ಸುದ್ದಿ

ಹೃದಯಾಘಾತಕ್ಕೆ ಕೋವಿಡ್‌ ಲಸಿಕೆ ಕಾರಣವಲ್ಲ : ರಾಜ್ಯ ಸರ್ಕಾರ ರಚಿಸಿದ ಸಮಿತಿ ವರದಿ

ಸರಣಿ ಹೃದಯಾಘಾತಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರಚಿಸಿದ ತಜ್ಞ ವೈದ್ಯರ ಸಮಿತಿಯಿಂದ ಅಧ್ಯಯನ ಬೆಂಗಳೂರು: ಐಸಿಎಂಆರ್‌ ಬಳಿಕ ರಾಜ್ಯ ಸರ್ಕಾರವೇ ರಚಿಸಿದ ಸಮಿತಿ ಕೂಡ ಹೃದಯಾಘಾತಗಳಿಗೆ ಕೋವಿಡ್‌ ಲಸಿಕೆ ಕಾರಣವಲ್ಲ ಎಂದು ವರದಿ ನೀಡಿದೆ. ಡಾ. ರವೀಂದ್ರನಾಥ್ ನೇತೃತ್ವದ ಸಮಿತಿ ಜುಲೈ 2ರಂದು ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿದ್ದು, ಹಠಾತ್ ಹೃದಯಾಘಾತಕ್ಕೆ ಕೋವಿಡ್-19 ಲಸಿಕೆ ಅಥವಾ ಹಿಂದಿನ ಸೋಂಕು ಕಾರಣವಲ್ಲ. ಕೋವಿಡ್ ಲಸಿಕೆಗೂ ಈ ಹೃದಯಾಘಾತದ ಘಟನೆಗಳಿಗೂ ಯಾವುದೇ ಸಂಬಂಧ ಇಲ್ಲ ಎಂದು ತಿಳಿಸಿದೆ. ರಾಜ್ಯದಲ್ಲಿ ಹೆಚ್ಚುತ್ತಿರುವ […]

ಹೃದಯಾಘಾತಕ್ಕೆ ಕೋವಿಡ್‌ ಲಸಿಕೆ ಕಾರಣವಲ್ಲ : ರಾಜ್ಯ ಸರ್ಕಾರ ರಚಿಸಿದ ಸಮಿತಿ ವರದಿ Read More »

ಮಂಗಳೂರಿನ ಮಹಿಳೆಯನ್ನು ಡಿಜಿಟಲ್‌ ಅರೆಸ್ಟ್‌ ಮಾಡಿ 3.16 ಕೋಟಿ ರೂ. ಲೂಟಿ

ಪತಿಯ ಹೆಸರಿನಲ್ಲಿ ಸಿಮ್‌ ಖರೀದಿಸಿ ವಂಚನೆ ಎಸಗಲಾಗಿದೆ ಎಂದು ಬೆದರಿಸಿದ್ದ ವಂಚಕರು ಮಂಗಳೂರು : ಮಂಗಳೂರಿನ ಮಹಿಳೆಯೊಬ್ಬರನ್ನು ಡಿಜಿಟಲ್‌ ಅರೆಸ್ಟ್‌ ಮಾಡಿ ಬರೋಬ್ಬರಿ 3.16 ಕೋಟಿ ರೂ. ಖಾತೆಯಿಂದ ಎಗರಿಸಿದ ಕುರಿತು ದೂರು ದಾಖಲಾಗಿದೆ. ಮಹಿಳೆಯ ಪತಿಯ ಹೆಸರಿನಲ್ಲಿ ಹೊಸ ಸಿಮ್ ಖರೀದಿಸಿ ಅದರಿಂದ ವಂಚನೆಯ ಕರೆ ಮಾಡಲಾಗಿದೆ ಮತ್ತು ಸಂಶಯಾಸ್ಪದ ಲಿಂಕ್ ಕಳುಹಿಸಲಾಗಿದೆ ಎಂದು ನಂಬಿಸಿದ ಸೈಬರ್ ವಂಚಕರು 3,16,52,142 ರೂ. ಲೂಟಿ ಮಾಡಿದ್ದಾರೆ. ಜೂನ್ 5ರಂದು ಮುಂಬೈ ಸಹಾರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಅನುಶರ್ಮ

