ಕುಪ್ವಾರದಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ ಭದ್ರತಾ ಪಡೆ
ನವದೆಹಲಿ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದ ಕುಪ್ವಾರದ ಗಡಿ ನಿಯಂತ್ರಣ ರೇಖೆಯ ಬಳಿ ಒಳನುಸುಳಲು ಪ್ರಯತ್ನ ನಡೆಸುತ್ತಿದ್ದ ಇಬ್ಬರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿದ್ದಾರೆ. ಸೋಮವಾರ ರಾತ್ರಿ ಕುಪ್ವಾರದ ಗಡಿ ನಿಯಂತ್ರಣಾ ಕೇಂದ್ರದ ಬಳಿ ಅನುಮಾನಾಸ್ಪದ ಚಟುವಟಿಕೆಗಳನ್ನು ಗಮನಿಸಿದ ಭದ್ರತಾ ಪಡೆ ದಾಳಿ ನಡೆಸಿದ್ದು, ಈ ವೇಳೆ ಗುಂಡಿನ ಚಕಮಕಿ ನಡೆದಿದೆ. ಗಡಿ ಭಾಗದಲ್ಲಿ ಒಳ ನುಸುಳುವಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇಲೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ.
ಕುಪ್ವಾರದಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ ಭದ್ರತಾ ಪಡೆ Read More »










