆ. ಕ್ರೀಡಾಕೂಟದ ಮುಖ್ಯ ಅತಿಥಿಗಳಾಗಿನವೀನ್ ಡಿ (ಅಧ್ಯಕ್ಷರು

ನ. 15: ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವೀರಮಂಗಲ ಇದರ ವಾರ್ಷಿಕೋತ್ಸವ Read More »

ಶ್ರೀ ಕಾಳಿಕಾಂಬಾ ಯಕ್ಷ ಟ್ರಸ್ಟ್ ನಿಂದ ಶ್ರೀ ವಾಲ್ಮೀಕಿ ಜಯಂತಿ ಆಚರಣೆ

ಉಪ್ಪಿನಂಗಡಿಯ ಶ್ರೀ ಕಾಳಿಕಾಂಬ ಯಕ್ಷಕಲಾ ಟ್ರಸ್ಟ್. ರಿ ವತಿಯಿಂದ ವಾಲ್ಮೀಕಿ ಜಯಂತಿಯನ್ನು ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಆಚರಿಸಲಾಯಿತು. ಶಿಕ್ಷಕಿ ಮತ್ತು ಕಲಾವಿದೆ ಪುಷ್ಪಾ ತಿಲಕ್ ಮಾತನಾಡಿ ವಾಲ್ಮೀಕಿ ಮಹರ್ಷಿಗಳು ಆದಿ ಕಾವ್ಯವೆನಿಸಿದ ಶ್ರೀಮದ್ ರಾಮಾಯಣವನ್ನು ರಚಿಸಿ ಅದರಲ್ಲಿರುವ ಪಾತ್ರಗಳು ವ್ಯಕ್ತಿಗಳಾಗದೆ ವ್ಯಕ್ತಿತ್ವಗಳಾಗಿ ನಮ್ಮ ಮುಂದೆ ಪ್ರತ್ಯಕ್ಷವಾಗುತ್ತದೆ. ಕಥಾನಾಯಕನಾದ ಶ್ರೀರಾಮಚಂದ್ರನ ಜೀವನದ ಬಹುಮುಖಿ ದರ್ಶನವನ್ನು ಈ ಕಾವ್ಯವು ಮಾಡಿಸುತ್ತದೆ. ವಾಲ್ಮೀಕಿ ರಾಮಾಯಣವು ವಿಶ್ವದ ಹೆಚ್ಚಿನ ಭಾಷೆಗಳಲ್ಲಿ ಭಾಷಾಂತರಗೊಂಡು ಪ್ರಕಟವಾಗಿರುವುದು ಅತ್ಯಂತ ಹೆಮ್ಮೆಯ ಸಂಗತಿ ಎಂದು ತಿಳಿಸಿದರು.

ಶ್ರೀ ಕಾಳಿಕಾಂಬಾ ಯಕ್ಷ ಟ್ರಸ್ಟ್ ನಿಂದ ಶ್ರೀ ವಾಲ್ಮೀಕಿ ಜಯಂತಿ ಆಚರಣೆ Read More »

ನಮ್ಮ ಮೆಟ್ರೋಗೆ ವಾಲ್ಮೀಕಿ ಹೆಸರಿಡುವಂತೆ ಕೇಂದ್ರಕ್ಕೆ ಸಿಎಂ ‌ಸಿದ್ದರಾಮಯ್ಯ ಮನವಿ

ಬೆಂಗಳೂರು: ನಮ್ಮ ಮೆಟ್ರೋಗೆ ವಾಲ್ಮೀಕಿ ಮಹರ್ಷಿಗಳ ಹೆಸರನ್ನು ಇರಿಸುವಂತೆ ಸಿ ಎಂ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರಕ್ಕೆ ಬೇಡಿಕೆ ಸಲ್ಲಿಸಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡೂ ನಮ್ಮ ಮೆಟ್ರೋವನ್ನು ನಡೆಸುತ್ತಿವೆ. ಈ ಕಾರಣದಿಂದ ರಾಜ್ಯ ಸರ್ಕಾರದಿಂದ ಬೆಂಗಳೂರಿನ ನಮ್ಮ ಮೆಟ್ರೋಗೆ ವಾಲ್ಮೀಕಿ ಹೆಸರಿಡಲು ಸಾಧ್ಯವಿಲ್ಲ. ಹೀಗಾಗಿ ನಾನು ಕೇಂದ್ರ ಸರ್ಕಾರದ ಬಳಿ ಶಿಫಾರಸ್ಸು ಮಾಡಿದ್ದೇನೆ. ಕೇಂದ್ರ ಒಪ್ಪಿಕೊಳ್ಳಬೇಕು. ಮುಂದೇನಾಗುತ್ತದೆ ಎಂಬುದನ್ನು ನಿರೀಕ್ಷಿಸೋಣ ಎಂದು ತಿಳಿಸಿದ್ದಾರೆ. ಕಾಂಗ್ರೆಸ್ ನಾಯಕ ವಿ. ಎಸ್. ಉಗ್ರಪ್ಪ ಅವರು ಪಠ್ಯದಲ್ಲಿ ವಾಲ್ಮೀಕಿ ಮತ್ತು

ನಮ್ಮ ಮೆಟ್ರೋಗೆ ವಾಲ್ಮೀಕಿ ಹೆಸರಿಡುವಂತೆ ಕೇಂದ್ರಕ್ಕೆ ಸಿಎಂ ‌ಸಿದ್ದರಾಮಯ್ಯ ಮನವಿ Read More »

error: Content is protected !!
Scroll to Top