ಮಂಗಳೂರಿನ ಮಹಿಳೆಯನ್ನು ಡಿಜಿಟಲ್‌ ಅರೆಸ್ಟ್‌ ಮಾಡಿ 3.16 ಕೋಟಿ ರೂ. ಲೂಟಿ Read More »

ಗಣಪತಿ, ನಾಗರ ವಿಗ್ರಹಕ್ಕೆ ಅನ್ಯಕೋಮಿನವರಿಂದ ಅಪಚಾರ : ಶಿವಮೊಗ್ಗದಲ್ಲಿ ಬಿಗುವಿನ ವಾತಾವರಣ

ಗಣಪತಿ ವಿಗ್ರಹಕ್ಕೆ ಒದ್ದು, ನಾಗರ ಕಲ್ಲನ್ನು ಚರಂಡಿಗೆ ಎಸೆದಿರುವ ದುಷ್ಕರ್ಮಿಗಳು ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ರಾಗಿಗುಡ್ಡದ ಬಂಗಾರಪ್ಪ ಬಡಾವಣೆಯಲ್ಲಿ ಅನ್ಯಕೋಮಿನ ಯುವಕರು ಶನಿವಾರ ಗಣಪತಿ ವಿಗ್ರಹ ಹಾಗೂ ನಾಗರ ಕಲ್ಲಿಗೆ ಅಪಚಾರ ಮಾಡಿರುವ ಘಟನೆಯಿಂದ ಶಿವಮೊಗ್ಗದಲ್ಲಿ ಬಿಗುವಿನ ಪರಿಸ್ಥಿತಿ ಉಂಟಾಗಿದೆ. ಬಡಾವಣೆಯ ಮುಖ್ಯರಸ್ತೆಯಲ್ಲಿ ಇತ್ತೀಚೆಗೆ ಪ್ರತಿಷ್ಠಾಪನೆ ಮಾಡಿದ್ದ ಗಣಪತಿ ವಿಗ್ರಹಕ್ಕೆ ಒದ್ದು, ನಾಗರ ಕಲ್ಲನ್ನು ಚರಂಡಿಗೆ ಎಸೆದಿರುವ ಆರೋಪ ಕೇಳಿಬಂದಿದೆ. ಅನ್ಯಕೋಮಿನ ಯುವಕರಿಂದ ದುಷ್ಕೃತ್ಯ ನಡೆದಿದೆ ಎನ್ನಲಾಗಿದ್ದು, ಹಿಂದೂ ಮುಖಂಡರು ಕೆರಳಿದ್ದಾರೆ. ಇದರಿಂದ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಗಣಪತಿ, ನಾಗರ ವಿಗ್ರಹಕ್ಕೆ ಅನ್ಯಕೋಮಿನವರಿಂದ ಅಪಚಾರ : ಶಿವಮೊಗ್ಗದಲ್ಲಿ ಬಿಗುವಿನ ವಾತಾವರಣ Read More »

ಪುತ್ತೂರು ತಾಲೂಕಿನ 18 ಸರ್ಕಾರಿ ಶಾಲೆಗಳಲ್ಲಿ ಕನ್ನಡದ ಜೊತೆಗೆ ಇಂಗ್ಲಿಷ್‌ ಮೀಡಿಯಂ ಕಲಿಕೆ

ದ.ಕ. ಜಿಲ್ಲೆಯ 115 ಸೇರಿ ರಾಜ್ಯದ 4,134 ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ ಬೋಧನೆಗೆ ಅನುಮತಿ ಮಂಗಳೂರು: ಪುತ್ತೂರಿನ 18 ಸೇರಿ ದಕ್ಷಿಣ ಕನ್ನಡ ಜಿಲ್ಲೆಯ 115 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 2025–26ನೇ ಶೈಕ್ಷಣಿಕ ವರ್ಷದಿಂದ ಇಂಗ್ಲಿಷ್‌ ಮಾಧ್ಯಮ ಶುರುವಾಗಲಿದೆ. ರಾಜ್ಯದ ಒಟ್ಟು 4,134 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಇತರ ಮಾಧ್ಯಮಗಳ ಜೊತೆಗೆ ಇಂಗ್ಲಿಷ್ ಮಾಧ್ಯಮ ತರಗತಿಗಳನ್ನು ಹೊಸದಾಗಿ ಪ್ರಾರಂಭಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯ 115 ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ತರಗತಿಗಳನ್ನು

