ಸುದ್ದಿ

ತೆನ್ಕಾಯಿ ಮಲೆ ಕಿರುಚಿತ್ರದ ಹಾಡು, ಟ್ರೈಲರ್ ಬಿಡುಗಡೆ

ಪುತ್ತೂರು: ಅಕ್ಟೋಬರ್ 24ರಂದು ತೆರೆ ಕಾಣಲಿರುವ ಕನ್ನಡ ಕಿರುಚಿತ್ರ ತಿನ್ಕಾಯಿಮಲೆಯ ಹಾಡು ಮತ್ತು ಟ್ರೈಲರ್ ಸೆ.12ರಂದು ಪುತ್ತೂರಿನ ಜಿ.ಎಲ್. ಮಾಲ್ ನಲ್ಲಿ ಬಿಡುಗಡೆಗೊಂಡಿದೆ‌. ಕಾರ್ಯಕ್ರಮದಲ್ಲಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ವಿಜಯ ಸಾಮ್ರಾಟ್ ಸ್ಥಾಪಕ ಅಧ್ಯಕ್ಷ ಸಹಜ್ ರೈ ಬಳಜ್ಜ, ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ಮನ್ಮಥ ಶೆಟ್ಟಿ, ಧರ್ಮ ಚಾವಡಿ ಚಿತ್ರದ ನಿರ್ಮಾಪಕ ಜಗದೀಶ್ ಅಮೀನ್ ನಡುಬೈಲು, ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಪುತ್ತೂರು ವಲಯದ ಅಧ್ಯಕ್ಷ ರಘು ಶೆಟ್ಟಿ, ಸುಶಾಂತ್ ಮರೀಲು ಹಾಡು ಮತ್ತು […]

ತೆನ್ಕಾಯಿ ಮಲೆ ಕಿರುಚಿತ್ರದ ಹಾಡು, ಟ್ರೈಲರ್ ಬಿಡುಗಡೆ Read More »

ಹಾಸನ ದುರಂತ: ಸಂತಾಪ ಸೂಚಿಸಿದ ಪ್ರಧಾನಿ ಮೋದಿ, ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ಧನ ಘೋಷಣೆ

ನವದೆಹಲಿ: ಹಾಸನ ತಾಲೂಕಿನ ಮೊಸಳೆಹಳ್ಳಿ ಸಮೀಪ ಗಣೇಶೋತ್ಸವ ಮೆರವಣಿಗೆಯ ಸಂದರ್ಭದಲ್ಲಿ ನಡೆದ ಭೀಕರ ಅಪಘಾತದಲ್ಲಿ ಮಡಿದವರಿಗೆ ಪ್ರಧಾನಿ ಮೋದಿ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ಪರಿಹಾರ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕರ್ನಾಟಕದ ಹಾಸನದಲ್ಲಿ ನಡೆದ ದುರಂತ ಹೃದಯವಿದ್ರಾವಕ. ಮೃತರ ಕುಟುಂಬಗಳ ನೋವಿನಲ್ಲಿ ನಾನು ಭಾಗಿಯಾಗಿದ್ದೇನೆ. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಬರೆದಿದ್ದಾರೆ. ಪಿಎಂ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರಿಗೆ ತಲಾ 2 ಲಕ್ಷ ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ಪರಿಹಾರ

ಹಾಸನ ದುರಂತ: ಸಂತಾಪ ಸೂಚಿಸಿದ ಪ್ರಧಾನಿ ಮೋದಿ, ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ಧನ ಘೋಷಣೆ Read More »

