ಸುದ್ದಿ

ಅತಿವೇಗದಿಂದ ಬಂದ ಬೈಕ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ: ಸವಾರರಿಬ್ಬರು ಪವಾಡ ಸದೃಶ ಪಾರು

ಮಂಗಳೂರು: ಅತಿ ವೇಗದಿಂದ ಬಂದ ಬೈಕ್ ಒಂದು ಸವಾರನ ‌ನಿಯಂತ್ರಣಕ್ಕೆ ಸಿಗದೆ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದ್ದು, ಬೈಕ್ ಸವಾರರಾದ ವಿದ್ಯಾರ್ಥಿಗಳಿಬ್ಬರು ಪವಾಡ ಎಂಬಂತೆ ಪಾರಾದ ಘಟನೆ ಉಳ್ಳಾಲದ ಕಿನ್ಯ ಸಂಕೇಶದಲ್ಲಿ ‌ನಡೆದಿದೆ. ಢಿಕ್ಕಿಯಾದ ರಭಸಕ್ಕೆ ವಿದ್ಯುತ್ ಕಂಬ ಮುರಿದು ಬಿದ್ದಿದೆ. ಅಪಘಾತದ ದೃಶ್ಯಾವಳಿಗಳು ಸಿಸಿಟಿವಿಯಲ್ಲೂ ಲಭ್ಯವಾಗಿವೆ. ದ್ವಿಚಕ್ರ ವಾಹನದಲ್ಲಿ ಬಿಜಾಪುರ ಮೂಲದ ಇಬ್ಬರು ಯುವಕರಿದ್ದರು ಎಂದು ತಿಳಿದು ಬಂದಿದೆ. ವಿದ್ಯುತ್ ಕಂಬ ಮುರಿದು ತಂತಿಗಳು ರಸ್ತೆಗೆ ಬಿದ್ದಿದ್ದು ‌ಅದರಲ್ಲಿ ವಿದ್ಯುತ್ ಪ್ರವಹಿಸುತ್ತಿರುವ ಭಯದಿಂದ ಸಾರ್ವಜನಿಕರು ಅತ್ತ […]

ಅತಿವೇಗದಿಂದ ಬಂದ ಬೈಕ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ: ಸವಾರರಿಬ್ಬರು ಪವಾಡ ಸದೃಶ ಪಾರು Read More »

ಇಂದು ರಿಂಗ್‌ ಆಫ್‌ ಫಯರ್‌ ಖಗೋಲ ವಿದ್ಯಮಾನ

ಏಷ್ಯಾದ ಜನರಿಗಿಲ್ಲ ಗ್ರಹಣ ವೀಕ್ಷಿಸುವ ಅವಕಾಶ ನವದೆಹಲಿ: ಅಪರೂಪದ ಖಗೋಳ ವಿದ್ಯಮಾನಕ್ಕೆ ಜಗತ್ತು ಇಂದು ಸಾಕ್ಷಿಯಾಗಲಿದೆ. ಇಂದು ಅಪರಾಹ್ನ ಕಂಕಣ ಸೂರ್ಯಗ್ರಹಣ ಸಂಭವಿಸಲಿದ್ದು, ಜಗತ್ತಿನ ಹಲವೆಡೆ ರಿಂಗ್ ಆಫ್ ಫೈರ್ ಎಂಬ ಈ ಅದ್ಭುತ ದೃಶ್ಯ ಗೋಚರಿಸಲಿದೆ. ಭಾರತೀಯ ಕಾಲಮಾನದ ಪ್ರಕಾರ ಈ ಗ್ರಹಣ ಮಧ್ಯಾಹ್ನ 3.26ಕ್ಕೆ ಆರಂಭವಾಗಿ ಸಂಜೆ 7.57ಕ್ಕೆ ಮುಕ್ತಾಯಗೊಳ್ಳುತ್ತದೆ. ಒಟ್ಟು ಸುಮಾರು 4 ಗಂಟೆ 32 ನಿಮಿಷಗಳ ಕಾಲ ಈ ಗ್ರಹಣ ಇರಲಿದೆ. ಗ್ರಹಣದ ಗರಿಷ್ಠ ಹಂತ ಸಂಜೆ 5.42ರ ಸುಮಾರಿಗೆ ಸಂಭವಿಸಲಿದೆ.

