ಸುದ್ದಿ

ಅಚ್ಚರಿ ಹುಟ್ಟಿಸಿದ ಉಪರಾಷ್ಟ್ರಪತಿ ದಿಢೀರ್‌ ರಾಜೀನಾಮೆ

ಅನಾರೋಗ್ಯದ ಹಿನ್ನೆಲೆಯಲ್ಲಿ ಹುದ್ದೆ ತೊರೆದ ಜಗದೀಪ್ ಧನ್‌ಖರ್ ನವದೆಹಲಿ : ದಿಢೀರ್‌ ಬೆಳವಣಿಗೆಯೊಂದರಲ್ಲಿ ಮುಂಗಾರು ಅಧಿವೇಶನದ ಮೊದಲ ದಿನವೇ ಉಪರಾಷ್ಟ್ರಪತಿ ಜಗದೀಪ್ ಧನ್‌ಖರ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ಅಚ್ಚರಿ ಹುಟ್ಟಿಸಿದ್ದಾರೆ.ಜಗದೀಪ್ ಧನ್‌ಖರ್ 2022ರ ಆಗಸ್ಟ್‌ನಲ್ಲಿ ಭಾರತದ ಉಪರಾಷ್ಟ್ರಪತಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಕೆಲ ದಿನಗಳ ಹಿಂದೆ ಉತ್ತರಖಂಡದ ನೈನಿತಾಲ್‌ನ ಕುಮಾವೂನ್ ವಿಶ್ವವಿದ್ಯಾಲಯದ ಸುವರ್ಣ ಮಹೋತ್ಸವದಲ್ಲಿ ಭಾಗವಹಿಸಿದ್ದ ವೇಳೆ ಉಪರಾಷ್ಟ್ರಪತಿ ಜಗದೀಪ್ ಧನ್‌ಖರ್ ಮೂರ್ಛೆ ಹೋಗಿದ್ದರು. ನಿನ್ನೆ ಬೆಳಗ್ಗೆ ಕೂಡ ತಮ್ಮ ಕಚೇರಿಯಲ್ಲಿ ಕುಸಿದು ಬಿದ್ದಿದ್ದರು ಎನ್ನಲಾಗಿದೆ. ಹೃದಯ […]

ಅಚ್ಚರಿ ಹುಟ್ಟಿಸಿದ ಉಪರಾಷ್ಟ್ರಪತಿ ದಿಢೀರ್‌ ರಾಜೀನಾಮೆ Read More »

ಮುಂಬೈ ರೈಲು ಸ್ಫೋಟ ಪ್ರಕರಣ : ಎಲ್ಲ 12 ಆರೋಪಿಗಳನ್ನು ಖುಲಾಸೆಗೊಳಿಸಿದ ಹೈಕೋರ್ಟ್‌

ಲೋಕಲ್‌ ರೈಲಿನಲ್ಲಿ ಬಾಂಬಿಟ್ಟು 189 ಮಂದಿಯನ್ನು ಕೊಂದ ಪ್ರಕರಣ ಮುಂಬೈ: ಮುಂಬೈಯ ಲೋಕಲ್‌ ರೈಲುಗಳಲ್ಲಿ 2006ರಲ್ಲಿ ಸಂಭವಿಸಿದ್ದ ಸರಣಿ ಸ್ಫೋಟ ಪ್ರಕರಣದ ಎಲ್ಲ 12 ಆರೋಪಿಗಳನ್ನು ಖುಲಾಸೆಗೊಳಿಸಿ ಬಾಂಬೆ ಹೈಕೋರ್ಟ್‌ ತೀರ್ಪು ನೀಡಿದೆ. ಮುಂಬೈ ರೈಲು ಸ್ಫೋಟದಲ್ಲಿ 189 ಮಂದಿ ಸಾವನ್ನಪ್ಪಿ, 800ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಹತ್ತೊಂಬತ್ತು ವರ್ಷಗಳ ನಂತರ ಬಾಂಬೆ ಹೈಕೋರ್ಟ್ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಕೆಳ ನ್ಯಾಯಾಲಯದಿಂದ ಶಿಕ್ಷೆಗೊಳಗಾದ ಎಲ್ಲ 12 ಜನರನ್ನು ಖುಲಾಸೆಗೊಳಿಸಿದೆ. 2015ರಲ್ಲಿ ವಿಚಾರಣಾ ನ್ಯಾಯಾಲಯ ಈ 12