ಹಬ್ಬ, ಉತ್ಸವಗಳಿಗೆ ಪೊಲೀಸ್ ಇಲಾಖೆಯಿಂದ ಸಮಸ್ಯೆ ಆಗಿಲ್ಲ: ಸುಧೀರ್ ಕುಮಾರ್ ರೆಡ್ಡಿ

ಮಂಗಳೂರು: ಸಾರ್ವಜನಿಕವಾಗಿ ಆಚರಣೆ ಮಾಡುವ ಯಾವುದೇ ಹಬ್ಬಗಳಿಗೆ, ಮೆರವಣಿಗೆಗಳಿಗೆ ಪೊಲೀಸ್ ಇಲಾಖೆ ಅಡ್ಡಿ ಮಾಡಿಲ್ಲ. ಬೇರೆಯವರಿಗೆ ತೊಂದರೆಯಾಗಬಾರದು ಎನ್ನುವ ಉದ್ದೇಶದಿಂದ ‘ಶಬ್ದದ ಮಿತಿ’ ನಿಗದಿ ಮಾಡಲಾಗಿದ್ದು, ಅದನ್ನು ಅನುಸರಿಸಿಕೊಂಡು ಕಾರ್ಯಕ್ರಮ ನಡೆಸುವಂತೆ ಸೂಚಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಕಮಿಷನರೇಟ್ ವ್ಯಾಪ್ತಿಯಲ್ಲಿ ಹಲವಾರು ಗಣೇಶೋತ್ಸವ ಮೆರವಣಿಗೆಗಳು ತಂಡ ರಾತ್ರಿಯ ವರೆಗೆ ನಡೆದಿದ್ದು, ಅಲ್ಲಿ ಯಾವ ಸಮಸ್ಯೆಯೂ ಆಗಿಲ್ಲ. ಪೊಲೀಸರು ಸಮಸ್ಯೆ ಮಾಡಿಲ್ಲ. ಆದರೆ ಶಬ್ದ ಮಿತಿಯನ್ನು ಮಾತ್ರ ಹಾಕಲಾಗಿತ್ತು ಎಂದು ತಿಳಿಸಿದ್ದಾರೆ.

ಹಬ್ಬ, ಉತ್ಸವಗಳಿಗೆ ಪೊಲೀಸ್ ಇಲಾಖೆಯಿಂದ ಸಮಸ್ಯೆ ಆಗಿಲ್ಲ: ಸುಧೀರ್ ಕುಮಾರ್ ರೆಡ್ಡಿ Read More »

ಇಂದು ಮಣಿಪುರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

2023ರಿಂದೀಚೆಗೆ ಹಿಂಸಾಚಾರದಿಂದ ನಲುಗಿರುವ ಮಣಿಪುರ ನವದೆಹಲಿ : 2023ರಿಂದೀಚೆಗೆ ಮೈತಿ ಮತ್ತು ಕುಕಿ ಸಮುದಾಯಗಳ ನಡುವಿನ ಜನಾಂಗೀಯ ಹಿಂಸಾಚಾರದಿಂದ ನಲುಗಿರುವ ಮಣಿಪುರಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡುತ್ತಿದ್ದಾರೆ. ಹಿಂಸಾಚಾರದಲ್ಲಿ 260ಕ್ಕೂ ಹೆಚ್ಚು ಜನರ ಹತ್ಯೆಯಾಗಿದೆ. ಸಾಮೂಹಿಕ ಅತ್ಯಾಚಾರಗಳು ನಡೆದಿವೆ. ಜನಾಂಗೀಯ ಹಿಂಸಾಚರಕ್ಕೆ ಕಣಿವೆ ರಾಜ್ಯ ಮಣಿಪುರ ಸಂಪೂರ್ಣ ನಲುಗಿಹೋಗಿದೆ. ಇದರ ನಡುವೆ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಮಣಿಪುರಕ್ಕೆ ಇಂದು ಭೇಟಿ ನೀಡುತ್ತಿದ್ದಾರೆ. ಆ ಮೂಲಕ ಮಣಿಪುರಕ್ಕೆ ಪ್ರಧಾನಿ ಮೋದಿ ಏಕೆ

ಇಂದು ಮಣಿಪುರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ Read More »

