ಸುದ್ದಿ

ಇಡೀ ಕುಟುಂಬ ಆತ್ಮಹತ್ಯೆಗೆ ಯತ್ನ : ಇಬ್ಬರು ಸಾವು

ಸಾಲಗಾರರ ಕಾಟದಿಂದ ಬೇಸತ್ತು ಕೃತ್ಯ – ಇಬ್ಬರ ಸ್ಥಿತಿ ಚಿಂತಾಜನಕ ಬೆಂಗಳೂರು: ಸಾಲಗಾರರ ಕಾಟಕ್ಕೆ ಬೇಸತ್ತು ಇಡೀ ಕುಟುಂಬ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಆಘಾತಕಾರಿ ಘಟನೆ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಮಲ್ಲೇನಹಳ್ಳಿಯಲ್ಲಿ ನಡೆದಿದೆ. ವ್ಯಕ್ತಿಯೋರ್ವ ತಾಯಿ, ಅಕ್ಕ ಮತ್ತು ಅಕ್ಕನ ಮಗನ ಕತ್ತು ಸೀಳಿ, ಬಳಿಕ ತಾನೂ ಆತ್ಮಹತ್ಯೆಗೆ ಮುಂದಾಗಿದ್ದಾನೆ. ತಾಯಿ ಮತ್ತು ಅಕ್ಕ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದರೆ, ಬಾಲಕ ಸೇರಿ ಇಬ್ಬರು ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ತಾಯಿ […]

ಇಡೀ ಕುಟುಂಬ ಆತ್ಮಹತ್ಯೆಗೆ ಯತ್ನ : ಇಬ್ಬರು ಸಾವು Read More »

ಐಪಿಎಲ್‌ : ಉದ್ಘಾಟನಾ ಪಂದ್ಯದಲ್ಲಿ ಆರ್‌ಸಿಬಿಗೆ ಭರ್ಜರಿ ಜಯ

ಐಪಿಎಲ್ ಇತಿಹಾಸದಲ್ಲಿ ಅತ್ಯಂತ ವೇಗವಾಗಿ 200ಕ್ಕೂ ಹೆಚ್ಚು ರನ್ ಚೇಸ್ ಮಾಡಿದ ದಾಖಲೆ ಬೆಂಗಳೂರು: ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ 19ನೇ ಆವೃತ್ತಿಯ ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್​ ತಂಡವನ್ನು ಮಣಿಸಿದ ಹಾಲಿ ಚಾಂಪಿಯನ್‌ ಆರ್​ಸಿಬಿ ಗೆಲುವಿನ ಶುಭಾರಂಭ ಮಾಡಿದೆ. ತವರಿನಲ್ಲಿ ಬಲಿಷ್ಠ ಬ್ಯಾಟಿಂಗ್‌ ವಿಭಾಗವನ್ನು ಹೊಂದಿದ್ದ ಎಸ್​ಆರ್‌ಎಚ್ ತಂಡವನ್ನು ಮಕಾಡೆ ಮಲಗಿಸಿದ ಆರ್​ಸಿಬಿ ಕೇವಲ 15.4 ಓವರ್​ಗಳಲ್ಲಿ 202 ರನ್ ಬೆನ್ನಟ್ಟಿ ಜಯದ ನಗೆ ಬೀರಿತು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌

ಐಪಿಎಲ್‌ : ಉದ್ಘಾಟನಾ ಪಂದ್ಯದಲ್ಲಿ ಆರ್‌ಸಿಬಿಗೆ ಭರ್ಜರಿ ಜಯ Read More »