ಮುಂಬೈ ರೈಲು ಸ್ಫೋಟ ಪ್ರಕರಣ : ಎಲ್ಲ 12 ಆರೋಪಿಗಳನ್ನು ಖುಲಾಸೆಗೊಳಿಸಿದ ಹೈಕೋರ್ಟ್‌ Read More »

ಮುಡಾ ಹಗರಣ : ಸಿದ್ದರಾಮಯ್ಯ ಪತ್ನಿಗೆ ಸುಪ್ರೀಂ ಕೋರ್ಟ್‌ ರಿಲೀಫ್‌

ಮೇಲ್ಮನವಿ ಸಲ್ಲಿಸಿದ್ದ ಇ.ಡಿ.ಗೆ ಮುಖ್ಯ ನ್ಯಾಯಮೂರ್ತಿಯಿಂದ ತರಾಟೆ ಬೆಂಗಳೂರು : ಮುಡಾ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ ತನಿಖೆ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್​​ಗೆ ಸುಪ್ರೀಂ ಕೋರ್ಟ್​ನಲ್ಲಿ ರಿಲೀಫ್ ದೊರೆತಿದೆ. ಪಾರ್ವತಿ ಅವರಿಗೆ ಜಾರಿ ನಿರ್ದೇಶನಾಲಯ ನೀಡಿದ್ದ ನೋಟಿಸನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿತ್ತು. ಇದನ್ನು ಪ್ರಶ್ನಿಸಿ ಇ.ಡಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಅಷ್ಟೇ ಅಲ್ಲದೆ, ಇ.ಡಿಯನ್ನು ರಾಜಕೀಯವಾಗಿ ಬಳಸಿಕೊಳ್ಳುವ ಬಗ್ಗೆ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಅರ್ಜಿಯ

ಮುಡಾ ಹಗರಣ : ಸಿದ್ದರಾಮಯ್ಯ ಪತ್ನಿಗೆ ಸುಪ್ರೀಂ ಕೋರ್ಟ್‌ ರಿಲೀಫ್‌ Read More »

ತೋಡಿಗೆ ಉರುಳಿದ ಬಸ್‌ : ಓರ್ವ ಸಾವು, 18 ಮಂದಿಗೆ ಗಾಯ

ಬೆಳಗಾವಿಯಿಂದ ಮಂಗಳೂರಿಗೆ ಬರುತ್ತಿದ್ದ ಬಸ್‌ ಅಪಘಾತ ಮಂಗಳೂರು: ಬೆಳಗಾವಿಯಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಸ್ಲೀಪರ್‌ ಕೋಚ್‌ ಬಸ್‌ ಇಂದು ಮುಂಜಾನೆ ಅಂಕೋಲಾ ಸಮೀಪ ತೋಡಿಗೆ ಉರುಳಿ ಬಿದ್ದು, ಓರ್ವ ಪ್ರಯಾಣಿಕ ಮೃತಪಟ್ಟಿದ್ದು, 18 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಐದು ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ. ಅಂಕೋಲಾ ಸಮೀಪ ಅಗಸೂರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್‌ ರಸ್ತೆ ಬದಿ ಹರಿಯುತ್ತಿರುವ ತೋಡಿಗೆ ಪಲ್ಟಿಯಾಗಿದೆ. ಈ ವೇಳೆ ಪ್ರಯಾಣಿಕರೆಲ್ಲ ಮುಂಜಾನೆಯ ಸುಖನಿದ್ರೆಯಲ್ಲಿದ್ದರು. ಕೂಡಲೇ ಸ್ಥಳೀಯರು ಧಾವಿಸಿ ಬಂದು

ತೋಡಿಗೆ ಉರುಳಿದ ಬಸ್‌ : ಓರ್ವ ಸಾವು, 18 ಮಂದಿಗೆ ಗಾಯ Read More »