ಬಾಲಿವುಡ್‌ ನಟಿ ದಿಶಾ ಪಟಾನಿ ಮನೆಗೆ ಗುಂಡು ಹಾರಾಟ

ಬೈಕ್‌ನಲ್ಲಿ ಬಂದು 4 ಸುತ್ತು ಗುಂಡು ಹಾರಿಸಿ ಪಲಾಯನ ಮಾಡಿರುವ ದುಷ್ಕರ್ಮಿಗಳು ಮುಂಬಯಿ : ಬಾಲಿವುಡ್ ನಟಿ ದಿಶಾ ಪಟಾನಿ ಅವರ ಮನೆಯ ಮೇಲೆ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ಬೆಳಗಿನ ಜಾವ ಉತ್ತರ ಪ್ರದೇಶದ ಬರೇಲಿಯಲ್ಲಿರುವ ಮನೆ ಮುಂದೆ 3.30ರ ಸುಮಾರಿಗೆ, ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತ ದುಷ್ಕರ್ಮಿಗಳು ದಿಶಾ ಪಟಾನಿ ಅವರ ಮನೆಯ ಮೇಲೆ ಮೂರರಿಂದ ನಾಲ್ಕು ಸುತ್ತು ಗುಂಡು ಹಾರಿಸಿದ್ದಾರೆ. ಈ ಘಟನೆಯು ಪ್ರದೇಶದಲ್ಲಿ ಕೋಲಾಹಲ ಸೃಷ್ಟಿಸಿದ್ದು ಮಾಹಿತಿ ಪಡೆದ

ಬಾಲಿವುಡ್‌ ನಟಿ ದಿಶಾ ಪಟಾನಿ ಮನೆಗೆ ಗುಂಡು ಹಾರಾಟ Read More »

ಹಾಸನ ದುರಂತ : ಅಪಘಾತಕ್ಕೆ ಚಾಲಕನ ನಿರ್ಲಕ್ಷ್ಯವೇ ಕಾರಣ

ಸಾವಿನ ಸಂಖ್ಯೆ 9ಕ್ಕೇರಿಕೆ : ಮೃತರಲ್ಲಿ ಇಂಜಿನಿಯರಿಂಗ್‌ ವಿದ್ಯಾರ್ಥಿಗಳು ಅಧಿಕ ಹಾಸನ : ಗಣೇಶ ಮೆರವಣಿಗೆ ವೇಳೆ ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 373ರಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆ ಆಗಿದೆ. 17ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ದುರಂತಕ್ಕೆ ಕ್ಯಾಂಟರ್ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ದಕ್ಷಿಣ ವಲಯ ಐಜಿಪಿ ಬೋರಲಿಂಗಯ್ಯ ಹೇಳಿದ್ದಾರೆ. ಮೃತರ ಪೈಕಿ ಬಹುತೇಕರು ಇಂಜಿನಿಯರಿಂಗ್‌ ವಿದ್ಯಾರ್ಥಿಗಳಾಗಿದ್ದಾರೆ.

ಹಾಸನ ದುರಂತ : ಅಪಘಾತಕ್ಕೆ ಚಾಲಕನ ನಿರ್ಲಕ್ಷ್ಯವೇ ಕಾರಣ Read More »