ಕೆರೆಗೆ ಕಾಲು ಜಾರಿ ಬಿದ್ದು ಹತ್ತನೇ ತರಗತಿ ಬಾಲಕ ಸಾವು

ಶಿವಮೊಗ್ಗ: ಗದ್ದೆಯೊಳಗಿನ ಕೆರೆಗೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದ ಪರಿಣಾಮ ಹತ್ತನೇ ತರಗತಿಯ ಬಾಲಕನೊಬ್ಬ ಮೃತಪಟ್ಚ ಘಟನೆ ರಿಪ್ಪನ್ ಪೇಟೆಯ ಬರುವೆ ಗ್ರಾಮದಲ್ಲಿ ನಡೆದಿದೆ. ಮೃತನನ್ನು ಮದೀನಾ ಕಾಲೋನಿ ನಿವಾಸಿ ಮಹಮ್ಮದ್ ತಮೀಮ್ ಬಿನ್ ತಾಹಿರ್ ಹುಸೇನ್ ಎಂದು ಗುರುತಿಸಲಾಗಿದೆ. ಚೌಡೇಶ್ವರಿ ಬೀದಿಯಲ್ಲಿ ಟ್ಯೂಷನ್‌ಗೆ ತೆರಳಿದ್ದ ಬಾಲಕ ಆ‌ನಂತರ ಸ್ನೇಹಿತರೊಂದಿಗೆ ಬರುವೆ ಗ್ರಾಮದ ದಿಬ್ಬದತ್ತ ತೆರಳಿದ್ದಾನೆ. ಈ ವೇಳೆ ಗದ್ದೆಯೊಳಗಿನ ಕೆರೆಯ ಮೇಲೆ ನಡೆಯುತ್ತಿದ್ದಾಗ ಕಾಲುಜಾರಿ ನೀರಿಗೆ ಬಿದ್ದು ದುರ್ಘಟನೆ ಸಂಭವಿಸಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ನಂತರ

ಕೆರೆಗೆ ಕಾಲು ಜಾರಿ ಬಿದ್ದು ಹತ್ತನೇ ತರಗತಿ ಬಾಲಕ ಸಾವು Read More »

ಜಾಗತಿಕ ತೈಲ ಬೆಲೆ ಏರಿಕೆಯ ನಡುವೆ ಬೆಲೆ ಏರಿಸದ ಏಕೈಕ ರಾಷ್ಟ್ರ ಭಾರತ: ಅಮಿತ್ ಶಾ

ನವದೆಹಲಿ: ಭಾರತದಲ್ಲಿ ಎಲ್‌ಪಿ‌ಜಿ ಮತ್ತು ಇಂಧನಕ್ಕೆ ಕೊರತೆ ಇಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೇಳಿದ್ದಾರೆ. ಭೌಗೋಳಿಕ ರಾಜಕೀಯ ಉದ್ವಿಗ್ನತೆಯ ಕಾರಣಕ್ಕೆ ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಬೆಲೆ ಏರಿಕೆ ಕಂಡಿದ್ದರೂ, ಭಾರತ ಮಾತ್ರ ಸರಬರಾಜು ಮತ್ತು ಬೆಲೆಗಳನ್ನು ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಈ ಎಲ್ಲಾ ಕಾರಣಗಳಿಂದ ಜನರು ಪ್ರಧಾನಿ ಮೋದಿ ಸರ್ಕಾರವನ್ನು ನಂಬಬೇಕು ಎಂದವರು ತಿಳಿಸಿದ್ದಾರೆ. ಜಗತ್ತಿನಾದ್ಯಂತ ಚಿಲ್ಲರೆ ಬೆಲೆಗಳು ಏರುತ್ತಿರುವಾಗ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ಏರಿಕೆಯಾಗದ ಏಕೈಕ ದೇಶ ಭಾರತವಾಗಿದೆ. ಪ್ರಧಾನಿಯವರು

ಜಾಗತಿಕ ತೈಲ ಬೆಲೆ ಏರಿಕೆಯ ನಡುವೆ ಬೆಲೆ ಏರಿಸದ ಏಕೈಕ ರಾಷ್ಟ್ರ ಭಾರತ: ಅಮಿತ್ ಶಾ Read More »