ಮಂಜುನಾಥನ ಶಾಪದಿಂದ ಸರ್ಕಾರ ಸರ್ವನಾಶ : ಜನಾರ್ದನ ರೆಡ್ಡಿ ಆಕ್ರೋಶ

ಓಲೈಕೆಗಾಗಿ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ ಎಂದು ಟೀಕೆ ಬೆಂಗಳೂರು: ಮಂಜುನಾಥನ ಶಾಪದಿಂದ ರಾಜ್ಯದ ಕಾಂಗ್ರೆಸ್‌ ಸರ್ಕಾರ ಸರ್ವನಾಶವಾಗಲಿದೆ ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಧರ್ಮಸ್ಥಳ ಪ್ರಕರಣಗಳ ಬೆಳವಣಿಗೆ ಹಿನ್ನೆಲೆಯಲ್ಲಿ ಭವಿಷ್ಯ ನುಡಿದಿದ್ದಾರೆ. ಧರ್ಮಸ್ಥಳದಲ್ಲಿ ಶವಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣ ತನಿಖೆಗೆ ಎಸ್‍ಐಟಿ ರಚನೆ ಬಗ್ಗೆ ಪ್ರತಿಕ್ರಿಯಿಸಿ, ಇವತ್ತಿನ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ನೀತಿಯನ್ನುಜ ಅನುಸರಿಸುತ್ತಿದೆ. ಧರ್ಮಸ್ಥಳ ವಿಚಾರವನ್ನು ಬಹಳಷ್ಟು ವರ್ಷಗಳ ನಂತರ ಅನಗತ್ಯವಾಗಿ ಎಳೆಯುವಂಥ ಕೆಲಸ ಯಾರು ಮಾಡ್ತಿದ್ದಾರೆ ಎನ್ನುವುದು ಎಲ್ಲರಿಗೂ

ಮಂಜುನಾಥನ ಶಾಪದಿಂದ ಸರ್ಕಾರ ಸರ್ವನಾಶ : ಜನಾರ್ದನ ರೆಡ್ಡಿ ಆಕ್ರೋಶ Read More »

ಇಂದಿನಿಂದ ಸಂಸತ್ತಿನ ಮುಂಗಾರು ಅಧಿವೇಶನ

ಬಿರುಗಾಳಿ ಎಬ್ಬಿಸಲಿದೆ ಆಪರೇಷನ್‌ ಸಿಂದೂರ, ಮತದಾರರ ಪಟ್ಟಿ ಪರಿಷ್ಕರಣೆ ವಿಚಾರ ನವದೆಹಲಿ : ಸಂಸತ್‌ನ ಮುಂಗಾರು ಅಧಿವೇಶನ ಇಂದಿನಿಂದ ಆರಂಭಗೊಳ್ಳಲಿದ್ದು, ವಿಪಕ್ಷ ಇಂಡಿ ಮೈತ್ರಿಕೂಟ ಪಹಲ್ಗಾಮ್‌ ದಾಳಿ, ಆಪರೇಷನ್‌ ಸಿಂದೂರ, ಭಾರತದ ವಿದೇಶಾಂಗ ನೀತಿ, ಬುಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಇತ್ಯಾದಿ ವಿಚಾರಗಳನ್ನು ಬತ್ತಳಿಕೆಯಲ್ಲಿಟ್ಟುಕೊಂಡು ಸರ್ಕಾರದ ಮೇಲೆ ದಾಳಿಗೆ ಸಿದ್ಧವಾಗಿದೆ. ಆಪರೇಷನ್‌ ಸಿಂದೂರ ವಿಚಾರವಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ನೀಡುತ್ತಿರುವ ದಿನಕ್ಕೊಂದು ಹೇಳಿಕೆಗಳ ಕುರಿತು ಸ್ವತಹ ಪ್ರಧಾನಿ ನರೇಂದ್ರ ಮೋದಿ ಸಂಸತ್ತಿನಲ್ಲಿ ಮಾತನಾಡಬೇಕೆಂದು ವಿಪಕ್ಷ ಪಟ್ಟು

ಇಂದಿನಿಂದ ಸಂಸತ್ತಿನ ಮುಂಗಾರು ಅಧಿವೇಶನ Read More »