ಮಂಗಳೂರು : ಬಾಲಕಿಯ ಮೇಲೆ ಅತ್ಯಾಚಾರಗೈದು ಕೊಲೆಗೈದ ಅಪರಾಧಿಗೆ ಮರಣ ದಂಡನೆ

ಕಳೆದ ವರ್ಷ ಪಣಂಬೂರಿನಲ್ಲಿ ನಡೆದಿದ್ದ ಬರ್ಬರ ಘಟನೆ ಮಂಗಳೂರು : ಅಪ್ರಾಪ್ತ ವಯಸ್ಸಿನ ಬಾಲಕಿ ಲೈಂಗಿಕ ದೌರ್ಜನ್ಯ ಎಸಗಿ, ಭೀಕರವಾಗಿ ಹಲ್ಲೆ ನಡೆಸಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದ ಅಪರಾಧಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್‌ಟಿಎಫ್‌ಸಿ-2 (ಪೊಕ್ಸೊ) ನ್ಯಾಯಾಲಯವು ಶುಕ್ರವಾರ ಮರಣದಂಡನೆ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಬೆಳಗಾವಿ ಸವದತ್ತಿ ತಾಲೂಕು ಹಂಚಿನಾಳ ಗ್ರಾಮ ಮಾದರ ನಿವಾಸಿ ಫಕೀರಪ್ಪ ಹಣಮಪ್ಪ ಮಾದರ (58) ಶಿಕ್ಷೆಗೊಳಗಾದ ಅಪರಾಧಿ. ಅಪ್ರಾಪ್ತ ಬಾಲಕಿ ಕೂಡ ಮೂಲತಃ ಬೆಳಗಾವಿ ಜಿಲ್ಲೆಯ ಚುಂಚನೂರು

ಮಂಗಳೂರು : ಬಾಲಕಿಯ ಮೇಲೆ ಅತ್ಯಾಚಾರಗೈದು ಕೊಲೆಗೈದ ಅಪರಾಧಿಗೆ ಮರಣ ದಂಡನೆ Read More »

ಸುಶೀಲಾ ಕರ್ಕಿ ನೇಪಾಳದ ಹೊಸ ಪ್ರಧಾನಮಂತ್ರಿ

ದಂಗೆಯ ಬಳಿಕ ಮಧ್ಯಂತರ ಸರ್ಕಾರ ರಚನೆ ಕಾಠ್ಮಂಡು : ನೇಪಾಳದ ಮಾಜಿ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ ಅವರು ಮಧ್ಯಂತರ ಪ್ರಧಾನಿಯಾಗಿ ಶುಕ್ರವಾರ ರಾತ್ರಿ ಪ್ರಮಾಣ ವಚನ ಸ್ವೀಕರಿಸಿದರು. ಈ ಮೂಲಕ ಅವರು ನೇಪಾಳ ದೇಶದ ಮೊದಲ ಮಹಿಳಾ ಪ್ರಧಾನಿಯೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಪ್ರಧಾನಿ ಹುದ್ದೆಗೆ ಸ್ಪರ್ಧಿಗಳೆಂದು ಪರಿಗಣಿಸಲಾಗಿದ್ದ ಕುಲ್ಮನ್ ಘಿಸಿಂಗ್ ಮತ್ತು ಸುಡಾನ್ ಗುರುಂಗ್ ಸೇರಿದಂತೆ ಅನೇಕ ಕ್ಯಾಬಿನೆಟ್ ಮಂತ್ರಿಗಳೊಂದಿಗೆ ಅವರು ಪ್ರಮಾಣವಚನ ಸ್ವೀಕರಿಸಿದರು. ದೇಶದ ಜೆನ್- ಝಡ್ ನೇತೃತ್ವದ ತೀವ್ರ ಪ್ರತಿಭಟನೆ ನಂತರ ನೇಪಾಳದ

ಸುಶೀಲಾ ಕರ್ಕಿ ನೇಪಾಳದ ಹೊಸ ಪ್ರಧಾನಮಂತ್ರಿ Read More »