ಕೋಮು ಪ್ರಚೋದಕ ಪೋಸ್ಟ್ ಹಾಕಿದ್ದ ಆರೋಪಿಯ ಬಂಧನ

ಮಂಗಳೂರು: ಕೋಮು ದ್ವೇಷ ಬಿತ್ತುವ ಕಾಮೆಂಟ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ ವ್ಯಕ್ತಿಯನ್ನು ಕಂಕನಾಡಿ ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಗಣೇಶ್ ಪ್ರಸಾದ್ ಎಂದು ಗುರುತಿಸಲಾಗಿದೆ. ಕಳೆದ ಜನವರಿ ತಿಂಗಳಿನಲ್ಲಿ ಮಂಗಳೂರಿನ ಇಂಡಿಯಾನಾ ಕನ್ವೆನ್ಷನ್ ಸೆಂಟರ್‌ನಲ್ಲಿ ಕುರಾನ್ ಪಠಣ ಸ್ಪರ್ಧೆ ನಡೆಯುತ್ತಿತ್ತು. ಇದು ಉದಯವಾಣಿ ಫೇಸ್ಬುಕ್ ಪೇಜ್‌ನಲ್ಲಿ ಪ್ರಕಟವಾಗುತ್ತಿತ್ತು. ಈ ಸಂದರ್ಭದಲ್ಲಿ ಆರೋಪಿ ಗಣೇಶ್ ಪ್ರಸಾದ್ ತನ್ನ ಫೇಸ್ಬುಕ್ ಪೇಜಿನಿಂದ ಪ್ರಚೋದನಾಕಾರಿ ಕಾಮೆಂಟ್ ಹಾಕಿದ್ದಾನೆ. ಈ ಬಗ್ಗೆ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ‌ಪ್ರಕರಣ ದಾಖಲಾಗಿತ್ತು.

ಕೋಮು ಪ್ರಚೋದಕ ಪೋಸ್ಟ್ ಹಾಕಿದ್ದ ಆರೋಪಿಯ ಬಂಧನ Read More »

ವಿದ್ಯಾರ್ಥಿಯನ್ನು ಟೆರರಿಸ್ಟ್‌ ಎಂದು ಕರೆದ ಪ್ರೊಫೆಸರ್‌ ಅಮಾನತು

ಎರಡು ದಿನ ಹಿಂದಿನ ಘಟನೆಯ ವಿಡಿಯೋ ವೈರಲ್‌ ಬೆಂಗಳೂರು : ಬೆಂಗಳೂರಿನ ಪ್ರತಿಷ್ಠಿತ ವಿಶ್ವವಿದ್ಯಾಲಯದ ಪ್ರೊಫೆಸರ್ ಡಾ.ಮೂರಳಿಧರ ದೇಶಪಾಂಡೆ ತರಗತಿಯಲ್ಲಿ ಪಾಠ ಮಾಡುತ್ತಿದ್ದ ವೇಳೆ ಕೋಪಗೊಂಡು ಮುಸ್ಲಿಂ ವಿದ್ಯಾರ್ಥಿಯನ್ನು ‘ಭಯೋತ್ಪಾದಕ’ ಎಂದು ಕರೆದು ಅವಮಾನಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಘಟನೆ ಎರಡು ದಿನಗಳ ಹಿಂದೆ ನಡೆದಿದೆ ಎನ್ನಲಾಗಿದೆ. ಅದರ ವಿಡಿಯೋ ಈಗ ವೈರಲ್‌ ಆಗಿದೆ. ಪಾಠದ ಮಧ್ಯದಲ್ಲಿ ಮಕ್ಕಳ ಗಲಾಟೆಯಿಂದ ದೇಶಪಾಂಡೆ ಗರಂ ಆಗಿದ್ದು, ನೀವೆಲ್ಲಾ ಭಯೋತ್ಪಾದಕರು ಎಂದೆಲ್ಲಾ ನಿಂದಿಸಿದ್ದಾರೆ. ಇದೇ ವೇಳೆ ತರಗತಿಯಲ್ಲಿ ಕುಳಿತಿದ್ದ ವಿದ್ಯಾರ್ಥಿಗಳು

ವಿದ್ಯಾರ್ಥಿಯನ್ನು ಟೆರರಿಸ್ಟ್‌ ಎಂದು ಕರೆದ ಪ್ರೊಫೆಸರ್‌ ಅಮಾನತು Read More »

