ಸುದ್ದಿ

ಸೇನಾ ದಂಡನಾಯಕನನ್ನು ಕಿತ್ತು ಹಾಕಿದ ಟ್ರಂಪ್‌

ಯುದ್ಧದ ನಡುವೆ ಅಚ್ಚರಿಯ ನಿರ್ಧಾರ ವಾಷಿಂಗ್ಟನ್‌: ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಸೇನಾ ಮುಖ್ಯಸ್ಥ ಜನರಲ್ ರಾಂಡಿ ಜಾರ್ಜ್ ಅವರಿಗೆ ತಕ್ಷಣವೇ ರಾಜೀನಾಮೆ ನೀಡುವಂತೆ ಸೂಚಿಸಿದ್ದಾರೆ. ಇರಾನ್‌ ವಿರುದ್ಧದ ಯುದ್ಧದಲ್ಲಿ ಟ್ರಂಪ್‌ ಸರ್ಕಾರ ಕೈಗೊಂಡ ಈ ನಿರ್ಧಾರ ಅನೇಕ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಜನರಲ್ ರಾಂಡಿ ಜಾರ್ಜ್ ಅವರು 2023 ರಲ್ಲಿ ಸೇನಾ ಮುಖ್ಯಸ್ಥರಾಗಿ ನೇಮಕಗೊಂಡಿದ್ದರು. ಅವರ ಅವಧಿಯು 2027ರವರೆಗೆ ಇತ್ತು. ಪೀಟ್ ಹೆಗ್ಸೆತ್ ಅವರು ಜನರಲ್ ರಾಂಡಿ ಜಾರ್ಜ್ ನಾಯಕತ್ವದ ಮೇಲೆ ನಂಬಿಕೆ ಮತ್ತು ವಿಶ್ವಾಸವನ್ನು […]

ಸೇನಾ ದಂಡನಾಯಕನನ್ನು ಕಿತ್ತು ಹಾಕಿದ ಟ್ರಂಪ್‌ Read More »

ಬಾರ್‌ನಲ್ಲಿ ಜಗಳ : ಕೇಸ್‌ ದಾಖಲು

ಬೆಳ್ತಂಗಡಿ : ಕೊಕ್ಕಡ ಬಾರ್‌ನಲ್ಲಿ ಮದ್ಯ ಸೇವಿಸುವ ಸಮಯದಲ್ಲಿ ಹಣಕಾಸಿನ ವಿಚಾರದಲ್ಲಿ ನಾಲ್ಕು ಮಂದಿ ಹಲ್ಲೆ ಮಾಡಿದ್ದು, ಈ ವೇಳೆ ರಕ್ಷಣೆ ಮಾಡಲು ಬಂದ ಮತ್ತೊಬ್ಬನ ಮೇಲೂ ಹಲ್ಲೆ ಮಾಡಿದ ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಕೊಕ್ಕಡ ಸಾಲಿಯಾನ್ ಬಾರ್ & ರೆಸ್ಟೋರೆಂಟ್‌ನಲ್ಲಿ ಮಾ.29ರಂದು ರಾತ್ರಿ 9 ಗಂಟೆಗೆ ಕೊಕ್ಕಡ ಗ್ರಾಮದ ಹೊಸ ಮನೆ ನಿವಾಸಿ ಅಕ್ಷಯ್(31) ಎಂಬವರು ಮದ್ಯ ಸೇವಿಸಲು ಕುಳಿತಿರುವ ಸಮಯದಲ್ಲಿ ಯತೀಶ್ ಎಂಬಾತ

ಬಾರ್‌ನಲ್ಲಿ ಜಗಳ : ಕೇಸ್‌ ದಾಖಲು Read More »