ಇಂದು ರಿಂಗ್‌ ಆಫ್‌ ಫಯರ್‌ ಖಗೋಲ ವಿದ್ಯಮಾನ Read More »

ತನ್ನಿಂದ ತಾನೇ ತೂಗಿದ ದೈವದ ಮಂಚ : ಮಂಗಳೂರಿನಲ್ಲೊಂದು ವಿಸ್ಮಯದ ಘಟನೆ

ಪಿಲಿಚಂಡಿ ನೇಮೋತ್ಸವದ ವೇಳೆ ಮಹಿಮೆ ಮೆರೆಯಿತು ದೈವ ಮಂಗಳೂರು : ಮಂಗಳೂರಿನ ಬೈಕಂಪಾಡಿ ಕೈಗಾರಿಕಾ ವಲಯದ ಕುಡುಂಬೂರು ನಡುಗಿರಿಯಲ್ಲಿರುವ ದೈವಸ್ಥಾನದಲ್ಲಿ ಅಪರೂಪದ ಘಟನೆ ನಡೆದಿದೆ. ಮಂಗಳೂರು ಭಾಗದ ಶ್ರೀ ಜಾರಂದಾಯ ಹಾಗೂ ಸಹಪರಿವಾರ ದೈವಸ್ಥಾನದಲ್ಲಿ ನಡೆದ ಪಿಲಿಚಂಡಿ ದೈವದ ನೇಮೋತ್ಸವದ ವೇಳೆ ದೈವದ ಮಂಚ ತನ್ನಿಂದ ತಾನೇ ತೂಗಿದ ದೃಶ್ಯ ಭಕ್ತರಲ್ಲಿ ಅಚ್ಚರಿ ಮೂಡಿಸಿದೆ. ಇದರ ವಿಡಿಯೋ ಭಾರಿ ವೈರಲ್‌ ಆಗಿದ್ದು, ಇದು ದೈವದ ಮಹಿಮೆ ಎಂದೇ ಜನರು ನಂಬಿದ್ದಾರೆ. ನೇಮೋತ್ಸವ ನಡೆಯುತ್ತಿರುವಾಗಲೇ ಯಾರೋ ಕುಳಿತು ನಿಧಾನವಾಗಿ

ತನ್ನಿಂದ ತಾನೇ ತೂಗಿದ ದೈವದ ಮಂಚ : ಮಂಗಳೂರಿನಲ್ಲೊಂದು ವಿಸ್ಮಯದ ಘಟನೆ Read More »

ಶಬರಿಮಲೆಗೆ ಮಹಿಳೆಯರ ಪ್ರವೇಶ ವಿವಾದ : 9 ನ್ಯಾಯಾಧೀಶರ ಪೀಠದಲ್ಲಿ ಅಂತಿಮ ವಿಚಾರಣೆ

ಸಂವಿಧಾನ ಪೀಠದಲ್ಲಿ ಏ.22ರೊಳಗೆ ಮುಕ್ತಾಯವಾಗಲಿರುವ ವಿಚಾರಣೆ ನವದೆಹಲಿ: ಶಬರಿಮಲೆ ದೇಗುಲವೂ ಸೇರಿ ಕೆಲ ಧಾರ್ಮಿಕ ಸ್ಥಳಗಳಿಗೆ ಮಹಿಳೆಯರ ಪ್ರವೇಶ ನಿರಾಕರಿಸುವ ತಾರತಮ್ಯ ಕುರಿತಾದ ಅರ್ಜಿಗಳ ಅಂತಿಮ ವಿಚಾರಣೆಗೆ ಸುಪ್ರೀಂ ಕೋರ್ಟ್‌ ಸೋಮವಾರ ಒಂಬತ್ತು ನ್ಯಾಯಾಧೀಶರ ಸಾಂವಿಧಾನಿಕ ಪೀಠ ರಚಿಸಿ ಆದೇಶಿಸಿದೆ. ಈ ಸಾಂವಿಧಾನಿಕ ಪೀಠ ಏ.7ರಿಂದ ಅರ್ಜಿಗಳ ವಿಚಾರಣೆ ಆರಂಭಿಸಿ ಏ.22ರೊಳಗೆ ಮುಕ್ತಾಯಗೊಳಿಸಲಿದೆ. ಪುನರ್‌ ಪರಿಶೀಲನೆಯನ್ನು ಬೆಂಬಲಿಸುವವರ ಅರ್ಜಿ ಏ.7ರಿಂದ ಏ.9ರ ನಡುವೆ ವಿಚಾರಣೆಗೆ ಬರಲಿದೆ. ಆ ಬಳಿಕ ಏ.14ರಿಂದ ಏ.16ರವರೆಗೆ ತೀರ್ಪಿನ ಪುನರ್‌ ಪರಿಶೀಲನಾ ಅರ್ಜಿಗಳ