48 ಕೆಜಿ ಡ್ರಗ್ಸ್‌ ವಶ : ಇಬ್ಬರು ಆರೋಪಿಗಳ ಬಂಧನ

ಮೈಸೂರು : ಜಿಲ್ಲೆಯ ಹುಣಸೂರು ತಾಲೂಕಿನಲ್ಲಿ ಪೊಲೀಸರು 12 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್‌ ದಾಸ್ತಾನು ಪತ್ತೆ ಮಾಡಿದ್ದಾರೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದಾಸನಪುರ ಗ್ರಾಮದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮೈಸೂರು ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ. ಮೈಸೂರು ಸಿದ್ಧಿಖಿ ಮೊಹಲ್ಲಾ ನಿವಾಸಿ ಮೊಹಮ್ಮದ್ ಇರ್ಫಾನ್ ಮತ್ತು ಹುಣಸೂರಿನ ಮೊಹಮ್ಮದ್ ಇರ್ಫಾನ್ ಆರೋಪಿಗಳಾಗಿದ್ದು, ಇವರ ಜಮೀನಿನಲ್ಲಿ ಸಿಂಥೆಟಿಕ್ ಡ್ರಗ್ ತಯಾರಿಕೆ ಮತ್ತು ಸಂಗ್ರಹಣೆ ನಡೆಸಲಾಗುತ್ತಿದ್ದುದನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ದಾಸನಪುರ

48 ಕೆಜಿ ಡ್ರಗ್ಸ್‌ ವಶ : ಇಬ್ಬರು ಆರೋಪಿಗಳ ಬಂಧನ Read More »

ಮೂರು ಮಕ್ಕಳನ್ನು ಬಾವಿಗೆ ತಳ್ಳಿ, ತಾನೂ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಮಹಿಳೆ

ವಿಜಯನಗರ: ಮೂವರು ಮಕ್ಕಳ ಜೊತೆಗೆ ತಾಯಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇಂಡಿ ತಾಲೂಕಿನ ಮಿರಗಿಯಲ್ಲಿ ‌ನಡೆದಿದೆ. ಮೃತರನ್ನು ‌ರಾಜಶ್ರೀ ಶಂಕ್ರಪ್ಪ ಹಳ್ಳೂರ, ಮಕ್ಕಳಾದ ಅನುಶ್ರೀ, ತನು ಮತ್ತು ಸಂತೋಷ್ ಎಂದು ಗುರುತಿಸಲಾಗಿದೆ. ಮೃತ ಮಹಿಳೆಯ ಪತಿ ಶಂಕ್ರಪ್ಪ ಖಾಸಗಿ ಬಸ್ಸಿನ ಡ್ರೈವರ್ ಆಗಿದ್ದು, ಘಟನೆ ನಡೆದ ವೇಳೆ ಅವರು ಊರಿನಲ್ಲಿ ಇರಲಿಲ್ಲ ಎಂದು ತಿಳಿದು ಬಂದಿದೆ. ರಾಜಶ್ರೀ ಅವರು ಮಕ್ಕಳನ್ನು ಬಾವಿಗೆ ತಳ್ಳಿ ಬಳಿಕ ತಾವೂ ಆತ್ಮಹತ್ಯೆಗೆ ಶರಣಾಗಿರುವುದಾಗಿದೆ. ಸಾವಿನ ಕಾರಣ ಇನ್ನೂ ತಿಳಿದು ಬಂದಿಲ್ಲ. ಕುಟುಂಬಸ್ಥರ

ಮೂರು ಮಕ್ಕಳನ್ನು ಬಾವಿಗೆ ತಳ್ಳಿ, ತಾನೂ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಮಹಿಳೆ Read More »

