ಸುದ್ದಿ

ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆ : ಉತ್ತೇಜನ – 2025 ಕಾರ್ಯಕ್ರಮ

ಉಡುಪಿ: 2024-25 ನೇ ಸಾಲಿನ ಪಬ್ಲಿಕ್ ಪರೀಕ್ಷೆಯಲ್ಲಿ ಅತ್ಯಧಿಕ ಅಂಕವನ್ನು ಗಳಿಸಿದ ಸಂಸ್ಥೆಯ ವಿದ್ಯಾರ್ಥಿಗಳಿಗೆ ಸನ್ಮಾನ ‘ಉತ್ತೇಜನ ‘ ಜ್ಞಾನದ ಸಿರಿಗೆ ಸನ್ಮಾನ ಘೋಷ ವಾಕ್ಯದೊಂದಿಗೆ ಆಯೋಜನೆ ಮಾಡಲಾಗಿದೆ. ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆ ಶೈಕ್ಷಣಿಕ ಸಂಯೋಜಿತ ಸಂಸ್ಥೆ ಹೈಸ್ಕೂಲ್ ವಿಭಾಗದ 2024 – 25ನೇ ಸಾಲಿನ 10ನೇ ತರಗತಿ ಪಬ್ಲಿಕ್ ಪರೀಕ್ಷೆಯಲ್ಲಿ ಸಂಸ್ಥೆಯಲ್ಲಿ ಅತ್ಯಧಿಕ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ‘ಉತ್ತೇಜನ’ ಜ್ಞಾನದ ಸಿರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಿರುವುದಾಗಿದೆ. ಇದೇ ಸಂದರ್ಭದಲ್ಲಿ ಸರಸ್ವತಿ ವಿದ್ಯಾಲಯ ಸಿದ್ದಾಪುರ ಸಂಸ್ಥೆಯ […]

ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆ : ಉತ್ತೇಜನ – 2025 ಕಾರ್ಯಕ್ರಮ Read More »

ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಸಂಭ್ರಮದ ನಾಗರಪಂಚಮಿ

ಸವಣೂರು: ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಸಂಭ್ರಮದ ನಾಗರಪಂಚಮಿಯನ್ನು ಮಂಗಳವಾರ ಆಚರಿಸಲಾಯಿತು.  ಬೆಳಗ್ಗಿನಿಂದಲೇ ಭಕ್ತದಿಗಳು ಸರತಿಸಾಲಿನಲ್ಲಿ ನಿಂತು ಶ್ರೀ ದೇವರಿಗೆ ಹಾಲು, ಸೀಯಾಳ ,ಹಣ್ಣುಕಾಯಿಯನ್ನು ಅರ್ಪಿಸಿದರು. ಬಳಿಕ ಶ್ರೀ ನಾಗದೇವರಿಗೆ ಅಭಿಷೇಕ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರು, ಸದಸ್ಯರು, ಊರ ಭಕ್ತದಿಗಳು ಭಾಗವಹಿಸಿದರು.

ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಸಂಭ್ರಮದ ನಾಗರಪಂಚಮಿ Read More »

ಮಂಗಳೂರು : ಕೋಳಿ ಆಹಾರ ಮಳಿಗೆಯಲ್ಲಿ ಬೆಂಕಿ ಅವಘಡ

ಮಂಗಳೂರು: ನಗರದ ಪಂಪ್‌ವೆಲ್‌ನಲ್ಲಿರುವ ಕೋಳಿ ಆಹಾರ ಮಾರಾಟ ಮಳಿಗೆಯೊಂದರಲ್ಲಿ ಮಂಗಳವಾರ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಅಪಾರ ಹಾನಿ ಉಂಟಾಗಿದೆ. ಪಂಪ್‌ವೆಲ್‌ನಲ್ಲಿರುವ ಭಾರತ್ ಆಗ್ರೋ ಎಂಬ ಮಳಿಗೆಯಲ್ಲಿ ಮಂಗಳವಾರ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿದೆ. ಇದರಿಂದ ಕೋಳಿ ಆಹಾರ ಮತ್ತು ಪೀಠೋಪಕರಣ ಸುಟ್ಟು ಹೋಗಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ಸ್ಥಳಕ್ಕೆ ಆಗಮಿಸಿರುವ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದರು. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹತ್ತಿಕೊಂಡಿದೆ ಎಂದು ತಿಳಿದು ಬಂದಿದೆ.