ಶಬರಿಮಲೆಗೆ ಮಹಿಳೆಯರ ಪ್ರವೇಶ ವಿವಾದ : 9 ನ್ಯಾಯಾಧೀಶರ ಪೀಠದಲ್ಲಿ ಅಂತಿಮ ವಿಚಾರಣೆ Read More »

ಹಿಂದೂಗಳ ಮನೆ ಮೇಲೆ ಕಲ್ಲು ತೂರಾಟ : ಪರಿಸ್ಥಿತಿ ಉದ್ವಿಗ್ನ

ಉದ್ದೇಶಪೂರ್ವಕವಾಗಿ ಕಲ್ಲು ತೂರುತ್ತಿರುವ ದುಷ್ಕರ್ಮಿಗಳು ಚಿಕ್ಕಮಗಳೂರು: ಚಿಕ್ಕಮಗಳೂರು ನಗರದ ವಿಜಯನಗರ ಬಡಾವಣೆಯ ತಿಲಕ್ ಪಾರ್ಕ್ ಸಮೀಪ ಹಿಂದೂಗಳ ಮನೆಯೊಂದರ ಮೇಲೆ ಕಳೆದ ಒಂದು ವಾರದಿಂದ ಕಿಡಿಗೇಡಿಗಳು ರಾತ್ರಿ ವೇಳೆ ನಿರಂತರ ಕಲ್ಲುತೂರಾಟ ನಡೆಸಿದ್ದು, ಘಟನೆಯಿಂದ ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಘಟನೆ ಬೆನ್ನಲ್ಲೇ ಕೆಲ ಮುಸ್ಲಿಂ ಯುವಕರನ್ನು ಬಜರಂಗದಳ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಇದರಿಂದಾಗಿ ಸ್ಥಳದಲ್ಲಿ ಸೋಮವಾರ ರಾತ್ರಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಮತ್ತೊಂದೆಡೆ, ಘರ್ಷಣೆ ವೇಳೆ ಇಬ್ಬರು ಮುಸ್ಲಿಂ ಯುವಕರು ಗಾಯಗೊಂಡಿದ್ದು, ಅವರನ್ನು ಮಲ್ಲೇಗೌಡ

ಹಿಂದೂಗಳ ಮನೆ ಮೇಲೆ ಕಲ್ಲು ತೂರಾಟ : ಪರಿಸ್ಥಿತಿ ಉದ್ವಿಗ್ನ Read More »

ಜಿಎಸ್‌ಟಿ ವಂಚಿಸಿದ್ದಕ್ಕೆ ಸುಬ್ಬಾರೆಡ್ಡಿ ಶಾಸಕ ಸ್ಥಾನ ಅಸಿಂಧು

ಕಾಂಗ್ರೆಸ್‌ಗೆ ತೀವ್ರ ಹಿನ್ನಡೆಯಾದ ಹೈಕೋರ್ಟ್‌ ತೀರ್ಪು ಬೆಂಗಳೂರು: ಕಾಂಗ್ರೆಸ್‌ನ ಶ್ರೀಮಂತ ಶಾಸಕರಲ್ಲಿ ಒಬ್ಬರಾಗಿರುವ 300 ಕೊಟಿ. ರೂ.ಗೂ ಅಧಿಕ ಸಂಪತ್ತು ಹೊಂದಿರುವ ಬಾಗೇಪಲ್ಲಿಯ ಶಾಸಕ ಸುಬ್ಬಾರೆಡ್ಡಿಯವರ ಆಯ್ಕೆಯನ್ನು ಅಸಿಂಧುಗೊಳಿಸಿ ಹೈಕೋರ್ಟ್‌ ನಿನ್ನೆ ಮಹತ್ವದ ಆದೇಶ ಹೊರಡಿಸಿದೆ. ನಾಮಪತ್ರ ಸಲ್ಲಿಕೆ ವೇಳೆ ಸಂಪೂರ್ಣ ಆಸ್ತಿ ಘೋಷಣೆ ಮಾಡಿಲ್ಲ, ಕ್ರಿಮಿನಲ್ ಕೇಸ್‌ಗಳ ಮಾಹಿತಿಯನ್ನು ಮರೆಮಾಚಿದ್ದಾರೆ ಎಂದು ಬಿಜೆಪಿ ಪರಾಜಿತ ಅಭ್ಯರ್ಥಿ ಮುನಿರಾಜು 2023 ಜೂನ್ 24ರಂದು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ವೇಳೆ ಆಸ್ತಿ ಮಾಹಿತಿಯನ್ನು ಉಲ್ಲಂಘನೆ ಮಾಡಿದ್ದು ದೃಢಪಟ್ಟ