ಹಮಾಸ್‌ನನ್ನು ಇನ್ನೋರ್ವ ಕಮಾಂಡರ್‌ನನ್ನು ಸಾಯಿಸಿದ ಇಸ್ರೇಲ್‌

ಉಗ್ರರ 75ಕ್ಕೂ ಹೆಚ್ಚು ಅಡಗುತಾಣಗಳ ಮೇಲೆ ಕ್ಷಿಪಣಿ ದಾಳಿ ಟೆಲ್ ಅವಿವ್ : ಹಮಾಸ್‌ನ ಇನ್ನೋರ್ವ ಉನ್ನತ ಕಮಾಂಡರ್ ಬಾಶರ್ ಥಾಬೆಟ್​​ನನ್ನು ಹತ್ಯೆ ಮಾಡಿರುವುದಾಗಿ ಇಸ್ರೇಲ್‌ ರಕ್ಷಣಾ ಪಡೆ ಹೇಳಿಕೊಂಡಿದೆ. ಇಷ್ಟು ಮಾತ್ರವಲ್ಲದೆ ಭಯೋತ್ಪಾದಕರ 75 ಅಡಗುತಾಣಗಳ ಮೇಲೆ ದಾಳಿ ನಡೆಸಿರುವುದಾಗಿ ಐಡಿಎಫ್​ ಹೇಳಿದೆ. ಭಯೋತ್ಪಾದಕ ಮೂಲಸೌಕರ್ಯ, ಭಯೋತ್ಪಾದಕರು ಮತ್ತು ಸುರಂಗಗಳನ್ನು ಪತ್ತೆಹಚ್ಚಿ ನಾಶಪಡಿಸಲಾಗಿದೆ ಎಂದು ಐಡಿಎಫ್ ಹೇಳಿದೆ. ಬಶರ್ ಥಾಬೆಟ್ ಹಮಾಸ್‌ನ ಶಸ್ತ್ರಾಸ್ತ್ರ ಉತ್ಪಾದನಾ ಪ್ರಧಾನ ಕಚೇರಿಯಲ್ಲಿ ಅಭಿವೃದ್ಧಿ ಮತ್ತು ಯೋಜನೆಗಳ ವಿಭಾಗದ ಕಮಾಂಡರ್ ಆಗಿದ್ದ.

ಹಮಾಸ್‌ನನ್ನು ಇನ್ನೋರ್ವ ಕಮಾಂಡರ್‌ನನ್ನು ಸಾಯಿಸಿದ ಇಸ್ರೇಲ್‌ Read More »

ಸುಳ್ಯದ ಯುವಕ ಕಣ್ಣೂರಿನಲ್ಲಿ ಕೆರೆಗೆ ಬಿದ್ದು ಸಾವು

ಸಹಪಾಠಿಯ ಮನೆಗೆ ಹೋದ ವೇಳೆ ಸಂಭವಿಸಿದ ದುರಂತ ಸುಳ್ಯ: ಸುಳ್ಯದ ಯುವಕ ಹದಿಹರೆಯದ ಯುವಕನೊಬ್ಬ ಕೇರಳದ ಕಣ್ಣೂರಿನಲ್ಲಿ ಕೆರೆಗೆ ಬಿದ್ದು ಮೃತಪಟ್ಟಿರುವ ಘಟನೆ ಭಾನುವಾರ ಸಂಭವಿಸಿದೆ. ಈತ ಮಂಗಳೂರಿನಲ್ಲಿ ಕಲಿಯುತ್ತಿದ್ದರು. ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದ ಬಾಳಿಕಲ ನಿವಾಸಿ, ಸುಳ್ಯದ ನಿವೃತ್ತ ತಾಲೂಕು ಆರೋಗ್ಯಾಧಿಕಾರಿ ಡಾ.ನಂದಕುಮಾರ್ ಅವರ ಪುತ್ರ, ಮಂಗಳೂರಿನ ಖಾಸಗಿ ಡೆಂಟಲ್ ಕಾಲೇಜಿನಲ್ಲಿ ಪ್ರಥಮ ವರ್ಷದ ದಂತ ವಿಜ್ಞಾನ ಕಲಿಯುತ್ತಿದ್ದ ಆಸ್ತಿಕ್ ರಾಘವ್ (19) ಮೃತಪಟ್ಟಿರುವ ದುರ್ದೈವಿ. ತಂದೆ, ತಾಯಿ, ಸಹೋದರಿಯನ್ನು ಅಗಲಿದ್ದಾರೆ. ಆಸ್ತಿಕ್ ರಾಘವ್

ಸುಳ್ಯದ ಯುವಕ ಕಣ್ಣೂರಿನಲ್ಲಿ ಕೆರೆಗೆ ಬಿದ್ದು ಸಾವು Read More »