ಪುತ್ತೂರಿನಲ್ಲಿ ʼಮಕ್ಕಳ ಕಲರವʼ ಉಚಿತ ಸಂಸ್ಕಾರ ಬೇಸಿಗೆ ಶಿಬಿರ

ಬೇಸಿಗೆಯಲ್ಲಿ ಪ್ರಾಣಿಪಕ್ಷಿಗಳಿಗೆ ನೀರುಣಿಸಲು ಮಕ್ಕಳಿಗೆ ಗಣೇಶ ಭಟ್ ಕೇರ ಖಂಡಿಗ ಕರೆ ಪುತ್ತೂರು: ಮಕ್ಕಳು ತಮ್ಮ ಪೋಷಕರೊಂದಿಗೆ ಹಸಿದ ಬೀದಿನಾಯಿಗಳಿಗೆ ಹಾಗೂ ಇನ್ನಿತರ ಅಶಕ್ತ ಪ್ರಾಣಿಗಳಿಗೆ ಆಹಾರ ಮತ್ತು ನೀರನ್ನು ಒದಗಿಸಿ ಪ್ರಾಣಿ ದಯೆ ತೋರಬೇಕೆಂದು ಗಣೇಶ ಭಟ್ ಕೇರ ಖಂಡಿಗ ಹೇಳಿದರು. ದೇವಾಲಯ ಸಂವರ್ಧನಾ ಸಮಿತಿ, ಪುತ್ತೂರಿನ ಹಿಂದೂ ಧಾರ್ಮಿಕ ಶಿಕ್ಷಣ ಪ್ರಕಲ್ಪ ವತಿಯಿಂದ ಪಾಂಗಳಾಯಿ ಅರಸು ಮುಂಡಿತ್ತಾಯ ದೈವಸ್ಥಾನದ ವಠಾರದಲ್ಲಿ ನಡೆದ ಮೊದಲ ದಿನದ ‘ಮಕ್ಕಳ ಕಲರವ’ ಬೇಸಿಗೆ ಶಿಬಿರದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ,

ಪುತ್ತೂರಿನಲ್ಲಿ ʼಮಕ್ಕಳ ಕಲರವʼ ಉಚಿತ ಸಂಸ್ಕಾರ ಬೇಸಿಗೆ ಶಿಬಿರ Read More »

ಬೈಕ್‌ಗೆ ಲಾರಿ ಡಿಕ್ಕಿ: ಯುವಕನಿಗೆ ಗಂಭೀರ ಗಾಯ

ಮಂಗಳೂರು : ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕಂಬಳಪದವು ಎಂಬಲ್ಲಿ ಗುರುವಾರ ಸಂಜೆ ಲಾರಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ 23 ವರ್ಷದ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾರೆ. ಗಾಯಗೊಂಡ ಯುವಕನನ್ನು ನಡುಪದವು ನಿವಾಸಿ ಬೇಬಿ ಎಂಬವರ ಮಗ ಸುಶಾಂತ್ (23) ಎಂದು ಗುರುತಿಸಲಾಗಿದೆ. ಡಿಕ್ಕಿಯಾದ ರಭಸಕ್ಕೆ ಸುಶಾಂತ್ ರಸ್ತೆಗೆ ಎಸೆಯಲ್ಪಟ್ಟದ್ದು, ಈ ವೇಳೆ ತಲೆಗೆ ತೀವ್ರ ಗಾಯಗಳಾಗಿದೆ. ತಕ್ಷಣ ಅವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆಯನ್ನು ಹಿಟ್‌ ಅಂಡ್‌ ರನ್‌ ಪ್ರಕರಣವೆಂದು

ಬೈಕ್‌ಗೆ ಲಾರಿ ಡಿಕ್ಕಿ: ಯುವಕನಿಗೆ ಗಂಭೀರ ಗಾಯ Read More »