ಮಂಗಳೂರು : ಕೋಳಿ ಆಹಾರ ಮಳಿಗೆಯಲ್ಲಿ ಬೆಂಕಿ ಅವಘಡ Read More »

ಮೈಸೂರಿನಲ್ಲಿ ವಶಪಡಿಸಿಕೊಂಡದ್ದು ಬರೋಬ್ಬರಿ 390 ಕೋಟಿ. ರೂ. ಡ್ರಗ್ಸ್‌

ಗ್ಯಾರೇಜ್‌ನ ಒಳಗಿತ್ತು ಮಾದಕ ವಸ್ತು ತಯಾರಿಸುವ ಕಾರ್ಖಾನೆ ಮುಂಬೈ: ಮುಂಬೈ ಪೊಲೀಸರು ಭಾನುವಾರ ಮೈಸೂರಿನ ಹೊರವಲಯದಲ್ಲಿ ವಶಪಡಿಸಿಕೊಂಡಿರುವ ಮಾದಕವಸ್ತು ಮೌಲ್ಯ ಬರೋಬ್ಬರಿ 390 ಕೋ. ರೂ.. ಭಾರಿ ಪ್ರಮಾಣದ ಡ್ರಗ್ಸ್‌ ವಶ ಪ್ರಕರಣದ ಸಂಪೂರ್ಣ ಚಿತ್ರಣವನ್ನು ದಾಳಿ ನಡೆಸಿದ್ದ ಮುಂಬೈ ಪೊಲೀಸರು ಸೋಮವಾರ ನೀಡಿದ್ದು ಒಟ್ಟು 390 ಕೋಟಿ ರೂ. ಮೌಲ್ಯದ 192 ಕೆ.ಜೆ. ಮೆಫೆಡ್ರೋನ್‌ ಡ್ರಗ್ಸ್‌ ವಶಪಡಿಸಿಕೊಂಡು 8 ಜನರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಉಪ ಪೊಲೀಸ್ ಆಯುಕ್ತರ ದತ್ತಾ ನಲವಾಡೆ,

ಮೈಸೂರಿನಲ್ಲಿ ವಶಪಡಿಸಿಕೊಂಡದ್ದು ಬರೋಬ್ಬರಿ 390 ಕೋಟಿ. ರೂ. ಡ್ರಗ್ಸ್‌ Read More »

ಬಸ್‌ಗೆ ಲಾರಿ ಡಿಕ್ಕಿ : 18 ಕನ್ವರ್‌ ಯಾತ್ರಿಗಳ ದಾರುಣ ಸಾವು

ಕನ್ವರ್‌ ಯಾತ್ರಿಗಳ ಪಾಲಿಗೆ ಕರಾಳ ದಿನವಾದ ಮಂಗಳವಾರ ಜಾರ್ಖಂಡ್‌: ಕನ್ವರ್‌ ಯಾತ್ರಿಗಳು ಪ್ರಯಾಣಿಸುತ್ತಿದ್ದ ಬಸ್ಸಿಗೆ ಗ್ಯಾಸ್‌ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಲಾರಿ ಡಿಕ್ಕಿ ಹೊಡೆದ ಪರಿಣಾಮ 18 ಮಂದಿ ಮೃತಪಟ್ಟಿರುವ ಭೀಕರ ಅಪಘಾತ ಇಂದು ಮುಂಜಾನೆ ಜಾರ್ಖಂಡ್‌ನ ದಿಯೋಘಡ್‌ ಎಂಬಲ್ಲಿ ಸಂಭವಿಸಿದೆ. ದಿಯೋಘಡ್‌ನ ಮೋಹನಪುರ ಪೊಲೀಸ್‌ ಠಾಣೆ ವ್ಯಾಪ್ತಿಯ ಜಮುನಿಯ ಅರಣ್ಯ ಪ್ರದೇಶ ಭಾಗದಲ್ಲಿ ಕನ್ವರ್‌ ಯಾತ್ರಾರ್ಥಿಗಳು ಪ್ರಯಾಣಿಸುತ್ತಿದ್ದ ಮಿನಿಬಸ್‌ಗೆ ಮುಂಜಾನೆ 4.30ರ ವೇಳೆಗೆ ಗ್ಯಾಸ್‌ ಸಿಲಿಂಡರ್‌ಗಳಿದ್ದ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕನಿಷ್ಠ 18 ಜನರು ಸಾವನ್ನಪ್ಪಿದ್ದು,