ಪುತ್ತೂರು ತಾಲೂಕಿನ 18 ಸರ್ಕಾರಿ ಶಾಲೆಗಳಲ್ಲಿ ಕನ್ನಡದ ಜೊತೆಗೆ ಇಂಗ್ಲಿಷ್‌ ಮೀಡಿಯಂ ಕಲಿಕೆ Read More »

ಅಪಘಾತದಲ್ಲಿ ಗಾಯಗೊಂಡಿದ್ದ ಯುವ ವೈದ್ಯ ಸಾವು

ಸುಳ್ಯದ ಸೋಂಣಂಗೇರಿ ಸಮೀಪ ಸಂಭವಿಸಿದ ಅಪಘಾತ ಮಂಗಳೂರು : ಸುಳ್ಯ ಸಮೀಪ ಸೋಣಂಗೇರಿ ಸಮೀಪ ಕೆಲದಿನಗಳ ಹಿಂದೆ ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ್ದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವ ವೈದ್ಯರೊಬ್ಬರು ಚಿಕಿತ್ಸೆ ಫಲನೀಡದೆ ಮೃತಪಟ್ಟಿದ್ದಾರೆ. ಕಲ್ಲುಗುಂಡಿಯ ಡಾ.ಶಮಂತ್ ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ಆಸ್ಪತ್ರೆಯಲ್ಲಿ ಜುಲೈ 4ರಂದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಕಾಲಿಗೆ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕಾಲು ತೀವ್ರವಾಗಿ ಜಖಂಗೊಂಡಿದ್ದ

ಅಪಘಾತದಲ್ಲಿ ಗಾಯಗೊಂಡಿದ್ದ ಯುವ ವೈದ್ಯ ಸಾವು Read More »

ಬಿಜೆಪಿ ನಾಯಕನ ಗುಂಡಿಕ್ಕಿ ಹತ್ಯೆ

ಪಾಟ್ನಾ : ವಿಧಾನಸಭೆ ಚುನಾವಣೆಗೆ ಅಣಿಯಾಗುತ್ತಿರುವ ಬಿಹಾರದಲ್ಲಿ ಉದ್ಯಮಿ ಹಾಗೂ ಬಿಜೆಪಿ ನಾಯಕ ಗೋಪಾಲ್ ಖೇಮ್ಕಾ ಅವರನ್ನು ಶುಕ್ರವಾರ ರಾತ್ರಿ ದುಷ್ಕರ್ಮಿಗಳು ಪಾಟ್ನಾದ ಅವರ ಮನೆಯ ಮುಂದೆಯೇ ಗುಂಡಿಕ್ಕಿ ಕೊಂದಿದ್ದಾರೆ. ಗಾಂಧಿ ಮೈದಾನ ಪೊಲೀಸ್ ಠಾಣೆ ಪ್ರದೇಶದ ಪನಾಚೆ ಎಂಬ ಹೋಟೆಲ್ ಬಳಿ ಈ ಘಟನೆ ನಡೆದಿದ್ದು, ಖೇಮ್ಕಾ ಮನೆಗೆ ತೆರಳುತ್ತಿದ್ದಾಗದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೋಟೆಲ್ ಪಕ್ಕದಲ್ಲಿರುವ ‘ಟ್ವಿನ್ ಟವರ್’ ಸೊಸೈಟಿಯಲ್ಲಿ ಗೋಪಾಲ್ ಖೇಮ್ಕಾ ವಾಸವಾಗಿದ್ದರು. ಗುಂಡಿನ ದಾಳಿಗೆ ಖೇಮ್ಕಾ ಸ್ಥಳದಲ್ಲೇ ಪ್ರಾಣ

ಬಿಜೆಪಿ ನಾಯಕನ ಗುಂಡಿಕ್ಕಿ ಹತ್ಯೆ Read More »