ಹಾರ್ಮುಜ್‌ ಜಲಸಂಧಿಯಲ್ಲಿ ಭಾರತದ ಹಡಗುಗಳಿಗೆ ತಡೆಯಿಲ್ಲ : ಇರಾನ್‌ ಭರವಸೆ

ನಮ್ಮ ಭಾರತೀಯ ಸ್ನೇಹಿತರು ಚಿಂತಿಸುವ ಅಗತ್ಯವಿಲ್ಲ ಎಂದ ಇರಾನ್‌ ಟೆಹ್ರಾನ್ : ಹಾರ್ಮುಜ್‌ ಜಲಸಂಧಿಯ ಬಗ್ಗೆ ನಮ್ಮ ಭಾರತೀಯ ಸ್ನೇಹಿತರು ಚಿಂತಿಸುವ ಅಗತ್ಯವಿಲ್ಲ ಎಂದು ಇರಾನ್‌ ಭರವಸೆ ನೀಡಿದೆ. ಇರಾನ್‌ ಮೇಲೆ ಇಸ್ರೇಲ್‌ ಮತ್ತು ಅಮೆರಿಕ ಜಂಟಿ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಅಸ್ತವ್ಯಸ್ತಗೊಂಡಿರುವ ಪ್ರಮುಖ ಹಡಗು ಮಾರ್ಗವಾದ ಹಾರ್ಮುಜ್‌ ಜಲಸಂಧಿ ಬಗ್ಗೆ ಪ್ರತಿಕ್ರಿಯಿಸಿ, ನಮ್ಮ ಭಾರತೀಯ ಸ್ನೇಹಿತರು ಸುರಕ್ಷಿತ ಕೈಗಳಲ್ಲಿದ್ದಾರೆ. ಅವರು ಚಿಂತಿಸುವ ಅಗತ್ಯವಿಲ್ಲ ಎಂದು ಇರಾನ್‌ ಸ್ಪಷ್ಟಪಡಿಸಿದೆ. ‘ನಮ್ಮ ಭಾರತೀಯ ಸ್ನೇಹಿತರು ಸುರಕ್ಷಿತ ಕೈಗಳಲ್ಲಿದ್ದಾರೆ. ಚಿಂತಿಸಬೇಡಿ’

ಹಾರ್ಮುಜ್‌ ಜಲಸಂಧಿಯಲ್ಲಿ ಭಾರತದ ಹಡಗುಗಳಿಗೆ ತಡೆಯಿಲ್ಲ : ಇರಾನ್‌ ಭರವಸೆ Read More »

ಸುದೀಪ್‌ ರೈ ಸಾವಿಗೆ ಮನೆಯವರ ಕಿರುಕುಳ ಕಾರಣ : ಪತ್ನಿ ಆರೋಪ

ಹನಿಟ್ರ್ಯಾಪ್ ಆರೋಪ ಸುಳ್ಳು ಎಂದ ಸೌಮ್ಯಾ ಶೆಟ್ಟಿ ಉಡುಪಿ: ನೆಲ್ಯಾಡಿ ಮೂಲದ ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸುದೀಪ್ ರೈ ಅವರ ಪತ್ನಿ ಸೌಮ್ಯ ಶೆಟ್ಟಿ ಮಾಧ್ಯಮಗಳ ಮುಂದೆ ಬಂದು ತಮ್ಮ ವಿರುದ್ಧ ಕೇಳಿಬರುತ್ತಿರುವ ಆರೋಪಗಳಿಗೆ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗೋಷ್ಠಿ ನಡೆಸಿದ ಸೌಮ್ಯ ಶೆಟ್ಟಿ, ನನ್ನ ವಿರುದ್ಧ ಕೇಳಿಬರುತ್ತಿರುವ ಹನಿಟ್ರ್ಯಾಪ್ ಆರೋಪಗಳು ಸಂಪೂರ್ಣ ಸುಳ್ಳು ಹಾಗೂ ನಿರಾಧಾರ. ನನ್ನ ವ್ಯಕ್ತಿತ್ವ ತೇಜೋವಧೆ ಮಾಡುವ ಉದ್ದೇಶದಿಂದ ಹೀಗೆ ಮಾಡಲಾಗುತ್ತಿದೆ. ಸುದೀಪ್ ತಮ್ಮ ತಂದೆಯ ಮನೆಗೆ ತೆರಳಿದ್ದ

ಸುದೀಪ್‌ ರೈ ಸಾವಿಗೆ ಮನೆಯವರ ಕಿರುಕುಳ ಕಾರಣ : ಪತ್ನಿ ಆರೋಪ Read More »