ಕೋಮು ಪ್ರಚೋದನೆ ಪೋಸ್ಟರ್‌ ಹಂಚಿಕೊಂಡ ಆರೋಪ : ಮಹೇಶ್ ವಿಕ್ರಂ ಹೆಗ್ಡೆ ಬಂಧನ

ಸಿದ್ದರಾಮಯ್ಯ ಫೋಟೊ ಬಳಸಿ ಕೋಮು ಪ್ರಚೋದನೆ ಪೋಸ್ಟರ್‌ ಹಂಚಿಕೊಂಡ ಆರೋಪ ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಫೋಟೊ ಬಳಸಿ ಕೋಮು ಪ್ರಚೋದನೆಯ ಪೋಸ್ಟರ್‌ ಹಂಚಿಕೊಂಡ ಆರೋಪದಲ್ಲಿ ಪೋಸ್ಟ್ ಕಾರ್ಡ್ ನ್ಯೂಸ್‌ ಸಂಸ್ಥಾಪಕ ಮಹೇಶ್ ವಿಕ್ರಂ ಹೆಗ್ಡೆ ಅವರನ್ನು ಮೂಡುಬಿದಿರೆಯಲ್ಲಿ ಬಂಧಿಸಲಾಗಿದೆ. ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ಮೂಡಬಿದಿರೆ ಪೊಲೀಸರು ಬಂಧಿಸಿದ್ದಾರೆ. ಮೂಡುಬಿದಿರೆ ಪಿಎಸ್‌ಐ ಕೃಷ್ಣಪ್ಪ ಎಂಬವರ ದೂರಿನಡಿ ಸ್ವಯಂಪ್ರೇರಿತ ಎಫ್ಐಆರ್ ದಾಖಲಿಸಲಾಗಿತ್ತು. ಮಹೇಶ್ ವಿಕ್ರಂ ಹೆಗ್ಡೆ ಅವರನ್ನು ಕೋರ್ಟ್‌ಗೆ ಹಾಜರುಪಡಿಸಿದ್ದು, ಸೋಮವಾರದವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಸಿಎಂ ಸಿದ್ದರಾಮಯ್ಯ ಫೋಟೋವನ್ನು

ಕೋಮು ಪ್ರಚೋದನೆ ಪೋಸ್ಟರ್‌ ಹಂಚಿಕೊಂಡ ಆರೋಪ : ಮಹೇಶ್ ವಿಕ್ರಂ ಹೆಗ್ಡೆ ಬಂಧನ Read More »

ಹಾಸನ : ಗಣಪತಿ ವಿಸರ್ಜನೆ ಮೆರವಣಿಗೆ ಮೇಲೆ ಹರಿದ ಟ್ರಕ್‌; ಮೃತರ ಸಂಖ್ಯೆ 8ಕ್ಕೇರಿಕೆ

ಮೃತರ ಕುಟುಂಬಗಳಿಗೆ ಸರ್ಕಾರದಿಂದ 5 ಲ.ರೂ. ಪರಿಹಾರ; ಗಾಯಾಳುಗಳಿಗೆ ಚಿಕಿತ್ಸೆ ವೆಚ್ಚ ಹಾಸನ : ಗಣಪತಿ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಹಾಸನದಲ್ಲಿ ಸಂಭವಿಸದ ಭೀಕರ ದುರಂತದಲ್ಲಿ ಮೃತಪಟ್ರ ಸಂಖ್ಯ 8ಕ್ಕೇರಿದೆ. ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಯಲ್ಲಿ ಹೋಗುತ್ತಿದ್ದ ಜನರ ಮೇಲೆ ಟ್ರಕ್‌ ಹರಿದು ಈ ದುರಂತ ಸಂಭವಿಸಿದೆ. ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನು ನಾಲ್ವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಗಾಯಗೊಂಡಿರುವವರಿಗೆ ಚಿಕಿತ್ಸೆ ಮುಂದುವರಿದಿದ್ದು, ಕೆಲವರು ಗಂಭೀರವಾಗಿ ಗಾಯಗೊಂಡಿರುವುದರಿಂದ ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ. ಹಾಸನ ತಾಲೂಕಿನ

ಹಾಸನ : ಗಣಪತಿ ವಿಸರ್ಜನೆ ಮೆರವಣಿಗೆ ಮೇಲೆ ಹರಿದ ಟ್ರಕ್‌; ಮೃತರ ಸಂಖ್ಯೆ 8ಕ್ಕೇರಿಕೆ Read More »

error: Content is protected !!
Scroll to Top