ಮಳೆ ದಾಖಲೆಯಲ್ಲಿ ಚಿರಾಪುಂಜಿಯನ್ನು ಹಿಂದಿಕ್ಕಿದ ಉಡುಪಿ

ಒಂದು ತಿಂಗಳಲ್ಲಿ 1,140 ಮಿ.ಮೀ ಮಳೆ ಸುರಿದು ಹೊಸ ದಾಖಲೆ ಉಡುಪಿ: ಮೇಘಾಲಯದ ಚಿರಾಪುಂಜಿ ದೇಶದಲ್ಲಿ ಅತ್ಯಧಿಕ ಮಳೆಯಾಗುವ ಪ್ರದೇಶ ಎಂಬ ದಾಖಲೆ ಅನೇಕ ವರ್ಷಗಳಿಂದ ಇದೆ. ಆದರೆ ಈ ಸಲ ಉಡುಪಿ ಜಿಲ್ಲೆ ಮಳೆ ದಾಖಲೆಯಲ್ಲಿ ಚಿರಾಪುಂಜಿಯನ್ನು ಹಿಂದಿಕ್ಕಿದೆ. ಜೂನ್‌ ತಿಂಗಳಲ್ಲಿ ಉಡುಪಿಯಾದ್ಯಂತ ದಾಖಲೆಯ ಮಳೆ ಸುರಿದಿದ್ದು, ಕರ್ನಾಟಕದಲ್ಲಿ ಅತ್ಯಧಿಕ ಮಳೆಯಾಗುವ ಆಗುಂಬೆಯನ್ನೂ ಹಿಂದಿಕ್ಕಿದೆ. ಜೂನ್ ತಿಂಗಳ ಮಳೆ ಲೆಕ್ಕಾಚಾರದಲ್ಲಿ ಉಡುಪಿ ಜಿಲ್ಲೆ ದೇಶದಲ್ಲೇ ಪ್ರಥಮ ಸ್ಥಾನದಲ್ಲಿದೆ. ಒಂದು ತಿಂಗಳಲ್ಲಿ 1,140 ಮಿ.ಮೀ ಮಳೆಯಾಗಿದೆ. ಜಿಲ್ಲೆಯಲ್ಲಿ

ಮಳೆ ದಾಖಲೆಯಲ್ಲಿ ಚಿರಾಪುಂಜಿಯನ್ನು ಹಿಂದಿಕ್ಕಿದ ಉಡುಪಿ Read More »

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ಆರೋಪಿ ರನ್ಯಾಳ 34.12 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು

ಬೆಎಂಗಳೂರಿನ ಮನೆ, ನಿವೇಶನ ಇನ್ನಿತರ ಆಸ್ತಿ ಜಪ್ತಿ ಬೆಂಗಳೂರು : ಚಿನ್ನ ಕಳ್ಳ ಸಾಗಾಟ ಪ್ರಕರಣದಲ್ಲಿ ಬಂಧಿತಳಾಗಿರುವ ನಟಿ ರನ್ಯಾ ರಾವ್​​ಗೆ ಸೇರಿದ 34.12 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಬೆಂಗಳೂರಿನ ಅರ್ಕಾವತಿ ಬಡವಾಣೆಯಲ್ಲಿನ ನಿವೇಶನ, ವಿಕ್ಟೋರಿಯಾ ಲೇಔಟ್​ನಲ್ಲಿನ ಮನೆ, ಅನೇಕಲ್​ನಲ್ಲಿನ ಕೃಷಿ ಜಮೀನು ಮತ್ತು ತುಮಕೂರಿನಲ್ಲಿನ ಜಮೀನನ್ನು ಇಡಿ ಜಪ್ತಿ ಮಾಡಿದೆ. ಸಿಬಿಐ ಮತ್ತು ರೆವಿನ್ಯೂ ಗುಪ್ತಚರ ನಿರ್ದೇಶನಾಲಯ (ಡಿಆರ್​ಐ) ಒಪ್ಪಿಗೆ ಮೇರೆಗೆ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿಕೊಂಡಿದೆ.

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ಆರೋಪಿ ರನ್ಯಾಳ 34.12 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು Read More »

ಪಿಲಿಕುಳ ಜೈವಿಕ ಉದ್ಯಾನದಲ್ಲಿ ಪ್ರಾಣಿಗಳ ನಿಗೂಢ ಸಾವು

ಒಂಬತ್ತು ಅಪರೂಪದ ಪ್ರಾಣಿಗಳು ಮೃತಪಟ್ಟಿರುವುದು ಬಹಿರಂಗ ಮಂಗಳೂರು: ಮಂಗಳೂರಿನ ವಾಮಂಜೂರು ಸಮೀಪ ಇರುವ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಕೆಲವು ಪ್ರಾಣಿಗಳು ನಿಗೂಢವಾಗಿ ಮೃತಪಟ್ಟಿವೆ. ಕೇವಲ ಒಂದು ವಾರದಲ್ಲೇ 2 ಕೃಷ್ಣಮೃಗ, 5 ಪುನುಗು ಬೆಕ್ಕು, 1 ಬಿಳಿಗೂಬೆ ಹಾಗೂ 1 ಬರಿಂಕ ಸೇರಿದಂತೆ ಒಟ್ಟು 9 ಪ್ರಾಣಿಗಳು ಮೃತಪಟ್ಟಿವೆ ಎಂದು ತಿಳಿದುಬಂದಿದೆ. ಇತ್ತೀಚೆಗೆ ಪಿಲಿಕುಳ ಜೈವಿಕ ಉದ್ಯಾನವನದೊಳಗೆ ನೀರು ನುಗ್ಗಿ, ಕಂಪೌಂಡ್ ಕುಸಿದು ಪ್ರಾಣಿಗಳಿಗೆ ತೊಂದರೆಯಾಗಿತ್ತು. ಈ ಬಗ್ಗೆ ವನ್ಯಜೀವಿ ಸಂರಕ್ಷಕ ಭುವನ್ ದೇವಾಡಿಗ ಅವರು ಸೆಂಟ್ರಲ್

ಪಿಲಿಕುಳ ಜೈವಿಕ ಉದ್ಯಾನದಲ್ಲಿ ಪ್ರಾಣಿಗಳ ನಿಗೂಢ ಸಾವು Read More »

ಶರಾಬಿನ ಮತ್ತಿನಲ್ಲಿ ಕೈಯಿಂದ ಗಾಜಿನ ಶೋಕೇಸ್‌ ಒಡೆದು ಹಾಕಿದವ ತೀವ್ರ ರಕ್ತಸ್ರಾವದಿಂದ ಸಾವು

ಸಹೋದರನೊಡನೆ ಜಗಳವಾಡಿ ಮನೆಯಲ್ಲಿದ್ದ ಶೋಕೇಸನ್ನು ಬರಿ ಕೈಯಿಂದ ಒಡೆದು ಹಾಕಿ ದುರಂತ ಮಂಗಳೂರು : ಶರಾಬಿನ ಮತ್ತಿನಲ್ಲಿ ಮನೆಯಲ್ಲಿದ್ದ ಗಾಜಿನ ಶೋಕೇಸ್ ಒಡೆದು ತೀವ್ರ ಗಾಯಗೊಂಡು ರಕ್ತಸ್ರಾವದಿಂದ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ಉಳ್ಳಾಲ ಸಮೀಪದ ಮದೂರು ಸೈಟ್‌ನಲ್ಲಿ ಗುರುವಾರ ರಾತ್ರಿ ಸಂಭವಿಸಿದೆ. ಮೃತನನ್ನು ಮದೂರು ಸೈಟ್ ನಿವಾಸಿ ಸತೀಶ್ ನಾಯಕ್ ಅವರ ಪುತ್ರ ನಿತೇಶ್ ನಾಯಕ್ (28) ಎಂದು ಗುರುತಿಸಲಾಗಿದೆ. ನಿತೇಶ್ ತಂದೆ ಮತ್ತು ಸಹೋದರನೊಂದಿಗೆ ಆಗಾಗ್ಗೆ ಜಗಳವಾಡುತ್ತಿದ್ದನು. ಗುರುವಾರ ರಾತ್ರಿ ಭಾರಿ ಸಿಟ್ಟಿನಲ್ಲಿದ್ದ ನಿತೇಶ್ ಮನೆಯೊಳಗಿದ್ದ

ಶರಾಬಿನ ಮತ್ತಿನಲ್ಲಿ ಕೈಯಿಂದ ಗಾಜಿನ ಶೋಕೇಸ್‌ ಒಡೆದು ಹಾಕಿದವ ತೀವ್ರ ರಕ್ತಸ್ರಾವದಿಂದ ಸಾವು Read More »

error: Content is protected !!
Scroll to Top