ಏಳು ನ್ಯಾಯಾಧೀಶರ ಒತ್ತೆಸೆರೆ : ಎನ್‌ಐಎ ತನಿಖೆಗೆ ಸುಪ್ರೀಂ ಕೋರ್ಟ್‌ ಆದೇಶ

ಪಶ್ಚಿಮ ಬಂಗಾಳದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ನಡೆಸುತ್ತಿದ್ದ ನ್ಯಾಯಾಧೀಶರಿಗೆ 10 ತಾಸು ದಿಗ್ಭಂಧನ ನವದೆಹಲಿ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಏ.1ರಂದು ನಡೆದಿದ್ದ ಏಳು ನ್ಯಾಯಾಧೀಶರ ಘೇರಾವ್ ಪ್ರಕರಣದ ತನಿಖೆಯನ್ನು ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ಭಾರತದ ಚುನಾವಣಾ ಆಯೋಗ ಎನ್‌ಐಎಗೆ ವಹಿಸಿದೆ. ಪಶ್ಚಿಮ ಬಂಗಾಳ ಅತ್ಯಂತ ಧ್ರುವೀಕರಣಗೊಂಡಿರುವ ರಾಜ್ಯವಾಗಿದೆ. ನ್ಯಾಯಾಂಗದ ಅಧಿಕಾರಿಗಳನ್ನು ಒತ್ತೆ ಇರಿಸಿಕೊಂಡಿದ್ದು ನ್ಯಾಯಾಂಗದ ಮೇಲೆ ನಡೆದ ವ್ಯವಸ್ಥಿತ ದಾಳಿ. ರಾಜ್ಯದಲ್ಲಿ ಅರಾಜಕತೆಯನ್ನು ಸಹಿಸುವುದಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠ ಅಸಮಾಧಾನ ಹೊರಹಾಕಿ

ಏಳು ನ್ಯಾಯಾಧೀಶರ ಒತ್ತೆಸೆರೆ : ಎನ್‌ಐಎ ತನಿಖೆಗೆ ಸುಪ್ರೀಂ ಕೋರ್ಟ್‌ ಆದೇಶ Read More »

ಪೆಟ್ರೋಕೆಮಿಕಲ್ ಉತ್ಪನ್ನಗಳ ಕಸ್ಟಮ್ಸ್ ಸುಂಕ ಶೂನ್ಯಕ್ಕಿಳಿಸಿದ ಸರ್ಕಾರ

ಪ್ಲಾಸ್ಟಿಕ್, ಪ್ಯಾಕೇಜಿಂಗ್, ಜವಳಿ, ಔಷಧ, ಆಟೋಮೊಬೈಲ್ ಕ್ಷೇತ್ರಗಳಿಗೆ ಅನುಕೂಲ ನವದೆಹಲಿ: ಕೇಂದ್ರ ಸರ್ಕಾರ ಪೆಟ್ರೋಕೆಮಿಕಲ್ ಉತ್ಪನ್ನಗಳ ಮೇಲಿನ ಕಸ್ಟಮ್ಸ್ ಸುಂಕವನ್ನು ಸಂಪೂರ್ಣವಾಗಿ ಮನ್ನಾ ಮಾಡಿದೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದಿಂದ ಉಂಟಾದ ಪೂರೈಕೆ ವ್ಯತ್ಯಯ ಮತ್ತು ಬೆಲೆ ಏರಿಕೆಯನ್ನು ನಿಯಂತ್ರಿಸಲು ಈ ಮಹತ್ವದ ಕ್ರಮ ಕೈಗೊಳ್ಳಲಾಗಿದೆ. ಸರ್ಕಾರ ಆಯ್ದ 40 ಪ್ರಮುಖ ಪೆಟ್ರೋಕೆಮಿಕಲ್ ಉತ್ಪನ್ನಗಳ ಮೇಲೆ ಶೂನ್ಯ ಸುಂಕವನ್ನು ವಿಧಿಸಿದೆ. ಈ ವಿನಾಯಿತಿ ಏಪ್ರಿಲ್‌ 2ರಿಂದ ಜೂನ್‌ 30ರವರೆಗೆ ಜಾರಿಯಲ್ಲಿರುತ್ತದೆ. ಮೆಥನಾಲ್, ಟೊಲ್ಯೂನ್, ಸ್ಟೈರೀನ್, ವಿನೈಲ್ ಕ್ಲೋರೈಡ್ ಮೊನೊಮರ್,

ಪೆಟ್ರೋಕೆಮಿಕಲ್ ಉತ್ಪನ್ನಗಳ ಕಸ್ಟಮ್ಸ್ ಸುಂಕ ಶೂನ್ಯಕ್ಕಿಳಿಸಿದ ಸರ್ಕಾರ Read More »