ಬಸ್‌ಗೆ ಲಾರಿ ಡಿಕ್ಕಿ : 18 ಕನ್ವರ್‌ ಯಾತ್ರಿಗಳ ದಾರುಣ ಸಾವು Read More »

ಸರಿಯಾದ ಸಮಯದಲ್ಲಿ ಸಿಎಂ ಪಟ್ಟಕ್ಕೆ ಕಲ್ಲು ಹೊಡೆದ ಖರ್ಗೆ : ಅಶೋಕ್‌ ವ್ಯಂಗ್ಯ

ಅಕ್ಟೋಬರ್‌ನಲ್ಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಖಚಿತ ಬೆಂಗಳೂರು: ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳಲು ಮಲ್ಲಿಕಾರ್ಜುನ ಖರ್ಗೆ ಪ್ರಯತ್ನಪಡುತ್ತಿದ್ದು, ಸರಿಯಾದ ಸಮಯಕ್ಕೆ ಕಲ್ಲು ಹೊಡೆದಿದ್ದಾರೆಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ವ್ಯಂಗ್ಯವಾಡಿದ್ದಾರೆ. 1999ರಲ್ಲಿ ಸಿಎಂ ಸ್ಥಾನ ಕೈತಪ್ಪಿದ್ದಕ್ಕೆ ಖರ್ಗೆ ಬೇಸರ ವ್ಯಕ್ತಪಡಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅಶೋಕ್‌, ಖರ್ಗೆ ಸರಿಯಾದ ಸಮಯಕ್ಕೆ ಕಲ್ಲು ಹೊಡೆದಿದ್ದಾರೆ. ಸಿಎಂ ಕುರ್ಚಿಯಲ್ಲಿ ಖರ್ಗೆ ಕುಳಿತುಕೊಳ್ಳಲು ಪ್ರಯತ್ನಪಡುತ್ತಿದ್ದಾರೆ. ಎಸ್‌.ಎಂ. ಕೃಷ್ಣ ಅವರು ಸತ್ತ ಮೇಲೆ ಅವರ ಹೆಸರು ಹೇಳುತ್ತಾರೆ. ಎಸ್‌.ಎಂ. ಕೃಷ್ಣ ಸತ್ತ

ಸರಿಯಾದ ಸಮಯದಲ್ಲಿ ಸಿಎಂ ಪಟ್ಟಕ್ಕೆ ಕಲ್ಲು ಹೊಡೆದ ಖರ್ಗೆ : ಅಶೋಕ್‌ ವ್ಯಂಗ್ಯ Read More »

