ಆಪರೇಷನ್ ಸಿಂದೂರದಲ್ಲಿ ಭಾರತದ 5 ಯುದ್ಧ ವಿಮಾನ ನಾಶ : ಕೋಲಾಹಲ ಸೃಷ್ಟಿಸಿದ ನೌಕಾಪಡೆ ಕ್ಯಾಪ್ಟನ್ ಹೇಳಿಕೆ
ಕೇಂದ್ರ ಸರ್ಕಾರದ ಮೇಲೆ ಕಾಂಗ್ರೆಸ್ ತೀಕ್ಷ್ಣ ವಾಗ್ದಾಳಿ ನವದೆಹಲಿ: ಪಾಕಿಸ್ತಾನದ ವಿರುದ್ಧ ಕಳೆದ ಮೇ 7ರಂದು ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಭಾರತದ ಕೆಲವು ಯುದ್ಧ ವಿಮಾನಗಳು ನಾಶವಾಗಿವೆ ಎಂಬುದಾಗಿ ನೌಕಾಪಡೆಯ ಅಧಿಕಾರಿಯೊಬ್ಬರು ಇಂಡೋನೇಷ್ಯಾದಲ್ಲಿ ಹೇಳಿಕೊಂಡಿದ್ದು, ಈ ಹೇಳಿಕೆ ಭಾರಿ ಕೋಲಾಹಲ ಎಬ್ಬಿಸಿದೆ. ಮೇ 7ರ ಆಪರೇಷನ್ ಸಿಂದೂರ ಕಾರ್ಯಾಚರಣೆ ವೇಳೆ ಭಾರತೀಯ ಯುದ್ಧ ವಿಮಾನಗಳನ್ನು ಪಾಕಿಸ್ತಾನ ಹೊಡೆದುರುಳಿಸಿದೆ. ರಾಜಕೀಯ ನಾಯಕತ್ವವು ನಿರ್ಬಂಧ ಹೇರಿದ್ದರಿಂದ ನಾವು ವಿಮಾನಗಳನ್ನು ಕಳೆದುಕೊಳ್ಳಬೇಕಾಯಿತು ಎಂದು ನೌಕಾಸೇನೆ ಅಧಿಕಾರಿ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ […]