ಅಬ್ಬಿ ಫಾಲ್ಸ್‌ನಲ್ಲಿ ಕೊಚ್ಚಿ ಹೋಗಿ ಯುವಕ ಸಾವು

ಬೆಂಗಳೂರಿನಿಂದ ಪ್ರವಾಸ ಬಂದು ಅಪಾಯ ಲೆಕ್ಕಿಸದೆ ಜಲಪಾತಕ್ಕಿಳಿದಿದ್ದ ಯುವಕ ಶಿವಮೊಗ್ಗ: ಹೊಸನಗರ ತಾಲೂಕಿನ ಅಬ್ಬಿ ಫಾಲ್ಸ್‌ನಲ್ಲಿ ಫೋಟೋ ತೆಗೆಸಿಕೊಳ್ಳಲು ಹೋಗಿ ಬೆಂಗಳೂರು ಮೂಲದ ಪ್ರವಾಸಿಗರೊಬ್ಬರು ಕೊಚ್ಚಿಕೊಂಡು ಹೋಗಿ ಮೃತಪಟ್ಟಿದ್ದಾರೆ. ಅವರನ್ನು ಬೆಂಗಳೂರಿನ ನಾಗರಬಾವಿಯ ಖಾಸಗಿ ಕಂಪನಿಯೊಂದರ ಮ್ಯಾನೇಜರ್ ರಮೇಶ್ (35) ಎಂದು ಗುರುತಿಸಲಾಗಿದೆ. ಐವರು ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದಾಗ ಈ ಅವಘಡ ಸಂಭವಿಸಿದೆ. ಅಬ್ಬಿ ಫಾಲ್ಸ್‌ನಲ್ಲಿ ಫೋಟೊ ತೆಗೆಯಲು ಫೋಸ್‌ ಕೊಡಲು ಫಾಲ್ಸ್‌ಗೆ ಇಳಿದಾಗ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ಫಾಲ್ಸ್‌ನಲ್ಲಿ ರಮೇಶ್‌ ಕಣ್ಮರೆಯಾಗುವ 20 ಸೆಕೆಂಡ್‌ನ ವಿಡಿಯೋ

ಅಬ್ಬಿ ಫಾಲ್ಸ್‌ನಲ್ಲಿ ಕೊಚ್ಚಿ ಹೋಗಿ ಯುವಕ ಸಾವು Read More »

ತನಿಖೆಗೆ ಎಸ್‌ಐಟಿ ರಚನೆ : ಧರ್ಮಸ್ಥಳದ ವಕ್ತಾರ ಸ್ವಾಗತ

ತನಿಖೆಯಿಂದ ಹಿಂದೆ ಸರಿಯಲಿದ್ದಾರಾ ಇಬ್ಬರು ಐಪಿಎಸ್‌ ಅಧಿಕಾರಿಗಳು? ಧರ್ಮಸ್ಥಳ: ಧರ್ಮಸ್ಥಳದ ಅರಣ್ಯ ಪ್ರದೇಶದಲ್ಲಿ ನೂರಾರು ಶವಗಳನ್ನು ಹೂತಿರುವ ಆರೋಪದ ತನಿಖೆಗೆ ಎಸ್‌ಐಟಿ ರಚಿಸಿರುವುದನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ವಕ್ತಾರ ಕೆ.ಪಾರ್ಶ್ವನಾಥ್ ಜೈನ್ ಸ್ವಾಗತಿಸಿದ್ದಾರೆ. ಈ ಕುರಿತು ಪ್ರಕಟಣೆ ಹೊರಡಿಸಿದ ಅವರು, ಧರ್ಮಸ್ಥಳ ಗ್ರಾಮದ ಪೊಲೀಸ್ ಠಾಣೆಯಲ್ಲಿ ದಾಖಲಿಸಿರುವ ‘ಹಲವಾರು ಶವಗಳನ್ನು ಹೂತಿದ್ದೆ’ ಎಂಬ ದೂರು ಪ್ರಕರಣವು ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಹಲವಾರು ತರ್ಕವಾತರ್ಕಗಳು, ಊಹಾಪೋಹಗಳು ಹಾಗೂ ಗೊಂದಲಗಳನ್ನು ಹುಟ್ಟುಹಾಕಿದೆ. ಈ ಘಟನೆಗೆ ಸಂಬಂಧಿಸಿದಂತೆ ಪ್ರಾಮಾಣಿಕವಾಗಿ ತನಿಖೆ

ತನಿಖೆಗೆ ಎಸ್‌ಐಟಿ ರಚನೆ : ಧರ್ಮಸ್ಥಳದ ವಕ್ತಾರ ಸ್ವಾಗತ Read More »

error: Content is protected !!
Scroll to Top