ನಟಿ ರಮ್ಯಾಗೆ ಅಸಭ್ಯ ಕಮೆಂಟ್‌ : 43 ಮಂದಿ ವಿರುದ್ಧ ಕೇಸ್‌

ಸೋಷಿಯಲ್‌ ಮೀಡಿಯಾದಲ್ಲಿ ರಮ್ಯಾ V/S ದರ್ಶನ್‌ ಅಭಿಮಾನಿಗಳ ಜಟಾಪಟಿ ಬೆಂಗಳೂರು: ಸಾಮಾಜಿಕ ಮಾಧ್ಯಮಗಳಲ್ಲಿ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಹಾಗೂ ನಟ ದರ್ಶನ್‌ ಅಭಿಮಾನಿಗಳ ನಡುವಿನ ಜಟಾಪಟಿ ತೀವ್ರಗೊಂಡಿದ್ದು, ನಟಿಗೆ ಕುರಿತು ಅವಹೇಳನಕಾರಿ ಹಾಗೂ ಅಶ್ಲೀಲ ಸಂದೇಶ ಕಳುಹಿಸಿದ ಆರೋಪದ ಮೇಲೆ ದರ್ಶನ್ ಅವರ 43 ಅಭಿಮಾನಿಗಳ ವಿರುದ್ಧ ಬೆಂಗಳೂರು ಪೊಲೀಸರು ಸೋಮವಾರ ರಾತ್ರಿ ಎಫ್ಐಆರ್ ದಾಖಲಿಸಿದ್ದಾರೆ. ತಮ್ಮ ವಿರುದ್ಧ ಅಶ್ಲೀಲ ಕಾಮೆಂಟ್ ಮಾಡಿದ ದರ್ಶನ್ ಫ್ಯಾನ್ಸ್ ವಿರುದ್ಧ ಕಿಡಿಕಾರಿರುವ ನಟಿ ರಮ್ಯಾ, ಮಹಿಳಾ ಆಯೋಗ

ನಟಿ ರಮ್ಯಾಗೆ ಅಸಭ್ಯ ಕಮೆಂಟ್‌ : 43 ಮಂದಿ ವಿರುದ್ಧ ಕೇಸ್‌ Read More »

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್‌ : ಆರು ಕಡೆ ಏಕಕಾಲದಲ್ಲಿ ದಾಳಿ

ಬೆಂಗಳೂರು: ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಬೆಳ್ಳಂಬೆಳಗ್ಗೆ ಬಿಸಿ ಮುಟ್ಟಿಸಿದೆ. ಬೆಂಗಳೂರು ಸೇರಿದಂತೆ 4 ಜಿಲ್ಲೆಗಳಲ್ಲಿ ಆರು ಕಡೆ ದಾಳಿ ನಡೆಸಿದೆ. ಬೆಂಗಳೂರು, ಹಾಸನ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಜಿಲ್ಲೆಗಳ 6 ಕಡೆ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಬೆಂಗಳೂರಿನ ಕಂದಾಯ ಅಧಿಕಾರಿ ವೆಂಕಟೇಶ್, ಬಿಡಿಎ ಕಚೇರಿಯ ಸಿನಿಯರ್ ಅರ್ಟಿಕಲ್ಚರ್ ಡೈರೆಕ್ಟರ್ ಓಂ ಪ್ರಕಾಶ್‌, ರಾಷ್ಟ್ರೀಯ ಹೆದ್ದಾರಿ ಹಾಸನ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಜಯಣ್ಣ, ಚಿಕ್ಕಬಳ್ಳಾಪುರದ ಜ್ಯೂನಿಯರ್ ಎಂಜಿನಿಯರ್ ಆಂಜನೇಯ ಮೂರ್ತಿ, ಚಿತ್ರದುರ್ಗದ ತಾಲೂಕು ಆರೋಗ್ಯಾಧಿಕಾರಿ ವೆಂಕಟೇಶ್ ಮನೆ

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್‌ : ಆರು ಕಡೆ ಏಕಕಾಲದಲ್ಲಿ ದಾಳಿ Read More »

ಧರ್ಮಸ್ಥಳ ಪ್ರಕರಣ : ಇಂದೇ ಗುರುತಿಸಿದ ಸ್ಥಳಗಳ ಅಗೆತ ಕಾರ್ಯಾಚರಣೆ?