ಜಿಎಸ್‌ಟಿ ವಂಚಿಸಿದ್ದಕ್ಕೆ ಸುಬ್ಬಾರೆಡ್ಡಿ ಶಾಸಕ ಸ್ಥಾನ ಅಸಿಂಧು Read More »

ಪವಿತ್ರಾ ಗೌಡ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ A1 ಆರೋಪಿ ಪವಿತ್ರಾ ಗೌಡ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ತನ್ನ ಪುತ್ರಿಗೆ ಪರೀಕ್ಷೆ ಇರುವ ಹಿನ್ನೆಲೆ ತನಗೆ ಮಧ್ಯಂತರ ಜಾಮೀನು ನೀಡುವಂತೆ ಪವಿತ್ರಾ ಕೋರ್ಟ್‌ಗೆ ಜಾಮೀನಿಗಾಗಿ ಅರ್ಜಿ ಸಲ್ಲಿಕೆ ಮಾಡಿದ್ದರು. ಆದರೆ ಅವರ ಮನವಿಯನ್ನು ಕೋರ್ಟ್ ತಿರಸ್ಕರಿಸಿದೆ. ಆ ಮೂಲಕ ಜಾಮೀನಿಗೆ ಸಂಬಂಧಿಸಿದ ಹಾಗೆ ಪವಿತ್ರಾ ಗೌಡಗೆ ಮತ್ತೆ ನಿರಾಸೆಯಾಗಿದೆ. ಮಗಳಿಗೆ ಪರೀಕ್ಷೆ ಸಮೀಪಿಸುತ್ತಿರುವ ಹಿನ್ನೆಲೆ ತಮಗೆ 25 ದಿನಗಳ ಮಧ್ಯಂತರ ಜಾಮೀನು ನೀಡುವಂತೆ ಜಾಮೀನು ಅರ್ಜಿಯಲ್ಲಿ

ಪವಿತ್ರಾ ಗೌಡ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್ Read More »

ಚಿನ್ನುಪಾಪು‌ ಆತ್ಮಹತ್ಯೆಯ ಬೆನ್ನಲ್ಲೇ ಸ್ನೇಹಿತ ಸಂದೇಶ್ ಸಹ ಆತ್ಮಹತ್ಯೆ

ಕಾಸರಗೋಡು: ಕೆಲ ದಿನಗಳ ಹಿಂದಷ್ಟೇ ಜಿಲ್ಲೆಯ ಅಡೂರು ಮೂಲದ ಸೋಷಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಖ್ಯಾತಿಯ ರೇಷ್ಮಾ ಎಂಬಾಕೆ ಉಳಿಯತ್ತಡ್ಕದ ತನ್ನ ಬಾಡಿಗೆ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ಘಟನೆಯ ಬೆನ್ನಲ್ಲೇ ಆಕೆಯ ಸ್ನೇಹಿತ ಸಂದೇಶ್ ಸಹ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಗಂಡನಿಂದ ಬೇರ್ಪಟ್ಟ ಬಳಿಕ ತನ್ನ ಸ್ನೇಹಿತ ಉಳಿಯತ್ತಡ್ಕದ ಸಂದೇಶ್ ಎಂಬಾತನ ಜೊತೆಗೆ ವಾಸವಿದ್ದಳು. ಇದೀಗ ಸಂದೇಶ್ ಸಹ ಆತ್ಮಹತ್ಯೆಗೆ ಶರಣಾಗಿದ್ದಾನೆ. ಉಳಿಯತ್ತಡ್ಕದ ಮನ್ನಿಪ್ಪಾಡಿಯಲ್ಲಿನ ತನ್ನ ಮನೆಯಲ್ಲಿ ಆತ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ರೇಷ್ಮಾ