ಎಲ್‌ಪಿಜಿ, ಪಿಎನ್‌ಜಿ ನಿರಂತರ ಪೂರೈಕೆ : ಮೋದಿ ಸೂಚನೆ

ಜನಸಾಮಾನ್ಯರಿಗೆ ಹೊರೆ, ತೊಂದರೆ ಆಗದಂತೆ ನೋಡಿಕೊಳ್ಳಲು ಸಲಹೆ ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಮತ್ತು ಯುದ್ಧದ ಬಿಕ್ಕಟ್ಟಿನ ನಡುವೆಯೇ ದೇಶದ ಸ್ಥಿತಿಗತಿಗಳನ್ನು ಸಮತೋಲನದಲ್ಲಿಡಲು ಕೇಂದ್ರ ಸರ್ಕಾರ ಕಾರ್ಯಪ್ರವೃತ್ತಗೊಂಡಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬುಧವಾರ ಮಹತ್ವದ ಸಭೆ ನಡೆಸಿದ್ದಾರೆ. ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಬಳಿಕ ಪ್ರಧಾನಿ ಮೋದಿಯವರು ಸಚಿವರೊಂದಿಗೆ ಬುಧವಾರ ಸಭೆ ನಡೆಸಿದ್ದು, ಜನಸಾಮಾನ್ಯರಿಗೆ ಯಾವುದೇ ರೀತಿಯ ಹೊರೆ ಅಥವಾ ತೊಂದರೆ ಆಗದಂತೆ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ವಿವಿಧ ಸಚಿವಾಲಯಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ. ಸಭೆಯಲ್ಲಿ

ಎಲ್‌ಪಿಜಿ, ಪಿಎನ್‌ಜಿ ನಿರಂತರ ಪೂರೈಕೆ : ಮೋದಿ ಸೂಚನೆ Read More »

ಯುದ್ಧದಲ್ಲಿ ಅಮೆರಿಕಕ್ಕೆ ಅಭೂತಪೂರ್ವ ಜಯ : ಟ್ರಂಪ್‌ ಘೋಷಣೆ

ಷರತ್ತುಗಳಿಗೆ ಒಪ್ಪಿಕೊಳ್ಳದಿದ್ದಲ್ಲಿ ಇರಾನ್‌ ಮೇಲಿನ ಆಕ್ರಮಣ ಇನ್ನಷ್ಟು ತೀವ್ರ ವಾಷಿಂಗ್ಟನ್:‌ ಇರಾನ್‌ ಯುದ್ಧದಲ್ಲಿ ಅಮೆರಿಕ ಅಭೂತಪೂರ್ವ ಜಯ ಗಳಿಸಿದ್ದು, ನಮ್ಮ ಉದ್ದೇಶಗಳನ್ನು ಪೂರೈಸಲು ಸಾಕಷ್ಟು ಹತ್ತಿರವಾಗಿದ್ದೇವೆ. ಆದಾಗ್ಯೂ, ಇರಾನ್‌ನೊಂದಿಗಿನ ಮಾತುಕತೆಗಳು ವಿಫಲವಾದಲ್ಲಿ ಆಕ್ರಮಣಕಾರಿ ದಾಳಿಗೆ ಅಮೆರಿಕ ಸಜ್ಜಾಗಿದೆ ಎಂದು ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಎಚ್ಚರಿಕೆ ನೀಡಿದ್ದಾರೆ. ಹೊರ್ಮುಜ್‌ ಜಲಸಂಧಿಯಾಗಲಿ ಅವರ ತೈಲವಾಗಲಿ ನಮಗೆ ಬೇಡ ಎಂದು ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆಯ ನಡುವೆ ಟ್ರಂಪ್‌ ಹೇಳಿದ್ದಾರೆ. ಕಳೆದ ಒಂದು ತಿಂಗಳಿನಿಂದ ಇರಾನ್‌ ಮೇಲೆ ಅಮೆರಿಕ ನಡೆಸುತ್ತಿರುವ ಆಪರೇಷನ್‌ ಎಪಿಕ್‌ ಫ್ಯೂರಿಯಲ್ಲಿ

ಯುದ್ಧದಲ್ಲಿ ಅಮೆರಿಕಕ್ಕೆ ಅಭೂತಪೂರ್ವ ಜಯ : ಟ್ರಂಪ್‌ ಘೋಷಣೆ Read More »

error: Content is protected !!
Scroll to Top