ಶವ ಹೂತು ಹಾಕಿದ 13 ಸ್ಥಳಗಳನ್ನು ತೋರಿಸಿದ ದೂರುದಾರ ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ವಿವಿಧೆಡೆ ನೂರಾರು ಶವಗಳನ್ನು ಹೂತು ಹಾಕಿರುವುದಾಗಿ ಹೇಳಿಕೆ ನೀಡಿದ್ದ ವ್ಯಕ್ತಿ ಸೋಮವಾರ ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಸುತ್ತಲಿನ ಪ್ರದೇಶಗಳಲ್ಲಿ ತಾನು ಮೃತದೇಹಗಳನ್ನು ಹೂತು ಹಾಕಿರುವ 13 ಸ್ಥಳಗಳನ್ನು ತೋರಿಸಿದ್ದಾನೆ. ಪೊಲೀಸರು ಈ 13 ಸ್ಥಳಗಳನ್ನು ನಂಬರ್ ನೀಡಿ ಗುರುತಿಸಿದ್ದಾರೆ. ಅದರ ಸುತ್ತ ಟೇಪ್ ಕಟ್ಟಲಾಗಿದ್ದು ಈ ಸ್ಥಳಗಳಲ್ಲಿ ರಾತ್ರಿ ಪೊಲೀಸ್ ಗಸ್ತನ್ನು ಏರ್ಪಡಿಸಲಾಗಿತ್ತು. ಮಂಗಳವಾರವೇ ಮೃತದೇಹಗಳನ್ನು ಹೂತು ಹಾಕಿದ ಸ್ಥಳಗಳಲ್ಲಿ ಅಗೆದು ಅವಶೇಷಗಳನ್ನು

ಧರ್ಮಸ್ಥಳ ಪ್ರಕರಣ : ಇಂದೇ ಗುರುತಿಸಿದ ಸ್ಥಳಗಳ ಅಗೆತ ಕಾರ್ಯಾಚರಣೆ? Read More »

ನಿಮಿಷಾ ಪ್ರಿಯಾ ಮರಣ ದಂಡನೆ ಶಾಶ್ವತವಾಗಿ ರದ್ದು

ಕೊನೆಗೂ ಸಾವಿನ ದವಡೆಯಿಂದ ಪಾರಾದ ಕೇರಳದ ನರ್ಸ್‌ ತಿರುವನಂತಪುರ: ಕೇರಳದ ನರ್ಸ್‌ ನಿಮಿಷಾ ಪ್ರಿಯಾಗೆ ಕೊಲೆ ಪ್ರಕರಣವೊಂದರಲ್ಲಿ ವಿಧಿಸಿದ್ದ ಮರಣ ದಂಡನೆಯನ್ನು ಯೆಮೆನ್‌ ಸರ್ಕಾರ ಸಂಪೂರ್ಣವಾಗಿ ರದ್ದುಪಡಿಸಿದೆ. ಯೆಮೆನ್‌ ಅಧಿಕಾರಿಗಳು ಮರಣ ದಂಡನೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಿದ್ದಾರೆ ಎಂದು ಗ್ರ್ಯಾಂಡ್‌ ಮುಫ್ತಿ ಕಾಂತಪುರಂ ಎ.ಪಿ.ಅಬೂಬಕ್ಕರ್‌ ಮುಸ್ಲಿಯಾರ್‌ ಅವರ ಕಚೇರಿ ಪ್ರಕಟಣೆ ತಿಳಿಸಿದೆ. ಯೆಮೆನ್‌ನ ವ್ಯವಹಾರ ಪಾಲುದಾರನನ್ನು ನಿದ್ದೆಯ ಓವರ್‌ಡೋಸ್‌ ಇಂಜೆಕ್ಷನ್‌ ಚುಚ್ಚಿ ಕೊಲೆ ಮಾಡಿದ ಅಪರಾಧಕ್ಕೆ ನಿಮಿಷಾ ಪ್ರಿಯಾಗೆ ಯೆಮೆನ್‌ನಲ್ಲಿ ಗಲ್ಲು ಶಿಕ್ಷೆ ವಿಧಿಸಲಾಗಿತ್ತು. ಪಾಲುದಾರನನ್ನು ಕೊಂದು ಶವವನ್ನು

ನಿಮಿಷಾ ಪ್ರಿಯಾ ಮರಣ ದಂಡನೆ ಶಾಶ್ವತವಾಗಿ ರದ್ದು Read More »

error: Content is protected !!
Scroll to Top