ಹಾಡುಹಗಲೇ ಮಹಿಳೆಯ ಮಾಂಗಲ್ಯ ಸರಕ್ಕೆ ಕನ್ನ ಹಾಕಿದ ಖದೀಮರು

ಬೆಂಗಳೂರು: ನೆಲಮಂಗಲ ಸಮೀಪದ ಗುಡೇಮಾರನಹಳ್ಳಿ ಹ್ಯಾಂಡ್ ಪೋಸ್ಟ್ ಬಳಿಯಲ್ಲಿ ಹಾಡುಹಗಲೇ ಮಹಿಳೆಯೊಬ್ಬರ ಚಿನ್ನದ ಮಾಂಗಲ್ಯ ಸರವನ್ನು ದುಷ್ಕರ್ಮಿಗಳು ಕದ್ದು ಪರಾರಿಯಾದ ಘಟನೆ ನಡೆದಿದೆ. ಬೇಕರಿಯ ‌ಸಮೀಪ ನಿಂತಿದ್ದ ಮಹಿಳೆಯೊಬ್ಬರ ತಾಳಿ ಸರವನ್ನು ಖದೀಮರು ದೋಚಿದ್ದಾರೆೆ‌. ಬೇಕರಿಯಲ್ಲಿ ಜ್ಯೂಸ್ ಕುಡಿಯುವಂತೆ ನಟನೆ ಮಾಡಿ ಕಳ್ಳರು ಅವರ ಸರವನ್ನು ಕಿತ್ತು ಪರಾರಿಯಾಗಿದ್ದಾರೆ. ಸರ ಎಳೆದ ರಭಸಕ್ಕೆ ಮಹಿಳೆ ನೆಲಕ್ಕೆ ಬಿದ್ದಿದ್ದಾರೆ. ಸರ 55 ಗ್ರಾಂ ತೂಕವಿತ್ತು ಎಂದು ತಿಳಿದು ಬಂದಿದೆ‌. ಸಿಸಿಟಿವಿಯಲ್ಲಿಯೂ ‌ಸರಗಳ್ಳತನ ಮಾಡುತ್ತಿರುವ ದೃಶ್ಯ ಸೆರೆಯಾಗಿದ್ದು, ಆರೋಪಿಗಳ ಪತ್ತೆಗೆ

ಹಾಡುಹಗಲೇ ಮಹಿಳೆಯ ಮಾಂಗಲ್ಯ ಸರಕ್ಕೆ ಕನ್ನ ಹಾಕಿದ ಖದೀಮರು Read More »

ಹುಸಿಬಾಂಬ್‌ ಬೆದರಿಕೆಗಳ ಹಿಂದಿದ್ದ ಆರೋಪಿ ಸೆರೆ

ಮೈಸೂರಿನಲ್ಲಿ ಅಡಗಿ ಕುಳಿತು ಪೊಲೀಸರನ್ನು ಆಟವಾಡಿಸುತ್ತಿದ್ದ ಆರೋಪಿ ಮೈಸೂರು : ಸರ್ಕಾರಿ ಕಚೇರಿಗಳು, ಶಾಲೆಗಳು ಹಾಗೂ ನ್ಯಾಯಾಲಯಗಳಲ್ಲಿ ಬಾಂಬ್ ಸ್ಫೋಟಿಸುವುದಾಗಿ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಕಳುಹಿಸುತ್ತಿದ್ದ ಆರೋಪಿಯನ್ನು ದೆಹಲಿ ಪೊಲೀಸರ ವಿಶೇಷ ತಂಡ ಮೈಸೂರಿನಲ್ಲಿ ಬಂಧಿಸಿದೆ. ಮೈಸೂರು ನಗರದಲ್ಲಿ ಅಡಗಿ ಕುಳಿತಿದ್ದ ಶ್ರೀನಿವಾಸ್ ಎಂಬಾತನನ್ನು ಬಂಧಿಸಲಾಗಿದ್ದು, ದೆಹಲಿ ಪೊಲೀಸರ ತಂಡ ಆತನನ್ನು ಹೆಚ್ಚಿನ ವಿಚಾರಣೆಗಾಗಿ ದೆಹಲಿಗೆ ಕರೆದೊಯ್ದಿದೆ. ಆರೋಪಿಯು ಒಂದೇ ತಿಂಗಳಲ್ಲಿ ಅನೇಕ ಬಾರಿ ಬಾಂಬ್ ಬೆದರಿಕೆ ಸಂದೇಶ ರವಾನೆ ಮಾಡಿ ಸಾರ್ವಜನಿಕರಲ್ಲಿ ಭೀತಿ ಮೂಡಿಸಿದ್ದ.

ಹುಸಿಬಾಂಬ್‌ ಬೆದರಿಕೆಗಳ ಹಿಂದಿದ್ದ ಆರೋಪಿ ಸೆರೆ Read More »

error: Content is protected !!
Scroll to Top