ಚಿನ್ನುಪಾಪು‌ ಆತ್ಮಹತ್ಯೆಯ ಬೆನ್ನಲ್ಲೇ ಸ್ನೇಹಿತ ಸಂದೇಶ್ ಸಹ ಆತ್ಮಹತ್ಯೆ Read More »

ಹತ್ತನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

ಚಿತ್ರದುರ್ಗ: ನಗರದ ವಸತಿ ಶಾಲೆಯೊಂದರ ಎಸ್‌ಎಸ್‌ಎಲ್‌ಸಿ ‌ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಚಿತ್ರದುರ್ಗದ ಕರಿಯಣ್ಣನಹಳ್ಳಿ ನಿವಾಸಿ, ಭರಮಸಾಗರದ ‌ಖಾಸಗಿ ವಸತಿ ಶಾಲಾ ವಿದ್ಯಾರ್ಥಿ ಕೊಟ್ರೇಶ್ ಎಂಬವನೇ‌ ಮೃತ ವಿದ್ಯಾರ್ಥಿ. ಈತ ಶಾಲಾ ಕಟ್ಟಡದ ಮೂರನೇ ಮಹಡಿಯಿಂದ ಕೆಳಕ್ಕೆ ಹಾರಿ ಆತ್ಮಹತ್ಯೆಗೆ ಶರಣಾಗಿರುವುದಾಗಿದೆ. ಯಾವ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನುವ ಕಾರಣ ತಿಳಿದು ಬಂದಿಲ್ಲ. ಈತ ಕಟ್ಟಡದಿಂದ ಜಿಗಿಯುವ ದೃಶ್ಯ ಸಿಸಿಟಿವಿಯಲ್ಲಿ ‌ಸೆರೆಯಾಗಿದೆ. ಪರಮ ಸಾಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಹತ್ತನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ Read More »

ಕರಾವಳಿಗೆ ಕೋಮುವಾದದ ಪಟ್ಟಿ ಕಟ್ಟಿದ ಪ್ರಿಯಾಂಕ್ ಖರ್ಗೆಗೆ ತಿರುಗೇಟು ಕೊಟ್ಟ ಸಿ.ಟಿ. ರವಿ

ಬೆಂಗಳೂರು: ಕರಾವಳಿ ಭಾಗದಲ್ಲಿ ಕೋಮುವಾದ ಹೆಚ್ಚಾಗಿರುವ ಕಾರಣ ಆ ಭಾಗದಲ್ಲಿ ಐಟಿಬಿಟಿ ಕಂಪನಿಗಳು ಹೂಡಿಕೆ ಮಾಡಲು ಭಯಪಡುತ್ತಿವೆ ಎಂಬ ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಆರೋಪಕ್ಕೆ ಎಂಎಲ್‌ಸಿ ಸಿ.ಟಿ. ರವಿ ಅವರು ತಿರುಗೇಟು ‌ನೀಡಿದ್ದಾರೆ. ಅವರ ಆರೋಪಕ್ಕೆ ‌ಸಾಮಾಜಿಕ ಜಾಲತಾಣದಲ್ಲಿ ತಿರುಗೇಟು ನೀಡಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ಅವರು ಕರಾವಳಿಯ ಕುರಿತು ಮಾತನಾಡುತ್ತಿರುವುದು ನಿಜಕ್ಕೂ ಹಾಸ್ಯಾಸ್ಪದ ವಿಚಾರ. ಕರ್ನಾಟಕದ ಅತ್ಯಂತ ಅಭಿವೃದ್ಧಿ ಹೊಂದಿದ ಪ್ರದೇಶವಾದ ಕರಾವಳಿಯ ಕುರಿತು ಟೀಕೆ ಮಾಡುವ ಮುನ್ನ, ಪ್ರಿಯಾಂಕ್ ಖರ್ಗೆಯವರು ಆರು ದಶಕಗಳಿಂದ

ಕರಾವಳಿಗೆ ಕೋಮುವಾದದ ಪಟ್ಟಿ ಕಟ್ಟಿದ ಪ್ರಿಯಾಂಕ್ ಖರ್ಗೆಗೆ ತಿರುಗೇಟು ಕೊಟ್ಟ ಸಿ.ಟಿ. ರವಿ Read More »

error: Content is protected !!
Scroll to Top